Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ಜಿಲ್ಲೆಯ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರ ಜೊತೆಗೆ ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ತಪ್ಪದೇ ಪಡೆಯಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸಲಹೆ ನೀಡಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ಗಳನ್ನು ಧರಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಎಂದರು. ನಮ್ಮ ನೆರೆಯ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮಿತಿಮೀರಿದ್ದು, ನಮ್ಮ ದೇಶದಲ್ಲಿಯೂ ಹರಡುವ ಸಾಧ್ಯತೆ ಇರುವ ಹಿನ್ನಲೆ, ಅಗತ್ಯ ಕೋವಿಡ್ ನಿಯಂತ್ರಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದ್ದು, ಸರ್ಕಾರ ಮಾರ್ಗಸೂಚಿಗಳನ್ನು ಸಹ ಹೊರಡಿಸಿದ್ದು, ಅವುಗಳನ್ನು ಎಲ್ಲರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನಲ್ಲಿ ಪ್ರಸ್ತುತ ವಾರದ ಎರಡು ದಿನಗಳ ಸಂಚಾರಿ ನ್ಯಾಯಾಲಯದ ಬದಲಿಗೆ ಖಾಯಂ ಆಗಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಕಾರ್ಯಾಚರಿಸಲಿದೆ. ರಾಜ್ಯ ಉಚ್ಛ ನ್ಯಾಯಾಲಯದ ರಿಜಿಸ್ಟಾರ್ ಜನರಲ್ ಪ್ರಸ್ತಾವನೆಗೆ ಡಿ.28ರಂದು ಸರಕಾರದ ಮಂಜೂರಾತಿ ದೊರೆತಿದೆ. ಕಾರ್ಕಳದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್‌ಸಿ ನ್ಯಾಯಾಲಯವನ್ನು ಹಾಲಿ ಇರುವ ಹುದ್ದೆಗಳೊಂದಿಗೆ ಬೈಂದೂರಿಗೆ ಸ್ಥಳಾಂತರಿಸಿ, ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಬೈಂದೂರು, ಉಡುಪಿ ಎಂದು ಮರುಪದನಾಮೀಕರಣಗೊಳಿಸಲು ಸೂಚಿಸಲಾಗಿದೆ. ಜನವರಿ ಮೊದಲ ವಾರದಿಂದಲೇ ಖಾಯಂ ನ್ಯಾಯಾಲಯ ಆರಂಭಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ► ಬೈಂದೂರು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ – https://kundapraa.com/?p=57565 . ಬೈಂದೂರು ತಾಲೂಕಿಗೆ ಆರಂಭದಲ್ಲಿ ಸಂಚಾರಿ ನ್ಯಾಯಾಲಯ ಹಾಗೂ ಇದೀಗ ಖಾಯಂ ನ್ಯಾಯಾಲಯವನ್ನು ತರವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಸಹಕರಿಸಿದ ಸಿಎಂ ಕಛೇರಿ, ಉಡುಪಿ ನ್ಯಾಯಾಂಗ ಇಲಾಖೆ, ರಾಜ್ಯ ಕಾನೂನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಷಷ್ಠಿ ಮಹೋತ್ಸವವು ಜರುಗಿತು. ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾ ಪೂಜೆ, ಪಂಚಾಮೃತ, ಮಡಿ ಪ್ರದಕ್ಷಿಣೆ, ಶುದ್ಧ ಕಲಶ, ಈಶ್ವರನಿಗೆ ರುದ್ರಾಭಿಶೇಕ, ಉರುಳು ಸೇವೆ, ಮಡೆಸ್ನಾನ, ತುಲಾಭಾರ, ಆಶ್ಲೇಷ ಬಲಿ, ನಾಗಮಂಡಲ, ಹೂ-ಕಾಯಿ ಅರ್ಪಣೆ, ನಾಗಸಂಸ್ಕಾರ ಮುಂತಾದ ಸೇವೆಗಳು ನಡೆದವು. ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಸಂದರ್ಭದಲ್ಲಿ ಮಡೆಸ್ನಾನ ಹರಕೆ ಪದ್ಧತಿಯಿದ್ದು ಸೌಪರ್ಣಿಕ ನದಿಯಲ್ಲಿ ಸ್ನಾನ ಮಾಡಿ ಬಂದ ಸಹಸ್ರಾರು ಭಕ್ತರು ಶ್ರೀ ದೇವರ ಪೌಳಿಯಲ್ಲಿ ಉರುಳು ಸೇವೆ ಮಾಡಿ ಹರಕೆ ಸಮರ್ಪಿಸಿದರು. ಭಕ್ತರು ಬೆಳ್ಳಿ ಹರಕೆ ಸೇವೆಯನ್ನು ಸಲ್ಲಿಸಲು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ದೇವಳದ ಉತ್ಸವ ಸಮಿತಿ ಆಡಳಿತ ಮೊಕೆಸ್ತರ ಬಿ. ಅರುಣ್ ಕುಮಾರ ಶೆಟ್ಟಿ ಹಾಗೂ ಸ್ವಯಂಸೇವಕರುಗಳು ಭಕ್ತರಿಗೆ ಸಕಲ ವ್ಯವಸ್ಥೆ ಕಲ್ಪಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ವಿವಿಧ ಸರಕಾರಿ ಯೋಜನೆಗಳ ಸಾಲ ಪಡೆಯಲು ಫಲಾನುಭವಿಗಳು ಬ್ಯಾಂಕ್ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಆದ್ಯತೆಯ ಮೇಲೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಂಜೂರು ಮಾಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಲ ಮತ್ತು ಠೇವಣಿ ಪ್ರಮಾಣ ರಾಜ್ಯಕ್ಕೆ ಹೋಲಿಸಿದ್ದಲ್ಲಿ ಕಡಿಮೆ ಇದ್ದು, ಇದನ್ನು ಸರಿದೂಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಿಸುವ ಅಗತ್ಯವಿದ್ದು, ಸರ್ಕಾರದ ವಿವಿಧ ಯೋಜನೆಗಳಲ್ಲಿ ಸಾಲ ಪಡೆಯಲು ವಿವಿಧ ಇಲಾಖೆಗಳ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಶೀಘ್ರದಲ್ಲಿ ಸಾಲ ವಿತರಿಸುವ ಮೂಲಕ ಈ ಪ್ರಮಾಣವನ್ನು ಸರಿದೂಗಿಸುವ ಜೊತೆಗೆ ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಹಾಗೂ ಸಾರ್ವಜನಿಕರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸಲು ಸಾಧ್ಯವಾಗಲಿದೆ ಎಂದರು. ಕೃಷಿ ಮತ್ತು ತೋಟಗಾರಿಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೆಸಿಐ ಉಪ್ಪುಂದ 2023ನೇ ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾರ್ಯದರ್ಶಿಯಾಗಿ ಪುರಂದರ ಉಪ್ಪುಂದ ಆಯ್ಕೆಯಾಗಿದ್ದಾರೆ. ಜನವರಿ 1ರಂದು ನೂತನ ಸಮಿತಿಯ ಪದಗ್ರಹಣ ಸಮಾರಂಭ ಜರುಗಲಿದೆ. ನೂತನ ಕಮಿಟಿಯಲ್ಲಿ ನಿಕಟಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ ಉಬ್ಜೇರಿ, ಉಪಾಧ್ಯಕ್ಷರಾಗಿ ಮಂಜುನಾಥ ದೇವಾಡಿಗ, ಶರತ್ ಶೆಟ್ಟಿ, ಅನುಷ್, ಸಂತೋಷ್, ಅನೂಪ್, ಖಜಾಂಚಿಯಾಗಿ ರಾಮಕೃಷ್ಣ ಖಾರ್ವಿ, ಲೇಡಿ ಜೆಸಿ ಕೋ-ಆರ್ಡಿನೇಟರಾಗಿ ರೇಖಾ, ಜೆಜೆಸಿ ವಿಂಗ್ ಅಧ್ಯಕ್ಷರಾಗಿ ನಿಶಾ ಸಂತೋಷ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ವಿಜಯ ಶೆಟ್ಟಿ, ಜೆಸಿರೇಟ್ ಕೋ-ಆರ್ಡಿನೇಟರ್ ಆಗಿ ನರಸಿಂಹ ದೇವಾಡಿಗ, ಜೆಜೆಸಿ ಕೋ-ಆರ್ಡಿನೇಟರ್ ಜಯರಾಜ ಖಾರ್ವಿ, ಬುಲೇಟಿನ್ ಎಡಿಟರ್ ಆಗಿ ಜಗದೀಶ್ ದೇವಾಡಿಗ, ಅವಿನಾಶ್, ಇವೆಂಟ್ ಅಂಬಾಸಿಡರ್ ಆಗಿ ಪ್ರಕಾಶ್ ಭಟ್, ಮೀಡಿಯಾ ಕವರೇಜ್ ಅಭಿಷೇಕ್, ಎಂಪವರಿಂಗ್ ಯುಥ್ ನಿತೀನ್ ಶೆಟ್ಟಿ, ಕಲ್ಚರಲ್ ಕೋ-ಆರ್ಡಿನೇಟರ್ ಶ್ರೀಲತಾ, ಸುಪರ್ಣ, ಜಿ&ಡಿ ಕೋ-ಆರ್ಡಿನೇಟರ್ ಪುರಂದರ ಖಾರ್ವಿ ಉಪ್ಪುಂದ, ಸ್ಪೋರ್ಟ್ಸ್ ಕೋ-ಆರ್ಡಿನೇಟರ್ ಗೌರೀಶ್ ಹುದಾರ್, ರಂಜಿತ್ ಉಪ್ಪುಂದ, ಪೋಗ್ರಾಂ ಕೋ-ಆರ್ಡಿನೇಟರ್ ಆಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿಚಕ್ರ ವಾಹನಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತ ದುರ್ದೈವಿ ಪ್ರಶಾಂತ್ ಮೊಗವೀರ ಅವರು ದಿನೇಶ್ ಪೂಜಾರಿ ಎಂಬವರ ಬೈಕಿನ ಹಿಂಬದಿಯಲ್ಲಿ ಕುಳಿತು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ, ಹೊಸ ಕ್ರೇನ್ ವಾಹನ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸಮೇತ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ದಿನೇಶ್ ಪೂಜಾರಿ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಯಾದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯೋಗ ಹಾಗೂ ಸರ್ವಧರ್ಮ ಪ್ರಾರ್ಥನೆಯೊಂದಿಗೆ ಸಂಪನ್ನಗೊಂಡ ಜಾಂಬೂರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ್ ಸೌಟ್ಸ್-ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕೊನೆಯ ದಿನ ಪುತ್ತಿಗೆ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಬೃಹತ್ ಯೋಗ ಪ್ರಾತ್ಯಕ್ಷಿಕೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಹಾಗೂ ಪ್ರಾಂಶುಪಾಲ ಫಾದರ್ ಫ್ರಾನ್ಸಿಸ್ ಗ್ಸೇವಿಯರ್ ಗೋಮ್ಸ್, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯು ಸಂಸ್ಕೃತಿ, ಕಲೆ, ವಿಜ್ಞಾನ, ಸಾಹಿತ್ಯ, ಮನೋರಂಜನೆ ಮುಂತಾದ ಆಯಾಮಗಳನ್ನೊಳಗೊಂಡ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಾಂಬೂರಿಗೆ ಆಗಮಿಸಿದ್ದ ದೇಶದ ವಿವಿಧ ಪ್ರದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಉತ್ತಮ ಅನುಭವ ನೀಡಿದೆ. ಜಾಂಬೂರಿಯಲ್ಲಿ ಕಲಿತ ಎಲ್ಲಾ ವಿಚಾರಗಳನ್ನು ಕೂಡ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕು. ಜಾಂಬೂರಿಯೂ ವಿದ್ಯಾರ್ಥಿಗಳ ಯೋಚನಾ ಕ್ರಮದಲ್ಲಿ, ಸಂಬಂಧಗಳನ್ನು ಬೆಸೆಯುವ ಸಾಮರ್ಥ್ಯದಲ್ಲಿ ಬದಲಾವಣೆಗಳನ್ನು ತಂದಿದ್ದು ಸಮಾಜದಲ್ಲಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಆವರದಣವು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕಾರಣಕ್ಕಾಗಿ ಏಳು ದಿನಗಳ ಕಾಲ ವರ್ಣಬೆಳಕಿನ ಚಿತ್ತಾರದಿಂದ ಕಂಗೊಳಿಸಿತು. ಎತ್ತ ನೋಡಿದರೂ ಮಿನುಗುತ್ತಿರುವ ವಿದ್ಯುತ್ ದೀಪಾಲಂಕಾರಗಳು ವಿದ್ಯಾಗಿರಿಗೆ ಉತ್ಸವದ ರಂಗು ತುಂಬಿದ್ದವು. ಆಳ್ವಾಸ್ ಆವರಣದ ಮುಂಭಾಗದಿಂದ ಜಾಂಬೂರಿ ಪ್ರವೇಶದವರೆಗೆ ಕಾಲೇಜಿನ ಪ್ರವೇಶ ದ್ವಾರ ಸೇರಿದಂತೆ ವಿವಿಧ ಮುಖ್ಯದ್ವಾರ, ಸುತ್ತಲಿನ ಪರಿಸರ, ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು. ಹಲವುಕಡೆ ಬೆಳಕಿನ ಅಕ್ಷರಗಳು ಸ್ವಾಗತಕೋರುತ್ತಿರುವ ದೃಶ್ಯ ಅತ್ಯಾಕರ್ಷಕವಾಗಿದ್ದು ನೋಡುಗರ ಕಣ್ಮನಸೆಳೆಯುತ್ತಿತ್ತು. ಮುಖ್ಯ ಬೀದಿಗಳ ತುಂಬ ಹಲವು ಆಕೃತಿಗಳ ಮೇಲೆ ಕಂಗೂಳಿಸುವ ವಿದ್ಯುತ್ ದೀಪದ ಬೆಳಕು ಎಲ್ಲರ ಗಮನ ಸೆಳಯುವಲ್ಲಿ ಯಶಸ್ವಿಯಾಯಿತು. ಸಂಪಿಗೆ ರಸ್ತೆಯಿಂದ ಕ್ಯಾಂಪಸ್ ಪ್ರವೇಶಿಸುವ ದಾರಿಯುದ್ದಕ್ಕೂ ಪಿರಮಿಡ್ ಮಾದರಿಯಲ್ಲಿ ಸಾಲಾಗಿ ನಿಂತಿರುವ ವಿದ್ಯುತ್ ದೀಪಾಲಂಕಾರಗಳ ಗೋಪುರಗಳ ನೋಟ ವಿಶೇಷವೆನ್ನಿಸಿತ್ತು. ಅಷ್ಟೇ ಅಲ್ಲದೇ ಕ್ಯಾಂಪಸ್ ಆವರಣದಲ್ಲಿ ಬೆಳಕಿನಿಂದ ಕಂಗೊಳಿಸುತ್ತಿದ್ದ ಹಲವು ಪ್ರಾಣಿಗಳ ಪ್ರತಿಕೃತಿಗಳು ನೋಡುಗರನ್ನು ಆಕರ್ಷಿಸಿದವು. ವರದಿ: ತೇಜಶ್ವಿನಿ ಕಾಂತರಾಜ್, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಅಂತರಕಾಲೇಜು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಆತ್ರಾಡಿ ಪ್ರಮೋದ್ ಶೆಟ್ಟಿ, 67ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಅಂತರ್ ವಿ.ವಿ. ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇದು ಮಂಗಳೂರು ವಿ.ವಿ.ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಆಳ್ವಾಸ್ ಗೆ ಒಲಿದ ಚೊಚ್ಚಲ ಚಿನ್ನದ ಪದಕವಾಗಿದೆ. ರಾಷ್ಟ್ರೀಯ ಮಟ್ಟದ ಅಂತರ್ ವಿ.ವಿ. ಕರಾಟೆ ಸ್ಪರ್ಧೆಯು ಜನವರಿ ಎರಡನೇ ವಾರದಲ್ಲಿ ಛತ್ತೀಸ್ ಘರ್ ರಾಜ್ಯದ ಭಿಲಾಸ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿಶ್ವ ವಿದ್ಯಾನಿಲಯದಲ್ಲಿ ನಡೆಯಲಿದೆ. ಆಳ್ವಾಸ್ ಸಾಂಸ್ಕೃತಿಕ ಯೋಜನೆಯ ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿರುವ ಪ್ರಮೋದ್, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಹಲವಾರು ನಾಟಕದಲ್ಲಿ ಅಭಿನಯಿಸಿ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧೆಗೈಯುತ್ತಿರುವ ಪ್ರಮೋದ್ ಅವರನ್ನು, ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಹೊಸ ಚಿಂತನೆಗೆ ಪೋಷಕರ ಸಹಕಾರ ಆಗತ್ಯ, ಅವರ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸಬೇಕು, ಕಾರಂತರ ಬಾಲ ಪುರಸ್ಕಾರದಿಂದ ಮಕ್ಕಳಲ್ಲಿ ಇನ್ನೂ ಹೊಸ ಹುರುಪು ಸೃಷ್ಠಿ ಸಾಧ್ಯ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಡೆದ ಕಾರಂತರ ಇಪ್ಪತ್ತೈದನೇ ಪುಣ್ಯ ಸ್ಮರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ – ಸಾಹಿತ್ಯಿಕ ರಸಗವಳ ಅನೂಹ್ಯ-೨೦೨೨ (ನಾವೀನ್ಯದ ಗೌಜಿ) ಮೂರನೇ ದಿನದ ಕಾರ್ಯಕ್ರಮದಲ್ಲಿ ಡಾ|| ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರದಾನ ಮಾಡಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನ ದೃತಿ ಎಸ್, ಜಿ.ಎಂ. ವಿದ್ಯಾನಿಕೇತನ…

Read More