ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾವಣ್ಯ ರಿ. ಬೈಂದೂರು 48ನೇ ವಾರ್ಷಿಕೋತ್ಸವ ಹಾಗೂ ಬೈಂದೂರು ಮಾಜಿ ಶಾಸಕ ದಿ. ಕೆ. ಲಕ್ಷ್ಮೀನಾರಾಯಣ ಸ್ಮರಣಾರ್ಥ “ರಂಗಪಂಚಮಿ-2025” ರಂಗತೋತ್ಸವ ಮಾರ್ಚ್ 1 ರಿಂದ 5ರ ವರೆಗೆ ಶ್ರೀ ಶಾರಾದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿದೆ. ಮಾರ್ಚ್ 1ರಂದು 48ನೇ ವಾರ್ಷಿಕೋತ್ಸವ ಹಾಗೂ ರಂಗೋತ್ಸವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಲಾವಣ್ಯ ಅಧ್ಯಕ್ಷರಾದ ನರಸಿಂಹ ಬಿ. ನಾಯಕ್ ಅವರು ವಹಿಸಲಿದ್ದಾರೆ. ಧಾರವಾಡ ಉದ್ಯಮಿ ಯು.ಬಿ.ಶೆಟ್ಟಿ ಅವರು ಉದ್ಘಾಟನೆ ನೆರವೆರಿಸಲಿದ್ದಾರೆ. ಕುಂದಾಪುರ ಪ್ರಥಮ ದರ್ಜೆ ಗುತ್ತಿಗೆದಾರರಾದ ಬಿಜೂರು ರಾಮಕೃಷ್ಣ ಶೇರುಗಾರ್ ಅವರು ಶುಭಸಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಇನ್ನಿತರರು ಉಪಸ್ಥಿರಿರುವರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಅಭಿನಂದನೆ ಮಾಡಲಿದ್ದಾರೆ. ಈ ವೇಳೆ ಹಿರಿಯ ಕಲಾವಿದರಾದ ಗೋವಿಂದ ಎಂ. ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಜಪ್ತಿಯ ಶಶಿಧರ ಉಡುಪ ಹಾಗೂ ಕಾವೇರಿ ಉಡುಪ ಅವರ ಪುತ್ರನಾದ ಶ್ರೀಕಾಂತ್ ಉಡುಪ ಹಾಗೂ ಶಿರೂರಿನ ರಾಜು ಪೂಜಾರಿ ಹಾಗೂ ಸುಶೀಲ ಪೂಜಾರಿ ಅವರ ಪುತ್ರನಾದ ನಿಖಿಲ್ ಆರ್. ಪೂಜಾರಿ ಅವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ನವ್ಯ ಪೈ 8 (ಪ್ರಥಮ ಸ್ಥಾನ) ಹಾಗೂ ಪ್ರತೀಕ್ಷಾ 9 (10ನೇ ಸ್ಥಾನ) ವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಿಯುವ ಪ್ರಕ್ರಿಯೆಯಲ್ಲಿ ಭಯ, ನಾಚಿಕೆ ಹಾಗೂ ತಪ್ಪಿತಸ್ಥ ಭಾವನೆ ಇರಬಾರದು. ತಮಗೆ ಯಾವ ವಿಷಯದ ಬಗೆಗೆ ಜ್ಞಾನ ಬೇಕೋ ಅದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಪ್ರಯತ್ನಿಸಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಪದವಿ ಶಿಕ್ಷಣದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜೇಸಿಐ ಸೆನೆಟರ್ ಸದಾನಂದ ನಾವುಡ ಹೇಳಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು ಕೋಟೇಶ್ವರ ಇಲ್ಲಿನ ಐಕ್ಯೂಎಸಿ ಘಟಕ ಮತ್ತು ಕನ್ನಡ ಸಂಘದ ಸಹಯೋಗದೊಂದಿಗೆ ನಡೆದ ಗುರಿ ಮತ್ತು ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಂಘದ ಅಧ್ಯಕ್ಷ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು ಉಪಸ್ಥಿತರಿದ್ದರು. ಜೇಸಿಐ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ನಿರೂಪಿಸಿದರೆ, ಜೇಸಿ ರಾಕೇಶ್ ಶೆಟ್ಟಿ ವಂದಿಸಿದರು. ನವ್ಯ ಮತ್ತು ತಂಡದವರು ಪ್ರಾರ್ಥಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಂಚಗಂಗಾವಳಿ ನದಿಯ ಹೂಳೆತ್ತಿ ನದಿಯನ್ನು ರಕ್ಷಣೆ ಮಾಡುವಂತೆ ಪಂಚಗಂಗಾವಳಿ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಆಗ್ರಹಿಸಿದ್ದಾರೆ. ಐದು ನದಿಗಳು ಸೇರುವ ಕುಂದಾಪುರದ ಪಂಚ ಗಂಗಾವಳಿ ನದಿ ಬಹಳ ರಮಣೀಯ. ಸಾವಿರಾರು ಕುಟುಂಬಗಳ ಜೀವನಕ್ಕೆ ಆಶ್ರಯ ನೀಡುವ ತಾಣ. ವಿಹಾರಕ್ಕೂ ಬಹಳ ಅದ್ಭುತವಾದ ಪ್ರದೇಶ. ಆದರೆ ವರ್ಷದಿಂದ ವರ್ಷಕ್ಕೆ ನದಿಯಲ್ಲಿ ಹೂಳು ತುಂಬುತ್ತಾ ಹೋಗಿ ನದಿ ಸಂಪೂರ್ಣ ಕಳಾಹೀನವಾಗಿದೆ. ಹೂಳು ತುಂಬಿದ ಸ್ಥಳ ಗಳಲ್ಲೇ ಗಿಡಗಳು ಬೆಳೆದು ಕಾಡಿನಂತಾಗಿದೆ. ಹೊಸ ಹೊಸ ಕುದುರುಗಳು ಹುಟ್ಟಿವೆ. ಮೀನುಗಾರರಿಗೆ, ಚಿಪ್ಪು ಕಾರ್ಮಿಕರಿಗೆ ಜೀವನ ನಡೆಸಲು ಅನುಕೂಲ ಇಲ್ಲದೇ ನೂರಾರು ಕುಟುಂಬಗಳ ಮೇಲೆ ಪರಿಣಾಮ ಉಂಟಾಗಿದೆ. ಪ್ರವಾಸೋದ್ಯಮಕ್ಕೆ ಬಹಳ ಪ್ರಾಶಸ್ತ್ಯವಾಗಿದ್ದ ಈ ಸ್ಥಳ ಸಂಪೂರ್ಣ ನಿರ್ಲಕ್ಷಕ್ಕೆ ಒಳಪಟ್ಟಿದ್ದು, ಜನರು ಭರವಸೆಯನ್ನೇ ಕಳೆದುಕೊಂಡಂತೆ ಆಗಿದೆ. ನದಿ ಇಳಿತದ ಸಂದರ್ಭದಲ್ಲಂತೂ ಮರುಭೂಮಿಯಂತೆ ಕಾಣಿಸುತ್ತಿದೆ. ಕುಂದಾಪುರದ ಈ ಕೇಂದ್ರ ಸ್ಥಳದಲ್ಲಿ ಬಹಳಷ್ಟು ಯೋಜನೆಗಳ ಅನುಷ್ಠಾನ ಈ ಹಿಂದೆ ಬೇಡಿಕೆ ಇಡಲಾಗಿದ್ದರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಳೆಅಳಿವೆ ಬಳಿ ಯುವಕ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಮೃತ ಯುವಕ ಬೀಜಾಡಿ ಪೆಟ್ಟಿ ಮನೆ ಕುಮಾರ್ ಅವರ ಪುತ್ರ ಮೇಘರಾಜ್ (24)ಎಂದು ಗುರುತಿಸಲಾಗಿದೆ. ಅವರು ಬೆಳಗ್ಗೆ ಹಳೆ ಅಳಿವೆ ಬಳಿ ಸಮುದ್ರದಲ್ಲಿ ಮರಣಬಲೆ ಬಿಡಲೆಂದು ಹೋದ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದಾರೆ. ಸಂಜೆ ವೇಳೆ ಬೀಜಾಡಿ ಸಮೀಪ ಕಡಲ ಎಡಭಾಗದಲ್ಲಿ ಮೃತದೇಹ ದಡ ಸೇರಿದೆ. ಸ್ಥಳಕ್ಕಾಗಮಿಸಿದ ಕರಾವಳಿ ಕಾವಲು ಪಡೆಯ ಸುದರ್ಶನ್ ಎಸ್. ಕುಂದರ್, ಕೃಷ್ಣ ಕಾಂಚನ್, ಸಂತೋಷ್ ಪೂಜಾರಿ, ಸುಧಾಕರ್ ಖಾರ್ವಿ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ವೇದಿಕೆ, ಡೆಕಾಥ್ಲಾನ್ ಮತ್ತು ಏರೋಡೈನಾಮಿಕ್ಸ್ ಸಹಯೋಗದಲ್ಲಿ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಸಂಸ್ಥೆಯ ಮಹಿಳಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಇಂಡಿಯನ್ ಕೋಸ್ಟ್ ಗಾರ್ಡ್ನ ಸಹಾಯಕ ಕಮಾಂಡೆಂಟ್ ಪ್ರಿಯಾ ಮಾತನಾಡಿ, ಮಹಿಳೆಯರು ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪುರುಷನಷ್ಟೇ ಸಮರ್ಥರಾಗಿ ಎಲ್ಲಾ ಕೆಲಸಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ರಾಷ್ಟ್ರದ ಗಡಿಗಳನ್ನು ಕಾಪಾಡುವುದು ಅತ್ಯಂತ ಕಠಿಣ ಕೆಲಸವಾದರೂ, ಮಹಿಳೆಯರು ಈ ಸವಾಲಿನ ಕೆಲಸಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳ ಮಹಿಳಾ ಉದ್ಯೋಗಿಗಳಿಂದ ಪಥಸಂಚಲನದೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆಳ್ವಾಸ್ ಸೆಂಟ್ರಲ್ ಶಾಲೆಯ ಕ್ರೀಡಾ ಶಿಕ್ಷಕರಾದ ಆಶಾ, ಉ? ಕುಮಾರಿ ಮತ್ತು ಚಿತ್ರಾವತಿ, ಆಳ್ವಾಸ್ ಪ್ರಾಥಮಿಕ ಶಾಲೆಯ ಕವಿತಾ, ಆಳ್ವಾಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ-1 ಹುದ್ದೆ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ-1 ಹುದ್ದೆ ಹಾಗೂ ಮೂಡುಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ-1 ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ರಸ್ತೆಗಳಿಗೆ ಕಾಂಕ್ರೀಟಿಕರಣ ಮಾಡುವುದು ಉತ್ತಮ ಕೆಲಸ ಹಾಗೂ ಇದು ಶಾಶ್ವತ ಕಾಮಗಾರಿ ಕೂಡ ಹೌದು. ಆದರೆ ಹೆಚ್ಚಿನ ಕಡೆ ರಸ್ತೆ ಕಾಂಕ್ರೀಟಿಕರಣ ಆಗುವಾಗ ಅಗಲವಾದ ರಸ್ತೆಗಳು ಕಿರಿದಾಗಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಪಾಯಕಾರಿ ಆಗುತ್ತಿವೆ ಎಂದು ಕುಂದಾಪುರದ ನ್ಯಾಯವಾದಿ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಅಗಲವಾದ ರಸ್ತೆಗೆ ಕಿರಿದಾಗಿ ಕಾಂಕ್ರೀಟ್ ಹಾಕಿ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ಸಮರ್ಪಕ ಕೆಲಸ ಮಾಡದೆ ಅಪಾಯಕಾರಿಯಾಗಿ ಬಿಟ್ಟಿರುವುದು ಹೆಚ್ಚಿನ ರಸ್ತೆಗಳಲ್ಲಿ ನೋಡಬಹುದು. ಇದು ಪುರಸಭೆಯ ಕಟಾಚಾರದ ಕಾಮಗಾರಿ ನಿರ್ವಹಣೆಯಾಗಿದೆ. ಇನ್ನು ಮುಂದಾದರೂ ಪುರಸಭೆ ರಸ್ತೆ ಕಾಂಕ್ರೀಟಿಕರಣ ಮಾಡುವಾಗ ಅಗಲವಾದ ರಸ್ತೆಗಳನ್ನು ಕಿರಿದು ಮಾಡದೆ ಸಂಚಾರಕ್ಕೆ ಯೋಗ್ಯ ರೀತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸಬೇಕು ಹಾಗೂ ಇದರ ಬಗ್ಗೆ ಪುರಸಭೆ ಆಡಳಿತ ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಆಗೃಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ಹಿರಿಯರ ಜೀವನ ತಳಹದಿ, ಅವರ ಆದರ್ಶ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾಯಕ ಸಾರ್ಥಕ್ಯ ಕಂಡ ಕ್ಷಣಗಳಿಗೆ ವೇದಿಕೆ ಕಲ್ಪಿಸಿದೆ. ವಾಸುದೇವ ನಾಯಕ್ ಎಂದರೆ ನನ್ನಗೆ ಆ ಕಾಲದಲ್ಲಿ ಅನ್ನ ಅರಿವೆ, ಆಸರೆ ನೀಡಿದ ಮಹಾಶಕ್ತಿ ಶಾಶ್ವತವಾಗಿ ನೆನಪುಳಿಯುವಂತ ವ್ಯಕ್ತಿಯಾಗಿದ್ದಾರೆ, ಕಷ್ಟದಲ್ಲಿರುವರಿಗೆ ನೆರವು ನೀಡುವ ಅವರ ಮನಸ್ಥಿತಿ ಮಸ್ತಕದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದುಕೊಂಡಿದೆ. ಅಂತವರ ಹೆಸರನ್ನು ಉಳಿಸುವ ಪಂಚವರ್ಣ ಸಂಘಟನೆ ಸಮಾಜಮುಖಿ ಕಾರ್ಯಚಟುವಟಿಕೆಗಳು ಇನ್ನಷ್ಟು ಗಟ್ಟಿಗೊಳಿಸುವಂತೆ ಮಾಡಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟದ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ನಡೆದ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ಸಾರ್ವಜನಿಕರಿಗೆ ಅನುಕೂಲ ಸೃಷ್ಠಿಸುವ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ…
