ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಎಸ್. ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಲಕ್ಷ್ಯ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಕುಂದಾಪುರ ವಲಯದ ಶಿಕ್ಷಣ ಸಂಯೋಜಕರು ಹಾಗೂ ತಾಲೂಕು ಎಸ್. ಎಸ್.ಎಲ್.ಸಿ ನೋಡೆಲ್ ಶೇಖರ್ ಪಡುಕೋಣೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಬದಲಾಗುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಹೊಂದಿಕೊಂಡು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಗುಣಮಟ್ಟದ ಫಲಿತಾಂಶವನ್ನು ಪಡೆಯಲು ನಿರಂತರ ಅಭ್ಯಾಸ, ಮನನ, ಆಸಕ್ತಿಯುತ ಕಲಿಕೆ ಪ್ರಮುಖ ವಾಗಿರುತ್ತದೆ ಆದ್ದರಿಂದ ಮುಂಬರುವ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಕಠಿಣ ಪರಿಶ್ರಮದಿಂದ ಪರೀಕ್ಷಾ ಭಯವನ್ನು ಬಿಟ್ಟು ಗುಣಮಟ್ಟದ ಫಲಿತಾಂಶವನ್ನು ಪಡೆಯಬೇಕು ಎಂದರು. ಪಾಲಕರು ಈ ದಿಸೆಯತ್ತ ತಮ್ಮ ಮಕ್ಕಳಿಗೆ ಸಂಪೂರ್ಣ ಸಹಕಾರವನ್ನು ನೀಡಿ ಮನೆಯಲ್ಲಿ ಪೂರಕ ಕಲಿಕಾ ವಾತಾವರಣವನ್ನು ನಿರ್ಮಿಸಿ ಮಕ್ಕಳನ್ನು ಹಂತ ಹಂತವಾಗಿ ಅವಲೋಕಿಸಿ ಅವರನ್ನು ಕಲಿಕೆಯತ್ತ ಮನವೊಲಿಸುವಂತೆ ಕಿವಿಮಾತು ಹೇಳಿದರು ಹಾಗೂ ಸದಾ ಗುಣಮಟ್ಟದ ಫಲಿತಾಂಶವನ್ನು ಪಡೆಯುತ್ತಿರುವ ಸಂಸ್ಥೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. | ಚಿತ್ರಗಳು – ದಿವಾಕರ ವಂಡ್ಸೆಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ.14 ರಿಂದ 16ರ ವರೆಗೆ ನಡೆಯಲಿರುವ ಮಕರ ಸಂಕ್ರಮಣ ಉತ್ಸವಕ್ಕೆ ಮಂಗಳವಾರ ಚಾಲನೆ ದೊರೆತಿದ್ದು, ಬೆಳಿಗ್ಗೆಯಿಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಹಬ್ಬದ ಸಂದರ್ಭ ಭಕ್ತರು ಸೇವಂತಿಗೆ, ಸಿಂಗಾರ ಹೂವನ್ನು ಬುಟ್ಟಿಯಲ್ಲಿಟ್ಟು ತಲೆಯಲ್ಲಿ ಹೊತ್ತು ಹರಕೆ ರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ಪದ್ಧತಿ ಇದ್ದು, ಅದರಂತೆ ಭಕ್ತರು ಸರತಿಸಾಲಿನಲ್ಲಿ ಬಂದು ದೇವರಿಗೆ ಹೂವು ಹರಕೆ ಅರ್ಪಿಸಿದರು. ಧನು ಸಂಕ್ರಮಣದಂದು ಕ್ಷೇತ್ರದ ಚಿಕ್ಕು ದೇವರ ಪಾತ್ರಿ ಇಲ್ಲಿನ ಚಕ್ರ ಉಪನದಿಯನ್ನು ದಾಟಿ ತುಳುನಾಡಿನ ಭಕ್ತರ ಮನೆಯಲ್ಲಿ ಮೈದರ್ಶನ ಮಾಡುತ್ತಾ ಕೊನೆಗೆ ಮಕರ ಸಂಕ್ರಮಣದಂದು ಕ್ಷೇತ್ರಕ್ಕೆ ಆಗಮಿಸುವ ಪದ್ಧತಿ ಇಂದಿಗೂ ನಡೆಯುತ್ತಾ ಬಂದಿದೆ. ಮಾರಣಕಟ್ಟೆ ಕ್ಷೇತ್ರವನ್ನು ಬಡಗಿನ ದೇವರೆಂದು ಭಕ್ತರು ನಂಬಿದ್ದಾರೆ. ಕುಂದಾಪುರ, ಬೈಂದೂರು ಸೇರಿದಂತೆ ತುಳುನಾಡಿನವರು ಭಕ್ತರು ಮಾರಣಕಟ್ಟೆ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಅಲಂಕಾರಗೊಂಡ ಮಾರಣಕಟ್ಟೆ ಪರಿಸರ:ಚಿತ್ತೂರು ಸ್ವಾಗತ ಗೋಪುರದ ತಿರುವಿನಿಂದ ಮಾರಣಕಟ್ಟೆ ದೇಗುಲದವರೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಂಗಳೂರು ಸಮೀಪ ಚಾಲಕನಿಲ್ಲದೇ ಬಸ್ ಚಲಿಸಿ ಕಾರಿಗೆ ಡಿಕ್ಕಿಯಾದ ಘಟನೆ ಸೋಮವಾರ ನಡೆದಿದೆ. ಸರ್ವಿಸ್ ಸೆಂಟರಿನಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್ ಚಾಲಕನೇ ಇಲ್ಲದೆ ಬಸ್ ಏಕಾಏಕಿಯಾಗಿ ಎರಡು ಸರ್ವಿಸ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ ದಾಟಿ ಕಾರಿಗೆ ಡಿಕ್ಕಿ ಹೊಡೆದಿದ್ದು. ಕಾರು ಅಪ್ಪಚ್ಚಿಯಾಗಿದೆ. ಈ ಅಪಘಾತವು ವಾಣಿಜ್ಯ ಸಂಕೀರ್ಣದ ಸಿ. ಸಿ. ಟಿ. ವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಚಾಲಕನಿಲ್ಲದ ಬಸ್ಸನ್ನು ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದು ಅದೃಷ್ಟವಷಾತ್ ಸಾರ್ವಜನಿಕರು ಇತರ ವಾಹನಗಳು ಪಾರಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ವಕ್ವಾಡಿ ಗುರುಕುಲ ಸಮೂಹ ಸಂಸ್ಥೆಯಲ್ಲಿ ಶಾಲಾ ಸಂಸ್ಥಾಪನಾ ದಿನ ಮತ್ತು ವಿವೇಕಾನಂದರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ದಿನದ ವಿಶೇಷ ಎಂಬಂತೆ ಶಾಲಾವರಣದಲ್ಲಿ ಎಲ್ಲರನ್ನೂ ಆಕರ್ಷಿಸುವಂತೆ ನಿಂತಿರುವ ಭರತ ಭೂಮಿಯ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದರ ಮೂರ್ತಿಗೆ ಹಾರವನ್ನು ಹಾಕಿ ಪುಷ್ಪನಮನ ಸಲ್ಲಿಸುವ ಮೂಲಕ ಯುವ ದಿನವನ್ನು ಆರಂಭಿಸಲಾಯಿತು. ವಿದ್ಯಾರ್ಥಿಗಳಿಗೆ ವಿವೇಕಾನಂದರ ಮಹತ್ವದ ಸಂದೇಶಗಳನ್ನು ಮನಮುಟ್ಟುವಂತೆ ತಿಳಿಸಲಾಯಿತು. ಜೊತೆಗೆ ವಿದ್ಯಾರ್ಥಿಗಳು ಹಾಡು ಹಾಡುವ ಮೂಲಕ ವಿವೇಕಾನಂದರ ಗುಣಗಾನ ಮಾಡಿದರು. ಪ್ರಾಥಮಿಕ ವಿಭಾಗದ ವಿದ್ಯಾರ್ಥಿ ವಿವೇಕಾನಂದರ ವೇಷ ಭೂಷಣದಿಂದ ಎಲ್ಲರ ಗಮನ ಸೆಳೆದನು. ಜೊತೆಗೆ ಸಂಸ್ಥಾಪನಾ ದಿನದ ಅಂಗವಾಗಿ ಶಾಲೆ ಬೆಳೆದು ಬಂದ ಹಾದಿಯ ಯಶಸ್ಸನ್ನು ಸಹ ಶಿಕ್ಷಕಿ ಸುಲಕ್ಷಣ ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯನಿರ್ವಾಹಕ ರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ವಿವೇಕಾನಂದರ ಧ್ಯೇಯವನ್ನು ನೀವು ನಿಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ತಿಳಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯುವ ಸಮೂಹ ಪ್ರತಿಯೊಂದು ರಾಷ್ಟ್ರಗಳ ದಿವ್ಯ ಸಂಪತ್ತು ಮತ್ತು ದೇಶದ ಆಶಯ ಕೂಡ ಎಂಬುದು ಯಾರು ಕೂಡ ಅಲ್ಲಗೆಳೆಯುವಂತಿಲ್ಲ. ಯುವ ಸಮೂಹದ ಶಕ್ತಿ, ಸಾಮರ್ಥ್ಯಗಳು ಒಂದು ದೇಶದ ಸವಾಂಗೀಣ ಅಭಿವೃದ್ಧಿಗೆ ಪೂರಕ. ಯುವಕರು ಆಧುನಿಕತೆ ಮತ್ತು ತಾಂತ್ರಿಕತೆಯ ಹರಿಕಾರರು ಹಾಗೂ ವಿಭಿನ್ನ ಕ್ಷೇತ್ರದಲ್ಲಿ ಕನಸುಗಳನ್ನು ಕಾಣುವ ಕನಸುಗಾರರು. ಆತ್ಮವಿಶ್ವಾಸ, ಧೈರ್ಯ, ಸ್ಥೈರ್ಯ ಮತ್ತು ಶ್ರಮಗಳ ಸಂಗಮವೇ ಯುವ ಸಮೂಹ. ಯುವ ಶಕ್ತಿಯ ನಿರ್ವಿವಾದಿತ ಸಂಕೇತವಾಗಿ ಬೆಳೆದವರು ಸ್ವಾಮಿ ವಿವೇಕಾನಂದರು ಎಂದು ಭಾರತೀಯ ಸೇನೆಯ ನಿವೃತ್ತ ಇಂಜಿನಿಯರ್ ಬೆಳ್ಳಾಲ ಗೋಪಿನಾಥ ರಾವ್ ಹೇಳಿದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳು ಗಂಗೊಳ್ಳಿ ಮತ್ತು ಬಾಲಚಂದ್ರ ನಾಯ್ಕನಕಟ್ಟೆ ಟ್ರಸ್ಟ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಶ್ರೀ ಸರಸ್ವತಿ ವಿದ್ಯಾನಿಧಿ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಸ್ವಾಮೀ ವಿವೇಕಾನಂದರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಹಿತ್ಯ ಅಥವಾ ಇನ್ಯಾವುದೇ ವಿಚಾರಗಳಿರಲಿ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡು ಪ್ರಸ್ತುತ ಪಡಿಸಿದಾಗಲೇ ಅದು ಸೌಂದರ್ಯವನ್ನು ಕಂಡುಕೊಳ್ಳುತ್ತದೆ. ನಿರಂತರ ಅಭ್ಯಾಸ ನಮ್ಮನ್ನು ಪರಿಪೂರ್ಣವಾಗಿಸುತ್ತದೆ ಎಂದು ನ್ಯಾಯವಾದಿ ರವಿಕಿರಣ್ ಮುರುಡೇಶ್ವರ ಅವರು ಅಭಿಪ್ರಾಯಪಟ್ಟರು. ಅವರು ಗುಜ್ಜಾಡಿ ನಾಯಕವಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ಪ್ರಶಸ್ತಿ ಫಲಕಗಳನ್ನು ಕುಂದಾಪುರದ ಆದರ್ಶ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ. ಆದರ್ಶ ಹೆಬ್ಬಾರ್ ಅನಾವರಣಗೊಳಿಸಿದರು. ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಶುಭ ಹಾರೈಸಿದರು. ಪ್ರೆಸ್ಟೀಜ್ ಪ್ಯಾಲೇಸ್ ಮಾಲೀಕ ಸುಭಾಷ್ ಶೆಟ್ಟಿ, ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಾನಪದ ಕಲಾ ತರಬೇತುದಾರ ರಮೇಶ್ ಕಲ್ಮಾಡಿ, ಡಿಪ್ಲೊಮ್ಯಾಟ್ ಬಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕತಾರಿನಲ್ಲಿರುವ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ (SIGTA) ಪ್ರದಾನʼ ಸಮಾರಂಭ 2024ರಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಸಮುದಾಯ ಸಮರ್ಥ ಸೇವಕ ಪ್ರಶಸ್ತಿಯನ್ನು ಇತ್ತೀಚಿಗೆ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಸಮುದಾಯದ ಅಭ್ಯುದಯಕ್ಕೆ ಅವರ ಕೊಡುಗೆ ಮುಂದುವರೆಯಲಿ ಎಂದು ಹಾರೈಸೋಣ. ಅವರು ಕತಾರಿನಲ್ಲಿ ಕಳೆದ 17 ವರ್ಷಗಳಿಗಿಂತ ಹೆಚ್ಚು ಕಾಲ ವಾಸಿಸುತ್ತಿದ್ದು ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಲ್ಲಿ. ತಮ್ಮನ್ನು ತಾವು ತೊಡಗಿಸಿಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿರುವರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗೋಳಿಯಂಗಡಿ ಸಮೀಪದ ಬೆಳ್ವೆ ಗ್ರಾಮದ ಕಾರಿಕೊಡ್ಲು ಕ್ರಾಸ್ ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿ ಹಾಗೂ ಇನೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಉದಯ್ ಹಾಗೂ ಗಾಯಗೊಂಡ ವ್ಯಕ್ತಿ ಕೃಷ್ಣ ಎಂದು ಗುರುತಿಸಲಾಗಿದೆ. ಕಾರಿಕೊಡ್ಲು ಕ್ರಾಸ್ ಹತ್ತಿರ ಸವಾರ ಉದಯ್ ಮತ್ತು ಸಹಸವಾರ ಕೃಷ್ಣ ಅವರು ಬೈಕ್ ನಿಲ್ಲಿಸಿಕೊಂಡು ಮಾತನಾಡುತ್ತಿರುವ ಹೊತ್ತಲ್ಲಿ ಗೋಳಿ ಯಂಗಡಿಯಿಂದ ಕಾಡಿಕೊಡ್ಲು ಕಡೆಗೆ ಸಾಗುತ್ತಿದ್ದ ಅತಿ ವೇಗ ಮತ್ತು ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದ್ದು, ಉದಯ್ ಅವರ ತಲೆಗೆ ಗಂಭೀರ ಏಟು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಸಹಸವಾರ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ನ್ನು ಶಂಕರನಾರಾಯಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದ. ಟಿಪ್ಪರ್ ಪರಿಶೀಲಿಸಿದಾಗ ಎರಡೂವರೆ ಯೂನಿಟ್ ಮರಳು ಪತ್ತೆಯಾಗಿದೆ. ಎಲ್ಲಿಂದಲೋ ಮರಳು ಕಳವು ಮಾಡಿ ಅಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಬೀಚ್ ಸಮೀಪ ಕಾರಿನಲ್ಲಿ ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಉಡುಪಿ ಸೆನ್ ಅಪರಾಧ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್, ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಸಜ್ಜಾದ್ ಮುಸ್ತಕೀಮ್ ಕೆವಾಕ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸೆನ್ ಅಪರಾಧ ದಳದ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್ , ದಿಕ್ಷೀತ್, ನಿಲೇಶ್, ಮಾಯಪ್ಪ ಗಡದೆ ಮತ್ತು ಸುದೀಪ್ ರವರ ತಂಡ ದಾಳಿ ನಡೆಸಿ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 15 ಗ್ರಾಂ 59 ಮಿಲಿ ಗ್ರಾಂ ತೂಕದ ಅಂದಾಜು ಮೌಲ್ಯ ರೂ. 78,000ದ ಎಂಡಿಎಂಎ ಪೌಡರ್, ವಶಕ್ಕೆ ಪಡೆದಿದ್ದಾರೆ. ಆಪಾದಿತರು ಬಳಸಿದ್ದ ಮೊಬೈಲ್ ಪೋನ್-5, ಅಂದಾಜು ಮೌಲ್ಯ ರೂ. 50,000/-, ಪಾರದರ್ಶಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ. ಹಾಗೂ ಬೆಂಗಳೂರಿನ ಸಪ್ನ ಬುಕ್ ಹೌಸ್ನ ಸಹಯೋಗದಲ್ಲಿ ನಡೆದ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯಿಲಿ ಅವರ ‘’ವಿಶ್ವಸಂಸ್ಕೃತಿ ಮಹಾಯಾನ’’ – ಸಂಪುಟ-2, ಗದ್ಯ ಮಹಾಕಾವ್ಯ ಲೋಕಾರ್ಪಣೆ ಸಮಾರಂಭ ಭಾನುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿ ಆವರಣದ ಡಾ. ವಿಎಸ್ ಆಚರ್ಯ ಸಭಾಭವನದಲ್ಲಿ ಜರುಗಿತು. ಮಹಾಕಾವ್ಯ ಲೋಕಾರ್ಪಣೆಗೊಳಿಸಿ ಮಾತನಾಡಿದ ಮೈಸೂರು ವಿವಿಯ ನಿವೃತ್ತ ಆಂಗ್ಲ ಪ್ರಾಧ್ಯಪಕ ಹಾಗೂ ಖ್ಯಾತ ವಿಮರ್ಶಕ ಪ್ರೋ ನಾಗಣ್ಣ, ಮೊಯಿಲಿಯವರ ಸಂಕಲ್ಪಕ್ಕೂ ಅದರ ಸಾಕ್ಷಾತ್ಕರಕ್ಕೂ ಅಂತರವೇ ಇರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಬರ್ಹಿಲೋಕದಲ್ಲಿ ಜನಕಲ್ಯಾಣದಲ್ಲಿ ತೊಡಗಿರುವಂತೆ, ಅಂತರದಂಗದಲ್ಲಿ ಹಲವಾರು ವಿಚಾರಗಳಿಗೆ ಅಕ್ಷರ ರೂಪಕೊಡುವಲ್ಲಿ ಧ್ಯಾನಸ್ಥರಾಗಿರುತ್ತಾರೆ. ಇವರು ಅಪರೂಪದ ಚೈತನ್ಯವೇ ಸರಿ. ವೀರಪ್ಪ ಮೊಯಿಲಿಯವರ ‘’ವಿಶ್ವಸಂಸ್ಕೃತಿ ಮಹಾಯಾನ’’ದ ಹೋಲಿಕೆ ಏನಾದರೂ ಇದ್ದರೆ, ಅಮೇರಿಕಾದ ಇತಿಹಾಸತಜ್ಞ ವಿಲ್ ಡ್ಯೂರಾಂಟ್ ಬರೆದಿರುವ ‘ನಾಗರೀಕತೆಯ ಕಥೆ’ ಎನ್ನುವ 11 ಸಂಪುಟಕ್ಕೆ ಸರಿಹೊಂದಬಲ್ಲದು. ಪ್ರಾಚ್ಛ…
