Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ನಾಲ್ಕೈದು ದಿನಗಳಿಂದ ಕರಾವಳಿಯಲ್ಲಿ ನಿರಂತರವಾಗಿ ಗಾಳಿ ಮಳೆಯಾಗುತ್ತಿದ್ದು, ಕೃಷಿ, ತೋಟ ಹಾಗೂ ಆಸ್ತಿಪಾಸ್ತಿಗಳು ಅಪಾರ ಹಾನಿಯಾಗುತ್ತಿದೆ. ಈ ನಡುವೆ ಬುಧವಾರ ರಾತ್ರಿಯ ಸುರಿದ ಗಾಳಿ ಸಹಿತ ಮಳೆಗೆ ತಾಲೂಕಿನ ಬಿಜೂರು ಗ್ರಾಮದ ಮನೆಯೊಂದರ ಮಾಡು, ಗೋಡೆ ನೆಲಸಮವಾಗಿದೆ. ಬಿಜೂರು ಗ್ರಾಮದ ಕಂಚಿಕಾನು ಉಪಾಧ್ಯಾಯರ ಮನೆ ದುರ್ಗಿ ಪೂಜಾರ್ತಿ ಅವರ ಮನೆ ಗಾಳಿಮಳೆಗೆ ಹಾನಿಯಾಗಿದೆ. ರಾತ್ರಿ ಮನೆಯಲ್ಲಿ ಮೂವರು ಮಲಗಿದ್ದ ವೇಳೆ ಮಾಡು ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಒಂದು ಪಾರ್ಶ್ವದ ಮಾಡು, ಗೋಡೆ ಹಾಗೂ ಅಟ್ಟಣಿಗೆಯ ಮಾಡು ಗಾಳಿಯ ರಭಸಕ್ಕೆ ಕುಸಿದು ಬಿದ್ದಿದೆ. ಮಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಶಿಥಿಲಗೊಂಡಿರುವ ಮನೆಯ ಸಂಪೂರ್ಣ ಮಾಡು ಕುಸಿದು ಬೀಳುವ ಸಾಧ್ಯತೆ ಇದೆ. ಘಟನೆಯಲ್ಲಿ 5 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ತಹಶಿಲ್ದಾರ್‌ ಪ್ರದೀಪ್‌ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಂದಾಪುರದಲ್ಲಿ ಮನೆ ಮೇಲೆ ಬಿದ್ದ ಮರ:ಕುಂದಾಪುರ ಖಾರ್ವಿಕೇರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಚೈತ್ರ ಎಮ್‍. ಪೂಜಾರಿ ತೇರ್ಗಡೆ ಹೊಂದಿದ್ದಾರೆ. ಅವರು ಸಿದ್ದಾಪುರ ಗ್ರಾಮದ ಕೊಲ್ಕೆಬೈಲು ನಿವಾಸಿಯಾಗಿರುವ ಮಹಾಬಲ ಪೂಜಾರಿ ಮತ್ತು ಪ್ರೇಮರವರ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.17: ಖಾಸಗಿ ರೆಸಾರ್ಟ್‌ನ ದಾರಿಗಾಗಿ ಸೋಮೇಶ್ವರದ ಗುಡ್ಡದ ಮೇಲೆ ರಸ್ತೆ ನಿರ್ಮಿಸುತ್ತಿರುವುದರಿಂದ, ಗುಡ್ಡ ಜರಿತ ಉಂಟಾಗಿದ್ದು ದೊಂಬೆ ಮಾರ್ಗದ ಸಂಚಾರ ಹಾಗೂ ಸೋಮೇಶ್ವರ ದೇಗುಲದ ಆವರಣಕ್ಕೆ ಆಪತ್ತು ತಂದೊಡ್ಡಿದೆ. ಬೈಂದೂರು ಫಾರೆಸ್ಟ್ ಐಬಿಗೆ ತಾಕಿಕೊಂಡಿರುವ ಖಾಸಗಿ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲಾಗುತ್ತಿದ್ದು, ಅದಕ್ಕೆ ನೇರ ರಸ್ತೆ ನಿರ್ಮಿಸುವ ಉದ್ದೇಶದಿಂದ ಬೈಂದೂರು ಪಡುವರಿಯಿಂದ ದೊಂಬೆಗೆ ತೆರಳುವ ಮಾರ್ಗದ ಬಲಭಾಗದಲ್ಲಿ ಗುಡ್ಡಕ್ಕೆ ಅಡ್ಡಲಾಗಿ ಖಾಸಗಿ ರಸ್ತೆ ನಿರ್ಮಿಸಲಾಗುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಈ ಕಾಮಗಾರಿ ಪ್ರಗತಿಯಲ್ಲಿದ್ದು, ರಿವಿಟ್‌ಮೆಂಟ್ ಕಟ್ಟಿ ರಸ್ತೆ ನಿರ್ಮಾಣ ಕಾಮಗಾರಿ ಮುಂದುವರಿಸಲಾಗಿತ್ತು. ಕೆಲವು ದಿನಗಳಿಂದ ಮಳೆಯಾಗುತ್ತಿರುವುದರಿಂದ ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಗುಡ್ಡ ಸಂಪೂರ್ಣ ಜರಿದಿದ್ದು, ಮೇಲ್ಭಾಗದ ರೆಸಾರ್ಟ್ ಸಹಿತ ಕುಸಿದು ಬೀಳುವ ಸಾಧ್ಯತೆ ಇದೆ. ದೊಂಬೆ ಭಾಗದ ಸಾರ್ವಜನಿಕರ ಪ್ರಮುಖ ಸಂಪರ್ಕ ಮಾರ್ಗದ ಬಲಭಾಗದಲ್ಲಿಯೇ ಗುಡ್ಡ ಕುಸಿತ ಉಂಟಾಗಿರುವುದರಿಂದ ದಾರಿಯನ್ನು ಹಾದುಹೋಗುವವರಿಗೆ ಪ್ರಾಣಭೀತಿ ಎದುರಾಗಿದೆ. ಶಾಲಾ ವಾಹನಗಳು, ಸರಕಾರಿ ಬಸ್ ಸಹಿತ ನೂರಾರು ವಾಹನಗಳು, ಪಾದಾಚಾರಿಗಳು ನಿತ್ಯವೂ ಇದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿ ಮರೆಯಾಗುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಕೃಷಿಯ ಬಗ್ಗೆ ಅರಿವು ಮೂಡಿಸಿ ಪ್ರಾಯೋಗಿಕವಾದ ಮಾಹಿತಿ ನೀಡುವ ನಿಟ್ಟಿನಲ್ಲಿ ಬಾಂಡ್ಯ ಎಜುಕೇಶನಲ್ ಟ್ರಸ್ಟನ ಗುರುಕುಲ ಪಬ್ಲಿಕ್ ಸ್ಕೂಲಿನ ಎಸ್‍ ಎಸ್‍ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕೃಷಿ ನಾಟಿಯ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಭತ್ತದ ಕೃಷಿ ಪದ್ದತಿಯನ್ನು ಪರಿಚಯಿಸಲಾಯಿತು. ಬಾಂಡ್ಯ ಎಜುಕೇಶನಲ್ ಟ್ರಸ್ಟಿನ ಜಂಟಿ ಕಾರ್ಯನಿರ್ವಾಹಕರಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪಮ್ ಎಸ್. ಶೆಟ್ಟಿ ಅವರು ತಮ್ಮ 4.00 ಎಕ್ರೆ ಗದ್ದೆಯಲ್ಲಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ನೇಜಿಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಿಕ್ಷಕ ಶಿಕ್ಷಕಿಯರೊಂದಿಗೆ ಹುಮ್ಮಸ್ಸಿನಿಂದ ಭತ್ತ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಗದ್ದೆಯಲ್ಲಿ ವಿದ್ಯಾರ್ಥಿಗಳು ಊರ ಕೃಷಿಕರು ಹಾಗೂ ಹಲವು ಸಾಂಪ್ರದಾಯಿಕ ನಾಟಿ ಮಾಡುವ ಮಹಿಳೆಯರೊಂದಿಗೆ ಸಾಂಪ್ರದಾಯಿಕ ಶೈಲಿಯಲ್ಲಿ ನೇಜಿ ನೆಟ್ಟು ನಾಟಿ ಪದ್ದತಿಯ ನೈಜ ಅನುಭವವನ್ನುವಿದ್ಯಾರ್ಥಿಗಳು ಪಡೆದುಕೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಜು.17: ಇಲ್ಲಿನ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್ ಕುಂದಾಪುರ ಮತ್ತು ಕಶ್ವಿ ಚೆಸ್ ಸ್ಕೂಲ್ ರಿ. ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ‌ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಯುವ ಕರ್ನಾಟಕ ಸ್ಟೇಟ್ ಸ್ಕೂಲ್ಸ್ ಚೆಸ್ ಚಾಂಪಿಯನ್‌ಶಿಪ್‌ 2024 ಆಗಸ್ಟ್ 10 ಹಾಗೂ 11ರಂದು ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ. ಪಠ್ಯ ಕ್ರಮ ಸ್ಟೇಟ್, ಸಿ. ಬಿ. ಎಸ್. ಇ,‌ ಐ. ಸಿ. ಎಸ್. ಇ ಹಾಗೂ ಇತರೆ ವಯೋಮಿತಿಯ 7, 9, 11, 13, 15 ಮತ್ತು 17 ರ ಹುಡುಗ ಮತ್ತು ಹುಡುಗಿಯರ ಎಲ್ಲಾ ವಿಭಾಗದಲ್ಲಿ ಪ್ರತ್ಯೇಕವಾಗಿ ಚೆಸ್ ಚಾಂಪಿಯನ್ ಶಿಪ್ ನಡೆಯಲಿದ್ದು ಪ್ರತಿ ವಯೋಮಿತಿಯ ವಿಭಾಗದಲ್ಲಿ ಒಬ್ಬ ವಿಜೇತರಾದವರು ಪಂಜಾಬ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 600 ಹೆಚ್ಚು ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆ ಇದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನೇತ್ರಜ್ಯೋತಿ ಚಾರಿಟೇಬಲ್‌ ಟ್ರಸ್ಟ್‌ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್‌ ಸ್ಪೇಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ, ರೋಟರಿ ಕ್ಲಬ್ ಬೈಂದೂರು ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಮಂಗಳವಾರ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಮೋಹನ್ ರೇವಣ್ಕರ್ ವಹಿಸಿದ್ದರು. ಈ ವೇಳೆ ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಅಶ್ವಿನ್,  ರೋಟರಿ ಇಂಡಿಯಾ ಲಿಟರಸ್ ಮಿಷನ್ ಜಿಲ್ಲಾ ನಿರ್ದೇಶಕ ಐ. ನಾರಾಯಣ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ, ಪಿ.ಜಿ.ಡಿ.ಎಚ್.ಪಿ.ಇ ವಿಭಾಗ  ಬೆಂಗಳೂರು, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರ , ರೋಟರಿ ಕ್ಲಬ್ ಕೋಟೇಶ್ವರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಬಡಾಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಹೊಸಬಡಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 0-6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಉದ್ಘಾಟಿಸಿದರು. ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು. ರಾಜ್ಯ ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಪುರೋಹಿತರಾದ ಜಿ. ವಿಠಲದಾಸ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಗುರು ಗುಣಗಾನ ಮಾಡಿದರು. ಗಂಗೊಳ್ಳಿಯ ಜಿಎಸ್‌ಬಿ ಸಮಾಜದ ಹತ್ತು ಸಮಸ್ತರು ಹಾಗೂ ಜಿ. ಕೃಷ್ಣಾನಂದ ಆಚಾರ್ಯ ಸ್ಮರಣಾರ್ಥ ಮಕ್ಕಳು ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ ಸೇವೆಯನ್ನು ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಜಿ. ವೇದವ್ಯಾಸ ಕೆ. ಆಚಾರ್ಯ, ಜಿ. ವೆಂಕಟೇಶ ನಾಯಕ್, ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಊರಿನ ಹತ್ತು ಸಮಸ್ತರು, ಸೇವಾದಾರ ಕುಟುಂಬಸ್ಥರು, ಸಮಾಜಬಾಂಧವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿಯೊಂದಿಗೆ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ಪತಿಯು, ಕಂಡ್ಲೂರು ಸೇತುವೆ ಬಳಿ ಏಕಾಏಕಿ ಹೊಳೆಗೆ ಹಾರಿದ ಘಟನೆ ಮಂಗಳವಾರ ನಡೆದಿದೆ. ಕಾಳಾವರ ಗ್ರಾಮದ ನಿವಾಸಿ ಹರೀಶ್ ಬೋವಿ (40) ನಾಪತ್ತೆಯಾದ ವ್ಯಕ್ತಿ. ಛಾಯಾಗ್ರಾಹಕ ವೃತ್ತಿ ಮಾಡಿಕೊಂಡಿದ್ದ ಹರೀಶ್ ಅವರು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಇತ್ತೀಚಿಗೆ ಗಂಭೀರವಾಗಿರುತ್ತಿದ್ದ ಅವರು ಮಂಗಳವಾರ ಬೆಳಿಗ್ಗೆ ಪತ್ನಿಯೊಂದಿಗೆ ಜಗಳವಾಡಿದ್ದು, ಈ ವೇಳೆ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಸಮಾಲೋಚನೆ ನಡೆಸಿ ಬಳಿಕ ಆಟೋದಲ್ಲಿ ಮನೆಗೆ ಕಳಿಸಿದ್ದರು. ಠಾಣೆಯಿಂದ ಹಿಂದಿರುವ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್, ತಕ್ಷಣ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ. ►► ಪುನರ್ವಸು ಮಳೆಯಬ್ಬರ: ಕೋಟ, ಬೈಂದೂರು ಭಾಗದಲ್ಲಿ ನೆರೆ. ಕುಂದಾಪುರದ ವಿವಿಧೆಡೆ ಅಪಾರ ಹಾನಿ – https://kundapraa.com/?p=74390 . ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರಂತರವಾಗಿ ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆಗೆ ಕರಾವಳಿಯ ಜನಜೀವನ ತಲ್ಲಣಿಸಿದೆ. ಜಿಲ್ಲೆಯ ಕೋಟ, ಬನ್ನಾಡಿ, ಬಸ್ರೂರು ಕಂಡ್ಲೂರು, ನಾವುಂದ ಸೇರಿದಂತೆ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಮಳೆ, ನೆರೆಯಬ್ಬರಕ್ಕೆ ಕೃಷಿ ಹಾಗೂ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಕೋಟ ಸಮೀಪದ ಬನ್ನಾಡಿ, ಗಿಳಿಯಾರು, ತೆಕ್ಕಟ್ಟೆ ಪ್ರದೇಶ ಜಲಾವೃತವಾಗಿದೆ. ಕೋಟ – ಸಾಯಿಬ್ರಕಟ್ಟೆ ಸಂಪರ್ಕ ರಸ್ತೆ ಕಡಿತವಾಗಿದೆ. ತೆಕ್ಕಟೆ, ಕೋಟೇಶ್ವರ ಭಾಗದಲ್ಲಿಯೂ ನೆರೆಯಬ್ಬರ ಹೆಚ್ಚಿದೆ. ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಳದ ಹೊರಪೌಳಿಗೂ ನೆರೆ ನೀರು ನುಗ್ಗಿದೆ. ನಾವುಂದದ ಸಾಲ್ಬುಡ, ಕಂಡ್ಲೂರು ಭಾಗದಲ್ಲಿ ಸೌಪರ್ಣಾಕಾ ಹಾಗೂ ವರಾಹಿ ನದಿ ತುಂಬಿ ಹರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ನೂರಾರು ಎಕರೆ ಕೃಷಿಭೂಮಿ, ಮನೆಗಳು ಜಲಾವೃತಗೊಂಡಿದ್ದು, ಅಲ್ಲಿನ ವಾಸಿಗಳು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಹಾಲಾಡಿ ಸಮೀಪ ಸೇತುವೆ ಸಂಪರ್ಕ ಕಡಿತಗೊಂಡಿದ್ದರೇ, ಕೆಲ ಗ್ರಾಮಗಳಲ್ಲಿ ರಸ್ತೆಯ ಮೇಲೆಯೇ ನೀರು ರಭಸದಿಂದ ಹರಿದು ರಸ್ತೆ ಸಂಪರ್ಕ ಕೆಲ ಕಾಲ ಕಡಿತಗೊಂಡಿದೆ.…

Read More