ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಘಟಕಗಳ ವಿವರ:ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲಾಯಂಟ್ / ಕೋಲ್ಡ್ ಸ್ಟೋರೇಜ್ ನಿರ್ಮಾಣ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟೀಮ್ ಸಚಿನ್ ಲವರ್ಸ್ ತಂಡದ ವತಿಯಿಂದ ಕಾವ್ರಾಡಿ ಮುಳ್ಳುಗುಡ್ಡೆಯಲ್ಲಿ ಮದಗ ಪ್ರೀಮಿಯರ್ ಲೀಗ್ ಸೀಸನ್ 4 ಕ್ರಿಕೆಟ್ ಪಂದ್ಯಾಟ ನಡೆಯಿತು. ನಿವೃತ್ತ ಸೈನಿಕ ರವಿಚಂದ್ರ ಶೆಟ್ಟಿ ತೆಕ್ಕಟ್ಟೆ ಪಂದ್ಯಾಟವನ್ನು ಉದ್ಘಾಟಿಸಿದರು. ಸಚಿನ್ ಲವರ್ಸ್ ತಂಡದ ವತಿಯಿಂದ ಪ್ರಪ್ರಥಮ ಬಾರಿಗೆ ಮುದ್ರಿಸಿದ ಸಚಿನ್ ಲವರ್ಸ್ ಡೈರಿಯನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಮದಗ ಪ್ರೀಮಿಯರ್ ಲೀಗ್ ಸೀಜನ್ 4ರ ಸಂಘಟಕ ರಾಹುಲ್ ಹೆಗ್ಡೆ, ಕಾವ್ರಾಡಿ ಅಜಿತ್ ಕುಮಾರ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ನೈಲ್ಕೋಡ್, ಅನಿಲ್ ಕಾವ್ರಾಡಿ, ಹೇಮಂತ್ ಕಾವ್ರಾಡಿ, ಶ್ಯಾಮ್ ಗುಲ್ವಾಡಿ, ನಾಗರಾಜ್ ಮುಳ್ಳುಗುಡ್ಡೆ, ಅನಿಲ್ ಬಟರ್ಫ್ಲೈ, ಬೋಜ ಪೂಜಾರಿ, ಗುರುರಾಜ ಕಾವ್ರಾಡಿ, ಸ್ಥಳೀಯ ಮುಖಂಡರುಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಸುರೇಂದ್ರ ಶೆಟ್ಟಿ ಹಡಾಳಿ, ಎಂ.ಚಂದ್ರ, ಕ್ಯಾಂಪ್ಕೋ ಮ್ಯಾನೇಜರ್ ಶಿವಾನಂದ ಮಂಗಳೂರು ಉಪಸ್ಥಿತರಿದ್ದರು. ಈ ಸಂದರ್ಭ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಶ್ರೀರಾಮೇಶ್ವರ ಯುವಕ ತಂಡದ ಸದಸ್ಯರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಹಡವು ಗ್ರಾಮದ ಪಡುಕೋಣೆ ನಿವಾಸಿ ಸೀತು (81) ಅವರು ಬೆಂಕಿ ಆಕಸ್ಮಿಕವಾಗಿ ತಾಗಿ ಮೃತಪಟ್ಟಿದ್ದಾರೆ. ಬಚ್ಚಲು ಮನೆಯಲ್ಲಿ ಬೆಂಕಿ ಉರಿಸಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಸೀತು ಅವರ ಸೀರೆಗೆ ಬೆಂಕಿ ತಗಲಿದ ಪರಿಣಾಮ ಸುಟ್ಟ ಗಾಯವಾಗಿದ್ದು, ಚಿಕಿತ್ಸೆಗೆಂದು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ವೈದ್ಯಕೀಯ ವೆಚ್ಚ ಭರಿಸಲಾಗದೇ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೀತು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಡಾ. ಬಾಬು ಜಗಜೀವನರಾಮ ಅವರ 118 ನೇ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಅಮೂಲ್ಯಾ ಸಿ. ಶೆಟ್ಟಿ 95.11, ಅನುಷ್ ನಾಯಕ್ 94.23, ಚೈತ್ರಾ 93.31, ಕೀರ್ತನಾ 91.56, ಅಬ್ದುಸ್ ಸಲಾಂ 91.39, ಭೂಮಿಕಾ 91.05 ಪರ್ಸೆಂಟೈಲ್ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಕಾಡೆಮಿ ಆಫ್ ಸರ್ಟಿಫೈಡ್ ಹಝಾರ್ಡಸ್ ಮೆಟೀರಿಯಲ್ಸ್ ಮ್ಯಾನೇಜರ್ (ಎಸಿಎಚ್‌ಎಂಎಂ)-ಇಂಡಿಯಾ ಚಾಪ್ಟರ್, ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಹಾಗೂ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಜಂಟಿ ಸಹಯೋಗದಲ್ಲಿ ನಡೆಯಲಿರುವ 3 ದಿನಗಳ ಕಾರ್ಯಗಾರವನ್ನು ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು. ಭಾರತ ಹಾಗೂ ಅಮೆರಿಕಾ ದೇಶಗಳ ಸಂಪನ್ಮೂಲ ವ್ಯಕ್ತಿಗಳನ್ನು ಒಳಗೊಂಡ ಈ ಕಾರ್ಯಗಾರವನ್ನು ಎಸಿಎಚ್‌ಎಂಎಂ-ಇಂಡಿಯಾ ಚಾಪ್ಟರ್ ಸಂಸ್ಥೆಯ ಸ್ಥಾಪಕ ಹಾಗೂ ಅಧ್ಯಕ್ಷ ಡಾ. ರಾಂಪುರ್ ವಿಶ್ವನಾಥ್ ಉದ್ಘಾಟಿಸಿ ಅಪಾಯಕಾರಿ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸುವುದು ಮಾನವ ಹಾಗೂ ಪರಿಸರದ ಸುಸ್ಥಿರತೆಗೆ ಬಹಳ ಅಗತ್ಯ. ಅಪಾಯಕಾರಿ ವಸ್ತುಗಳನ್ನು ನಿರ್ವಹಿಸುವುದು ಪ್ರತಿಯೊಬ್ಬರ ಜವಬ್ದಾರಿ. ನಾವು ಯಾವುದೇ ಜ್ಞಾನವನ್ನು ಇತರರೊಂದಿಗೆ ಹಂಚಿಕೊಂಡಾಗ ಆ ಜ್ಞಾನವು ಕೆಲವರಿಗಾದರು ಉಪಯುಕ್ತವಾಗುತ್ತದೆ. ಪ್ರತಿಯೊಬ್ಬರು ತಮ್ಮ ಅನುಭವ, ಪರಿಣತಿ ಹಾಗೂ ವಿಷಯದ ತಿಳಿವಳಿಕೆಯನ್ನು ಹಂಚಿಕೊಳ್ಳಲು ಉತ್ಸುಕರಾಗಿರಬೇಕು. ಎಸಿಎಚ್‌ಎಂಎಂ ಸಂಸ್ಥೆಯ ಮೂಲಕ ಅಪಾಯಕಾರಿ ವಸ್ತುಗಳನ್ನು ನಿರ್ವಹಣೆಗೆ ಸಂಬಂಧಿಸಿದ 30 ಮಾದರಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇವುಗಳಲ್ಲಿ 18 ನಿರ್ವಹಣಾ ಮಾದರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವೆ ಮತ್ತು ಸ್ವಾತಂತ್ರ್ಯ ಈ ಎರಡು ಪರಿಕಲ್ಪನೆಗಳ ನೈಜ ಅರ್ಥವನ್ನು ಸ್ವಯಂಸೇವಕರು ಅರಿತುಕೊಳ್ಳಬೇಕು. ಸಾಹಿತ್ಯದ ಜೀವಾಳವೇ ಜೀವನ. ಬದುಕಿನ ಉದ್ದೇಶವನ್ನು ಸಾಹಿತ್ಯ ಕಟ್ಟಿ ಕೊಡುತ್ತದೆ. ವಿದ್ಯಾರ್ಥಿಗಳು ಬದುಕಿನಲ್ಲಿ ಸಮರ್ಪಣ ಮನೋಭಾವ, ಶ್ರಮದ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು. ನಿರಂತರವಾದ ಸಾಹಿತ್ಯ ಓದಿನಲ್ಲಿ ತೊಡಗಿಕೊಳ್ಳುವ ಮೂಲಕ, ಮೌಲ್ಯಯುತ ಜೀವನವನ್ನು ಕಟ್ಟಿಕೊಳ್ಳಿ ಎಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರೊಫೆಸರ್ ಡಾ| ರವಿರಾಜ್ ಶೆಟ್ಟಿ ಹೇಳಿದರು. ಅವರು ವಡ್ಡರ್ಸೆಯಲ್ಲಿ ನಡೆಯುತ್ತಿರುವ ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ ಸಾಹಿತ್ಯ ಮತ್ತು ಜೀವನ ಮೌಲ್ಯ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ಪ್ರಶಾಂತ್ ಶೆಟ್ಟಿ ವಡ್ಡರ್ಸೆ ಅಧ್ಯಕ್ಷತೆ ವಹಿಸಿದ್ದರು, ಕಾಲೇಜಿನ ಪ್ರಾಂಶುಪಾಲರಾದ ಕೊತ್ತಾಡಿ ಉಮೇಶ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭ ಮಾಜಿ ಗ್ರಾಮ ಪಂಚಾಯತ್ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಿರ್ಮಾಣ ಹಂತದ ಮನೆಯ ಸ್ಲಾಬ್‌ನಿಂದ ಕೆಳಗಡೆ ಬಿದ್ದು ಮನೆಯ ಯಜಮಾನ ಮೃತಪಟ್ಟ ಘಟನೆ ಇಲ್ಲಿನ ಬೇಳೂರು ದೇವಸ್ಥಾನಬೆಟ್ಟು, ಕಲ್ಮಂಡೆಯಲ್ಲಿ ಸೋಮವಾರ ಸಂಭವಿಸಿದೆ. ಸ್ಥಳೀಯ ನಿವಾಸಿ ಗೋಪಾಲ ಆಚಾರ್ಯ (62) ಅವರು ಮೃತಪಟ್ಟ ವ್ಯಕ್ತಿ. ಅವರು ಬೇಳೂರಿನಲ್ಲಿ ಹೊಸ ಮನೆಯನ್ನು ನಿರ್ಮಿಣ ಮಾಡುತ್ತಿದ್ದು, ಅದನ್ನು ನೋಡಲು ಮಕ್ಕಳ ಜೊತೆ ಹೋಗಿದ್ದರು. ಈ ವೇಳೆ ಗೋಪಾಲ ಮನೆಯ ಮೊದಲ ಅಂತಸ್ತಿಗೆ ಹೋಗಿ ನೋಡುತ್ತಿರುವಾಗ ಆಯತಪ್ಪಿ ಸ್ಲಾಬ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಗೋಪಾಲ ಆಚಾರ್ಯ ಅವರು ಅದಾಗಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆಯು ದಿನೇ ದಿನೇ ಹೆಚ್ಚಿ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಇರುವುದು, ಅನಧಿಕೃತವಾಗಿ ರಚನೆಗೊಂಡಿರುವ ಗೂಡಂಗಡಿಗಳು, ತಳ್ಳುವ ಗಾಡಿಗಳು ರಸ್ತೆಯಲ್ಲಿಯೇ ವ್ಯಾಪಾರ ಕೈಗೊಳ್ಳುವುದು ಸೇರಿದಂತೆ ಮತ್ತಿತರರ ಕಾರಣಗಳಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಉಡುಪಿ ನಗರದ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ಪಾರ್ಕಿಂಗ್ ಮಾಡುವ ಹಿನ್ನೆಲೆ, ಸಾರ್ವಜನಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್. ಎಸ್. 99.46, ಸಾನಿಕಾ ಕೆ. ಎನ್ 99. 20, ಎಂ. ಮಂಜುನಾಥ್ 99.01, ಮೋಹಿತ್ ಎಂ. 99.16, ಎಚ್. ಎ. ರಾಜೇಶ್ 99.10, ಪರ್ಸಂಟೈಲ್ ಗಳಿಸಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ ಎಚ್. ಬಿ, ಆದಿತ್ಯ ವಟಿ ಕೆ, ಮತ್ತು ವಿನಯ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
