Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ನೇತೃತ್ವದಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗೆಳೆಯರ ಬಳಗ ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ 2024 ಜುಲೈ 12 ಶುಕ್ರವಾರದಿಂದ ಜುಲೈ 14 ಆದಿತ್ಯವಾರದ ತನಕ ಕುಂದಾಪುರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷರಾದ ಜನನಿ ದಿನಕರ ಶೆಟ್ಟಿ ತಿಳಿಸಿದರು. ಅವರು ಕುಂದಾಪುರದ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವುದರೊಂದಿಗೆ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು. ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಸ್ಥಾಪಕಧ್ಯಕ್ಷರಾದ ಕಿರಣ್ ಕುಂದಾಪುರ ಮಾತನಾಡಿ, ಹಲಸು ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆ, ಆಂಧ್ರದ ಮೊದಲಾದ ಭಾಗಗಳಿಂದ ಹಲಸು ಬೆಳೆಗಾರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯ ಉದ್ಘಾಟನಾ ಸಮಾರಂಭ ಸೋಮವಾರದಂದು ನಡೆಯಿತು. ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲ ಸ್ಥಾನದ  ಸಿದ್ದಮ್ಮ ಮಾದಯ್ಯ ಶೆಟ್ರ ಸ್ಮರಣಾರ್ಥ ಮಕ್ಕಳು ಸುಮಾರು 9.5 ಲಕ್ಷದ ವೆಚ್ಚದಲ್ಲಿ ಸುಸಜ್ಜಿತವಾದ ಶಾಲಾ ಕೊಠಡಿಯನ್ನು ಸಿದ್ದಮ್ಮ ಮಾದಯ್ಯ ಶೆಟ್ರ ಪುತ್ರರಾದ ಯು. ಸೀತಾರಾಮ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ  ಹಸ್ತಾಂತರಿಸಿ ಶುಭಾ ಹಾರೈಸಿದರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನಚಂದ್ರ, ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ಗುತ್ತಿಗೆದಾರರಾದ ಪ್ರಭಾಕರ ಶೆಟ್ಟಿ, ರವಿರಾಜ್ ಶೆಟ್ಟಿ ಹಾಗೂ ಎಸ್.ಡಿ.ಎಮ್.ಸಿ. ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಇನ್ನಿತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ರಾಧಾಕೃಷ್ಣ ಮಲ್ಯ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಪ್ಪ ಉಪ್ಪಾರ ಇವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಿಕ್ಷಕರಾದ ಸುಧಾಕರ ದೇವಾಡಿಗ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರಾದ ನಾಗರಾಜ ಇವರು ವಂದಿಸಿದರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಅವರ ಕೊಲೆ ಮಾಡಲು ಇಬ್ಬರು‌ ದುಷ್ಕರ್ಮಿಗಳು ವಿಫಲಯತ್ನ ನಡೆಸಿದ ಘಟನೆ ಜು.7 ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53) ಬಂಧಿತ ಆರೋಪಿಯಾಗಿದ್ದು, ಪುತ್ರ ಸನ್ನಿಧಿ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. ಸಹನಾ ಸುರೇಂದ್ರ ಶೆಟ್ಟಿ ಅವರ ಪತ್ನಿ ಕುಂದಾಪುರ ನಗರದ ಎ.ಎಸ್‌ ಟ್ರೇಡರ್‌ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ಇದಕ್ಕೆ 1ನೇ ಮಹಡಿಯಲ್ಲಿರುವ ಸತೀಶ ಶೆಟ್ಟಿ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುರೇಂದ್ರ ಶೆಟ್ಟಿಯವರಿಗೆ ಕರೆ ಮಾಡಿ ಅವಾಚ್ಯವಾಗಿ ಬೈದಿದ್ದು ಜು.7 ರಂದು ಬೆಳಿಗ್ಗೆ ಕುಂದಾಪುರದ ಕೆ.ಎಸ್.ಆರ್.ಟಿ.ಸಿ ಡಿಪ್ಪೋ ಎದುರಿನ ಸರ್ವೀಸ್‌ ರಸ್ತೆಯಲ್ಲಿ ಸುರೇಂದ್ರ ಶೆಟ್ಟಿಯವರ ಕಾರಿಗೆ ತಮ್ಮ ಇನ್ನೋವಾ ಕಾರನ್ನು ಅಡ್ಡ ನಿಲ್ಲಿಸಿ ಕಬ್ಬಿಣದ ರಾಡ್ ಮೂಲಕ ಹಲ್ಲೆ ನಡೆಸಲು ಯತ್ನಿಸಿದ್ದರು. ಬಳಿಕ ಕಾರಿನ ಗ್ಲಾಸ್‌ ಹಾಗೂ ಕಾರಿನ ಡೋರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ. ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಅಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ಚಂದ್ರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಜಾದ್ ಅಹಮದ್ ಹಾಗೂ ಮಂಜುನಾಥ್ ಶೆಟ್ಟಿ ಕಾರ್ಯನಿರ್ವಹಿಸಿದರು. ಮುಖ್ಯ ಅತಿಥಿಯಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿರುವ ರವಿಶಂಕರ್ ಹೆಗ್ಡೆ, ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್, ರಾಜು ಎಸ್ ಮಯ್ಯಾಡಿ ಇನ್ನಿತರರು ಉಪಸ್ಥಿತರಿದ್ದರು. ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಸಂಘದ ಅಧ್ಯಕ್ಷರಾಗಿರುವ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಗುರುರಾಜ್ ಪೂಜಾರಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಆದ್ದರಿಂದ ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂರಸ್ ಗುರುತಿನ ಚೀಟಿ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಆಧಾರಕಾರ್ಡ್ ನ್ನು ಕಡ್ಡಾಯವಾಗಿ ನೀಡುವುದು ಅವಶ್ಯವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರಂತರ ಮಳೆಯ ಹಿನ್ನೆಲೆಯಲ್ಲಿ ಬೈಂದೂರು ತಾಲೂಕಿನ 19 ಶಾಲೆಗಳಿಗೆ ಸೋಮವಾರ (ಜು.8 ರಂದು) ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿಯ ಆಯ್ದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಮಳೆ ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲು ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಂದುಹೋಗಲು ಕಷ್ಟವಾಗುವ ಕಡೆಗಳಲ್ಲಿ ರಜೆ ಘೋಷಣೆಗೂ ಸೂಚನೆ ನೀಡಿದ್ದೇವೆ. ಆಯಾ ಶಾಲಾ ಮಟ್ಟದಲ್ಲಿ ನಿರ್ಧಾರ ತೆಗೆದುಕೊಂಡು ಪಾಲಕ – ಷೋಷಕರಿಗೆ ಸೂಚನೆ ನೀಡುವುದು ಮತ್ತು ಮಕ್ಕಳ ಸುರಕ್ಷತೆಗೆ ಹಚ್ಚಿನ ಆದ್ಯತೆ ನೀಡಲು ನಿರ್ದೇಶನ ಕೊಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ಕೆ. ಗಣಪತಿ ತಿಳಿಸಿದ್ದಾರೆ. ಮುಖ್ಯ ಶಿಕ್ಷಕರು ತಮ್ಮ ಶಾಲೆಗೆ ಸಂಬಂಧಿಸಿದಂತೆ ಮಳೆ ನೆರೆ, ಕಾಲುಸಂಕ, ಇತ್ಯಾದಿ ಗಳನ್ನು ಗಮನಿಸಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅಗತ್ಯವೆಂದು ಕಂಡು ಬಂದಲ್ಲಿ ಶಾಲೆಗೆ ರಜೆ ನೀಡುವುದು. ಹಾಗೂ ಈ ಬಗ್ಗೆ ಶಿಕ್ಷಣ ಸಂಯೋಜಕರಿಗೆ ಹಾಗೂ ಸಿಆರ್‌ ಪಿ ಯವರಿಗೆ ಮಾಹಿತಿ ನೀಡುವುದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕುಂದಗನ್ನಡಿಗರು ಭಾಷೆ – ಬದುಕಿನ ಮೇಲಿನ ಅಭಿಮಾನದಿಂದ ಆಚರಿಸಲಾಗುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನವನ್ನು, ಈ ಭಾರಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ರಾಜಧಾನಿಯಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು’ ಆಯೋಜಿಸಲಾಗುತ್ತಿರುವ ಕುಂದಾಪ್ರ ಕನ್ನಡ ಹಬ್ಬದ ದಿನ-ಸ್ಥಳ ಘೋಷಣಾ ʼವಾಲ್ಗʼ ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಹಬ್ಬದ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಆರಂಭವಾಗಿದ್ದು, ‘ಕುಂದಾಪ್ರ ಕನ್ನಡ ಪ್ರತಿಷ್ಠಾನವು ಐದನೇ ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಆಚರಿಸುತ್ತಿದೆ. ಥೀಮ್ ಸಾಂಗ್ ಪೋಸ್ಟರ್ ಅನಾವರಣ:ಕುಂದಾಪ್ರ ಕನ್ನಡ ಹಬ್ಬಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು. ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ’ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, 2024-25ನೇ ಸಾಲಿನವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವೈಶಿಷ್ಟ್ಯಗಳು:ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ನ್ಯಾಕ್‌ನ ಮೊದಲ ಸೈಕಲ್‌ನಲ್ಲೇ (NAAC) A+ ಶ್ರೇಣಿಯನ್ನು ಸಿಜಿಪಿಎ 3.32 (೪ ಸ್ಕೇಲ್) ಗ್ರೇಡ್‌ನೊಂದಿಗೆ 16 ಜನವರಿ 2028ರ ವರೆಗೆ ಅನ್ವಯವಾಗುವಂತೆ ಪಡೆದಿದೆ. ನಿರ್ಫ್ (NIRF) ಇನ್ನೋವೇಷನ್ ರ್ಯಾಕಿಂಗ್ ಅನ್ನು 150 ರಿಂದ 300 ಬ್ಯಾಂಡ್‌ನಲ್ಲಿ ಪಡೆದಿದೆ. ಜೊತೆಯಲ್ಲಿ ಕಾಲೇಜಿನ ಹಲವು ಎಂಜಿನಿಯರಿಂಗ್‌ಗೆ ವಿಭಾಗಗಳು ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (NBA) ಮಾನ್ಯತೆಯನ್ನು ಪಡೆದಿವೆ. ಪ್ರಮುಖ ಸಂಶೋಧನಾ ಸಂಸ್ಥೆಯಾದ ಇಸ್ರೊ ಹಾಗೂ ಇಸ್ರೋದ ಸಹ ಸಂಸ್ಥೆಗಳಾದ ರಾಷ್ಟ್ರೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಪದಪ್ರದಾನ ಸಮಾರಂಭವು ಜುಲೈ 10ರ ಬುಧವಾರ ಸಂಜೆ 7 ಗಂಟೆಗೆ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ. ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಅವರು ಬೈಂದೂರು ರೋಟರಿ ನೂತನ ಅಧ್ಯಕ್ಷ ಮೋಹನ್ ರೇವಣ್ಕರ್ ಅವರಿಗೆ ಪ್ರದಪ್ರದಾನ ಮಾಡಲಿದ್ದಾರೆ. ಸಹಾಯಕ ಗವರ್ನರ್ ಡಾ. ಬಿ. ರಾಜೇಂದ್ರ ಶೆಟ್ಟಿ ಅವರು ಬಿಂದುವಾಣಿ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಈ ವೇಳೆ ಅತಿಥಿಗಳಾಗಿ ಸಾಹಿತಿ ಶ್ರೀಧರ್ ಶೇಟ್ ಶಿರಾಲಿ, ರೋಟರಿ ವಲಯ ಸೇನಾನಿ ಪ್ರದೀಪ್ ಡಿ.ಕೆ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ” ಕಾಲೇಜಿನ ’ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕರಾದ ಅಮೃತ್ ರೈ, ವಿದ್ವಾನ್ ಗಣಪತಿ ಭಟ್ ಅವರು ವಿವಿಧ ಸಂಘಗಳ ಉದ್ಘಾಟನೆಯನ್ನು ನೆರವೇರಿಸಿದರು. ಸಹಸಂಸ್ಥಾಪಕರಾದ ಆದರ್ಶ ಎಂ. ಕೆ ಅವರು ಕಾಲೇಜಿನ ತ್ರೈಮಾಸಿಕವಾದ “ನಿನಾದ” ಪತ್ರಿಕೆಯ ಏಳನೇ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಹಾಗೂ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್, ಅಶ್ವತ್ ಎಸ್. ಎಲ್ ಅವರು ಗೌರವ ಉಪಸ್ಥಿತರಾಗಿದ್ದರು. ಉಪನ್ಯಾಸಕರಾದ ವಿನಾಯಕ್ ಜೋಗ್ ಹಾಗೂ ಶ್ರೀನಿಧಿ ಎಸ್. ನಾಯಕ್ ಸ್ವಾಗತಿಸಿದರು. ಭಾಷಾ ಉಪನ್ಯಾಸಕಿಯರಾದ ವೃಂದಾ ದಾತೆ ಹಾಗೂ ಪ್ರಿಯಾಂಕಾ ತೀರ್ಥರಾಮ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಸಮಾರಂಭದಲ್ಲಿ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು, ವಸತಿ ನಿಲಯ ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read More