ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿಯ ಧರ್ಮದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ನಿರ್ಮಾತೃಗಳಾದ ದಿ. ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಸಂಸ್ಮರಣೆಯ ಅಂಗವಾಗಿ ಸಂಸ್ಥಾಪಕರ ದಿನಾಚರಣೆಯನ್ನು ಶುಕ್ರವಾರದಂದು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆರಾಧನೆ ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಬದುಕು ಮತ್ತು ಸಾಧನೆಯ ವಿವಿಧ ಮಜಲುಗಳನ್ನು ಸಂಸ್ಮರಿಸಲಾಯಿತು. ಮುಂಜಾನೆಯ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲ್ಪಟ್ಟವು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್ ಪೋಷಕರನ್ನುಉದ್ದೇಶಿಸಿ ಮಾತನಾಡಿ, ವ್ಯಕ್ತಿಯೊಬ್ಬ ಬದುಕಿದ್ದ ಅವಧಿ ಎಷ್ಟು ಎನ್ನುವುದಕ್ಕಿಂತ ಆತ ಬದುಕಿದ್ದ ರೀತಿ ಹೇಗಿತ್ತು? ಸಮಾಜಕ್ಕೆ ಆತ ನೀಡಿದ ಕೊಡುಗೆ ಏನು? ಎನ್ನುವುದು ಬಹಳ ಮುಖ್ಯ. ಹೂವು ಪರಮಾತ್ಮನ ಪಾದ ಸೇರಿ ಸಾರ್ಥಕ ಪಡೆಯುವಂತೆ, ವೇದಮೂರ್ತಿ ಹೆಚ್. ರಾಮಚಂದ್ರಭಟ್ಟರು ಸಮಾಜದ ಹಿತಕ್ಕಾಗಿ ದುಡಿದು ಸಾರ್ಥಕವನ್ನು ಪಡೆದು, ಕೀರ್ತಿಶೇಷರಾದವರು ಎಂದರು. ಈ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಡ್ಡರ್ಸೆಯಲ್ಲಿ ನಡೆಯುತ್ತಿರುವ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರಮದಾನಕ್ಕೆ ಬಂಡಾಡಿ ಸತೀಶ್ ಶೆಟ್ಟಿ ವಡ್ಡರ್ಸೆ ಅವರು ಚಾಲನೆ ನೀಡಿದರು. ಈ ಸಂದರ್ಭ ಉದ್ಯಮಿ ವಾಸು ಪೂಜಾರಿ ಬನ್ನಾಡಿ, ಫ್ರೆಂಡ್ಸ್ ವಡ್ಡರ್ಸೆ ಇದರ ಅಧ್ಯಕ್ಷ ಉಮೇಶ ಮರಕಾಲ, ಸರಕಾರಿ ಪ್ರೌಢಶಾಲೆ ವಡ್ಡರ್ಸೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ಪಿ., ಕೃಷಿಕರಾದ ರಘುರಾಮ್ ಶೆಟ್ಟಿ, ಬಾಬು ದೇವಾಡಿಗ ವಡ್ಡರ್ಸೆ ಹಾಗೂ ಸಹ ಶಿಬಿರಾಧಿಕಾರಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಕೊತ್ತಾಡಿ ಉಮೇಶ್ ಶೆಟ್ಟಿ ಶುಭ ಹಾರೈಸಿದರು. ಶಿಬಿರಾಧಿಕಾರಿಗಳಾದ ಡಾ| ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ ಕಾರ್ಯಕ್ರಮ ಸಂಯೋಜಿಸಿದರು. ಎನ್.ಎಸ್.ಎಸ್. ಸ್ವಯಂಸೇವಕರಾದ ಆಶಿಕ್ ಪ್ರಾರ್ಥಿಸಿ, ಆಕಾಶ ಆಚಾರ್ ಸ್ವಾಗತಿಸಿ, ರಿಷಿತಾ ವಂದಿಸಿ, ರಶ್ಮಿತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಗೋಳಿಹೊಳೆ ಗ್ರಾಮದ ಹುಂಚನಿ ಜನ್ಮನೆ ತಿರುವಿನಲ್ಲಿ ಮರಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರದೀಪ್ ಎಂಬವರ ತೋಟಕ್ಕೆ ಮಣ್ಣು ಹಾಕಲೆಂದು ಸಾಗುತ್ತಿದ್ದ ಟಿಪ್ಪರ್ ಚಾಲಕನ ಹತೋಟಿ ತಪ್ಪಿ ತಗ್ಗುಪ್ರದೇಶಕ್ಕೆ ಧುಮುಕಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಟಿಪ್ಪರ್ನ ಮುಂಬದಿ ನಜ್ಜುಗುಜ್ಜಾಗಿದ್ದು, ಮಹಾಬಲ, ಹನುಮಂತ ಹಾಗೂ ಚಾಲಕ ಚಂದ್ರ ಸಿಲುಕಿ ಕೊಂಡಿದ್ದರು. ಮೂವರ ಪೈಕಿ ಚಾಲಕ ಚಂದ್ರ ಸ್ಥಳದಲ್ಲೇ ಮೃತ ಪಟ್ಟಿದ್ದರೆ, ಮಹಾಬಲ ಹಾಗೂ ಹನುಮಂತ ಅವರನ್ನು ಹೊರಗೆ ತೆಗೆದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆಬ್ರವರಿ 12 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತಿರ್ಣರಾದ ಅಭ್ಯೃಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕಿರ್ಣ ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 810561829, 9945856670, 9901472710 ಮತ್ತು 8105774936 ಅನ್ನು ಸಂರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರದ ಶ್ರೀ ಕೃಷ್ಣ ಭವನದ ಬಳಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯ ಜವಳಿ ಅಂಗಡಿ ಮಾಲಿಕ ಆನಂದ ಶೆಟ್ಟಿ ಅವರಿಗೆ ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ತಕ್ಷಣ ಅವರನ್ನು ಶಂಕರನಾರಾಯಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಶೀಲಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್.ಎಸ್.ಎಸ್. ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು, ಸಮಯ ಪಾಲನೆ, ನೈತಿಕ ಮೌಲ್ಯಗಳನ್ನು ರೂಡಿಸಿಕೊಳ್ಳಲು ಸಾಧ್ಯ. ಇಂತಹ ಶಿಬಿರಗಳು ವರ್ಷದಲ್ಲಿ ಒಂದು ಬಾರಿ ಅಲ್ಲ ನಿರಂತರವಾಗಿ ನಡೆಯಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇದು ದಾರಿಯಾಗಬಲ್ಲದು, ಜೊತೆಗೆ ವೃತ್ತಿ ಬದುಕಿಗೆ ಮಾರ್ಗಸೂಚಿ ಆಗಬಲ್ಲದು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘ ಇದರ ಮಾಜಿ ಅಧ್ಯಕ್ಷರಾದ ಬಿ. ಭೋಜ ಹೆಗ್ಡೆ ಅವರು ಹೇಳಿದರು. ಅವರು ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ವಡ್ಡರ್ಸೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದಿರು. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ವಡ್ಡರ್ಸೆಯ ಆಡಳಿತ ಮೊಕ್ತೇಸರರು ಮತ್ತು ನ್ಯಾಯವಾದಿಗಳಾದ ಕೊತ್ತಾಡಿ ಉದಯ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಲಯನ್ ಎಂ.ಜೆ.ಎಫ್. ವಸಂತ್ ವಿ. ಶೆಟ್ಟಿ ಸೂರಿಬೆಟ್ಟು ಶುಭಶಂಸನೆಗೈದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಶ್ರೀ ನಾಗ ದೇವರ ಜೀರ್ಣಾಷ್ಟಬಂಧ ಪುನರ್ ಪ್ರತಿಷ್ಠಾ ಮಹೋತ್ಸವ, ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ದೇವಸ್ಥಾನದಲ್ಲಿ ನಡೆಯಿತು. ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ. ಮೇಸ್ತ, ಗೌರವಾಧ್ಯಕ್ಷ ಸುರೇಶ ಖಾರ್ವಿ, ಪುರೋಹಿತರಾದ ರಾಘವೇಂದ್ರ ಅಡಿಗ ನಾಯಕವಾಡಿ ಮತ್ತು ಚೆನ್ನಕೇಶವ ಭಟ್ ಆನಗಳ್ಳಿ ಅವರು ಜಂಟಿಯಾಗಿ ಚಪ್ಪರ ಮುಹೂರ್ತ ನೆರವೇರಿಸಿ, ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ದೇವಸ್ಥಾನದ ಕಾರ್ಯದರ್ಶಿ ಶ್ರೀಧರ ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ರಾಘವೇಂದ್ರ ವಿ.ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯುತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ವಿ.ಮೇಸ್ತ, ಕಾರ್ಯದರ್ಶಿ ರಾಮದಾಸ ಕೆ.ಮೇಸ್ತ, ಬೆಣ್ಗೆರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಳ್ತೂರು ಗ್ರಾಮದ ಕೆಳಬೆಟ್ಟು ನಿವಾಸಿ ರಘುರಾಮ (48) ಅವರು ರಕ್ತವಾಂತಿ ಮಾಡಿ ಮೃತಪಟ್ಟಿದ್ದಾರೆ. ಅವರು ಕುಂದಾಪುರದ ಶೆಟ್ಟಿ ಐಸ್ ಪ್ಲಾಂಟ್ನಲ್ಲಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಫೆ.5ರಂದು ಬೆಳಿಗ್ಗೆ ಕೆಲಸದಲ್ಲಿರುವಾಗಲೇ ರಕ್ತವಾಂತಿ ಮಾಡಿಕೊಂಡಿದ್ದು, ಕೂಡಲೇ ಐಸ್ಪ್ಲಾಂಟ್ನ ಮಾಲೀಕ ರಂಜಿತ್ ಶೆಟ್ಟಿ ಮತ್ತು ಇತರರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು, ರಘುರಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರ ಗ್ರಾಮದ ಸುಪ್ರೀತ್ ಕಾಮತ್ ಅವರ ಪತ್ನಿ ಕಾವ್ಯಾ (27) ಅವರು ಫೆ. 5ರಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವಾಡಿ ಗ್ರಾಮ ಉಮೇಶ್ ಅವರ ಪುತ್ರಿ ಕಾವ್ಯಾ ಅವರು ಸಿದ್ದಾಪುರ ಕೆಳಪೇಟೆಯ ವೆಂಕಟೇಶ ಕಾಮತ್ ಅವರ ಪುತ್ರ ಸುಪ್ರೀತ್ ಕಾಮತ್ ಅವರೊಂದಿಗೆ 2023ರಲ್ಲಿ ವಿವಾಹವಾಗಿದ್ದರು. ಸುಪ್ರೀತ್ ಕಾಮತ್ ಹೆಸ್ಕೂತ್ತೂರು ಪ್ರೌಢಶಾಲೆಯಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ 10 ತಿಂಗಳ ಹೆಣ್ಣು ಮಗು ಇದೆ. ಪತಿ ಸುಪ್ರೀತ್ ಕಾಮತ್ ಹಾಗೂ ಅತ್ತೆ ಆಶಾ ಕಾಮತ್ ಅವರೊಂದಿಗೆ ಸಿದ್ದಾಪುರದ ಮನೆಯಲ್ಲಿ ಕಾವ್ಯಾ ವಾಸವಾಗಿದ್ದರು. ಫೆ. 5ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತನ್ನ 10 ತಿಂಗಳ ಹೆಣ್ಣು ಮಗುವನ್ನು ಬಿಟ್ಟು, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾವ್ಯಾ ಅವರು ತನ್ನ ಸಹೋದರನಿಗೆ ಮೊಬೈಲ್ ಮೂಲಕ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪರಿಸರ ಸ್ನೇಹಿ ಕಾರ್ಯಕ್ರಮಗಳೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ನಾಲ್ಕನೇಯ ಬಾರಿಗೆ ರಾಷ್ಟ್ರಮಟ್ಟದ ಪ್ರತಿಷ್ಟಿತ ಗ್ರೀನ್ ಸ್ಕೂಲ್ ಅವಾರ್ಡನ್ನು ತನ್ನದಾಗಿಸಿಕೊಂಡು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಈ ಪ್ರಶಸ್ತಿಯನ್ನು ಪಡೆದ ಉಡುಪಿ ಜಿಲ್ಲೆಯ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಂಟರ್ ಫಾರ್ ಸೈನ್ಸ್ ಮತ್ತು ಎನ್ವಿರಾನ್ಮೆಂಟ್ (ಸಿಎಸ್ಇ) ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿ 9,000 ಕ್ಕೂ ಹೆಚ್ಚು ಶಾಲೆಗಳು ಸ್ಪಧೆಯಲ್ಲಿ ಭಾಗವಹಿಸಿದ್ದವು. ಶುದ್ಧ ಗಾಳಿ, ಇಂಧನ, ಆಹಾರ, ಭೂಮಿ, ನೀರು, ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆಯ ಮಾನದಂಡದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಡೆಲ್ಲಿಯ ಇಂಡಿಯನ್ ಹೆಬಿಟ್ಯಾಟ್ನ ಸ್ಟೈನ್ ಅಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿದ್ದು, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲೆಯ ಆಡಳಿತಾಧಿಕಾರಿ ವೀಣಾರಶ್ಮಿ ಎಮ್. ಸಮಾರಂಭದಲ್ಲಿ ಪಾಲ್ಗೊಂಡು, ಸಂಸ್ಥೆಯ…
