ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.09: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಜೊತೆಗೆ ರಾಜ್ಯ ಬಿಜೆಪಿ ವಲಯದಲ್ಲಿ ಯಾರಿಗೆಲ್ಲ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲು ಅವಕಾಶ ದೊರೆಯಲಿದೆ ಎಂಬ ಕುತೂಹಲವೂ ಹೆಚ್ಚುತ್ತಿದೆ. ಸೋಮವಾರ ಸಂಜೆ ಅಥವಾ ಮಂಗಳವಾರ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಆಕಾಂಕ್ಷಿಗಳ ಹಣೆಬರಹ ನಿರ್ಧಾರವಾಗಲಿದೆ. ಕಳೆದೊಂದು ವಾರದ ಬಳಿಕ ಉಡುಪಿ ಜಿಲ್ಲೆಯ ಬಿಜೆಪಿ ವಲಯದಲ್ಲಿ ರಾಜಕೀಯ ಲೆಕ್ಕಾಚಾರಗಳ ಬದಲಾಗಿದೆ. ಅಭ್ಯರ್ಥಿಗಳ ಗೆಲ್ಲುವ ಸಾಮರ್ಥ್ಯ, ವಯಸ್ಸು, ಜಾತಿ ಸಮೀಕರಣ, ಸಮೀಕ್ಷೆ ವರದಿ ಆಧಾರದ ಮೇಲೆ ಟಿಕೆಟ್ ಫೈನಲ್ ಆಗಲಿದೆ. ಜಿಲ್ಲೆಯ 5 ಕ್ಷೇತ್ರ ಪೈಕಿ ಇಬ್ಬರು ಬಂಟ, ಓರ್ವ ಬಿಲ್ಲವ, ಓರ್ವ ಮೊಗವೀರ ಹಾಗೂ ಒಬ್ಬರು ಬ್ರಾಹ್ಮಣ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸಲಾಗಿದೆ. ಈ ಪೈಕಿ ಸದ್ಯ ಕಾರ್ಕಳ ಹಾಗೂ ಕುಂದಾಪುರ ಕ್ಷೇತ್ರಗಳ ಅಭ್ಯರ್ಥಿ ಬಹುತೇಕ ಅಂತಿಮಗೊಂಡಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಬಳಿಕ ಬಿಜೆಪಿ ಅಭ್ಯರ್ಥಿಗೆ ಯಾರು ಎಂಬ ಪ್ರಶ್ನೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಘ ಸಂಸ್ಥೆಯನ್ನು ಕಟ್ಟುವುದಕ್ಕಿಂತ ಮುನ್ನಡಸಿಕೊಂಡು ಹೋಗುವುದೇ ಬಹುಮುಖ್ಯ. ಈ ನೆಲೆಯಲ್ಲಿ ಎರಡು ದಶಕ ಕಂಡ ಸಾಂಸ್ಕೃತಿಕ ಸಂಘಟನೆ ಸುರಭಿ ಅದೇ ಚೈತನ್ಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನಾರ್ಹ ಎಂದು ಕುಂದಾಪುರ ಶ್ರೀ ರಾಮ ಕ್ರೆಡಿಟ್ ಕೋ -ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗರಾಜ ಕಾಮಧೇನು ಹೇಳಿದರು. ಅವರು ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ 3 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಪ್ರತಿಭಾ ಪ್ರದರ್ಶನಕ್ಕೆ ಸೂಕ್ತವಾದ ವೇದಿಕೆ ಬೇಕಿದೆ. ಇಂತಹ ಸಂಸ್ಥೆಗಳ ಆ ಕೊರತೆಯನ್ನು ನೀಗಿಸಿದೆ ಎಂದರು. ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ಮಂಜುನಾಥ ಡಿ.ಕೆ ಹಾಗೂ ಚದುರಂಗ ಬಾಲ ಪ್ರತಿಭೆ ರಿತೇಶ್ ಆರ್.ಕೆ ಇವರನ್ನು ಸನ್ಮಾನಿಸಲಾಯಿತು. ಸುರಭಿಯ ಯಕ್ಷಗುರು ಪ್ರಶಾಂತ್ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಸುರಭಿ ಬೈಂದೂರು ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ರಾಜಕೀಯದಲ್ಲಿ ನಿರಂತರ ಸೋಲಬೇಕು ಅಥವಾ ಸಾಯಬೇಕು. ಅಲ್ಲಿಯ ಅಧಿಕಾರದ ರುಚಿ ಕಂಡವರು ರಾಜಕೀಯ ಬಿಡುವುದಿಲ್ಲ ಎಂಬ ಮಾತು ಜನಜನಿತ. ಬದುಕಿನ ಕೊನೆ ಗಳಿಗೆಯ ತನಕವೂ ರಾಜಕೀಯ ಸ್ಥಾನಮಾನಕ್ಕಾಗಿ ಹಪಹಪಿಸುವ ಕಾಲದಲ್ಲಿ ಗೌರವಯುತ ರಾಜಕೀಯ ನಿವೃತ್ತಿ ಘೋಷಿಸಿರುವ ಕುಂದಾಪುರ ಈ ಇಬ್ಬರು ನಾಯಕರು ರಾಜ್ಯ ರಾಜಕೀಯ ವಲಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆ ರಂಗೇರುತ್ತಿರುವ ಈ ಹೊತ್ತಿನಲ್ಲಿ ಮತ್ತೆ ಶಾಸಕರಾಗುವ ಎಲ್ಲಾ ಅವಕಾಶಗಳಿದ್ದರೂ ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಾಗೂ ಕಳೆದ ವರ್ಷ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ್ತೆ ಸ್ವರ್ಧಿಸುವ ಅವಕಾಶವಿದ್ದರೂ ಸ್ವರ್ಧಿಸದೇ ಉಳಿದ ಕೆ. ಪ್ರತಾಪಚಂದ್ರ ಶೆಟ್ಟಿ ಅವರದ್ದು ಮಾದರಿ ನಡೆಯೇ ಸರಿ. /ಕುಂದಾಪ್ರ ಡಾಟ್ ಕಾಂ ವರದಿ/ ಕೆ. ಪ್ರತಾಪಚಂದ್ರ ಶೆಟ್ಟಿ ಅವರು 1983ರಿಂದ 1999ರ ತನಕ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ನಾಲ್ಕು ಭಾರಿ ವಿಧಾನಸಭೆ ಹಾಗೂ 2004 ರಿಂದ 2022ರ ತನಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳನ್ನು ತಡೆದು, ಇವುಗಳ ವಿರುದ್ದ ತ್ವರಿತಗತಿಯಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸೀ ವಿಜಲ್ (cVIGIL) ಆಪ್ ನ್ನು ಚುನಾವಣಾ ಆಯೋಗ ಬಿಡುಗಡೆಗೊಳಿಸಿದೆ. ಚುನಾವಣಾ ಸಮಯದಲ್ಲಿ ಮತದಾರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಅಮಿಷಗಳಾದ ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದ ಪೋಸ್ಟರ್ ಗಳು ಮತ್ತು ಬ್ಯಾನರ್ ಬಳಕೆ, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ ಹಾಗೂ ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿ ವಿಜಿಲ್ ಆಪ್ ನಲ್ಲಿ ಅದರ…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಜೆಸಿಐ ಬೈಂದೂರು ಸಿಟಿಯ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಕಾರ್ಯಕ್ರಮವು ದೊಂಬೆ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಇತ್ತೀಚಿಗೆ ನಡೆಯಿತು. ಈ ಕಾಯಕ್ರಮದ ಅಧ್ಯಕ್ಷತೆಯನ್ನು ಸಿಟಿ ಜೆಸಿಐ ಅಧ್ಯಕ್ಷ ನರೇಂದ್ರ ಶೇಟ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಜು ಡಿ., ಅಧ್ಯಕ್ಷರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ ಉಪ್ಪುಂದ ವಹಿಸಿ ಜೆಸಿಐ ಬಗ್ಗೆ ಮೆಚ್ಚುಗೆಯ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಆಗಿ ಸಮಾಜ ಸೇವಕಿ ಹಾಗೂ ಎಸ್.ಎಲ್.ಆರ್.ಎಂ ಘಟಕದ ಮೇಲ್ವಿಚಾರಕಿ ಸುನೀತಾ ಮರವಂತೆ ಹಾಗೂ ಪೌರಕಾರ್ಮಿಕ ಹರೀಶ ಗಣಪ ಕೊರಗ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅದ್ಯಕ್ಷೆ ಸವಿತಾ ದಿನೇಶ್ ಗಾಣಿಗ ಹಾಗೂ ಪೂರ್ವಧ್ಯಕ್ಷರು. ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಸತೀಶ್ ಎಂ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿರಾಜ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಆದಂ ಗುಲ್ವಾಡಿ, ರಾಜೇಂದ್ರ ಉರಾಳ್ ಪ್ರಾಕ್ತನ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಲೇಜಿನ ಪ್ರಾಧ್ಯಾಪಕ ಪ್ರೊ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಎ.8: ಮೂಡ್ಲಕಟ್ಟೆ ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಇಸ್ರೋ ಮಾಜಿ ವಿಜ್ಞಾನಿ ಡಾ. ಕೆ. ಗಣೇಶ ರಾಜ್ ಅವರಿಂದ ಐ.ಎಂ. ಜಯರಾಮ ಶೆಟ್ಟಿ ಸ್ಮರಣಾರ್ಥ ಭೂಕಂಪ ಹಾಗೂ ಸಮಾಜದ ಮೇಲೆ ಅದರ ಪರಿಣಾಮ ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. ಈ ವೇಳೆ ಡಾ. ಕೆ. ಗಣೇಶ ರಾಜ್ ಅವರು ಮಾತನಾಡಿ, ಜಗತ್ತಿನ ವಿವಿಧೆಡೆ ನಡೆದ ದೊಡ್ಡ ಭೂಕಂಪಗಳು ಹಾಗೂ ಅವುಗಳಿಂದ ಸಮಾಜದ ಮೇಲೆ ಆದ ನಷ್ಟ ಮತ್ತು ದುಷ್ಪರಿಣಾಮಗಳನ್ನು ಬಗ್ಗೆ ಮಾತನಾಡಿದರು. ಪ್ರಾಕೃತಿಕವಾಗಿ ಸಂಭವಿಸುವ ಭೂಕಂಪನವನ್ನು ತಡೆಯಲಾಗದಿದ್ದರೂ, ಅದರಿಂದ ಆಗುವ ಪರಿಣಾಮಗಳ ತೀವ್ರತೆಯನ್ನು, ಕಟ್ಟಡಗಳನ್ನು ಸರಿಯಾಗಿ ಕಟ್ಟುವುದರ ಮೂಲಕ ಕಡಿಮೆಗೊಳಿಸಲು ಸಾಧ್ಯವಿದೆ ಎಂದರು. ಈ ದಿಸೆಯಲ್ಲಿ ಜಪಾನ್ ದೇಶದ ಮಾದರಿ ಅನುಕರಣೀಯ. ನಮ್ಮ ಕರವಾಳಿಯು ಸುರಕ್ಷಿತ ವಲಯದಲ್ಲಿರುವುದರಿಂದ ತುಂಬಾ ಚಿಂತಿಸುವ ಅಗತ್ಯವಿಲ್ಲ ಆದರೆ ಕಟ್ಟಡ ನಿರ್ಮಾಣ ಸಮಯದಲ್ಲಿ ಅಗತ್ಯಕ್ರಮಗಳನ್ನು ತೆಗೆದುಕೊಳ್ಳವುದು ಒಳ್ಳೆಯದು ಎಂದರು. ಐ.ಎಂ.ಜೆ ಸಂಸ್ಥೆಗಳ ಮುಖ್ಯಸ್ಥರಾದ ಸಿದ್ಧಾರ್ಥ ಜೆ.…
ಕುಂದಾಪ್ರ ಡಾಟ್ ಕಾಂ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕೂಸಳ್ಳಿ ಫಾಲ್ಸ್‌ನಲ್ಲಿ ಶುಕ್ರವಾರ ಸಂಜೆ ಈಜುವ ಸಂದರ್ಭ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಶನಿವಾರ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್ ಕೋರ್ಸ್ ಕಲಿಯುತ್ತಿದ್ದ. ಶುಕ್ರವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರಾದ ಕಿರ್ತನ್ ದೇವಾಡಿಗ, ಅಕ್ಷಯ್ ಆಚಾರಿ, ಆಲ್ವಿನ್, ಧರಣ್, ರೆಯಾನ್ ಜೊತೆಗೆ ಗುರುವಾರ ಬೈಂದೂರಿಗೆ ಬಂದಿದ್ದು, ಅಕ್ಷಯ್ ಆಚಾರಿ ಮನೆಯಲ್ಲಿ ಎಲ್ಲರೂ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕಿನಲ್ಲಿ ಕೊಸಳ್ಳಿ ಫಾಲ್ಸ್‌ಗೆ ಹೋಗಿದ್ದರು. ಚಿರಾಂತ್ ಶೆಟ್ಟಿಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ಈಜಲು ನೀರಿಗಿಳಿದರೇ, ಉಳಿದವರು ದಡದಲ್ಲಿಯೇ ಕುಳಿತಿದ್ದರು. ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ…
ಕುಂದಾಪ್ರ ಡಾಟ್ ಕಾಂ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕೂಸಳ್ಳಿ ಫಾಲ್ಸ್‌ಗೆ ಸ್ನೇಹಿತರೊಂದಿಗೆ ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಈಜುವ ಸಂದರ್ಭ ಮುಳುಗಿ ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್ ಕೋರ್ಸ್ ಕಲಿಯುತ್ತಿದ್ದ. ಶುಕ್ರವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರಾದ ಕಿರ್ತನ್ ದೇವಾಡಿಗ, ಅಕ್ಷಯ್ ಆಚಾರಿ, ಆಲ್ವಿನ್, ಧರಣ್, ರೆಯಾನ್ ಜೊತೆಗೆ ಗುರುವಾರ ಬೈಂದೂರಿಗೆ ಬಂದಿದ್ದು, ಅಕ್ಷಯ್ ಆಚಾರಿ ಮನೆಯಲ್ಲಿ ಎಲ್ಲರೂ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕಿನಲ್ಲಿ ಕೊಸಳ್ಳಿ ಫಾಲ್ಸ್‌ಗೆ ಹೋಗಿದ್ದರು. ಚಿರಾಂತ್ ಶೆಟ್ಟಿಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ಈಜಲು ನೀರಿಗಿಳಿದರೇ, ಉಳಿದವರು ದಡದಲ್ಲಿಯೇ ಕುಳಿತಿದ್ದರು. ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮೇ 10ರಂದು ದಿನಾಂಕ ನಿಗದಿಯಾಗಿದ್ದು, ವ್ಯವಸ್ಥಿತ ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮತದಾನದ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಪ್ಯಾರಾ ಮಿಲಿಟರಿ ತುಕಡಿಗಳು, ಸಿ.ಆರ್.ಪಿ.ಎಫ್, ಪೊಲೀಸರು, ಹೋಂ ಗಾರ್ಡ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದೆ. ಜನರಿಗೆ ನಿರ್ಭೀತ ಚುನಾವಣೆಯ ಸಂದೇಶ ಸಾರುವ ಸಲುವಾಗಿ ಚುನಾವಣೆಯ ಭದ್ರತೆಗಾಗಿ ನಿಯೋಜನೆಗೊಂಡಿರುವ ಪ್ಯಾರಾ ಮಿಲಿಟರಿ ತುಕಡಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕಂಡ್ಲೂರು ಹಾಗೂ ಬೈಂದೂರು ಠಾಣಾ ವ್ಯಾಪ್ತಿಯ ಬೈಂದೂರು ಮತ್ತು ಶಿರೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು. ಕಂಡ್ಲೂರು ಭಾಗದಲ್ಲಿ ನಡೆದ ಪಥ ಸಂಚಲನದ ವೇಳೆ ಕುಂದಾಪುರ ಗ್ರಾಮಾಂತರ ಪೊಲೀಸ್ ವೃತ್ತನಿರೀಕ್ಷಕ ಮಹಾಬಲೇಶ್ವರ ನಾಯ್ಕ್, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಗ್ರಾಮಾಂತರ ಠಾಣೆ ಪಿಎಸ್ಐ ಪವನ್ ನಾಯಕ್, ಕ್ರೈಂ ಪಿಎಸ್ಐ ನೂತನ, ಶಂಕರನಾರಾಯಣ ಪಿಎಸ್ಐ ಭರತ್, ಸುದರ್ಶನ್,…
