Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚೆಸ್ ಚಾಂಪ್ ನಡೆಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೌಂದರ್ಯ ಯು ಕೆ ಇಂಜಿನಿಯರ್ ಫಿಡೆ ತೀರ್ಪುಗಾರರು ಮತ್ತು ಚೆಸ್ ಕೋಚ್, ನಿರ್ದೇಶಕರು, ಶ್ರೀ ನಾರಾಯಣ ಗುರು  ಸ್ಕೂಲ್ ಆಫ್ ಚೆಸ್ ಉಡುಪಿ ಮತ್ತು ಕಾಪು ಮಾತನಾಡಿ, ಕ್ರಿಶ 6ನೇ ಶತಮಾನಕ್ಕೂ ಮೊದಲೇ ಚೆಸ್ ಭಾರತೀಯರಿಗೆ ಪರಿಚಯವಾಗಿತ್ತು ಎಂಬುದು ತಜ್ಞರ ಅಭಿಪ್ರಾಯ. ಈ ಜನಪ್ರಿಯ ಆಟವು ಏಕಾಗ್ರತೆ, ಸ್ಮರಣೆ, ತಾರ್ಕಿಕ ಚಿಂತನೆ, ಸಮಸ್ಯೆ ಪರಿಹರಿಸುವ ಕೌಶಲ್ಯ, ಆತ್ಮವಿಶ್ವಾಸ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ. ಸಮೀಕ್ಷೆಯ ಪ್ರಕಾರ 605 ಮಿಲಿಯನ್ ಜನರಿಗೆ ನಿಯಮಿತವಾಗಿ ಚೆಸ್ ಆಡುವ ಹವ್ಯಾಸವಿದೆ. ಇದೊಂದು ಮೋಜಿನ ಮಿದುಳಿನ ವ್ಯಾಯಾಮ ಈ ಆಟವನ್ನು ಎಲ್ಲ ವಯಸ್ಸಿನ ಜನ ಪ್ರಪಂಚದಾದ್ಯಂತ ಪ್ರೀತಿಸುತ್ತಾರೆ. ಕಿರಿಯ ವಯಸ್ಸಿನಿಂದಲೇ ಚೆಸ್ ಆಟವನ್ನು ಆಡುವುದರಿಂದ ಮಕ್ಕಳಲ್ಲಿ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯವನ್ನು ಪರಿಹಾರಿಸಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಶಾಲೆಯಲ್ಲಿ ಲಭ್ಯವಿರುವ ಅವಕಾಶಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸನಾತನ ಹಿಂದು ಧರ್ಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದ್ದು, ಭದ್ರ ಬುನಾದಿ ಮೇಲೆ ನಿಂತಿದೆ. ಸನಾತನ ಧರ್ಮ ಒಂದು ಉತ್ತಮ ಜೀವನ ಪದ್ಧತಿ. ಈ ದೇಶದ ಸಂಸ್ಕಾರಯುತ ನಾಗರಿಕರು ಸಮಾಜಕ್ಕೆ ಹಾಗೂ ದೇಶಕ್ಕೆ ಉಪಯುಕ್ತವಾಗಬಲ್ಲರು ಮತ್ತು ದೇಶ ಮತ್ತು ಧರ್ಮವನ್ನು ರಕ್ಷಿಸಬಲ್ಲರು ಎಂದು ಸುರತ್ಕಲ್‌ನ ಶ್ರೀನಿವಾಸ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ. ವಿನಾಯಕ ಶೆಣೈ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾ ಭವನದಲ್ಲಿ ಜರಗಿದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ 38ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ಪರಕೀಯರ ದಾಳಿಗೆ ಸಿಲುಕಿದ ಪರಿಣಾಮ ನಮ್ಮ ಸಂಸ್ಕೃತಿ ಮೇಲೆ ಅತ್ಯಾಚಾರ, ಅವಹೇಳನ ಪಾಶ್ಚಿಮಾತ್ಯರಿಂದ ನಡೆಯಿತು. ಪಾಶ್ಚಿಮಾತ್ಯ ಶಿಕ್ಷಣವನ್ನು ವೈಭವೀಕರಿಸಲಾಯಿತು. ಹಿಂದು ಧರ್ಮದ ಮೇಲೆ, ಹಿಂದು ಶೈಕ್ಷಣಿಕ ಕ್ರಮದ ಮೇಲೆ ಬಹಳ ದಾಳಿ ನಡೆದಿದ್ದರೂ, ಇಂದಿಗೂ ಸನಾತನ ಹಿಂದು ಧರ್ಮ ಇತರ ರಾಷ್ಟ್ರಗಳಿಗೆ ಮಾದರಿಯಾಗಿ ಉತ್ತಮ ಸಮಾಜ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಆಶ್ರಯದಲ್ಲಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಸಂಯೋಜನೆಯ ” ಉದ್ಯೋಗ ಮೇಳ -2025 ” ಯಶಸ್ವಿಯಾಗಿ ನಡೆಯಿತು. ಉದ್ಯೋಗ ಮೇಳವನ್ನು ಉದ್ಘಾಟಿಸಿದ ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ -” ಇದು ಸ್ಪರ್ಧಾತ್ಮಕ ಜಗತ್ತು, ಇಂದಿನ ನವ ಪೀಳಿಗೆ ಶೈಕ್ಷಣಿಕ ಸಾಧನೆಯಲ್ಲಿ ಮುಂದಿದ್ದು ಅವರ ಅರ್ಹತೆಗೆ ತಕ್ಕ ಉದ್ಯೋಗದ ಅನಿವಾರ್ಯತೆಯಿದೆ. ಆ ನೆಲೆಯಲ್ಲಿ 119 ವರ್ಷಗಳ ಭವ್ಯ ಇತಿಹಾಸವುಳ್ಳ ಬ್ಯಾರೀಸ್ ಶಿಕ್ಷಣ ಸಂಸ್ಥೆಗಳು ಸುತ್ತಮುತ್ತಲಿನ ಯುವಪೀಳಿಗೆಗೆ ಶಿಕ್ಷಣ ನೀಡುವುದರೊಂದಿಗೆ ಇದೀಗ ಉದ್ಯೋಗವನ್ನೂ ನೀಡುವ ಪುಣ್ಯತಮ ಕಾರ್ಯವಾದ ಈ ಉದ್ಯೋಗ ಮೇಳವನ್ನು ಆಯೋಜಿಸಿರುವ ಕಾರ್ಯ ಶ್ಲಾಘನೀಯ ” ಎಂದು ನುಡಿದರು. ಮುಖ್ಯ ಅತಿಥಿಗಳಾದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮವನ್ನು ದ್ದೇಶಿಸಿ -” ಇಂದು ಒಂದು ಶಿಕ್ಷಣ ಸಂಸ್ಥೆಯನ್ನು ಕಟ್ಟಿ ವಿದ್ಯಾದಾನ ಮಾಡುವುದೇ ತಪಸ್ಸು ! ಶಿಕ್ಷಣದಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ ಹಾಗಾಗಿ ಗುಣಮಟ್ಟದ ಶಿಕ್ಷಣ ನೀಡಿ ಇದೀಗ ಉದ್ಯೋಗವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯ ಎನ್.ಎಸ್.ಎಸ್. ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಕುಂದಾಪುರದ ಡಾI ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ ಬ್ರಾಹ್ಮಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದಾರೆ. ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಮೆರವಣಿಗೆಯಲ್ಲಿ ಪ್ರಥಮ ಹಾಗೂ ಸಮೂಹಗಾನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ. ಬ್ರಾಹ್ಮಿ ಬಳ್ಕೂರಿನ ರಜನಿ ಅಶೋಕ್ ಹಾಗೂ ಅಂಪಾರಿನ ಅಶೋಕ್ ಕೆ. ದಂಪತಿಗಳ ಪುತ್ರಿ. ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಮಂಗಳೂರು ವಿ.ವಿ. ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳಾದ ಡಾ. ಶೇಷಪ್ಪ ಕೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಸಂಪದ್ಭರಿತ ಐತಿಹಾಸಿಕ ಹಿನ್ನೆಲೆಯ ಕುಂದಾಪುರ ತಾಲೂಕು ಎನ್ನುವಂತಹದ್ದು ಇತಿಹಾಸ ಪೂರ್ವದಿಂದಲೂ ಜನವಸತಿ ಹೊಂದಿರುವಂತಹದ್ದಾಗಿದೆ ಎಂದು ಮಾಹೆ, ಮಣಿಪಾಲ ಇದರ ಸಾಂಸ್ಕೃತಿಕ ಕೇಂದ್ರಗಳು ಇದರ ಆಡಳಿತಾಧಿಕಾರಿ  ಡಾ. ಜಗದೀಶ್ ಶೆಟ್ಟಿ ಹೇಳಿದರು . ಅವರು  ಫೆಬ್ರವರಿ 21, 22, ಮತ್ತು 23, 2025ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ. ಇವರು ಸಹಯೋಗದಲ್ಲಿ ಆಯೋಜಿಸಿದ ” ಕರ್ನಾಟಕ ಇತಿಹಾಸ ಪರಿಷತ್ತು 35ನೇ  ವಾರ್ಷಿಕ ಮಹಾ ಅಧಿವೇಶನದಲ್ಲಿ ಫೆಬ್ರವರಿ 23 ರಂದು ನಡೆದ ” ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿ” ಎಂಬ ವಿಷಯದ ಕುರಿತ ಸಿಂಪೋಜಿಯಂ ಕಾರ್ಯಕ್ರಮದ  ಅಧ್ಯಕ್ಷತೆಯನ್ನು  ವಹಿಸಿ ಮಾತನಾಡಿದರು. ಕುಂದಾಪುರಕ್ಕೆ ಪ್ರಾಗೈತಿಹಾಸಿಕ ಹಿನ್ನೆಲೆ ಇದೆ. ನೂತನ ಶಿಲಾಯುಗದ ಕೊಡಲಿ ಎನ್ನುವುದು ಕುಂದಾಪುರದ ಗಡಿ ಪ್ರದೇಶವಾದ ಕೋಟತಟ್ಟು ಎಂಬಲ್ಲಿ ದೊರಕಿರುವಂತದ್ದು ಇದಕ್ಕೆ ಉತ್ತಮ ಉದಾಹರಣೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜನಪರ ಉದ್ದೇಶಗಳನ್ನು ಇರಿಸಿಕೊಂಡು ಅನುಷ್ಠಾನವಾಗುವ ಸರ್ಕಾರಿ ಯೋಜನೆಗಳು ಯಾವುದೇ ಕಾರಣದಿಂದಲೂ ಅರ್ಧಕ್ಕೆ ನಿಲ್ಲಬಾರದು. ಯೋಜನೆಯ ಅನುಷ್ಠಾನದಲ್ಲಿ ಫಲಾನುಭವಿಗಳಿಗೆ ಏನಾದರೂ ಗೊಂದಲಗಳಿದ್ದಲ್ಲಿ ಅದನ್ನು ಪರಿಹರಿಸುವ ಹಾಗೂ ಮನವರಿಕೆ ಮಾಡುವ ಕೆಲಸಗಳು ಇಲಾಖೆಯ ಅಧಿಕಾರಿಗಳಿಂದ ಆಗಬೇಕು, ಉದ್ದೇಶಿತ ಅಣೆಕಟ್ಟಿನಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುವ ನೀರನ್ನು ಮಾತ್ರ, ಹೊರಕ್ಕೆ ಹಾಯಿಸುವ ಕೆಲಸವಾಗಬೇಕು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಗುಡೇ ದೇವಸ್ಥಾನದ ಏತ ನೀರಾವರಿ ಯೋಜನೆಯ ಕಾಮಗಾರಿ ಸ್ಥಳಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ, ಯೋಜನಾ ಪ್ರದೇಶವನ್ನು ವೀಕ್ಷಣೆ ಮಾಡಿ, ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇವರಿಂದ ಈ ಯೋಜನೆಗೆ ಮಂಜೂರಾತಿ ದೊರಕಿತ್ತು. ವಾರಾಹಿ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರದ ಹಲವು ಭಾಗಗಳಿಗೆ ನೀರು ಒದಗಿಸುವ ಯೋಜನೆಗಳು ಯಶಸ್ವಿಯಾಗಿದೆ. ದೊಡ್ಡ ಮೊತ್ತದ ನೀರಾವರಿ ಯೋಜನೆಗಳಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲವಾಗಬೇಕು. ಯಾರಿಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ ಇವರು ಸಹಯೋಗದಲ್ಲಿ ಆಯೋಜಿಸಿದ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದಲ್ಲಿ ಫೆಬ್ರವರಿ 21 ರಂದು ವಿವಿಧ ದತ್ತಿ ಉಪನ್ಯಾಸಗಳನ್ನು  ಪ್ರೊ. ಎಮ್. ಎನ್. ಶ್ರೀನಿವಾಸ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಅಶ್ವತ್ಥನಾರಾಯಣ ವಹಿಸಿದ್ದರು. ಪ್ರೊ. ‌ಎಸ್.ಶೆಟ್ಟರ್ ದತ್ತಿನಿಧಿ ಉಪನ್ಯಾಸದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ದೆಹಲಿ ವಿಶ್ವವಿದ್ಯಾಲನಿಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಅಧಿವೇಶನದ ಸರ್ವಾಧ್ಯಕ್ಷರಾದ ಡಾ.ಕೇಶವನ್ ವೆಳುತ್ತಾಟ್ ಅವರು “ವೆನ್ ಎ ಹಿಸ್ಟ್ರಿಯೋಗ್ರಫಿ ಲೀಡ್ಸ್ ಪೋಯಟ್ರಿ: ಎ ಟ್ರಿಬ್ಯೂಟ್ ಟು ಪ್ರೊ.ಎಸ್.ಶೆಟ್ಟರ್” ಎಂಬ ವಿಷಯದ ಕುರಿತು ಮಾತನಾಡಿದರು. ಪ್ರೊ. ಎಲ್.ಪಿ.ರಾಜು ದತ್ತಿನಿಧಿ ಉಪನ್ಯಾಸದಲ್ಲಿ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯಕ್ “ತುಳುನಾಡಿನ ಬುಡಕಟ್ಟು ದೈವಗಳು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಸಾಯಿ ಗ್ರೀಮ್ – ಕಾರು ಶೋರೂಂನ ಬೀಗವನ್ನು ಒಡೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ಫೆ. 19ರ ಬೆಳಗ್ಗಿನ ಜಾವ 2.02 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ಆರೋಪಿಗಳಿಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರಾಗಿದ್ದು, ಮಳಿಗೆಯ ಬೀಗವನ್ನು ಕಬ್ಬಿಣದ ರಾಡ್ ಹಾಗೂ ಸುತ್ತಿಗೆಯಿಂದ ಒಡೆಯುತ್ತಿರುವುದು ಕೆಮರಾದಲ್ಲಿ ಪತ್ತೆಯಾಗಿದೆ. ಕಳ್ಳತನಕ್ಕೆ ಯತ್ನಿಸುತ್ತಿರುವ ದೃಶ್ಯವನ್ನು ಮಳಿಗೆಯ ಪಾಲುದಾರ ನಾಗೇಂದ್ರ ಅವರು ಮೊಬೈಲ್‌ನಲ್ಲಿ ನೋಡಿ ಕೂಡಲೇ ಮಾಲಕರಾದ ನಿತಿನ್ ಅವರಿಗೆ ತಿಳಿಸಸಿದರು. ಕೂಡಲೇ ನಿತಿನ್ ಹಾಗೂ ನಾಗೇಂದ್ರ ಸ್ಥಳಕ್ಕೆ ಬಂದಿದ್ದು, ಅವರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಬೆಳಿಗ್ಗೆ ಕುಂದಾಪುರ ಪೋಲೀಸರು ಬಾಲಕರಿಬ್ಬರನ್ನು ಪತ್ತೆಹಚ್ಚಿ, ವಿಚಾರಣೆ ಬಳಿಕ ರಿಮ್ಯಾಂಡ್‌ ಹೋಮ್‌ಗೆ ಕಳುಹಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣ, ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಇಂತಹ ಕ್ಯಾಂಪುಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ. ಶಿಬಿರದ ಯಶಸ್ಸಿಗೆ ಸಹಕರಿಸಿದ ಊರಿನ ಪ್ರತಿಯೊಬ್ಬರ ಶ್ರಮ ಉಲ್ಲೇಖನೀಯ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು. ಅವರು ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉದಯ್ ಕುಮಾರ್ ಶೆಟ್ಟಿ ಕೊತ್ತಾಡಿ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ ವಡ್ಡರ್ಸೆ, ವೇಣುಗೋಪಾಲ ಶೆಟ್ಟಿ ಬನ್ನಾಡಿ,  ವಂಡಾರಿನ ಕೃಷ್ಣಪ್ರಸಾದ್ ಕ್ಯಾಶ್ಯು ಇಂಡಸ್ಟಿçಯ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ,  ಸಿ.ಎ. ಬ್ಯಾಂಕ್ ಕೋಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮನವಿ ಮೇರೆಗೆ ಆರಂಭಗೊಂಡಿರುವ ಕುಂಭ ಮೇಳ ವಿಶೇಷ ರೈಲಿನಲ್ಲಿ ಒತ್ತಡ ಹೆಚ್ಚಿರುವುದರಿಂದ ಮತ್ತೊಂದು ರೈಲಿನ ವ್ಯವಸ್ಥೆ ಮಾಡುವಂತೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ದಕ್ಷಿಣ ರೈಲ್ವೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರಿಂದ ಟಿಕೆಟ್ ಅಸಂಖ್ಯರಿಗೆ ಪಯಣ ವಂಚಿತ ಬೆಳೆಸುವ ಅವಕಾಶ ಲಭಿಸಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Read More