ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡದ ನಟ ಪ್ರಮೋದ್ ಶೆಟ್ಟಿ ಹಾಗೂ ಶೈನ್ ಶೆಟ್ಟಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರ ಮತ ಚಲಾಯಿಸಿದರು. ಬೈಂದೂರಿನ ಪೇಟೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಅಂಗಡಿ ಹೋಟೆಲ್ ಗಳಿಗೆ ಭೇಟಿ ನೀಡಿ ಗುರುರಾಜ ಗಂಟೆಹೊಳೆ ಅವರಿಗೆ ಮತ ನೀಡುವಂತೆ ಕೋರಿಕೊಂಡರು. ಶಿರೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಸೇರಿದಂತೆ ವಿವಿಧೆಡೆ ದಿನವಿಡಿ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರುಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮಅಭ್ಯರ್ಥಿಗೆ ಮತಚಲಾಯಿಸುವಂತೆಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಡೆದ ಮತದಾನಜಾಗೃತಿಕಾರ್ಯಕ್ರಮದಲ್ಲಿ, ಮತದಾನಜಾಗೃತಿ ಸಾರುವಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಚುನಾವಣೆಯಲ್ಲಿ ಬಹುತೇಕಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆಉತ್ತಮಯೋಜನೆರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಯುವಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದಜಿಲ್ಲೆಗೆಚುನಾವಣಾಆಯೋಗದಿAದರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದುಜಿಲ್ಲೆಯಎಲ್ಲಾಯುವಜನತೆತಪ್ಪದೇತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮಾರ್ಚ್ 2023ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದಿದ್ದು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜನಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಕಾವ್ಯ ಹಾಗೂ ಪ್ರತೀಕಾ ಅವರನ್ನು ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದ ಚಂದ್ರಾ ಅವರನ್ನು ಸನ್ಮಾನಿಸಲಾಯಿತು. ಇದರೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಒಟ್ಟು 110 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹವಾದ ವಿಷಯವಾಗಿದೆ. 2023-24ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಈಗಾಗಲೇ ಕಾಲೇಜಿನಲ್ಲಿ ಪ್ರಾರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದಕೊಳ್ಳಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ. Click here for admission details
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿ ದೆ. ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನುತಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನುಕಡಿಮೆ ಮಾಡಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರನ್ನು ಸೇವಿಸಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣೆಗಾಗಿಕನ್ನಡಕ, ಛತ್ರಿ/ ಟೊಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು. ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪ್ರಯಾಣ ಮಾಡುವಾಗ ನೀರನ್ನುಜೊತೆಯಲ್ಲಿತೆಗೆದುಕೊಂಡು ಹೋಗಬೇಕು. ದೇಹವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಈ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ ಅಭಿಪ್ರಾಯವಿದೆ. ಆರ್.ಎಸ್.ಎಸ್ ಪ್ರಚಾರಕಾಗಿ ಬಂದವರಿಗೆ ತಳಮಟ್ಟದಲ್ಲಿ ಜನರ ನೋವು ನಲಿವುಗಳ ಅರಿವಿದೆ. ಅವರ ಸಂಕಷ್ಟ ನಿವಾರಿಸಲು ಅವರು ಖಂಡಿತವಾಗಿಯೂ ಪಣತೊಡುತ್ತಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯೇ ಸಾಕ್ಷಿ. ಬೈಂದೂರಿನಲ್ಲಿಯೂ ಅಂತಹದ್ದೊಂದು ಅವಕಾಶ ಎದುರಾಗಿದ್ದು, ಬಿಜೆಪಿ ಅಭ್ಯರ್ಥಿಯೇ ಗೆಲುವ ಸಾಧಿಸಲಿದ್ದಾರೆ ಎಂದರು. ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ತಾ.ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ., ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ಜಿಲ್ಲಾ ಯುವಮೋರ್ಚಾ ಪ್ರಧಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮೈನ್ 2ನೇ ಫೇಸ್ನ ಅಂತಿಮ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಭೌತಶಾಸ್ತ್ರದಲ್ಲಿ 97 ಪರ್ಸನ್ಟೈಲ್ ಪಡೆದು ಒಟ್ಟು96 ಪರ್ಸನ್ಟೈಲ್ ಪಡೆದಿದ್ದಾನೆ. ವಿದ್ಯಾರ್ಥಿ ಸುಮಂತ್ ರಸಾಯನಶಾಸ್ತ್ರದಲ್ಲಿ 99.12ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 96ಪರ್ಸನ್ಟೈಲ್ ಹಾಗೂ ಓಂಕಾರ್ ಪ್ರಭು ಒಟ್ಟು 90.04 ,ಪರ್ಸನ್ಟೈಲ್ ಪಡೆದಿದ್ದರೇ, ಹರ್ಷಿತ್ ಖಾರ್ವಿ 88.17 ಪರ್ಸನ್ಟೈಲ್, ತನಿಷಾ 83.5 ಪರ್ಸನ್ಟೈಲ್ ಪಡೆದಿರುತ್ತಾರೆ. ಪರೀಕ್ಷೆಗೆ ಕುಳಿತ ಕಾಲೇಜಿನ 5 ವಿದ್ಯಾರ್ಥಿಗಳು ಶೇಕಡಾ 100 ಶೇಕಡಾ ಫಲಿತಾಂಶವನ್ನು ದಾಖಲಿಸುವುದರ ಮೂಲಕ ಐಐಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಹೊಂದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವ್ರಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಹಾಗೂ ರಾಜ್ಯದ ಡಬ್ಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಸ್ಥಿರವಾಗಿದೆ. ಪಿ.ಎಫ್.ಐನಂತಹ ಸಂಘಟನೆ ತಲೆಎತ್ತದಿರಬೇಕಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರವನ್ನು ಆರಿಸಬೇಕಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಹೇಳಿದರು. ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ಧಾಪುರದಲ್ಲಿ ರೋಡ್ ಶೋ ನಡೆಸಿ ಬಳಿಕ ಮಾತನಾಡಿ, ರಾಷ್ಟ್ರದಲ್ಲಿ ಪಿಎಫ್‍ಐಯಂತಹ ಸಂಘಟನೆಗಳನ್ನು ನಿಷೇಧ ಮಾಡಿ ವಿದ್ವಾಂಸಕ ಚಟುವಟಿಕೆಗಳ ನಿರ್ಮೂಲನೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದಲ್ಲಿ ಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ. ಬಾಂಬ್ ದಾಳಿಯಂತಹ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ ಎಂದರು. ಕರಾವಳಿ ಭಾಗದಲ್ಲಿ ರೈತರ ಹಾಗೂ ಮೀನುಗಾರರ ಹಿತಾಸಕ್ತಿಯ ಕಾಪಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಮೀನುಗಾರಿಕಾ ಬಂದರು ಅಭಿವೃದ್ಧಿ ಮಾಡಿದೆ. ಅಡಿಕೆ ಕೃಷಿಕರಿಗೆ ಬೆಂಬಲ ನೀಡಿದ್ದರಿಂದ ಉತ್ತಮ ಧಾರಣೆ ಲಭಿಸಿದೆ. ಎಲ್ಲ ಸ್ತರಗಳ ಜನರಿಗೆ ಸಾಮಾಜಿಕ ನ್ಯಾಯ ನೀಡುವಲ್ಲಿ ಸರ್ಕಾರ ಬದ್ದವಾಗಿದೆ ಎಂದ ಅವರು, ಬೈಂದೂರಿನಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಉಪ್ಪುoದ, ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಥಮ ಚಿಕಿತ್ಸಾ ಕೌಶಲ್ಯದ ಹಾಗೂ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಗಾರ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉಮೇಶ್ ಶೆಟ್ಟಿ ಮಾತನಾಡಿ, ಪ್ರಥಮ ಚಿಕಿತ್ಸಾ ಮಾಹಿತಿಯಿಂದ ಯುವಜನರು ತಮ್ಮನ್ನು ಮತ್ತು ಇತರರನ್ನು ಅಪಾಯದಿಂದ ಪಾರು ಮಾಡಬಲ್ಲರು. ವಿದ್ಯಾರ್ಥಿಗಳನ್ನು ಕೌಶಲ್ಯ ಭರಿತರನ್ನಾಗಿ ಮಾಡುವ ಇಂತಹ ಕಾರ್ಯ ಶ್ಲಾಘನೀಯ ಎಂದರು. ರೆಡ್ ಕ್ರಾಸ್ ಸಂಸ್ಥೆ ದಕ್ಷಿಣಕನ್ನಡ ಜಿಲ್ಲೆ ಇಲ್ಲಿಯ ತರಬೇತುದಾರರಾದ ಅಶ್ವಿನ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ನಿದರ್ಶನಗಳೊಂದಿಗೆ ಪ್ರಥಮ ಚಿಕಿತ್ಸಾ ಕೌಶಲ್ಯ ಹಾಗೂ ವಿಪತ್ತು ನಿರ್ವಹಣೆಯ ತರಬೇತಿ ನೀಡಿದರು. ಜೆಸಿಐ ಉಪ್ಪುoದದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಸಭಾಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ಜೆಸಿ ಸಂಸ್ಥೆಯ ತರಬೇತುದಾರರಾದ ಸುಬ್ರಮಣ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ,ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಮತ್ತು ಇತರೆ ಪಕ್ಷದ ಕಾರ್ಯಕರ್ತರು ಹಾಗೂ ಹತ್ತಾರು ಯುವಕರು ಬಿಜೆಪಿ ಪಕ್ಷವನ್ನು ಶುಕ್ರವಾರ ಸೇರ್ಪಡೆಯಾಗಿದ್ದಾರೆ. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಈ ಸಂದರ್ಭ ಮಾತನಾಡಿ, ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿಕೊಂಡು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ,ಯುವ ಕಾರ್ಯಕರ್ತರ ಸೇರ್ಪಡೆಯಿಂದ ಈ ಭಾಗದಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹೇಂದ್ರ ಪೂಜಾರಿ,ಸುರೇಶ್ ಶೆಟ್ಟಿ,ಕಿಶೋರ್ ಶೆಟ್ಟಿ,ಶೇಖರ್ ಖಾರ್ವಿ,ಅಶೋಕ ಶೆಟ್ಟಿ ಸಂಸಾಡಿ, ಶಂಕರ್ ಶೆಟ್ಟಿ ಬೆಳ್ಳಾಡಿ ,ಶರತ್ ಶೆಟ್ಟಿ ಬೆಳ್ಳಾಡಿ, ಸತೀಶ್ ಎಮ್ ನಾಯಕ್, ಮಂಜುನಾಥ್ ಸೇನಾಪುರ, ಮಂಜುನಾಥ ಪೂಜಾರಿ ಬೆಳ್ಳಾಡಿ, ಪ್ರವೀಣ್ ಪಡುಕೋಣೆ ಮತ್ತಿತರರು ಉಪಸ್ಥಿತರಿದ್ದರು. ವಿಶ್ವನಾಥ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು
