ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಢೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಇವರ ಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನವು ಗುರುವಾರದಂದು ನಡೆಯಿತು. ಕಾಲೇಜಿನ ಪ್ರಾಚಾರ್ಯರಾದ ಕೆ. ಉಮೇಶ್ ಶೆಟ್ಟಿ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಕಾರ್ಯಕ್ರಮ ಪ್ರಾಯೋಜಕರಾದ ಹರ್ಷವರ್ಧನ್ ಶೆಟ್ಟಿ, ಮಾಲಕರು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ| ಸೋನಿ, ಜೇಸಿ ವಿಜಯ ಭಂಡಾರಿ, ಜೇಸಿ ರಾಜು ಪೂಜಾರಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮವನ್ನು ಸಂಘಟಿಸಿದ ಲಲಿತಾಕಲಾ ಸಂಘದ ಸಂಯೋಜಕಿ ದೀಪಿಕಾ. ಜಿ. ರವಿನಾ ಸಿ, ಪೂಜಾರಿ, ನಿರ್ಮಲಾ ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೂರ್ಯ ಫೌಂಡೇಶನ್ ಬೆಂಗಳೂರು, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಮತ್ತು ಸ್ಪಾರ್ಕ್ ಅಕಾಡೆಮಿ ಬೆಂಗಳೂರು ವತಿಯಿಂದ ನಿರೂಪಕರಿಗೆ ನೀಡಲಾಗುವ ರಾಜ್ಯ ಮಟ್ಟದ “ಅಪರ್ಣಾ ನಿರೂಪಣಾ ರತ್ನ” ಪ್ರಶಸ್ತಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಅ.15ರಂದು ಬೆಂಗಳೂರಿನ ಇಂಡೋ ಗ್ಲೋಬೋ ಕಾಲೇಜ್, ಹೆಸರಘಟ್ಟದಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮಳನ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸೂರ್ಯ ಫೌಂಡೇಶನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ, ಗ್ರಾಮ ಪಂಚಾಯತ್ ಕಾಳಾವರ, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಸಹಯೋಗದೊಂದಿಗೆ, ಉಪಕೇಂದ್ರ ವಕ್ವಾಡಿ ಇಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರಗಳನ್ನು ಆಯೋಜಿಸಲಾಯಿತು. ಹಲವಾರು ಮಂದಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಏನ್ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ ವೈದ್ಯಾಧಿಕಾರಿ ಡಾ। ರೋಶನಿ ಶೆಟ್ಟಿ, ನೇತ್ರತಜ್ಞೆ ಡಾ. ರಶ್ಶಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಮೇಶ್ ಶೆಟ್ಟಿ, ಶಂಕರ್ ಶೆಟ್ಟಿ, ರಂಜಿತ್ ಕುಮಾರ್ ಶೆಟ್ಟಿ, ಪಿ.ಎಚ್.ಎಫ್ ರವಿರಾಜ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಸತೀಶ್ ಶೆಟ್ಟಿ, ಉದಯ್ ಶೆಟ್ಟಿ ಆಜ್ರಿ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಧರ್ಮದ ಆಚರಣೆಯಲ್ಲಿ ವೈವಿಧ್ಯತೆ, ವ್ಯತ್ಯಾಸ ಇದ್ದರೂ ಧರ್ಮ ಎಂದೂ ಒಂದೇ. ಧರ್ಮದ ಆಚರಣೆ ಮಾಡದಿದ್ದವರು ನಾಸ್ತಿಕರು. ಜಗತ್ತಿನ ಸಾಮರಸ್ಯಕ್ಕೆ ಧರ್ಮ ಅವಶ್ಯಕ. ಧರ್ಮದ ಆಧಾರದಲ್ಲಿ ಇರುವುದರಿಂದಲೇ ಜಗತ್ತಿನಲ್ಲಿ ಸಹಬಾಳ್ವೆ, ವಿಶೇಷ ಬಾಂಧವ್ಯ, ಅಹಿಂಸೆ ನೋಡಬಹುದು. ಧರ್ಮದ ಅಡಿಯಲ್ಲಿ ನಡೆದಾಗ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ. ಹೀಗಾಗಿ ಧರ್ಮದ ಜಾಗೃತಿ ಆಗಬೇಕು, ಚಿಂತನೆಗಳು ನಡೆಯಬೇಕಿದೆ. ಧರ್ಮದ ಅರಿವು ಆಗಬೇಕು, ಹಿಂದು ಧರ್ಮದ ಪರಂಪರೆ, ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯ ಆಗಬೇಕು. ಎಲ್ಲರೂ ಧರ್ಮದ ಆಚರಣೆ ಮಾಡುತ್ತಿರಬೇಕು ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಸ್ವಾಮಿಗಳು ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-2024ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಬುಧವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ವಿದ್ಯಾದೇವತೆಯಾಗಿರುವ ಶ್ರೀ ಶಾರದಾ ಮಾತೆಯ ವಿಶೇಷ ಉಪಾಸನೆಯನ್ನು ನವರಾತ್ರಿಯ ಪರ್ವಕಾಲದಲ್ಲಿ ಮಾಡುತ್ತಿರಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕಾರ್ಯಪಡೆಯ ಸದಸ್ಯರುಗಳು ಆಗಿಂದಾಗ್ಗೆ ನಿರಂತರ ಅನಿರೀಕ್ಷಿತ ದಾಳಿ ಹಾಗೂ ಭೇಟಿಗಳನ್ನು ಮಾಡುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಸೂಚನೆ ನೀಡಿದರು. ಬಾಲ ಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೈತಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಎಂಎಲ್‍ಸಿ ಅಭರ್ಥಿ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಸುಧೀರ್ ಕೆ. ಎಸ್, ಮಂಡಲ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ಶ್ರೀ ಲಲಿತ ಕೃಷ್ಣ ಕಲಾ ಮಂದಿರದ ಸಭಾಂಗಣದಲ್ಲಿ ಬೈಂದೂರು ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಬಿಜೆಪಿ ಎಂಎಲ್‍ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಹಾಗೂ ಪ್ರಿಯದರ್ಶಿನಿ, ಬಿಜೆಪಿ ಉಡುಪಿ ಜಿಲ್ಲೆಯ ಪ್ರಭಾರಿಯಾದ ರಾಜೇಶ್ ಕಾವೇರಿ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಶೆಟ್ಟಿ ಕಲ್ಗದ್ದೆ, ಬೈಂದೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಮಹೇಂದ್ರ ಪೂಜಾರಿ, ಬೈಂದೂರು ಬಿಜೆಪಿ ಮಂಡಲ ಹಾಗೂ ಪಕ್ಷದ ಹಿರಿಯರು ಹಾಗೂ ಮುಖಂಡರು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು ಈ ವರ್ಷದಿಂದಲೇ ಅಂದರೆ, 2024-25ನೇ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದ್ದು, ಇದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರಿನಿಂದ ಸಂಯೋಜಿಸಲ್ಪಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸುವ ಈ ಕೋರ್ಸ್‌ಗಾಗಿ ಈಗಾಗಲೇ ವಿಶೇಷ ಮುತುವರ್ಜಿವಹಿಸಿದ್ದು ಅನುಭವಿ ಶಿಕ್ಷಕರು, ವಿಶೇಷ ತರಗತಿ ಕೊಠಡಿಗಳು, ಆಧುನಿಕ ಪ್ರಯೋಗಾಲಯ, ನವೀನ ಗ್ರಂಥಾಲಯ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ವಿಶೇಷ ಸವಲತ್ತುಗಳುಳ್ಳ ವಸತಿ ನಿಲಯಗಳನ್ನು ರೂಪಿಸಲಾಗಿದೆ ಎಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ನಮ್ಮ ಜೀವನದಲ್ಲಿ ಔಷಧಿ ಕ್ಷೇತ್ರವು ಅತ್ಯಂತ ಮಹತ್ವದ್ದಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನಟ ರಿಷಬ್ ಶೆಟ್ಟಿ ಅವರಿಗೆ ಪ್ರದಾನ ಮಾಡಿದರು. ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಬೆಸ್ಟ್ ಆ್ಯಕ್ಟರ್ ನ್ಯಾಷನಲ್ ಅವಾರ್ಡ್ ಪಡೆದುಕೊಂಡಿದ್ದಾರೆ. 2022ರಲ್ಲಿ ‘ಹೊಂಬಾಳೆ ಫಿಲ್ಸ್’ ಮೂಲಕ ನಿರ್ಮಾಣಗೊಂಡ ‘ಕಾಂತಾರ’ ಸಿನಿಮಾಕ್ಕೆ ಸ್ವತಃ ರಿಷಬ್ ಶೆಟ್ಟಿ ನಿರ್ದೇಶನ ಅವರೇ ನಿರ್ದೇಶನ ಮಾಡಿದ್ದರು. ಭೂತಕೋಲದ ಕಥೆ ಇರುವ ಈ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶಕನಕ್ಕೆ ಯಶ ಕಂಡಿತ್ತು. ಕನ್ನಡ ಮಾತ್ರವಲ್ಲೇ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿಯೂ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಕಾಂತಾರಾ ಪ್ರಿಲ್ವೆಲ್ ಶೂಟಿಂಗ್ ನಡೆಯುತ್ತಿದೆ. ರಿಷಬ್ ಶೆಟ್ಟಿ ಅವರು ಪ್ರಶಸ್ತಿ ಪದಾನ ಸಮಾರಂಭದಲ್ಲಿ ಪಂಚೆ ಧರಿಸಿ ತೆರಳಿದ್ದು ಗಮನ ಸೆಳೆಯಿತು. ಖ್ಯಾತಿಯ ಹೊರತಾಗಿಯೂ ನೆಲದ ಸೊಗಡನ್ನೇ ಅನುಸರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಿರುಪತಿಗೆ ನೇರ ರೈಲು ಸೇವೆ ಬೇಕೆಂಬ ದಶಕಗಳ ಕನಸು ನನಸಾಗಿದ್ದು, ವಾರಕ್ಕೆರಡು ದಿನವಿರುವ ಕಾಚಿಗುಡ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲನ್ನು ಮುರುಡೇಶ್ವರದ ತನಕ ವಿಸ್ತರಿಸಲಾಗಿದೆ. ಪ್ರತಿ ಬುಧವಾರ ಮತ್ತು ಶನಿವಾರ ಸಂಜೆ 4 ಗಂಟೆಗೆ ಬೈಂದೂರು ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11 ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ. ವಾರದಲ್ಲಿ 2 ದಿನ ಸಂಚರಿಸುವ ಕಾಚಿಗುಡ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಮಂಗಳವಾರ ಮತ್ತು ಶುಕ್ರವಾರ ಬೆಳಿಗ್ಗೆ 6-05ಕ್ಕೆ ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣಕ್ಕೆ ಸಂಜೆ 4-45ಕ್ಕೆ ತಲುಪಿ ಅಲ್ಲಿಂದ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಬುಧವಾರ ಮತ್ತು ಗುರುವಾರ ಬೆಳಿಗ್ಗೆ 9-30ಕ್ಕೆ ತಲುಪುತ್ತಿತ್ತು. ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ರಾತ್ರಿ 8-05ಕ್ಕೆ ಹೊರಟು ಮರುದಿನ ಬೆಳಿಗ್ಗೆ 11-45ಕ್ಕೆ ತಿರುಪತಿಯ ರೇಣಿಗುಂಟ ನಿಲ್ದಾಣ ತಲುಪುತ್ತಿತ್ತು. ಇದೀಗ ಕಾಚಿಗುಡ – ಮಂಗಳೂರು…
