Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲೋಡು ಗ್ರಾಮದ ಹೊಸಮನೆ ನಿವಾಸಿ ಶೇಖರ ಶೆಟ್ಟಿ (57) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾವುದೋ ವಿಷಯಕ್ಕೆ ಜಿಗುಪ್ಸೆಗೊಂಡು ವಿಷ ಸೇವಿಸಿದ್ದು ಅಸ್ವಸ್ಥಗೊಂಡಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಇಲಾಖೆಯ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾಂಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂತನ್, ಡ್ರ‍್ಯಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ.40 ರ ಸಹಾಯಧನ ಲಭ್ಯವಿದೆ. ಸಣ್ಣ ಸಸ್ಯಾಗಾರಗಳ/ ನರ್ಸರಿಗಳ ಸ್ಥಾಪನೆಗೆ ಶೇ. 50 ರ ದರದಲ್ಲಿ (ಗರಿಷ್ಠ ರೂ. 10.00 ಲಕ್ಷಗಳು) ಸಹಾಯಧನ, ಸಸ್ಯಾಗಾರಗಳ ಉನ್ನತೀಕರಣಕ್ಕಾಗಿ ಶೇ. 50 ರ ಸಹಾಯಧನದಲ್ಲಿ ಪ್ರತಿ ಹೆಕ್ಟೇರ್‌ಗೆ ರೂ. 2.00 ಲಕ್ಷಗಳಂತೆ 2.00 ಹೆಕ್ಟೇರ್ ಗೆ ರೂ. 4.00 ಲಕ್ಷಗಳ ಸಹಾಯಧನ, ಅಂಗಾಂಶ ಕೃಷಿ ಘಟಕ ಸ್ಥಾಪನೆಗೆ ಶೇ.40 ರಂತೆ (ಗರಿಷ್ಠ ರೂ. 100.00 ಲಕ್ಷಗಳು) ಸಹಾಯಧನ, ನೀರು ಸಂಗ್ರಹಣ ಘಟಕ (28*27*3 ಮೀ.ಅಳತೆ) ನಿರ್ಮಾಣಕ್ಕೆ ಗರಿಷ್ಠ 0.90 ಲಕ್ಷ ರೂಪಾಯಿಗಳ ಸಹಾಯಧನ ಲಭ್ಯವಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಸದಸ್ಯರ ಹುಟ್ಟುಹಬ್ಬಕ್ಕೆ ವಿನೂತ ಮಾದರಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಮಂಗಳವಾರ ಸದಸ್ಯ ಮಹೇಶ್ ಬೆಳಗಾವಿ ಇವರ ಹುಟ್ಟುಹಬ್ಬದ ಅಂಗವಾಗಿ ಮಣೂರು ಬಾಳೆಬೆಟ್ಟು ಪರಿಸರದ ಕ್ಯಾನ್ಸರ್ ಪಿಡಿತ ಬೇಬಿ ಎನ್ನುವಾಕೆಗೆ 15,600ರೂಗಳ ಒಟ್ಟುಗೂಡಿಸಿ ನೆರವವನ್ನು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ನೇಹಕೂಟದ ಅಧ್ಯಕ್ಷೆ ಭಾರತಿ ವಿ ಮಯ್ಯ, ಕೋಟ ಗ್ರಾ.ಪಂ ಮಾಜಿ ಸದಸ್ಯೆ ಶಾಂತಾ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಉಪಾಧ್ಯಕ್ಷ ದಿನೇಶ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಮಾಜಿ ಅಧ್ಯಕ್ಷ ಗಿರೀಶ್ ಆಚಾರ್, ಸದಸ್ಯ ಗಣೇಶ್ ಕಾಸನಗುಂದು, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಹುಟ್ಟುಹಬ್ಬ ಹಬ್ಬ ಆಚರಿಸಿಕೊಂಡ ಮಹೇಶ್ ಬೆಳಗಾವಿ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ದೂರವಾಣಿ 8050770004 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902 ಅಥವಾ ಇಮೇಲ್ postmatrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) 1 ರಿಂದ 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾಂಶ  https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್‌ಗಳು (BLA), ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರಿಗೆ ವಿಶೇಷ ತರಬೇತಿ ಶಿಬಿರ ಬುಧವಾರ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರ್ ಕುಂದರ್ ಅವರು ಸ್ವಾಗತಿಸಿ ಉದ್ಘಾಟಿಸಿದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಬಿಎಲ್‌ಎಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ತರಬೇತಿ ನಡೆಸಿಕೊಟ್ಟು, ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ, ಫಾರಂ 6, 6A, 7 ಮತ್ತು 8ರ ಬಳಕೆ, ಮತದಾರರ ಪಟ್ಟಿಯ ಪರಿಶೀಲನೆ, ಅರ್ಹ ಮತದಾರರ ಹೆಸರು ಸೇರ್ಪಡೆ, ತಪ್ಪು ಅಥವಾ ನಕಲಿ ನೋಂದಣಿಗಳ ವಿರುದ್ಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ,  ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಅತ್ಯಂತ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು. ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಸಹಾಯಕ ಕಾನೂನು ಅಭಿರಕ್ಷಕರು ಹಾಗೂ ವಕೀಲರಾದ ಭಾನುಮತಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ಇಂದಿನ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಾದಕ ವಸ್ತುಗಳ ಸೇವನೆಯಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಂರಕ್ಷಣೆಗಾಗಿ ಇರುವ ಕಾಯ್ದೆಗಳ ಬಗ್ಗೆಯಾಗಲಿ, ಅವರಿಗಿರುವ ಕಾನೂನು ಸೇವೆಗಳ ಕುರಿತಾಗಲಿ ಅವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಭಾರತೀಯರ ಜೀವನದಲ್ಲಿ ಅಂಚೆ ಇಲಾಖೆ ಒಂದು ಜೀವನಾಡಿ ಅಂತೆ. ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ ಹಾಗೂ ಮೊದಲು ಅಂಚೆ ತಲುಪಿಸುವ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ಇಂದು ಸರ್ಕಾರಿ ಸೇವೆಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಅತ್ಯಂತ ಮಿತ ದರದಲ್ಲಿ ಸೇವೆಯನ್ನು ನೀಡಿ ನಮಗೆ ಒಂದು ನಂಬಿಕೆಯ ಸಂಸ್ಥೆ ಅಂಚೆ ಇಲಾಖೆ ಆಗಿದೆ ಎಂದು ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಹೇಳಿದರು. ಅವರು ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಶ್ರೀ ಗುರು ಫ್ರೆಂಡ್ಸ್ ರಥ ಬೀದಿ ಸಾಲಿಗ್ರಾಮ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ವಿಭಾಗ ಅಂಚೆ ಅಧೀಕ್ಷಕ ಜಯರಾಮ್ ಶೆಟ್ಟಿ ಇವರು ಅಂಚೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು ಹಾಗೂ ಇದರ ಪ್ರಯೋಜನವನ್ನು ಸಾರ್ವಜನಿಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ 10.83 ಲಕ್ಷ ರೂ. ಪಡೆದು ವಂಚನೆ ಎಸಗಿದ ಘಟನೆ ಸಾಸ್ತನದಲ್ಲಿ ಸಂಭವಿಸಿದೆ. ಅಭಿಷೇಕ್ ಪ್ರಕರಣ ಆರೋಪಿ. ಸಾಸ್ತಾನ ಐರೋಡಿ ಗ್ರಾಮದ ಯುವತಿ ವರ್ಷಾಗೆ (23) ಅಭಿಷೇಕ್ ಹಲವು ಸಮಯದಿಂದ ಪರಿಚಯವಿದ್ದು, ಸರಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ 2025ರ ಅಕ್ಟೋಬ‌ರ್ 31ರಿಂದ 2026ರ ಮೇ.28ರ ವರೆಗೆ ವಿವಿಧ ಹಂತಗಳಲ್ಲಿ ಯುವತಿಯ ಬ್ಯಾಂಕ್ ಖಾತೆ, ಫೋನ್ ಪೇ ಹಾಗೂ ಗೂಗಲ್ ಪ್ ಮೂಲಕ ಒಟ್ಟು 10,83,000 ಹಣವನ್ನು ಪಡೆದುಕೊಂಡಿದ್ದಾನೆ ಎಂದು ದೂರಲಾಗಿದೆ. ಹಣ ಪಡೆದ ಬಳಿಕ ಸರಕಾರಿ ಉದ್ಯೋಗ ಒದಗಿಸದೆ ನಡೆದ ಹಣವನ್ನೂ ಹಿಂದಿರುಗಿಸದೆ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಕೆಲಸ ಕೊಡಿಸುವಂತೆ ಅಥವಾ ಹಣವನ್ನು ವಾಪಸ್‌ ನೀಡುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗದಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

Read More