ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಗಿರಿರಾಜ್ ಭಟ್ ಅವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ ಸಂಪೂರ್ಣ ಜ್ಞಾನ, ವ್ಯಕ್ತಿತ್ವ, ಸಾಮರ್ಥ್ಯ ಮತ್ತು ಕೌಶಲ್ಯವನ್ನು ಸಂದರ್ಶನಕಾರರಿಗೆ ಮನದಟ್ಟು ಮಾಡಿಸುವಂತಿರಬೇಕು” ಎಂದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಪ್ಲೇಸ್ಮೆಂಟ್ ಆಫೀಸರ್ ಸುರೇಶ್ ಕಾಮತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಜಯಲಕ್ಷ್ಮಿ ಸ್ವಾಗತಿಸಿ, ವೆಂಕಟೇಶ್ ಶೆಟ್ಟಿ ವಂದಿಸಿದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಬಿ.ಸಿ.ಎ ಅಂತಿಮ ವರ್ಷದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ 250 ಕಿ.ಮೀನ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವು ನಡೆಯಿತು. ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ನಡೆಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸರಕಾರಿ ಪ್ರೌಢಶಾಲೆ ಸಾಲೆತ್ತೂರು ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಕಂಡ್ಲೂರು ಮಾತನಾಡಿ, ಇಂದಿನ ಯುವ ಜನಾಂಗ ದುಶ್ಚಟಗಳಿಗೆ ದಾಸರಾಗದೇ, ಅತ್ಯುತ್ತಮ ಹವ್ಯಾಸವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ವಿದ್ಯೆಯೊಂದಿಗೆ ಕ್ರೀಡೆ ಸಹ ಮುಖ್ಯ ಎಂಬುದನ್ನು ಅರಿತು ಬದುಕಿನ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಾ ತಮ್ಮ ಕಾರ್ಯ ಸಾಧನೆಗಳ ಮೂಲಕ ಪ್ರಸಿದ್ದಿ, ಜನಪ್ರೀತಿಯನ್ನು ಪಡೆಯುವಂತಾಗಲಿ ಎಂದು ಆಶಿಸಿದರು. ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯಾದ್ಯಂತ ಆಯೋಜಿಸಲಾದ ಮಾನವ ಸರಪಳಿಗೆ ಭಾನುವಾರ ಜಿಲ್ಲಾದ್ಯಂತ ಏಕಕಾಲದಲ್ಲಿ ಚಾಲನೆ ದೊರೆಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿಯೂ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ತನಕ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ ಪ್ರತಿ ಗ್ರಾಮ ವ್ಯಾಪ್ತಿ, ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಕಯಲ್ಲಿ ಮಾನವ ಸರಪಳಿ ರಚಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಾಡಗೀತೆಯಿಂದ ಆರಂಭಗೊಂಡು ಸಂವಿಧಾನ ಪ್ರಸ್ತಾವನೆ ಓದುವುದು, ಮಾನವ ಸರಪಳಿಗೆ ಕೈ ಹಿಡಿದು ನಿಂತ ಬಳಿಕ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ಬಳಿಕ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು. ಕುಂದಾಪುರದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಪುರಸಭೆ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24 ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವೀರೇಶ್ ಖಾರ್ವಿ, ಶಮಿತ್ ಖಾರ್ವಿ, ಶರಣ್ ಎಸ್. ಪೂಜಾರಿ, ಯುವರಾಜ್ ಖಾರ್ವಿ, ಪ್ರೀತೇಶ್ ಖಾರ್ವಿ, ಕಾರ್ತಿಕ್ ಖಾರ್ವಿ, ತರುಣ್ ಖಾರ್ವಿ ಹಾಗೂ ಧನುಷ್ ಖಾರ್ವಿ. ನಿತಿನ್ ರೆಬೆರೋ ಮತ್ತು ವಿಶ್ವಾಸ್ ತಂಡವನ್ನು ಪ್ರತಿನಿಧಿಸಿದ್ದರು. ಶಮಿತ್ ಖಾರ್ವಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ತರಬೇತಿ ನೀಡಿದ್ದರು. ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಶು ಆಹಾರ ಉತ್ಪನ್ನಗಳ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದ್ದು, ಇದು ಹೈನುಗಾರರಿಗೆ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹಾಗೂ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಮೇಕೊಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಸಭಾಭವನದಲ್ಲಿ ಶನಿವಾರ ನಡೆದ ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ, ಕರು ಸಾಕಾಣಿಕೆ ಯೋಜನೆಯ ನೋಂದಾಯಿತ ಕರುಗಳ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಹಾಲು ಉತ್ಪಾದಕರ ಸಹಕಾರಿ ಸಂಘವು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಸುಮಾರು 70ಲಕ್ಷ ಸ್ಥಿರಾಸ್ತಿಯನ್ನು, ಸುಮಾರು 20ಲಕ್ಷ ರೂ. ನಿರಖು ಠೇವಣೆಯನ್ನು ಹೊಂದಿದೆ. ಕಳೆದ ಸಾಲಿನಲ್ಲಿ ಹಾಲು ಉತ್ಪಾದನೆಗಾಗಿ ಸುಮಾರು 2.28ಕೋಟಿ ರೂ. ಒಕ್ಕೂಟದಿಂದ ಸಂದಾಯವಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಆರಕ್ಷಕ ಠಾಣೆ ಅಲ್ಲಿ ಆಯೋಜಿಸಿದ ತೆರೆದ ಮನೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾನೂನಿನ ಮಾಹಿತಿಯನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಬೈಂದೂರು ಆರಕ್ಷಕ ಠಾಣೆಯ ಸಬ್ಇನ್ಸ್ಪೆಕ್ಟರ್ ತಿಮ್ಮೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನಿನ ಅರಿವಿನ ಮಾಹಿತಿಯ ಮನವರಿಕೆ ಮಾಡಿಸಿಕೊಟ್ಟರು. ವಿದ್ಯಾರ್ಥಿಗಳು ಪೊಲೀಸ್ ಠಾಣಾ ಕಾರ್ಯವೈಖರಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ವಿಷಯ ಸಂಗ್ರಹಿಸಿಕೊಂಡರು.ತದನಂತರ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ನೇರವಾಗಿ ನೋಡಿ ಅರ್ಥೈಸಿಕೊಂಡರು ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುಬ್ರಹ್ಮಣ್ಯ ಮತ್ತು ವಿಶ್ವನಾಥ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆ.12 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾರೈಸಿದರು. ಅವರು ಅಂದು ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹು ಭಾಷೆ, ಬಹು ಕಲೆ – ಸಂಸ್ಕೃತಿಯ ಈ ಕರಾವಳಿ ಭಾಗದಲ್ಲಿ ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ…
