ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 36ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 30ನೇ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರ ಹಂದಾಡಿ ಮಾತನಾಡಿ ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣದ ಮೂಲಕ ಅಭಿವೃದ್ಧಿಯನ್ನು ಹೊಂದುವಂತಾಗಬೇಕು. ಅಂತಹ ಶಿಕ್ಷಣವನ್ನು ಪಡೆಯುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಬೇಕು ಎಂದು ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಶುಭ ಹಾರೈಸಿದರು. ಪರಿಯಾಳ ಸಮಾಜ ಸುಧಾರಕರ ಸಂಘ ಕುಂದಾಪುರದ ಅಧ್ಯಕ್ಷರಾದ ಮಂಜುನಾಥ ಸಾಲಿಯನ್ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ 2021- 22 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರಾಂಕ್ ಪಡೆದ ವಿದ್ಯಾರ್ಥಿನಿ ನೇಹಾ ಎಸ್ ಕೊಡೇರಿ, ಯುವ ಬರಹಗಾರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಲು ಸಂಘಟಿತರಾಗಿ ಕೆಲಸ ಮಾಡಬೇಕು. ಸಾಮಾನ್ಯ ಕಾರ್ಯಕರ್ತನು ಶಾಸಕನಾಗಿ ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮೆಲ್ಲರದ್ದೂ ಆಗಿದೆ ಮಹಾರಾಷ್ಟ್ರ ರಾಜ್ಯದ ವಿಧಾನಪರಿಷತ್ ಸದಸ್ಯ ಪ್ರವೀಣ್ ದಾರೇಕರ್ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದ ಬಳಿಕ ವಿಶ್ವದಲ್ಲೇ ಅಗ್ರಸ್ಥಾನದಲ್ಲಿ ಭಾರತ ಗುರುತಿಸಿಕೊಳ್ಳುವಂತಾಗಿದೆ. ದೇಶದಲ್ಲಿ ಜನಸಾಮಾನ್ಯರು ಸೇರಿದಂತೆ ನಾಗರೀಕರಿಗೆ ಯೋಗ್ಯವಾದ ನೂರಾರು ಯೋಜನೆಗಳು ಜಾರಿಗೆ ತಂದಿದೆ. ಅಭಿವೃದ್ದಿಯಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಿದೆ ಎಂದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಬೈಂದೂರು ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಮಂಗಳವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಭಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸಂಜೆಯ ವೇಳೆಗೆ ರಥವನ್ನು ರಥಬೀದಿಯಲ್ಲಿ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಬ್ಬಲ್ ಇಂಜಿನ್ ಸರಕಾರದ ಸಾಧನೆಯನ್ನು ಜನರು ಗಮನಿಸುತ್ತಿದ್ದಾರೆ. ಉಭಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯತೆಯೆಡೆಗಿನ ಬದ್ಧತೆ, ಕುಂದಾಪುರ ಕ್ಷೇತ್ರದಲ್ಲಾದ ಅಭಿವೃದ್ಧಿ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಭಾವ ಕಿರಣ್ ಕೊಡ್ಗಿ ಅವರನ್ನು ದಾಖಲೆಯ ಅಂತರದಲ್ಲಿ ಗೆಲ್ಲಿಸಲಿದೆ ಎಂದು ದೆಹಲಿ ಸರ್ಕಾರದ ವಿಪಕ್ಷದ ನಾಯಕ, ಉಡುಪಿ ಜಿಲ್ಲಾ ಬಿಜೆಪಿ ಉಸ್ತುವಾರಿ ವಿಜೇಂದರ್ ಗುಪ್ತ ಹೇಳಿದರು. ಅವರು ಮಂಗಳವಾರ ಕುಂದಾಪುರ ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಪೂರ್ಣ ಬಹುಮತದ ಸರಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಯಾವ ತಂತ್ರಗಾರಿಕೆಯೂ ಈ ಚುನಾವಣೆಯಲ್ಲಿ ಫಲ ಕೊಡುವುದಿಲ್ಲ. ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ಡಬ್ಬಲ್ ಇಂಜಿನ್ ಸರ್ಕಾರ ಮುಂದುವರಿಯಲಿದೆ ಎಂದರು. ಕೇಂದ್ರ ಸರ್ಕಾರದ ದಿಟ್ಟ ನಿಲುವಿನಿಂದ ದೇಶ, ಕರ್ನಾಟಕದಲ್ಲಿ ಜನ ನಿರ್ಭೀತಿಯಿಂದಿದ್ದಾರೆ. ಶಾಂತಿ ಸುವ್ಯವಸ್ಥತೆಗೆ ಸರ್ಕಾರ ಆಧ್ಯತೆ ನೀಡಿದೆ. ಇವತ್ತು ಬಾಂಬ್ ಸ್ಪೋಟದ ಪ್ರಕರಣಗಳು ಇಲ್ಲ, ವಿದ್ವಾಂಸಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ.. ಭದ್ರತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಸ್ಪಂದನಾ ಫೌಂಡೇಶನ್, ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತದಾನಿಗಳ ಬಳಗ ಕುಂದಾಪುರ, ಜಬ್ ಜಬ್ ಫ್ರೆಂಡ್ಸ್ ಕುಂದಾಪುರ, ಖಾರ್ವಿ ಆನ್ಲೈನ್. ಕಾಂ , ಫ್ರೆಂಡ್ಸ್ ಸರ್ಕಲ್ ಫ್ರೇಂಡ್ಸ್ ಕುಂದಾಪುರ ಹಾಗೂ ರಕ್ತನಿಧಿ ವಿಭಾಗ ಕೆ.ಎಂ.ಸಿ, ಮಣಿಪಾಲ ಇವರ ಸಹಕಾರದಲ್ಲಿ ಕುಂದಾಪುರ ಕಲಾಮಂದಿರದಲ್ಲಿ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಶ್ರೀ ಸಾಯಿ ಸ್ಪಂದನಾ ಫೌಂಡೇಶನ್ ಕುಂದಾಪುರ ಸಂಸ್ಥೆಯ ಉದ್ಘಾಟನೆ ಮತ್ತು ಲೋಗೋ ಬಿಡುಗಡೆ ಕಾರ್ಯಕ್ರಮ ಜರುಗಿತು. ವೈದ್ಯ ಡಾ. ಆದರ್ಶ ಹೆಬ್ಬಾರ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕುಂದಾಪುರದಲ್ಲಿ ದಿನನಿತ್ಯ 15 ರಿಂದ 20 ಯೂನಿಟ್ ರಕ್ತದ ಅವಶ್ಯಕತೆ ಇದ್ದು, ಹೆರಿಗೆ ಹಾಗೂ ಅಪಘಾತದ ತುರ್ತು ಸಂದರ್ಭದಲ್ಲಿ ಸಕಾಲದಲ್ಲಿ ರಕ್ತದ ಪೂರೈಕೆ ಆಗದಿದ್ದ ರೋಗಿಯ ಜೀವಕ್ಕೆ ಅಪಾಯ. ಇಂತಹ ಸಂದರ್ಭದಲ್ಲಿ ತುರ್ತು ರಕ್ತದಾನಿಗಳ ಅವಶ್ಯಕತೆ ಇದ್ದು ಇದರ ಪೂರೈಕೆಗಾಗಿ ಶ್ರೀಸಾಯಿ ಸ್ಪಂದನಾ ಸಂಸ್ಥೆ ಮುಂದಿನ ದಿನಗಳಲ್ಲಿ ಶ್ರಮಿಸಲಿದ್ದು ರೋಗಿಗಳ ಪಾಲಿಗೆ ಆಶದಾಯಕವಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023ರ ಶೈಕ್ಷಣಿಕ ವರ್ಷದ ‘ಯುವಿಕಾ’ ಕಾರ್ಯಕ್ರಮಕ್ಕೆ ಉಡುಪಿ ಕೇಂದ್ರೀಯ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ಶೌರ್ಯ ಎಸ್. ಕಾಡಿಂತಾರ್ ಅವರನ್ನು ಇಸ್ರೋ ಸಂಸ್ಥೆ ಯುವ ವಿಜ್ಞಾನಿಯಾಗಿ ಆಯ್ಕೆ ಮಾಡಿದೆ. ದೇಶದಾದ್ಯಂತ ಇಸ್ರೋ ಪ್ರಸಕ್ತ ವರ್ಷ ಆಯ್ಕೆ ಮಾಡಿದ 350 ವಿದ್ಯಾರ್ಥಿಗಳಲ್ಲಿ ಶೌರ್ಯ. ಎಸ್. ಕಾಡಿಂತಾರ್ ಓರ್ವರಾಗಿದ್ದಾರೆ. ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯು ಶಾಲಾ ವಿದ್ಯಾರ್ಥಿಗಳಿಗಾಗಿ ಯುವಿಕಾ (ಯುವ ವಿಜ್ಞಾನಿ ಕಾಠ್ಯಕ್ರಮ ) ಎಂಬ ವಿಶೇಷ ಕಾಠ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ. ಇದು ಯುವ ವಿದ್ಯಾರ್ಥಿಗಳಿಗೆ ಬಾಹ್ಯಕಾಶ ವಿಜ್ಞಾನ, ತಂತ್ರಜ್ಞಾನ ಹಾಗೂ ಬಾಹ್ಯಕಾಶ ಅಪ್ಲಿಕೇಶನ್ಗಳ ಕುರಿತು ಮೂಲಭೂತ ಜ್ಞಾನವನ್ನು ನೀಡುತ್ತದೆ. ಈ ಕಾಠ್ಯಕ್ರಮವನ್ನು ಕ್ಯಾಚ್ ದೆಮ್ ಯಂಗ್ ಎಂಬ ಶೀರ್ಷಿಕೆ ಅಡಿಯಲ್ಲಿ ಇಸ್ರೋ ರೂಪಿಸಿದ್ದು 2023 ರ ಮೇ 15ರಿಂದ ಮೇ 26 ರವರೆಗೆ ನಡೆಯಲಿದೆ. ಶೌರ್ಯ ಪ್ರಸ್ತುತ ಬ್ರಹ್ಮಾವರ ತಾಲೂಕಿನ ಯಡ್ತಾಡಿ ನಿವಾಸಿ, ಉಡುಪಿ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ್ ಪೂಜಾರಿ ಹಾಗೂ ಬ್ರಹ್ಮಾವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ ಹಾಗೂ ಸಮಾಜಸೇವಕ ಗೋವಿಂದ ಬಾಬು ಪೂಜಾರಿ ಅವರನ್ನು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಹಿಂದುಳಿದ ವರ್ಗ ರಾಜ್ಯ ಅಧ್ಯಕ್ಷರಾದ ನೆಲ ನರೇಂದ್ರಬಾಬು ನೇಮಕ ಮಾಡಿದ್ದಾರೆ. ಗೋವಿಂದ ಬಾಬು ಪೂಜಾರಿ ಅವರು ಬೈಂದೂರು ತಾಲೂಕು ಬಿಜೂರು ಗ್ರಾಮದವರಾಗಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಕೈತಪ್ಪಿದ ಬಳಿಕ ಈ ಪದವಿಯನ್ನು ನೀಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಿರುತೆರೆ ನಟಿ, ಬಿಗ್ ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪರವಾಗಿ ಗಂಗೊಳ್ಳಿ ಭಾಗದಲ್ಲಿ ಮತಯಾಚನೆ ಮಾಡಿದರು. ಗಂಗೊಳ್ಳಿಯ ಲೈಟ್ ಹೌಸ್, ಕಂಚುಗೋಡು, ಸಂನ್ಯಾಸಿ ಬಲೆ ಮೊದಲಾದ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಈ ವೇಳೆ ಗಂಗೊಳ್ಳಿ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಕಂಚುಗೋಡು, ಶಕ್ತಿಕೇಂದ್ರ ಅಧ್ಯಕ್ಷ ಚಂದ್ರ ಖಾರ್ವಿ, ಸೂರಜ್ ಖಾರ್ವಿ, ಗೋಪಾಲ ಖಾರ್ವಿ, ಶಾಂತಿ ಖಾರ್ವಿ, ವಿರೇಂದ್ರ ಶೆಟ್ಟಿ, ಧನಂಜಯ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.24: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದು, ಅಂತಿಮವಾಗಿ ಯಾರೆಲ್ಲಾ ಉಳಿದಿದ್ದಾರೆ ನೋಡಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ, ಬಿ.ಜೆ.ಪಿ ಪಕ್ಷದ ಗುರುರಾಜ ಶೆಟ್ಟಿ ಗಂಟಿಹೊಳೆ , ಕಾಂಗ್ರೆಸ್ ಪಕ್ಷದ ಕೆ. ಗೋಪಾಲ ಪೂಜಾರಿ, ಜನತಾದಳ (ಜಾತ್ಯಾತೀತ)ದ ಮನ್ಸೂರ್ ಇಬ್ರಾಹಿಂ, ಆಮ್ ಆದ್ಮಿ ಪಾರ್ಟಿಯ ಸಿ.ಎ. ರಮಾನಂದ ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಪ್ರಸಾದ್, ರಾಷ್ಟಿಯ ಸಮಾಜದಳ (ಆರ್) ನ ಕೊಲ್ಲೂರು ಮಂಜುನಾಥ ನಾಯ್ಕ, ಪಕ್ಷೇತರ ಅಭ್ಯರ್ಥಿಗಳಾದ ಚಂದ್ರಶೇಖರ ಜಿ, ಶ್ಯಾಮ ಬಿ, ಎಚ್.ಸುರೇಶ್ ಪೂಜಾರಿ ಚುನಾವಣಾ ಕಣದಲ್ಲಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ, ಬಿ.ಜೆ.ಪಿ ಪಕ್ಷದ ಎ.ಕಿರಣ್ ಕುಮಾರ್ ಕೊಡ್ಗಿ, ಕಾಂಗ್ರೆಸ್ ಪಕ್ಷದ ದಿನೇಶ್ ಹೆಗ್ಡೆ ಮೊಳಹಳ್ಳಿ, ಜನತಾದಳ (ಜಾತ್ಯಾತೀತ)ದ ರಮೇಶ, ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಹಕರ ಸೇವೆ ಬ್ಯಾಂಕಿನ ಪ್ರಥಮ ಆದ್ಯತೆಯಾಗಿರಬೇಕು. ಡಿಜಿಟಲ್ ಪ್ರಾಡಕ್ಟ್ಸ್ ಸುಲಭವಾಗಿ ಗ್ರಾಹಕರು ಅರಿಯುವಂತಾಗಬೇಕು. ಬ್ಯಾಂಕಿನ ಎಲ್ಲಾ ಹುದ್ದೆಯವರು ಗ್ರಾಹಕರಿಗೆ ಸಿಗುವಂತಾಗಬೇಕು. ಬ್ಯಾಂಕಿನ ಆರ್ಥಿಕ ಸ್ಥಿತಿಗಳು ಸುದೃಢವಾಗಿರಬೇಕು. ಗ್ರಾಹಕರಿಗೆ ಅಪೇಕ್ಷೆಯಂತೆ ಹೆಚ್ಚಿನ ಸೌಲಭ್ಯ ನೀಡುವಂತಾಗಬೇಕು. ಆಗ ಗ್ರಾಹಕರಿಗೆ ನಮ್ಮ ಬ್ಯಾಂಕ್ ಎಂದು ವಿಶ್ವಾಸ ಬರುತ್ತದೆ. ದೃಢತೆ, ಸುದೃಢತೆಯಲ್ಲಿ ಕರ್ಣಾಟಕ ಬ್ಯಾಂಕ್ ಅಗ್ರ ಸ್ಥಾನಕ್ಕೆ ಮುಂದುವರೆಯುತ್ತಿದೆ. ಗ್ರಾಹಕ ಕೇಂದ್ರಿತ ಈ ಬ್ಯಾಂಕ್ ಇಂದು ಇತರ ಬ್ಯಾಂಕ್ಗಳೂ ಗಮನಹರಿಸುವಂತಾಗುತ್ತದೆ. ನೂರು ವರ್ಷ ದಾಟಿದ ಬ್ಯಾಂಕ್ಗಳಲ್ಲಿ ಕರ್ಣಾಟಕ ಬ್ಯಾಂಕ್ ಮಾತ್ರ ಎಲ್ಲ ವರ್ಷಗಳಲ್ಲಿ ಲಾಭದಾಯಕವಾಗಿ ಬೆಳೆದು ದಾಖಲಿಸಲ್ಪಟ್ಟಿದೆ ಎಂದು ಕರ್ಣಾಟಕ ಬ್ಯಾಂಕಿನ ನಿಕಟಪೂರ್ವ ಎಂ. ಡಿ. ಹಾಗೂ ಸಿ.ಇ.ಒ. ಮಹಾಬಲೇಶ್ವರ ಎಂ. ಎಸ್. ಕುಂದಾಪುರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ ಹೇಳಿದರು. ಕುಂದಾಪುರದ ಕರ್ಣಾಟಕ ಬ್ಯಾಂಕ್ ಗ್ರಾಹಕರು, ಅಭಿನಂದನಾ ಸಮಿತಿ ಹೆಸರಲ್ಲಿ ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ನುಡಿದರು. ಕರ್ಣಾಟಕ ಬ್ಯಾಂಕ್ನ…
