ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಶನಿವಾರ ಶಿರೂರಿನಿಂದ ಮುದೂರು ತನಕ ವಿವಿಧ ಭಾಗಗಳಲ್ಲಿ ರೋಡ್ ಶೋ ನಡೆಸಿ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪ್ರಥ್ವಿರಾಜ್ ಚೌಹಾಣ್ ರೋಡ್ ಶೋಗೆ ಸಾಥ್ ನೀಡಿದರು. ದೊಂಬೆ, ಶಿರೂರು, ಹಡವಿನಕೋಣೆ, ಉಪ್ಪುಂದ, ಬಿಜೂರು, ಹೊಸಕೋಟೆ, ನಾಯ್ಕನಕಟ್ಟೆ, ಕಂಬದಕೋಣೆ, ಕಾಲ್ತೋಡು, ತಗ್ಗರ್ಸೆ, ವಸ್ರೆ, ಯಳಜಿತ, ಗೋಳಿಹೊಳೆ, ಅರೆಶಿರೂರು, ಕೊಲ್ಲೂರು, ಜಡ್ಕಲ್ ಮುದೂರು ಭಾಗದಲ್ಲಿ ಅವರು ರೋಡ್ ಶೋ ನಡೆಸಿದರು. ಈ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್ ಉಪ್ಪುಂದ, ಪ್ರಚಾರ ಸಮಿತಿ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆ. ಬಾಬು ಶೆಟ್ಟಿ, ಸದಾಶಿವ ಪಡುವರಿ, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ ಬಂಕೇಶ್ವರ, ಸತೀಶ್ ಕೆ.ವಿ, ಶೇಖರ ಪೂಜಾರಿ ಉಪ್ಪುಂದ, ರವೀಂದ್ರ ಶೆಟ್ಟಿ, ಉದಯ ಪೂಜಾರಿ, ರಿಯಾಜ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 5ರಂದು ಸಹಸ್ರ ಕಲಶಗಳೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಗ್ಗೆ ಯಾಗೇಶ್ವರಿ ಹೋಮ, ಸಹಸ್ರಕಲಶಗಳೊಂದಿಗೆ ಬ್ರಹ್ಮ ಕಲಶಾಭಿಷೇಕ ಮಹಾಪೂಜೆ ಧ್ವಜಪೂಜೆ, ಕ್ಷೇತ್ರಪಾಲ ಪೂಜೆ, ಚತುರ್ವೇದ ಪಾರಾಯಣ ಸಹಿತ ಭೇರಿತಾಡನ, ಪಳಹ ಪೂಜೆ, ವಿಶೇಷ ಬಲಿ, ಪಲ್ಲಕ್ಕಿ ಉತ್ಸವ ಮಯೂರ ಆರೋಹಣೋತ್ಸವ, ಡೋಲಾರೋಹಣೋತ್ಸವ, ತಂತ್ರಿ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ನಡೆಯಿತು. ಧಾರ್ಮಿಕ ವಿಧಿಗಳೊಂದಿಗೆ ಗರ್ಭಗುಡಿಯ ಶಿಖರಕ್ಕೆ ಕಲಶಾಭಿಷೇಕ ನೆರವೇರಿಸಲಾಯಿತು. ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಕಾರ್ಯನಿರ್ವಹಣಾಕಾರಿ ಎಸ್ ಸಿ. ಕೋಟಾರಗಸ್ತಿ, ಸದಸ್ಯರಾದ ಡಾ. ರಾಮಚಂದ್ರ ಅಡಿಗ, ಡಾ. ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗಣೇಶ ಕಿಣಿ ಬೆಳ್ವೆ, ಗೋಪಾಲಕೃಷ್ಣ ನಾಡ, ಶೇಖರ ಶೇಖರ ಪೂಜಾರಿ, ಸಂಧ್ಯಾ ರಮೇಶ, ರತ್ನ ಆರ್.ಕುಂದರ್, ಅರ್ಚಕರಾದ ಡಾ. ನಿತ್ಯಾನಂದ ಅಡಿಗ, ಡಾ. ಕೆ.ಎನ್. ನರಸಿಂಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರಣಾಳಿಕೆ ಮೂಲಕ ತೋರಿಸಿದೆ. ಮೇ 10ರಂದ ನಡೆಯಲಿರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ. ಹಿಂದು ಸಮಾಜ ಒಂದಾಗಿ ಕಾಂಗ್ರೆಸ್ ಈ ಕುಟಿಲ ತಂತ್ರದ ವಿರುದ್ಧ ಸಮರ ಸಾರಬೇಕು ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು ಹೇಳದರು. ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವುದು ಮತ್ತು ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಕೆ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಬೈಂದೂರು ಪೇಟೆಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಗೋ ಹತ್ಯೆ ಮತ್ತು ಮತಾಂತರದ ವಿರುದ್ಧ ಹೋರಾಟ ನಡೆಸುತ್ತಿರುವ ಬಜರಂಗದಳವನ್ನು ಹತ್ತಿಕ್ಕಲು ಮತ್ತು ಭಯೋತ್ಪಾದಕರಿಗೆ ಕುಮ್ಮಕ್ಕು ನೀಡಲು ಕಾಂಗ್ರೆಸ್ ಪಕ್ಷ ಬಜರಂಗದಳವನ್ನು ಬ್ಯಾನ್ ಮಾಡಲು ಮುಂದಾಗಿದೆ. ಕಾಂಗ್ರೆಸ್ ಈ ನೀತಿಯನ್ನು ಸಹಿಸಲು ಸಾಧ್ಯವೇ ಇಲ್ಲ. ಗೋಪಾಲ ಪೂಜಾರಿಯವರೇ ನೀವು ಕೇಸರಿ ಸಾಲು ಧರಿಸಿ ನಮ್ಮದೇನು ಅಭ್ಯಂತರ ಇಲ್ಲ. ಆದರೆ ಡೋಂಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡದ ನಟ ಪ್ರಮೋದ್ ಶೆಟ್ಟಿ ಹಾಗೂ ಶೈನ್ ಶೆಟ್ಟಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರ ಮತ ಚಲಾಯಿಸಿದರು. ಬೈಂದೂರಿನ ಪೇಟೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಅಂಗಡಿ ಹೋಟೆಲ್ ಗಳಿಗೆ ಭೇಟಿ ನೀಡಿ ಗುರುರಾಜ ಗಂಟೆಹೊಳೆ ಅವರಿಗೆ ಮತ ನೀಡುವಂತೆ ಕೋರಿಕೊಂಡರು. ಶಿರೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಸೇರಿದಂತೆ ವಿವಿಧೆಡೆ ದಿನವಿಡಿ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರುಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮಅಭ್ಯರ್ಥಿಗೆ ಮತಚಲಾಯಿಸುವಂತೆಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಡೆದ ಮತದಾನಜಾಗೃತಿಕಾರ್ಯಕ್ರಮದಲ್ಲಿ, ಮತದಾನಜಾಗೃತಿ ಸಾರುವಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಚುನಾವಣೆಯಲ್ಲಿ ಬಹುತೇಕಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆಉತ್ತಮಯೋಜನೆರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಯುವಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದಜಿಲ್ಲೆಗೆಚುನಾವಣಾಆಯೋಗದಿAದರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದುಜಿಲ್ಲೆಯಎಲ್ಲಾಯುವಜನತೆತಪ್ಪದೇತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮಾರ್ಚ್ 2023ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದಿದ್ದು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜನಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಕಾವ್ಯ ಹಾಗೂ ಪ್ರತೀಕಾ ಅವರನ್ನು ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದ ಚಂದ್ರಾ ಅವರನ್ನು ಸನ್ಮಾನಿಸಲಾಯಿತು. ಇದರೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಒಟ್ಟು 110 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹವಾದ ವಿಷಯವಾಗಿದೆ. 2023-24ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಈಗಾಗಲೇ ಕಾಲೇಜಿನಲ್ಲಿ ಪ್ರಾರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದಕೊಳ್ಳಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ. Click here for admission details
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿ ದೆ. ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನುತಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನುಕಡಿಮೆ ಮಾಡಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರನ್ನು ಸೇವಿಸಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣೆಗಾಗಿಕನ್ನಡಕ, ಛತ್ರಿ/ ಟೊಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು. ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪ್ರಯಾಣ ಮಾಡುವಾಗ ನೀರನ್ನುಜೊತೆಯಲ್ಲಿತೆಗೆದುಕೊಂಡು ಹೋಗಬೇಕು. ದೇಹವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಈ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ ಅಭಿಪ್ರಾಯವಿದೆ. ಆರ್.ಎಸ್.ಎಸ್ ಪ್ರಚಾರಕಾಗಿ ಬಂದವರಿಗೆ ತಳಮಟ್ಟದಲ್ಲಿ ಜನರ ನೋವು ನಲಿವುಗಳ ಅರಿವಿದೆ. ಅವರ ಸಂಕಷ್ಟ ನಿವಾರಿಸಲು ಅವರು ಖಂಡಿತವಾಗಿಯೂ ಪಣತೊಡುತ್ತಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯೇ ಸಾಕ್ಷಿ. ಬೈಂದೂರಿನಲ್ಲಿಯೂ ಅಂತಹದ್ದೊಂದು ಅವಕಾಶ ಎದುರಾಗಿದ್ದು, ಬಿಜೆಪಿ ಅಭ್ಯರ್ಥಿಯೇ ಗೆಲುವ ಸಾಧಿಸಲಿದ್ದಾರೆ ಎಂದರು. ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ತಾ.ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ., ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ಜಿಲ್ಲಾ ಯುವಮೋರ್ಚಾ ಪ್ರಧಾನ…
