Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ -9’ ಭರತನಾಟ್ಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಭ್ರಾಮರೀ ನಾಟ್ಯಾಲಯದ ಗುರುಗಳಾದ ವಿದ್ವಾನ್ ಕೆ. ಭವಾನಿ ಶಂಕರ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆಯ ನಂತರ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಪ್ರಾತ್ಯಕ್ಷಿಕೆ ಆರಂಭವಾಯಿತು. ಭರತನಾಟ್ಯ ಎಂದರೇನು? ಅದರ ಉಗಮ ಹಾಗೂ ಇಂದಿನ ತಲೆಮಾರಿನಲ್ಲಿ ಕಲೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರವೇನು? ಎಂಬ ಬಗ್ಗೆ ಸುದೀರ್ಘವಾಗಿ ವಿವರಿಸಲಾಯಿತು. ಭರತನಾಟ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಂವಾದ ಹಾಗೂ ಚರ್ಚೆಯನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ನೆರೆದಿದ್ದ ಶಾಲಾ ವಿದ್ಯಾರ್ಥಿಗಳಿಗೆ ಭರತನಾಟ್ಯದ ಮೂಲಭೂತವಾದ ಕೆಲವು ಹೆಜ್ಜೆಗಳನ್ನು ಹೇಳಿಕೊಡುವ ಮೂಲಕ ಕಲೆಯ ಪ್ರಾಯೋಗಿಕ ಅನುಭವವನ್ನು ನೀಡಲಾಯಿತು. ಈ ಅಪೂರ್ವ ಪ್ರಾತ್ಯಕ್ಷಿಕೆಯಲ್ಲಿ ನಾಟ್ಯಾಲಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಚಿವ ಸಂಪುಟದ ಪದಗ್ರಹಣ ಸಮಾರಂಭವು ಶಾಲಾ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ ಭಂಡಾರ್ಕರ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಯಕರಾಗಿ ಬೆಳೆಯಬೇಕೆಂದು ಕರೆ ನೀಡಿದರು. ಬಳಿಕ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲೆ ಸಿಸ್ಟರ್ ಕಾರ್ಮೆಲ್ ಅವರು ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಶಾಲಾ ನಾಯಕನಾಗಿ ಅಮನ್ ಹಾಗೂ ಶಾಲಾ ನಾಯಕಿಯಾಗಿ ವೀಕ್ಷಾ , ಹಾಗೂ ವಿವಿಧ ಕ್ಲಬ್ ನ ನಾಯಕರುಗಳು ಅಧಿಕಾರ ಸ್ವೀಕರಿಸಿದರು. ನೂತನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿನ ವರಾಹಿ ಡೈವರ್ಶನ್ ವೀಯರ್ ಬಗ್ಗೆ ವಾಸ್ತವದ ಅರಿವಿಲ್ಲದೆ ಜನರನ್ನು ಮತ್ತು ಸರ್ಕಾರವನ್ನು ದಾರಿತಪ್ಪಿಸುತ್ತಿರುವವರು ಸಂಸದ ಬಿ. ವೈ. ರಾಘವೇಂದ್ರ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಹೇಳಿದರು. ಮಾಣಿ ಜಲಾಶಯದಿಂದ ಹೊರಬಂದ ನೀರು ವರಾಹಿ ನದಿ ಮೂಲಕ ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿ ಶೇಖರಣೆಯಾಗುತ್ತದೆ. ಈ ಡೈವರ್ಶನ್ ವಿಯರ್ 1100 ಕ್ಯೂಸೆಕ್ಸ್ ನೀರು ಸಂಗ್ರಹಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಈ ಡೈವರ್ಶನ್ ವಿಯರ್ ನಿರ್ಮಾಣವಾಗಿರುವುದು ಕೇವಲ ವರಾಹಿ ನೀರಾವರಿ ಯೋಜನೆಯ ಎಡ ದಂಡೆ, ಬಲ ದಂಡೆ ಮತ್ತು ಏತ ನೀರಾವರಿಯ ಕಾಲುವೆಗಳಿಗೆ ನೀರುಣಿಸಲು, ಉಳಿದ ಎಲ್ಲಾ ಇತರೇ ಯೋಜನೆಗಳಿಗೆ ವರಾಹಿ ನದಿಯಿಂದಲೇ ನೀರನ್ನು ಎತ್ತಬೇಕು. ಆದರೆ ರೈತರ ಜೀವನಾಡಿಯಾದ ವರಾಹಿ ಡೈವರ್ಶನ್ ವಿಯರ್ ನಿಂದಲೇ ಸಿದ್ಧಾಪುರ ಏತ ನೀರಾವರಿ ಯೋಜನೆಗೆ ನೀರನ್ನು ಎತ್ತ ಬೇಕು ಎನ್ನುವ ಸಂಸದರ ಒತ್ತಾಯ ವರಾಹಿ ನದಿ ಪಾತ್ರದ ರೈತರ ಹಾಗೂ ವರಾಹಿ ನದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕೋಟ ಹಾಗೂ ಮಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಮತ್ತು ಬೂತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆಗಳು ನಡೆದವು. ನಂತರ ಸಂಸದರು ಮಾತನಾಡಿ, ಮೋದಿ ಸರ್ಕಾರದ ಯೋಜನೆ ಬಡವರ ಮನೆಗೆ ತಲುಪಬೇಕು. ಅದಕ್ಕೆ ಬೂತ್ ಸಮಿತಿ ಪ್ರತಿದಿನ ಕೆಲಸ ಮಾಡಬೇಕು ಎಂದು  ಪ್ರಾಸ್ತಾವಿಕ ಮಾತುಗಳಾಡಿದರು. ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೋಟದಲ್ಲಿ ಸಂಘಟನೆ ಇನ್ನಷ್ಟು ಚುರುಕಾಗಬೇಕು. ಪ್ರತಿ ಮತಗಟ್ಟೆಗೆ ಒಬ್ಬ ಪ್ರಮುಖ, ಪ್ರತಿ ಪೇಜ್‌ಗೆ ಒಬ್ಬ ಕಾರ್ಯಕರ್ತ ಇದೇ ನಮ್ಮ ಗುರಿ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ಣಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು. ಪತ್ರಿಕೆಯನ್ನು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಮಾತನಾಡಿ, ಪತ್ರಕರ್ತರು ಪತ್ರಿಕಾ ಭವನದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ರೀತಿ ಸನ್ಮತಿ ಪತ್ರಿಕೆಯ ಮೂಲಕ ಪತ್ರಕರ್ತರ ಚಟುವಟಿಕೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಪತ್ರಕರ್ತರು ಓದಿಗೆ ಒತ್ತು ನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಅದೇ ರೀತಿ ಪರಿಸರಕ್ಕೆ ಇನ್ನು ಹೆಚ್ಚಿನ ಕೊಡುಗೆ ನೀಡ ಬೇಕು ಎಂದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಮಿಕರಿಗೆ ಕೂಲಿ ನೀಡುವ ವಿಚಾರದಲ್ಲಿ ಮಾತನಾಡಿ, ಪೊಲೀಸರಿಗೆ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿಯನ್ನು ದೋಷಮುಕ್ತ ಗೊಳಿಸಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ. 2005ರಲ್ಲಿ ಕುಂದಾಪುರ ತಾಲೂಕಿನ ಹಳ್ಳಿಹೊಳೆಯ ಕೋಟುಗುಳಿ ಎಂಬಲ್ಲಿ ಗುರುದತ್ತ ಚಾತ್ರ ಎನ್ನುವವರ ಮನೆ ಸಮೀಪ ಓರ್ವ ಮಹಿಳೆ ಹಾಗೂ ಏಳು ಮಂದಿ ಪುರುಷರಿದ್ದ ತಂಡ ಬಂದೂಕು ಸಹಿತ ಆಗಮಿಸಿ ದೂರುದಾರ ಗುರುದತ್ತ ಅವರ ಬಳಿ ಕೆಲಸಗಾರರಿಗೆ ಸರಿಯಾದ ಸಂಬಳ ನೀಡದಿರುವ ಬಗ್ಗೆ ವಿಚಾರಿಸಿದ್ದರು. ಇದಾದ ಬಳಿಕ ಪೊಲೀಸರಿಗೆ ಯಾವುದೇ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿ ಈ ತಂಡ ಸ್ಥಳದಿಂದ ತೆರ ಳಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಗುರುದತ್ತ ಚಾತ್ರ ಪ್ರಕರಣ ದಾಖಲಿಸಿದ್ದರು. ಇದರಲ್ಲಿ ಪದ್ಮನಾಭ ನೀಲುಗುಳಿ ಸಹಿತ ಏಳು ಮಂದಿ ಶಂಕಿತ ನಕ್ಸಲರ ಹೆಸರನ್ನು ಉಲ್ಲೇಖಿಸಲಾಗಿದ್ದು ಅವರೆಲ್ಲಾ ಕಾಡು ಪ್ರದೇಶದಲ್ಲಿ ನಿಷೇಧಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮೇ. 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ ಶೆಟ್ಟಿ (355), ರಾಹುಲ್ ಉಮೇಶ್ (313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ  ಉತ್ತಮ  ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೂರು ಕೊಡೇರಿಯ ಕುಳ್ಳಿ ಗೋವಿಂದ ಖಾರ್ವಿ (72 ವರ್ಷ) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಮತ್ತು ಜನಪರ ಕಾಳಜಿಯ ಮೂಲಕ ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಅವರು, ತಮ್ಮ ಸರಳತೆ ಮತ್ತು ಸೇವಾಭಾವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಇತ್ತೀಚಿಗೆ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಐರೋಡಿ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿದರು.  ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಕ್ಷ ಸಂಘಟನೆಯ ,ಬಿಜೆಪಿಯ ಸಂಘಟನಾ ವ್ಯವಸ್ಥೆಯಲ್ಲಿ 2-3 ಬೂತ್‌ಗಳನ್ನು ಸೇರಿಸಿ ಒಂದು ಶಕ್ತಿಕೇಂದ್ರ ಮಾಡಲಾಗುತ್ತದೆ. ಬೂತ್ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕೆಲಸ ಮಾಡುವುದು ಇದರ ಉದ್ದೇಶ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ, ಪಕ್ಷ ಬಲಪಡಿಸುವಿಕೆ ಹಾಗೂ ತಳಮಟ್ಟದ ಸಂಘಟನೆ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ಬೂತ್ ಮಟ್ಟದ ಸಂಘಟನೆಯನ್ನು ಚುರುಕುಗೊಳಿಸ ಬೇಕು ಎಂದು ಹೇಳಿದರು. ಈ…

Read More