Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಐಟಿಐ ಬಿದ್ಕಲ್ ಕಟ್ಟೆ ಕುಂದಾಪುರ, ಟೋಯೋಟಾ ಕಿರ್ಲೋ ಸ್ಕರ್ ಸಂಸ್ಥೆ ಮತ್ತು ಕೋಟ ಪೋಲಿಸ್ ಅವರ ಸಹಯೋಗದೊಂದಿಗೆ ಕೈಗಾರಿಕೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಜಾಥಾವನ್ನು ನಡೆಸಲಾಯಿತು. ಪ್ರಾಚಾರ್ಯ ಗಂಗಾಧರಪ್ಪ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಲಾಯಿತು. ತರಬೇತಿ ಅಧಿಕಾರಿ ಸತೀಶ ಎಸ್. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ಪೋಲಿಸ್ ಠಾಣೆಯ ಎಎಸ್‌ಐ ಗೋಪಾಲ ಪೂಜಾರಿ, ಟೋಯೋಟಾ ಸಂಸ್ಥೆಯ ಭಾಸ್ಕರ್ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿ ಯಶಸ್ವಿಯಾಗಿ ಕಾರ್ಯಕ್ರಮ ಸಂಯೋಜಿಸಿದ್ದರು. ಈ ಸಂದರ್ಭದಲ್ಲಿ ತರಬೇತಿದಾರರಿಗೆ ಹಾಗೂ ಸಾರ್ವಜನಿಕರಿಗೆ ಸುರಕ್ಷ ನಿಯಮಗಳ ಮಾಹಿತಿ ನೀಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ  ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮಹಿಳಾ ಸಬಲೀಕರಣ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು ಮತ್ತು ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸಮಾನ ಹಕ್ಕು ಇರಬೇಕೆಂದು ಒತ್ತಿ ಹೇಳಿದರು.   ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲಾರದ ಡಾ. ಅಬ್ದುಲ್ ಕರೀಂ, ಕ್ರಿಪಾ ಎಂ. ಎಂ (ಅಸಿಸ್ಟೆಂಟ್ ಡೈರೆಕ್ಟರ್ ಫೀಲ್ಡ್ ಪ್ರೋಗ್ರಾಮ್ ನಮ್ಮ ಭೂಮಿ), ನಮ್ಮ ಭೂಮಿಯ ಸುರೇಶ, ಆಶಾ, ಎಂ. ಬಿ. ಎ. ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ, ಎಂಬಿಎ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಗೌತಮಿ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 2024-25ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇಲ್ಲಿಯ ಶಿಕ್ಷಕರಾದ ಅಶೋಕ್ ತೆಕ್ಕಟ್ಟೆ, ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 8೦ ಮತ್ತು ಶೇ.90 ಕ್ಕಿಂತಲೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್‌ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಸಹಶಿಕ್ಷಕಿ ಮಹಿಮಾ ನಿರೂಪಿಸಿ, ವಿದ್ಯಾರ್ಥಿ ಹರಿದಾಸ್ ಆರ್. ಮಲ್ಯ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ರಾಜಸ್ಥಾನ್, ತಮಿಳುನಾಡು, ಗುಜರಾತ್, ಉತ್ತರ ಪ್ರದೇಶ್ ಮತ್ತು ಹರಿಯಾಣದ ವಿವಿಧೆಡೆ ಏರ್‌ಕ್ರಾಪ್ಟ್ ಡಿವಿಷನ್, ಹೆಚ್‌ಏಎಲ್ ಮೂಲಕ ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ 4 ವರ್ಷಗಳ ಅವಧಿಗೆ ಅಧಿಕಾರಾವಧಿ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಐ.ಟಿ.ಐ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 90 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅರ್ಜಿ ಸಲ್ಲಿಸಲು ಮಾರ್ಚ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಹಿನ ಮಾಹಿತಿಗಾಗಿ ವೆಬ್‌ಸೈಟ್ hr_ac@hal- india.co.in ಅಥವಾ ಸಹಾಯವಾಣಿ ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಆಶ್ರಯದಲ್ಲಿ ತಾಲೂಕಿನ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರೋಟರಾಕ್ಟ್ ಕ್ಲಬ್‌ನ ಸ್ವಯಂಸೇವಕರು ಆರೋಗ್ಯಕರ ಆಹಾರ ಅಭ್ಯಾಸಗಳ ಮಹತ್ವ, ತಂತ್ರಜ್ಞಾನದ ಸರಿಯಾದ ಬಳಕೆ, ಸ್ವಚ್ಛತೆ ಮತ್ತು ಹೈಜೀನ್ ಹಾಗೂ ರಸ್ತೆ ಸುರಕ್ಷತೆ ಕುರಿತಂತೆ ಬೋಧನೋಪಕರಣಗಳ ಸಹಾಯದಿಂದ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ನೈತಿಕತೆ ಮತ್ತು ಮೌಲ್ಯಗಳ ಕುರಿತು ಪ್ರೇರಣೆ ನೀಡಲಾಯಿತು. ಹಲವು ಸಾಂಪ್ರದಾಯಿಕ ಆಟಗಳನ್ನು ನಡೆಸಲಾಯಿತು. ಸ್ವಯಂಸೇವಕರು ಮಕ್ಕಳಿಗೆ ನೋಟು ಪುಸ್ತಕ, ಪೆನ್ನು, ಹಣ್ಣುಗಳನ್ನು ವಿತರಿಸಿದರು. ಇದೇ ಸಂದರ್ಭ ಶಾಲೆಗೆ ಗೋಡೆಯ ಗಡಿಯಾರವನ್ನು ನೀಡಲಾಯಿತು. ಈ ಸೇವಾ ಕಾರ್ಯಕ್ರಮದ ಮೂಲಕ ಸ್ವಯಂಸೇವಕರು ಸೇವೆ ಸಲ್ಲಿಸುವ ಸಂಸ್ಕೃತಿ, ಆರೈಕೆ ಮತ್ತು ಹಂಚಿಕೊಳ್ಳುವ ಮಹತ್ವವನ್ನು ತಿಳಿಯುವ ಅವಕಾಶವನ್ನು ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಸಂಯೋಜಕರುಗಳಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ಮತ್ತು ಅವಿತಾ ಕೊರೆಯಾ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವ ನಿರ್ಮಿತ ಉಪಕರಣವನ್ನು ಕೃತಕ ಉಪಗ್ರಹಗಳ ಮೂಲಕ ಅಂತರೀಕ್ಷದಲ್ಲಿ ಬಿಟ್ಟು ಭೂಮಿ ಮೇಲಿನ ಮನುಷ್ಯರಿಗೆ ಬೇಕಾಗುವ ಎಲ್ಲ ಸೇವೆಗಳನ್ನು ಇಸ್ರೋ ಸಂಸ್ಥೆ ನೀಡುತ್ತಿದೆ. ಇಂಟರ್‍ನೆಟ್ ಸೌಲಭ್ಯ, ಜಿ.ಪಿಎಸ್, ಲೋಕೇಶನ್ ಸರ್ಚ್, ಹವಾಮಾನ ವರದಿಯಂಥ ಮಾಹಿತಿಗಳನ್ನು ಆ ಉಪಗ್ರಹದಲ್ಲಿ ಅಳವಡಿಸಿದ ವಾಹಕಗಳಿಂದ ಪಡೆಯಲಾಗುತ್ತಿದೆ. ಕಮ್ಯೂನಿಕೇಶನ್ಸ್ ಕೇಂದ್ರಿತ ಜಿಯೋಸಿಂಕ್ರನೈಝ್ ಉಪಗ್ರಹವು ಭೂಮಿ ಮೇಲಿನ ಯಾವುದೋ ಒಂದು ಭಾಗದಲ್ಲಿ ಅಡೆತಡೆಗಳಿಲ್ಲದೇ 36,000 ಕಿ.ಮೀ. ದೂರದಿಂದ ದೂರದರ್ಶನ, ಜಾಲತಾಣಗಳ ಬಗ್ಗೆ ಸಂಪರ್ಕವನ್ನು ನೀಡುತ್ತಿರುತ್ತದೆ. ಈ ಉಪಪಗ್ರಹವು ಆಕಾಶದಲ್ಲಿರುವ ಕಣ್ಣು ಎನ್ನುವಂತೆ ಆಕಾಶದಿಂದಲೇ ಎಲ್ಲವನ್ನೂ ಗಮನಿಸುತ್ತಿರುತ್ತದೆ ಎಂದು ಇಸ್ರೋ ಸಂಸ್ಥೆಯ ವಿಜುವಲ್ ಡಾಕ್ಯುಮೆಂಟೇಶನ್ ಮತ್ತು ಔಟ್ ರೀಚ್ ಘಟಕದ ಮುಖ್ಯಸ್ಥ ಪಿ.ವಿ.ಎನ್. ಮೂರ್ತಿ ಹೇಳಿದರು. ಅವರು ವಿಶ್ವ ವಿನಾಯಕ ನ್ಯಾಶನಲ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ ಆಶ್ರಯದಲ್ಲಿ ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‍ಸಿ ಸ್ಕೂಲ್ ವಠಾರದಲ್ಲಿ ಆಯೋಜಿಸಿದ ಇಸ್ರೋ ಬೆಂಗಳೂರು ಪ್ರಾಯೋಜಿತ ಎರಡು ದಿನಗಳ ‘ಸ್ಪೇಸ್ ಆನ್ ವೀಲ್ಸ್’ ವಿಜ್ಞಾನ ವಸ್ತು ಪ್ರದರ್ಶನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಅಂಜಲಿ ಆಸ್ಪತ್ರೆಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ವತಿಯಿಂದ ತುರ್ತು ಚಿಕಿತ್ಸೆ ಮತ್ತು ಆರೈಕೆ, ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳನ್ನು ಪ್ರಾರಂಭಿಸಲಾಗಿದ್ದು ಇಂದು ಲೋಕಾರ್ಪಣೆಗೊಳಿಸಲಾಯಿತು. ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ಹೊಸ ಆರೋಗ್ಯ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯ ಸೇವೆ ವಂಚಿತ ಪ್ರದೇಶಗಳಿಗೆ ವೈದ್ಯಕೀಯ ಪ್ರವೇಶವನ್ನು ವಿಸ್ತರಿಸುವ ಮಹತ್ವವನ್ನು ತಿಳಿಸಿದರು. ಈ ಪ್ರದೇಶದಲ್ಲಿ ಆರೋಗ್ಯ ಸೇವೆಯ ಬೆಳವಣಿಗೆ ಮತ್ತು ಹೊಸ ಸೇವೆಗಳು ಸಮುದಾಯದ ಮೇಲೆ ಬೀರುವ ಸಕಾರಾತ್ಮಕ ಪರಿಣಾಮದ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ವಿಶೇಷ ಆರೈಕೆ ನೀಡುವ ಮಹತ್ವದ ಬಗ್ಗೆ ಮಾತನಾಡಿದರು. ಅವರು ಈ ಉಪಕ್ರಮಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ಈ ಪ್ರದೇಶಕ್ಕೆ ವಿಶ್ವ ದರ್ಜೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ಅಂತಿಮವಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಪಕವಾಗಿ ಎದುರಿಸುವ ಕೊನೆಯ ಹಂತದಲ್ಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವಂತಹ ಮಕ್ಕಳುಗಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕೆಂದರು. ಕಳೆದ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ. 97 ರಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2024ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ. ಬಿ.ಎಸ್.ಸಿ ವಿಭಾಗದಲ್ಲಿ ಬನ್ನಾಡಿಯ ದಾಮೋದರ ಮತ್ತು ಲತಾ ಅವರು ಪುತ್ರ ಕೆದ್ಲಾಯ ಶ್ರೀಕೃಷ್ಣ ದಾಮೋದರ ಅವರಿಗೆ ಪ್ರಥಮ ರ‍್ಯಾಂಕ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮತ್ತು ಸುಲೋಚನಾ ಅವರು  ಪುತ್ರಿ ಸ್ಪೂರ್ತಿ ಜಿ.ಎಸ್ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ. ಬಿ.ಎ ವಿಭಾಗದಲ್ಲಿ ಕುಂಭಾಶಿಯ ಮನೋಹರ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮಿಥುನ ಪ್ರಭು ಅವರಿಗೆ ಪ್ರಥಮ ರ‍್ಯಾಂಕ್, ಕುಂದಾಪುರ ಮಂಗಲಪಾಂಡೆ ರಸ್ತೆಯ ಶಿವರಾಮ ಶೆಟ್ಟಿ ಮತ್ತು ಸರಸ್ವತಿ ಶೆಟ್ಟಿ ಅವರು ಪುತ್ರಿ ಸುಶ್ಮಿತಾ ಶೆಟ್ಟಿ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ. ಬಿ.ಸಿ.ಎ ವಿಭಾಗದಲ್ಲಿ  ಕಾಳಾವರದ ರಾಜು ಶೆಟ್ಟಿಗಾರ್ ಮತ್ತು ಸುನಂದಾ ಅವರ ಪುತ್ರಿ ರಕ್ಷಿತಾ ಅವರಿಗೆ ಪ್ರಥಮ ರ‍್ಯಾಂಕ್, ಮೇಲೆ ಹೊಸೂರು ಮುಳ್ಳಿಮನೆಯ ಸುಧಾಕರ ಶೆಟ್ಟಿ ಮತ್ತು ಭವಾನಿ ಅವರು ಪುತ್ರಿ ಮಾನಸ…

Read More