ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚೆಗೆ ಬೈಂದೂರು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಗೋಕಳ್ಳತನ ಹೆಚ್ಚಾಗಿ ನಡೆಯುತ್ತಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಗೋ ಪ್ರೇಮಿಗಳೊಂದಿಗೆ ಸೇರಿ ಬೀದಿಗಿಳಿದು ಹೋರಾಟಮಾಡಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆಗೆ ಬೇಕಾದ ಸಹಕಾರವನ್ನು ನೀಡಲು ಸಂಘವು ಬದ್ಧರಾಗಿದ್ದು ವ್ಯವಸ್ಥಿತವಾಗಿ ನಡೆಯುತ್ತಿರುವ ಈ ಗೋಕಳ್ಳತನವನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಸುಧಾಕರ ಶೆಟ್ಟಿ ನೆಲ್ಯಾಡಿ, ಜಗದೀಶ ಕೊಲ್ಲೂರು, ಸುಕುಮಾರ ಹೆಮ್ಮಾಡಿ, ರಾಘವೇಂದ್ರ ಹೊಸಾಡು, ಗಿರೀಶ್ ಶಿರೂರು, ಸತೀಶ್ ಜೋಗಿ ಕಟ್ಬೆಲ್ತೂರು, ಕಿರಣ್ ತ್ರಾಸಿ, ಪ್ರಶಾಂತ ಪಡುವರಿ, ಗುರುರಾಜ್ ಕಲ್ಲುಕಂಠ, ಜಗದೀಶ್ ಆಲಂದೂರು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರವಾಸೋದ್ಯಮದಲ್ಲಿ ಬೈಂದೂರು ಕ್ಷೇತ್ರದಲ್ಲಿರುವ ವಿಪುಲ ಅವಕಾಶಗಳನ್ನು ಜಗತ್ತಿಗೆ ತೆರೆದುಕೊಳ್ಳುವಂತೆ ಮಾಡುವ ಉದ್ದೇಶದಿಂದ ನಾವು ಗಟ್ಟಿ ಹೆಜ್ಜೆ ಇರಿಸಿದ್ದು ಅದರ ಒಂದು ಭಾಗವಾಗಿ ಎಕ್ಸ್ಪ್ಲೋರ್ ಬೈಂದೂರು ಎಂಬ ಕಾರ್ಯಕ್ರಮವನ್ನು ಪರಿಚಯಿಸಿದ್ದೇವೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನ ಪ್ರವಾಸೋದ್ಯಮ ಕ್ಷೇತ್ರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಎಕ್ಸ್ಪ್ಲೋರ್ ಬೈಂದೂರು ಎಂಬ ಕಾರ್ಯಕ್ರಮಕ್ಕೆ ಶನಿವಾರ ಸ್ಕೂಬಾ ಡೈವಿಂಗ್ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರವಾಸಿಗರು ನಮ್ಮೂರಿಗೆ ಭೇಟಿ ನೀಡಿದಷ್ಟು ಊರಿನ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರವಾಸಿಗರನ್ನು ಗೌರವದಿಂದ ಕಾಣುತ್ತಾ, ಸುಂದರ ವಾತಾವರಣವನ್ನು ಕಟ್ಟಿಕೊಡುತ್ತಾ ನಾವು ಬೆಳೆಯುವ ಕಲ್ಪನೆ ನಮ್ಮದಾಗಿದ್ದು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು. ಬೈಂದೂರಿನ ಸೋಮೇಶ್ವರ ತೀರದ ನೇರಕ್ಕೆ ಸಮುದ್ರ ಮಧ್ಯದ ನಾಯ್ಕನ ಕಲ್ಲು ಪ್ರದೇಶದ ಬಳಿ ಸಮುದ್ರದಾಳದಲ್ಲಿ ಸ್ಕೂಬಾ ಡೈವಿಂಗ್ ಮೂಲಕ ನೀರಿನಲ್ಲಿ ತೇಲಾಡುತ್ತಾ ಎಕ್ಸ್ಪ್ಲೋರ್ ಬೈಂದೂರು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮೃದ್ಧ ಬೈಂದೂರು ಎಂಬ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಭಾರತ್ ತೋಡೋ ಯಾತ್ರೆ ಎಂದಿರುವುದು ಹಾಸ್ಯಾಸ್ಪದ. ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದ ಬಿಜೆಪಿ ಇಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆಯನ್ನು ತಿರುಚಿ ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಸರಿಯಾದ ನಡೆಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಸಂಸದ ಡಿ. ಕೆ ಸುರೇಶ್ ರವರು ದೇಶದ ಐಕ್ಯತೆ, ಸಮಗ್ರತೆ, ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರದ ಕುರಿತು ನೀಡಿರುವ ಹೇಳಿಕೆಯನ್ನು ಇಂದು ಬಿಜೆಪಿ ಅದನ್ನು ತಿರುಚಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಅನುದಾನದ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ಸಮಾನ ಪಾಲು ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಉಳಿದ ರಾಜ್ಯಗಳಿಗೆ ಕಡಿಮೆ ಅನುದಾನ ನೀಡುತ್ತಿದೆ. ಈ ತಾರತಮ್ಯ ನೀತಿಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರಾವಳಿಗರ ಒಕ್ಕೂಟ ರಿ. ಬೆಂಗಳೂರು ಇವರ ಆಶ್ರಯದಲ್ಲಿ ಅದ್ದೂರಿ ಕಾರ್ಯಕ್ರಮವೊಂದು ಕಳೆಗಟ್ಟುತ್ತಿದೆ. ಕರಾವಳಿಯ ಸೊಗಡು, ಸಂಸ್ಕೃತಿ, ಖಾದ್ಯ, ವ್ಯಕ್ತಿ ವಿಶೇಷಗಳನ್ನೊಳಗೊಂಡು ಸಮಾರಂಭ ‘ನಮ್ಮ ಕರಾವಳಿ ಉತ್ಸವ’ ಜೆ.ಪಿ ನಗರದ ಆರ್.ಬಿ.ಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ಫೆಬ್ರುವರಿ 25 ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9ರ ವರೆಗೆ ನಡೆಯಲಿದೆ. ಬೆಳಿಗ್ಗೆಯಿಂದ ರಾತ್ರಿಯ ತನಕ ಸಾಗುವ ಕಾರ್ಯಕ್ರಮದಲ್ಲಿ ಕರಾವಳಿಯ ಸೊಗಬನ್ನು ಒಳಗೊಂಡ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ, ಸ್ಪರ್ಧೆ, ಗ್ರಾಮೀಣ ಕ್ರೀಡೆಗಳು ನಡೆಯಲಿದ್ದು, ಕರಾವಳಿಯ ಸ್ವಾದಿಷ್ಟ ಖಾದ್ಯಗಳ ಆಹಾರ ಮೇಳ, ಕರಾವಳಿ ಸೊಗಡಿನ ಅಪರೂಪದ ವಸ್ತುಗಳ ಮಾರಾಟ ಮಳಿಗೆ , ಬೆಂಗಳೂರಿನಲ್ಲಿರುವ ಕಡಲೂರಿಗರ ಮಹಾ ಸಮ್ಮಿಲನ ನಡೆಯಲಿದ್ದು, ಕರಾವಳಿಯ, ಸಾಧಕರು, ಜನನಾಯಕರು, ಉದ್ಯಮಿಗಳು , ಕರಾವಳಿಯ ಸಿನಿ ತಾರೆಯರು ಭಾಗವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಗರು, ನಮ್ಮ ಕರಾವಳಿ ಉತ್ಸವಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರಾವಳಿಗರ ಒಕ್ಕೂಟ ವಿನಂತಿಸಿದೆ. ಮಾಹಿತಿಗಾಗಿ:ಚರಣ್ ಬೈಂದೂರು:9964605360ಸದಾಶಿವ ಏ:93412 53814ಕರುಣಾಕರ್ ದೇವಾಡಿಗ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಒಂಭತ್ತನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024 ಪ್ರದಾನ ಸಮಾರಂಭ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು. ಉದ್ಯಮಿ ನಾಗಭೂಷಣ ರಮೇಶ್ ಐತಾಳ್ ಉಪ್ಪಿನಕುದ್ರು ಅಕಾಡೆಮಿ ಕಟ್ಟಡದ ಆವರಣದಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಹಾಗೂ ಏಣಿಯನ್ನು ಕೊಡುಗೆಯಾಗಿ ನೀಡಿ ಉದ್ಘಾಟಿಸಿದರು. ಮಾಹೆಯ ಮಾಜಿ ಡೆಪ್ಯೂಟಿ ರಿಜಿಸ್ಟ್ರಾರ್ ಟಿ. ರಂಗ ಪೈ ದೀಪ ಬೆಳಗಿಸಿ, ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2024 ನ್ನು ಹಿರಿಯ ಯಕ್ಷಗಾನ ಚಂಡೆ ಕಲಾವಿದ ಏಳಜಿತ ಸದಾನಂದ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರುರವರು ಅಧ್ಯಕ್ಷ ಸ್ಥಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಪಿ.ವಿ.ಭಂಡಾರಿ, (ವೈದ್ಯಕೀಯ ಸಲಹೆಗಾರರು ಹಾಗೂ ಮನೋರೋಗ ತಜ್ಞರು, ಡಾ ಬಿ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ,, ಉಡುಪಿ) ಶಿವಾನಂದ ಪೈ ( ಲೆಕ್ಕ ಪರಿಶೋಧಕರು, ಮಂಗಳೂರು) ಹಾಗೂ ಅಕಾಡೆಮಿಯ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮದ ಪ್ರಗತಿಗೆ ಪ್ರತಿಯೊಬ್ಬ ಗ್ರಾಮ ಪಂಚಾಯತ್ ಸದಸ್ಯರು ಶಕ್ತಿಮೀರಿ ಶ್ರಮಿಸಿದ್ದು, ಪಿಡಿಒ ಹಾಗೂ ಸಿಬ್ಬಂದಿಗಳ ಮತ್ತು ಗ್ರಾಮಸ್ಥರ ಸಹಕಾರ ಕೂಡ ಉತ್ತಮವಾಗಿ ದೊರೆತಿದೆ. ಇದರಿಂದಾಗಿ ಕಳೆದ ಐದು ವರ್ಷಗಳಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡುವಂತಾಗಲಿ ಎಂದು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಶುಭಾಶಂಸನೆಗೈದರು. ಗ್ರಾಪಂ ಪಿಡಿಒ ಉಮಾಶಂಕರ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ ಮತ್ತು ಅಕ್ಕಮ್ಮ ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವ ಧರ್ಮ ಎಲ್ಲಕ್ಕಿಂತಲೂ ಶ್ರೇಷ್ಠವಾಗಿದ್ದು, ಪ್ರತಿಯೊಬ್ಬರೂ ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದ್ವೇಷ ಭಾವನೆ ದೂರೀಕರಿಸಿ ಬದುಕಿರುವಷ್ಟು ದಿನ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಭಾವೈಕ್ಯತೆಯಿಂದ ಬಾಳುವಂತಾಗಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಕಲ್ಲಾಗರ ಹೇಳಿದರು. ಇಲ್ಲಿನ ನಾಕಟ್ಟೆ ಮಸೀದಿ ಆವರಣದಲ್ಲಿ ಜಮೀಯ್ಯತುಲ್ ಫಲಾಹ್ ಬೈಂದೂರು ಘಟಕ ಆಯೋಜಿಸಿದ ಖದೀಜತುಲ್ ಕುಬ್ರಾ ಮಸೀದಿ ಸಹಯೋಗದಲ್ಲಿ ನಡೆದ ’ನಮ್ಮೂರ ಮಸೀದಿ ನೋಡಬನ್ನಿ’ ಎಂಬ ವಿನೂತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೇದ ಓದಿದರೆ ಸಾಲದು ವೇದನೆ ಅರಿಯಬೇಕು. ಅಪನಂಬಿಕೆ, ತಪ್ಪು ಮಾಹಿತಿ ಹಾಗೂ ಅವಿಶ್ವಾಸದಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಬದುಕು ತುಂಬಾ ಚಿಕ್ಕದಾಗಿದ್ದು, ನಾವೆಲ್ಲರೂ ಭಾರತೀಯರು ಎಂಬ ನೆಲೆಯಲ್ಲಿ ಪರಸ್ಪರ ಪ್ರೀತಿ, ನಂಬಿಕೆ, ಸಾಮರಸ್ಯ ಹಾಗೂ ಸಹೋರತ್ವದಿಂದ ನಮ್ಮ ಭಾರತ ದೇಶದಲ್ಲಿ ಸಹಬಾಳ್ವೆ ನಡೆಸುವಂತಾಗಬೇಕು. ಒಂದೊಂದು ಧರ್ಮದಲ್ಲಿ ಒಂದೊಂದು ಆಚರಣೆ, ಸಂಪ್ರದಾಯವಿದ್ದು, ಅನ್ಯ ಧರ್ಮಕ್ಕೂ ನಾವು ಗೌರವಿಸುವ ಭಾವನೆ ನಮ್ಮಲ್ಲಿರಬೇಕು. ಮಂದಿರ, ಮಸೀದಿ, ಚರ್ಚ್ಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 25 ವರ್ಷಗಳ ಸಂವತ್ಸರಗಳನ್ನ ಪೂರೈಸಿದ ಅಂಗವಾಗಿ ಆಯೋಜಿಸಲಾದ ರಜತ ಮಹೋತ್ಸವದ ಸಮಾರೋಪ ಸಮಾರಂಭವು ಇತ್ತಿಚಿಗೆ ಜರುಗಿತು. ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಾಜಿ ಸಂಪಾದಕರಾದ ಡಾ. ರೊನಾಲ್ಡ್ ಫೆರ್ನಾಂಡಿಸ್ ಕಾರ್ಯಕ್ರಮಕ್ಕೆ ವೈವಿಧ್ಯಮಯವಾಗಿ ಚಾಲನೆ ನೀಡಿ ರೌಪ್ಯೋತ್ಸವದ ನೆನಪಿನಲ್ಲಿ ಸಿದ್ದಗೊಂಡ “ರೌಪ್ಯಯಾನ” ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರನಾರಾಯಣ ತಾಲೂಕು ರಚನಾ ಹೋರಾಟ ಸಮಿತಿಯ ಸಂಚಾಲಕರಾದ ಚಿಟ್ಟೆ ರಾಜಗೋಪಾಲ್ ಹೆಗ್ಡೆ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಪಿ. ಜಗನ್ನಾಥ ಶೆಟ್ಟಿ, ಉಳ್ಳೂರಿನ ಆನಂದ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕರಾದ ಚಂದ್ರಶೇಖರ್ ಶೆಟ್ಟಿ, ಸಂಸ್ಥೆಯ ಸ್ಥಾಪಕ ದ್ವಾಯರಾದ ರೆನೀಟ ಲೋಬೋ ಹಾಗೂ ಶಮಿತ ರಾವ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಯಟ್ ಹಿರಿಯ ಉಪನ್ಯಾಸಕರಾದ ಅಶೋಕ್ ಕಾಮತ್ ವಹಿಸಿದ್ದರು. ಈ ಸಂದರ್ಭ ಸಹಕರಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು. ಅತಿಥಿಗಳನ್ನು ಬೇಬಿ ಸ್ವಾಗತಿಸಿದರೆ, ಗಣಿತ ಶಿಕ್ಷಕರಾದ ಜಗದೀಶ್ ವಂದಿಸಿದರು. ಇಂಗ್ಲೀಷ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ಬೆಂಗಳೂರು ಮತ್ತು ಚಂದನ ವಾಹಿನಿ (ಡಾ. ನಾ. ಸೋಮೇಶ್ವರ ನೆಡೆಸುವ ಥಟ್ ಅಂತ ಹೇಳಿ) ಜಂಟಿಯಾಗಿ ನಡೆಸಿದ ಚುನಾವಣಾ ರಸಪ್ರಶ್ನೆಯಲ್ಲಿ ಆಲೂರು ಸರಕಾರಿ ಪ್ರೌಢಶಾಲೆಯ ವಿಧ್ಯಾರ್ಥಿಗಳಾದ ಗ್ರೀಷ್ಮ ಮತ್ತು ಪ್ರಜ್ಞಾ ಪ್ರಥಮ ಸ್ಥಾನಿಯಾಗಿದ್ದಾರೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಯು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ 33 ಜಿಲ್ಲೆಗಳ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದ ವಿಧ್ಯಾರ್ಥಿಗಳಾದ ಗ್ರೀಷ್ಮ ಮತ್ತು ಪ್ರಜ್ಞಾ ಅವರನ್ನು ಬೆಂಗಳೂರು ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಚುನಾವಣಾ ಆಯುಕ್ತರಾದ ಮನೋಜ್ ಕುಮಾರ ಮೀನಾ, ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ್ ಗಿರಿನಾಥ್, ಆಪರ ಚುನಾವಣಾ ಆಯುಕ್ತರಾದ ಕೂರ್ಮರಾವ್, ವೆಂಕಟೇಶ ಕುಮಾರ ಉಪಸ್ಥಿತರಿದ್ದರು. ಈ ವಿಧ್ಯಾರ್ಥಿಗಳಿಗೆ ಶಿಕ್ಷಕ ಉದಯಕುಮಾರ ಶೆಟ್ಟಿ ತರಬೇತಿ ನೀಡಿದ್ದರು.ಶಿಕ್ಷಕಿ ಅಮ್ರತಾ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರೀಡೆ ಬದುಕಿನಲ್ಲಿ ನವೋಲ್ಲಾಸವನ್ನು ನೀಡುತ್ತದೆ. ಯುವ ಸಮುದಾಯವು ಶಿಕ್ಷಣದೊಂದಿಗೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಕ್ರೀಯಾಶೀಲರಾಗಿರುವುದು ಬಹುಮುಖ್ಯ ಎಂದು ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಹೆಚ್. ವಸಂತ ಹೆಗ್ಡೆ ಹೇಳಿದರು. ಅವರು ಕಳವಾಡಿಯ ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ನೇತೃತ್ವದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆಪಿಎಲ್ – 2024 ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿ ಕ್ರಿಕೆಟ್ ಹಲವರ ನೆಚ್ಚಿನ ಕ್ರೀಡೆ. ಪ್ರತಿ ಊರುಗಳಲ್ಲಿಯೂ ಕ್ರಿಕೆಟ್ ಆಯೋಜಿಸುವುದು, ಆ ಮೂಲಕ ಸಂಘಟನಾತ್ಮಕವಾಗಿ ತೊಡಗಿಕೊಳ್ಳುವ ಕಾರ್ಯ ನಡೆಯುತ್ತಿದೆ ಎಂದರು. ಸಂಸ್ಥೆಯ ಅಧ್ಯಕ್ಷ ಪ್ರವೀಣ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಡೆಫ್ ಕ್ರಿಕೆಟ್ತಂಡದ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಹುಂಚನಿ, ಕುಂದಾಪುರ ಚಕ್ರವರ್ತಿ ಕ್ರಿಕೆಟರ್ಸ್ನ ಮನೋಜ್ ನಾಯರ್, ಬೈಂದೂರು ರೈತ ಸಂಘದ ದೀಪಕ್ ಕುಮಾರ್ ಶೆಟ್ಟಿ, ಯಾದಗಿರಿಯ ಕೃಷ್ಣರೆಡ್ಡಿ, ಕಳವಾಡಿ ಮಾರಿಕಾಂಬಾ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರರಾದ ವಸಂತ್ ಶೆಟ್ಟಿ ಕಾರಿಕಟ್ಟೆ, ಸಂಸ್ಥೆಯ ಕಾರ್ಯದರ್ಶಿ ಪೂರ್ಣಚಂದ್ರ ಶೆಟ್ಟಿ…
