ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕುಂದಗನ್ನಡಿಗರು ಭಾಷೆ – ಬದುಕಿನ ಮೇಲಿನ ಅಭಿಮಾನದಿಂದ ಆಚರಿಸಲಾಗುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನವನ್ನು, ಈ ಭಾರಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ರಾಜಧಾನಿಯಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್ನಲ್ಲಿ ನಡೆಯಲಿದೆ. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು’ ಆಯೋಜಿಸಲಾಗುತ್ತಿರುವ ಕುಂದಾಪ್ರ ಕನ್ನಡ ಹಬ್ಬದ ದಿನ-ಸ್ಥಳ ಘೋಷಣಾ ʼವಾಲ್ಗʼ ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಹಬ್ಬದ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಆರಂಭವಾಗಿದ್ದು, ‘ಕುಂದಾಪ್ರ ಕನ್ನಡ ಪ್ರತಿಷ್ಠಾನವು ಐದನೇ ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಆಚರಿಸುತ್ತಿದೆ. ಥೀಮ್ ಸಾಂಗ್ ಪೋಸ್ಟರ್ ಅನಾವರಣ:ಕುಂದಾಪ್ರ ಕನ್ನಡ ಹಬ್ಬಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು. ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ’ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, 2024-25ನೇ ಸಾಲಿನವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವೈಶಿಷ್ಟ್ಯಗಳು:ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ನ್ಯಾಕ್ನ ಮೊದಲ ಸೈಕಲ್ನಲ್ಲೇ (NAAC) A+ ಶ್ರೇಣಿಯನ್ನು ಸಿಜಿಪಿಎ 3.32 (೪ ಸ್ಕೇಲ್) ಗ್ರೇಡ್ನೊಂದಿಗೆ 16 ಜನವರಿ 2028ರ ವರೆಗೆ ಅನ್ವಯವಾಗುವಂತೆ ಪಡೆದಿದೆ. ನಿರ್ಫ್ (NIRF) ಇನ್ನೋವೇಷನ್ ರ್ಯಾಕಿಂಗ್ ಅನ್ನು 150 ರಿಂದ 300 ಬ್ಯಾಂಡ್ನಲ್ಲಿ ಪಡೆದಿದೆ. ಜೊತೆಯಲ್ಲಿ ಕಾಲೇಜಿನ ಹಲವು ಎಂಜಿನಿಯರಿಂಗ್ಗೆ ವಿಭಾಗಗಳು ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (NBA) ಮಾನ್ಯತೆಯನ್ನು ಪಡೆದಿವೆ. ಪ್ರಮುಖ ಸಂಶೋಧನಾ ಸಂಸ್ಥೆಯಾದ ಇಸ್ರೊ ಹಾಗೂ ಇಸ್ರೋದ ಸಹ ಸಂಸ್ಥೆಗಳಾದ ರಾಷ್ಟ್ರೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಪದಪ್ರದಾನ ಸಮಾರಂಭವು ಜುಲೈ 10ರ ಬುಧವಾರ ಸಂಜೆ 7 ಗಂಟೆಗೆ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ. ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಅವರು ಬೈಂದೂರು ರೋಟರಿ ನೂತನ ಅಧ್ಯಕ್ಷ ಮೋಹನ್ ರೇವಣ್ಕರ್ ಅವರಿಗೆ ಪ್ರದಪ್ರದಾನ ಮಾಡಲಿದ್ದಾರೆ. ಸಹಾಯಕ ಗವರ್ನರ್ ಡಾ. ಬಿ. ರಾಜೇಂದ್ರ ಶೆಟ್ಟಿ ಅವರು ಬಿಂದುವಾಣಿ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಈ ವೇಳೆ ಅತಿಥಿಗಳಾಗಿ ಸಾಹಿತಿ ಶ್ರೀಧರ್ ಶೇಟ್ ಶಿರಾಲಿ, ರೋಟರಿ ವಲಯ ಸೇನಾನಿ ಪ್ರದೀಪ್ ಡಿ.ಕೆ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ” ಕಾಲೇಜಿನ ’ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕರಾದ ಅಮೃತ್ ರೈ, ವಿದ್ವಾನ್ ಗಣಪತಿ ಭಟ್ ಅವರು ವಿವಿಧ ಸಂಘಗಳ ಉದ್ಘಾಟನೆಯನ್ನು ನೆರವೇರಿಸಿದರು. ಸಹಸಂಸ್ಥಾಪಕರಾದ ಆದರ್ಶ ಎಂ. ಕೆ ಅವರು ಕಾಲೇಜಿನ ತ್ರೈಮಾಸಿಕವಾದ “ನಿನಾದ” ಪತ್ರಿಕೆಯ ಏಳನೇ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಹಾಗೂ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್, ಅಶ್ವತ್ ಎಸ್. ಎಲ್ ಅವರು ಗೌರವ ಉಪಸ್ಥಿತರಾಗಿದ್ದರು. ಉಪನ್ಯಾಸಕರಾದ ವಿನಾಯಕ್ ಜೋಗ್ ಹಾಗೂ ಶ್ರೀನಿಧಿ ಎಸ್. ನಾಯಕ್ ಸ್ವಾಗತಿಸಿದರು. ಭಾಷಾ ಉಪನ್ಯಾಸಕಿಯರಾದ ವೃಂದಾ ದಾತೆ ಹಾಗೂ ಪ್ರಿಯಾಂಕಾ ತೀರ್ಥರಾಮ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಸಮಾರಂಭದಲ್ಲಿ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು, ವಸತಿ ನಿಲಯ ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ – ಆಪರೇಟಿವ್ ವತಿಯಿಂದ ಶುಕ್ರವಾರ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಸೇವೆಯಲ್ಲಿ ಜನಮನ್ನಣೆ ಗಳಿಸುವುದು ಕಷ್ಟ ಸಾಧ್ಯ. ಆದರೆ ತಮ್ಮ ಮೂರೂವರೆ ದಶಕದ ಸುಧೀರ್ಘ ಸೇವೆಯ ಅವಧಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿದು ವೃತ್ತಿ ಜೀವನದಲ್ಲಿ ಮತ್ತು ನಿವೃತ್ತಿ ನಂತರವೂ ಅಪಾರ ಜನಮನ್ನಣೆ ಗಳಿಸಿರುವುದು ವಿಶೇಷವಾದದ್ದು ಎಂದರು. ಕಾರ್ಯಕ್ರಮದಲ್ಲಿ ನಿರ್ದೇಶಕರುಗಳಾದ ಮಂಜು ಪೂಜಾರಿ ನಾವುಂದ, ರಾಮಕೃಷ್ಣ ಖಾರ್ವಿ, ಮಂಜುನಾಥ ಪೂಜಾರಿ, ಸೀತಾರಾಮ ಮಡಿವಾಳ ಅಣ್ಣಪ್ಪ ಪೂಜಾರಿ ಯಡ್ತರೆ, ರತಿ ರಾಜು ಪೂಜಾರಿ ಇದ್ದರು. ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಕೆ. ವಂದಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಉಡುಪಿ (ಅನುಷ್ಠಾನ-ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ) ಹಾಗೂ ಕೃತಕ ಅಂಗಾಂಗ ತಯಾರಿಕ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಇವರ ಸಹಯೋಗದೊಂದಿಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ. ಡಿ. ಐ. ಪಿ ಮತ್ತು ಆರ್. ವಿ. ವೈ ಯೋಜನೆಯಡಿಯಲ್ಲಿ ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ ತಪಾಸಣಾ ಶಿಬಿರ ಜರುಗಲಿದೆ. ತಪಾಸಣಾ ಶಿಬಿರವು ಜುಲೈ 10 ರಂದು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜು.11 ರಂದು ಬೈಂದೂರಿನ ಅಂಬೇಡ್ಕರ್ ಭವನ, ಜು. 12 ರಂದು ಕಾಪುವಿನ ಜೆ.ಸಿ ಭವನ, ಜು. 14 ರಂದು ಬ್ರಹ್ಮಾವರ ಪೊಲೀಸ್ ಠಾಣೆ ಬಳಿಯ ಸರ್ಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲನೆ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ದಿನೇದಿನೇ ಉಲ್ಭಣಗೊಳ್ಳುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಹಾಗೂ ನಿರ್ಮೂಲನೆಗಾಗಿ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಪ್ರತೀ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನವಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದ್ದು, ಅಂದು ಉಡುಪಿ ತಾಲೂಕಿನ ಕೊಡಂಕೂರು ವಾರ್ಡಿನ ಪ್ರಮೋದ್ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಡೆಂಗ್ಯೂ ಜಾಗೃತಿ ಕರಪತ್ರ ವಿತರಿಸುವ ಹಾಗೂ ಸಾರ್ವಜನಿಕರನ್ನು ಸಂದರ್ಶಿಸುವ ಮೂಲಕ ಡೆಂಗ್ಯೂ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯ ಜನರು ಡೆಂಗ್ಯೂ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇದರ ನಿಯಂತ್ರಣದ ಬಗ್ಗೆ ತಿಳುವಳಿಕೆ ಹೊಂದುವುದರೊಂದಿಗೆ ಹೆಚ್ಚು ಪರಿಣಾಮಕಾರಿಯಾಗಿ ಡೆಂಗ್ಯೂ ಅನ್ನು ನಿಯಂತ್ರಿಸಿ, ನಿರ್ಮೂಲನೆ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇನ್ನರ್ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 10ರ ಸಂಜೆ 5 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಲಹೆಗಾರರಾದ ಮಂಜುಳಾ ಶೆಟ್ಟಿ ಮಾತನಾಡಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ. ಗೊಂಡ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡೋ. ಸರೋಜ ಎಂ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.5: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಮೊದಲು ಕುಂದಾಪುರ ಎಸಿ ಅವರು ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿಗೆ ಮಾತ್ರ ರಜೆ ಘೋಷಿಸಿದ್ದರು. ಅಧಿಕ ಮಳೆಯಾಗುತ್ತಿರುವುದರಿಂದ ಅಂತಿಮವಾಗಿ ಜಿಲ್ಲೆಯ ಪಿಯು ತನಕದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
