Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.5: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಮೊದಲು ಕುಂದಾಪುರ ಎಸಿ ಅವರು ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿಗೆ ಮಾತ್ರ ರಜೆ ಘೋಷಿಸಿದ್ದರು. ಅಧಿಕ ಮಳೆಯಾಗುತ್ತಿರುವುದರಿಂದ ಅಂತಿಮವಾಗಿ ಜಿಲ್ಲೆಯ ಪಿಯು ತನಕದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್‌, ಜೆಇಇ, ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ ಡಿಪಿಪಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೀಟ್‌, ಜೆಇಇ, ಸಿಇಟಿ ಕೋರ್ಸ್‍ಗಳ ಅನುಭವಿ ಹಿರಿಯ ಉಪನ್ಯಾಸಕರಾದ ಮಿ. ಬಾಲಾಜಿ ಗುಪ್ತ ಅವರ ಮಾಗದರ್ಶನದಲ್ಲಿ ಡಿಪಿಪಿ ತಂಡದ ಅನುಭವಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಈ ಒಂದು ಸುಂದರ ಕಾರ್ಯಕ್ರಮದಲ್ಲಿ ಅವರೊಂದಿಗೆ ಎಂ. ಎಂ. ಹೆಗ್ಡೆ ಎಜುಕೇಶನಲ್‌ & ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಮಹೇಶ್‌ ಹೆಗ್ಡೆ ಮಾತನಾಡಿ ಡಿಪಿಪಿ ತರಗತಿಯ ಮೌಲ್ಯಗಳನ್ನು ಅರಿತು ಅದನ್ನು ಹೇಗೆ ಸದುಪಯೋಗಪಡಿಸಿಕೋಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಿಕೊಟ್ಟರು. ಈ ಕುರಿತು ಮಾತನಾಡಿದ ಮಿ. ಬಾಲಾಜಿ ಗುಪ್ತ ಅವರು ವಿದ್ಯಾರ್ಥಿಗಳ ಭವಿಷ್ಯತ್ತಿನ ಬೆಳಕಿಗೆ ಡಿಪಿಪಿ ತರಗತಿಯ ಅಗತ್ಯತೆಯನ್ನು ಹಾಗೂ ನೀಟ್‌, ಜೆಇಇ, ಸಿಇಟಿ ಪರೀಕ್ಷೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು.05: ಚಾಲಕನ ನಿಯಂತ್ರಣ ತಪ್ಪಿ ಮಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಜಿಕೆ ಅವರು ವಹಿಸಿದ್ದರು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಿಂದಿನ ವಿದ್ಯಾರ್ಥಿ ಸಿ.ಎ ಸುದೀಪ್ ಶೆಟ್ಟಿ ಅವರು ಕೊಡಮಾಡಿದ ಬೆಳ್ಳಿಯ ಕ್ವಾಯಿನನ್ನು ಉಡುಗೊರೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಧನೆ ಹಾಗೂ ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ, ಮೂಕಾಂಬಿಕ ಪದವಿ ಪೂರ್ವ ಕಾಲೇಜು ಈ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು ಎಂದು ಹೇಳಲು ನಾನು ಅತ್ಯಂತ ಹೆಮ್ಮೆ ಪಡುತ್ತೇನೆ. ಈ ಕಾಲೇಜಿನಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.05: ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುಂಡಿ, ವಾಟೆಗುಂಡಿ ಸಂಪರ್ಕಿಸುವ ಕಿರು ಸೇತುವೆ ನೀರಿನ ರಭಸಕ್ಕೆ ಕುಸಿಯುವ ಭೀತಿ ಉಂಟಾಗಿದೆ. ಬೆಳ್ಕಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಾಕಿಕೊಂಡಿರುವ ಈ ಕಿರುಸೇತುವೆಯ ಅಡಿಪಾಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿದೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಅಪಾಯದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಈ ಹೊಳೆಗೆ ಹೊಂದಿಕೊಂಡಿರುವ ಶಾಲೆಗೂ ಕೂಡ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಸುತ್ತ-ಮುತ್ತಲಿನ ಪ್ರದೇಶಗಳಿಂದ ಬೆಳ್ಕಲ್ ಶಾಲೆ, ಅಂಗನವಾಡಿಗೆ ಹೋಗುವ ಮಕ್ಕಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗಾಗಿ ತಿರುಗಾಡುವ ಸ್ಥಳೀಯರಿಗೆ ಇದೇ ಪ್ರಮುಖ ಸಂಪರ್ಕ ಸೇತುವೆಯಾಗಿದ್ದು, ಸೇತುವೆ ಮಳೆಯ ರಭಸಕ್ಕೆ ಕುಸಿದುಬಿದ್ದಲ್ಲಿ ಈ ಭಾಗದ ಜನಸಂಪರ್ಕಕ್ಕೆ ತೊಡಕಾಗುವ ಸಾಧ್ಯತೆಗಳಿದೆ. ಜಡ್ಕಲ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸತೀಶ್ ತೋಳಾರ್, ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರಿನ ಟೋಲ್‌ಗಳ ಸಮೀಪ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಐದಾರು ಬಾರಿಗೂ ಹೆಚ್ಚು ಟೋಲ್‌ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ನಾವುಂದ, ನಾಡ, ಮರವಂತೆ ಗ್ರಾಮದ ಹಲವು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೈಂದೂರು ತಾಲೂಕಿನ ಬಡಾಕೆರೆ, ಮರವಂತೆ, ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ. ನೆರೆಪೀಡಿತ ಪ್ರದೇಶದಲ್ಲಿದ್ದ ಮನೆಯವರು, ಜಾನುವಾರುಗಳನ್ನು ಬೇರೆ ಪ್ರದೇಶಕ್ಕೆ ಸ್ಥಳ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕಾರ್ಯಚರಣೆಗಿಳಿದಿದ್ದರು. ಸ್ಥಳೀಯರು ದೋಣಿಗಳ ಮೂಲಕ ತೆರಳಿ ರಕ್ಷಣಾ ಕಾರ್ಯಕ್ಕೆ ಸಹಕರಿಸಿದರು. ಅಧಿಕಾರಿಗಳ ಭೇಟಿಬೈಂದೂರು ತಾಲೂಕು ಆಡಳಿತ ಅಧಿಕಾರಿ ಪ್ರದೀಪ್ ತಾಲೂಕು ಪಂಚಾಯತಿಯು ಭಾರತಿ, ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು, ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ, ಗ್ರಾಮ ಪಂಚಾಯತ್ ನಾವುಂದ, ಗ್ರಾಮ ಪಂಚಾಯತ್ ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಸುಂಟರಗಾಳಿಯಿಂದ ಹಾನಿಗೊಳಗಾದ ಕುಳ್ಳುಂಜೆ, ರಟ್ಟಾಡಿ ಮೊದಲಾದ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆದೂರು ಸದಾನಂದ ಶೆಟ್ಟಿ, ಹಾಲಾಡಿ ಗ್ರಾಪಂ ಅದ್ಯಕ್ಷ ಚೋರಾಡಿ ಅಶೋಕ ಶೆಟ್ಟಿ, ಸದಾಶಿವ ಶೆಟ್ಟಿ, ಶಂಕರನಾರಾಯಣ, ಅಜಿತ್ ರಟ್ಟಾಡಿ, ಸಂಪತ್ ಶೆಟ್ಟಿ ರಟ್ಟಾಡಿ, ಕೃಷ್ಣ ರಟ್ಟಾಡಿ ಜೊತೆಯಲ್ಲಿದ್ದರು. ► ಕೊಲ್ಲೂರು: ಮನೆ ಮೇಲೆ ಗುಡ್ಡ ಜರಿದು ಬಿದ್ದು ಮಹಿಳೆ ಸಾವು – https://kundapraa.com/?p=73870 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಮನೆಗೆಲಸಕ್ಕೆಂದು ತೆರಳಿದ್ದ ಮಹಿಳೆ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿಗುಡ್ಡೆ ಎಂಬಲ್ಲಿ ನಡೆದಿದೆ. ಹಳ್ಳಿಬೇರು ನಿವಾಸಿ ಅಂಬಾ (55) ಮೃತ ದುರ್ದೈವಿ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಗುರುವಾರ ಸಂಜೆಯ ವೇಳೆಗೆ ಗುಡ್ಡದ ಒಂದು ಪಾರ್ಶ್ವ ಜರಿದು ಬಲಭಾಗಕ್ಕೆ ಅಪ್ಪಳಿಸಿದೆ. ಈ ವೇಳೆ ಸೊಸೈಟಿಗುಡ್ಡೆಯ ಮನೆಯೊಂದರಲ್ಲಿ ಕೂಲಿ ಕೆಲಸಕ್ಕಾಗಿ ತೆರಳಿದ್ದ ಮಹಿಳೆಯ ಮೇಲೆಯೇ ಗುಡ್ಡ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ ಅವರು ಉಸುರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹ ಮೇಲಕ್ಕೆತ್ತಲಾಗಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೈದ್ಯೋ ನಾರಾಯಣ ಹರಿ ಎಂಬ ವಾಕ್ಯ ಇಂದಿಗೂ ಪ್ರಸ್ತುವಾಗಿದ್ದು ದೇವರ ನಂತರ ಜನರು ವೈದ್ಯರನ್ನು ತಮ್ಮ ಕಾಯಿಲೆ ಗುಣಪಡಿಸುವ ದೇವರಂತೆಯೇ ನೋಡುತ್ತಾರೆ ಎಂದು 2024-25ನೇ ಸಾಲಿನ ಬೈಂದೂರು ರೋಟರಿ ಕ್ಲಬ್‍ ಅಧ್ಯಕ್ಷ ಮೋಹನ್‍ ರೇವಣ್ಕರ್ ಹೇಳಿದರು. ವೈದ್ಯರ ದಿನಾಚರಣೆ ಅಂಗವಾಗಿ ಬೈಂದೂರು ರೋಟರಿ ವತಿಯಿಂದ ವಿವಿಧೆಡೆ ಹಮ್ಮಿಕೊಳಲಾಗಿದ್ದ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಬೈಂದೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜೇಶ್, ವೈದ್ಯೆ ಹಾಗೂ ಬೈಂದೂರು ರೋಟರಿ ಸದಸ್ಯರಾದ ಡಾ. ನಂದಿನಿ, ವೈದ್ಯರುಗಳಾದ ಡಾ. ನಿವೇದಿತಾ, ಡಾ. ಜೈಮಿನಿ, ಡಾ. ವತ್ಸಲಾ, ಡಾ. ಆರ್. ಸಿ. ಪಾಟೀಲ್, ಹಿರಿಯ ವೈದ್ಯರುಗಳಾದ ಡಾ. ಎಂ. ಎಸ್. ಶೆಟ್ಟಿ, ಡಾ. ಕೆ. ಆರ್. ನಂಬಿಯಾರ್, ಡಾ. ಸುಧಾಕರ ಹೆಗ್ಡೆ, ಡಾ. ಪ್ರವೀಣ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕಾರ್ಯದರ್ಶಿ ಸುನಿಲ್ ಹೆಚ್.ಜಿ., ಈ ವೇಳೆ ಹಿರಿಯ ರೊಟೇರಿಯನ್ ಐ. ನಾರಾಯಣ ಉಪಸ್ಥಿತರಿದ್ದರು.

Read More