Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರೌಢಶಿಕ್ಷಣ ಇಲಾಖೆ ಹಾಗೂ ಕುಳ್ಳಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಶಂಕರನಾರಾಯಣ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮದರ್ ತೆರೆಸದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿವಿಧ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ 12 ಪ್ರಥಮ ಬಹುಮಾನವನ್ನು, 14 ದ್ವಿತೀಯ ಬಹುಮಾನವನ್ನು ಹಾಗೂ 9 ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಜಾನಪದ ನೃತ್ಯ ಮತ್ತು ಕವ್ವಾಲಿ ಯಲ್ಲಿ ಪ್ರಥಮ ಬಹುಮಾನವನ್ನು ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಬೋಧಕ ಭೋದಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್, 40 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್.58 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ / ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್‌ ಕಾಲೇಜ್‌ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್‌ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ ನೆಡುವ ವಿಧಾನವನ್ನು ತಿಳಿಸಲಾಯಿತು. ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಕ್ರಿಯೇಟಿವ್‌ನ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಇಂದಿನ ಕಾಲಘಟ್ಟದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಅನ್ನವನ್ನು ಗಳಿಸಬೇಕಾದರೆ ಅದರ ಹಿಂದೆ ಅಪಾರ ಪರಿಶ್ರಮವಿದೆ. ನಾವೆಲ್ಲರೂ ರೈತರ ಕಷ್ಟವನ್ನು, ಒಕ್ಕಲುತನದ ಆನಂದವನ್ನು ಪಡೆಯಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್‌ ಅವರು ಮಾತನಾಡುತ್ತಾ ಹಿಂದಿನ ಕೃಷಿ ಜೀವನ ಹಾಗೂ ಇಂದಿನ ಒತ್ತಡದ ಬದುಕಿನಲ್ಲಿ ಕೃಷಿ ಚಟುವಟಿಕೆಗಳೇ ಮನಸ್ಸಿಗೆ ಸಂತೋಷ ನೀಡುತ್ತವೆ. ಆತ್ಮ ಸಂತೋಷಕ್ಕಾಗಿಯಾದರೂ ನಾವು ರೈತಾಪಿ ಕಸುಬನ್ನು ರೂಢಿಸಿಕೊಳ್ಳಬೇಕಾಗಿದೆ ಎಂದು ನುಡಿದರು. ತದನಂತರ ವಿದ್ಯಾರ್ಥಿಗಳಿಂದಲೇ ಒಂದು ಎಕರೆಯಷ್ಟು ಕೃಷಿಭೂಮಿಯಲ್ಲಿ ನಾಟಿಕಾರ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪಡುಕೋಣೆ ಎಂಬಲ್ಲಿ ಗುರುವಾರ ನಡೆದಿದೆ. ಪಡುಕೋಣೆ ನಿವಾಸಿಯ ಪ್ರಶಾಂತ್ ಎಂಬುವವರ ಪುತ್ರಿ ಸಿಂಧು (16) ಎಂದು ತಿಳಿದುಬಂದಿದೆ. ಸೂಚನೆ: ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ಏನೇ ಸಮಸ್ಯೆ, ತೊಂದರೆಗಳಿದ್ದರೂ ನಿಮ್ಮ ಪೋಷಕರು ಅಥವಾ ಆಪ್ತ ಸಮಾಲೋಚಕರ ಬಳಿ ಹೇಳಿಕೊಳ್ಳಿ. ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದ ಸಿಂಧು, ಸಮೀಪದ ಸರಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ಕಳೆದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣಕ್ಕೆ ಶಾಲೆಗೆ ಎರಳಗೆ ತನ್ನ ಮನೆಗೆ ತೆರಳಿದ್ದ ಸಿಂಧುವನ್ನು ಬುಧವಾರ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಗುರುವಾರ ತಂದೆ ಕುಂದಾಪುರಕ್ಕೆ ಬಿಡುವುದಾಗಿ ಹೇಳಿದ್ದರು. ಆದರೆ ಆಕೆ ತಾನು ಬಸ್ಸಿನಲ್ಲಿ ಹೋಗುವುದಾಗಿ ತಿಳಿಸಿದ್ದಳು. ಇದಾದ ಸ್ವಲ್ಪ ಸಮಯದ ನಂತರ ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಸಿಂಧು ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್.ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸರಕಾರ ಮಹಾತ್ವಕಾಂಕ್ಷಿ ನಾಲ್ಕನೇ ಗ್ಯಾರೆಂಟಿ ‘ಗೃಹಲಕ್ಷ್ಮೀ’ ರಾಜ್ಯಾದ್ಯಂತ ಜಾರಿಗೆ ಬಂದಿದ್ದು, ಕುಂದಾಪುರ ಬೈಂದೂರು ತಾಲೂಕಿನ ವಿವಿಧೆಡೆ ಚಾಲನೆ ದೊರೆಯಿತು. ಕುಂದಾಪುರ ಪುರಸಭೆಯಿಂದ ಮೊಗವೀರ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಕ್ಕೆ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ ನೀಡಿದರು. ಬೈಂದೂರು ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ್ ವತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮೀ ಯೋಜನೆಯ ವೀಕ್ಷಣಾ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಚಾಲನೆ ನೀಡಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನಕುಮಾರ್ ಜಿ. ಎಸ್., ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್. ಭಾರತಿ ಇದ್ದರು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ನೇರಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.30: ಸಮಯದ ಪರಿವೆಯೇ ಇಲ್ಲದೆ ಭಿನ್ನ ಲೋಕಕ್ಕೆ ಕರೆದೊಯ್ಯುವ ಸಾಮರ್ಥ್ಯ ಸಾಹಿತ್ಯಕ್ಕಿದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ ಎಂದು ಕಾದಂಬರಿಕಾರ, ಶಿಕ್ಷಕ ಹೆಚ್. ಬಿ. ಇಂದ್ರಕುಮಾರ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ ಸಮೃದ್ಧತೆ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ ಎಂದ ಅವರು ಈ ಪ್ರಶಸ್ತಿಯು ನನ್ನ ಬರವಣಿಗೆಯ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಹೆಚ್. ಶಾಂತಾರಾಮ್ ಅವರು ಮಾತನಾಡಿ ಸಾಹಿತ್ಯ ಸೇವೆ ಮುಂದುವರಿಯಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಯಂತಹ ಸಂಸ್ಥೆಯಿಂದ ಗ್ರಾಮೀಣ ಭಾಗದ ಪ್ರತಿಭೆಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹಾಗಾಗಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಡೆಸಾರ್ಟ್ ಸಿಸ್ಟಂ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿ ವಿಶ್ವನಾಥ ಶೇಟ್ ಹೇಳಿದರು. ಅವರು ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ಜೆಸಿಐ ಬೈಂದೂರು ಸಿಟಿ ಆಥಿತ್ಯದಲ್ಲಿ ಜರುಗಿದ ಜೆಸಿಐ ವಲಯ 15ರ ಮಹಿಳಾ ಜೆಸಿ ಹಾಗೂ ಜ್ಯೂನಿಯರ್ ಜೆಸಿ ಸಮ್ಮೇಳನ – ಚುಕ್ಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಇಂದು ಅವಕಾಶಗಳು ಹಲವಿದೆ ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳುವ ಮಾರ್ಗದರ್ಶನ ಯುವಜನತೆಗೆ ಬೇಕಾಗಿದೆ ಎಂದರು. ಜೆಸಿಐ ವಲಯದ ಮೊದಲ ಮಹಿಳೆ ಶಿಲ್ಪಾ ಪುರುಶೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಜೆಸಿಐ ಝೋನ್ 15ರ ಲೇಡಿ ಜೆಸಿ ಕೋ-ಆರ್ಡಿನೇಟರ್ ಸುಮನಾ ಪೊಳಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್.ಜೆ. ನಯನಾ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ವಲಯಾಧ್ಯಕ್ಷ ಪುರುಶೋತ್ತಮ ಶೆಟ್ಟಿ, ನಿಕಟಪೂರ್ವ ವಲಯಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಸ್ಲಿಂ ಸಾಹಿತಿಗಳು, ಲೇಖಕರು, ಚಿಂತಕರು ಮತ್ತು ಸಾಧಕರ ವೇದಿಕೆಯಾದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ನಿಯೋಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿಯಾಗಿ ಸುದೀರ್ಘ ಸುಮಾರು 1 ಗಂಟೆ 30 ನಿಮಿಷದಷ್ಟು ಕಾಲ ಮಾತುಕತೆ ನಡೆಸಿತು. ಸಂಘಟನೆಯ ಉದ್ದೇಶ, ಕಾರ್ಯ ಮತ್ತು ಸ್ವರೂಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ವಾಮೀಜಿಗಳು “ಕರ್ನಾಟಕದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯು ಎಲ್ಲ ಸಮುದಾಯಗಳ ನಡುವಿನ ಬಾಂಧವ್ಯಕ್ಕೆ ಹೊಸ ಭಾಷ್ಯ ಮುನ್ನುಡಿ ಬರೆಯಲಿದೆ. ಸಮುದಾಯಗಳ ನಡುವೆ ಕಾರಣಾಂತರಗಳಿಂದ ಉದ್ಭವವಾಗುವ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಸೂಕ್ತ ಸಂಪರ್ಕ ಸಾಧಿಸಲು ಇಂತಹ ಪ್ರಬುದ್ಧರ ವೇದಿಕೆಗಳು ಅವಶ್ಯಕ. ಪ್ರಜ್ಞಾವಂತರು ಮತ್ತು ಪ್ರತಿಭಾವಂತರಿಂದ ಕೂಡಿದ ಈ ವೇದಿಕೆಯು ರಾಜಕೀಯ ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳಲ್ಲಿ ಸಮುದಾಯವನ್ನು ಸೂಕ್ತ ರೀತಿಯಲ್ಲಿ ಖಂಡಿತ ಪ್ರತಿನಿಧಿಸುವ ವಿಶ್ವಾಸವಿದೆ. ಆದಿಚುಂಚನಗಿರಿ ಮಠ ಮತ್ತು ಮುಸ್ಲಿಂ ಸಮುದಾಯದ ಬಾಂಧವ್ಯಕ್ಕೆ ಒಂದು ದೊಡ್ಡ ಪರಂಪರೆ ಮತ್ತು ಇತಿಹಾಸವಿದೆ. ವೇದಿಕೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೋದಿಕೇರ್ ರಾಕಿಂಗ್ ಚಾಂಪಿಯನ್ಸ್,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ರೋಟರಿ ಬ್ಲಡ್ ಬ್ಯಾಂಕ್ ಶಿವಮೊಗ್ಗ ಇವರ ಸಹಕಾರದಲ್ಲಿ ಆದಿತ್ಯವಾರ ತಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ತಜ್ಣ ವೈದ್ಯರಾದ ಡಾ ನಾಗೇಶ್ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, 100ಕ್ಕೂ ಅಧಿಕ ವರ್ಷ ಇತಿಹಾಸವಿರುವ ವಿಜ್ಣಾನಕ್ಕೆ ಇಂದಿಗೂ ಕೂಡ ಕೃತಕ ರಕ್ತ ಉತ್ಪಾದನೆ ಮಾಡಲು ಆಗಿಲ್ಲ, ಇಂತಹ ರಕ್ತದಾನ ಶಿಬಿರದಲ್ಲಿ ಆರೋಗ್ಯವಂತರು ರಕ್ತದಾನ ಮಾಡಿದರೆ ಮಾತ್ರ ರೋಗಿಗಳಿಗೆ ಜೀವ ಉಳಿಯಲು ಸಾಧ್ಯ ಎಂದು ಆಭಿಪ್ರಾಯಪಟ್ಟರು. ಮೋದಿಕೇರ್ ರಾಕಿಂಗ್ ಚಾಂಪಿಯನ್ಸ್ ರವೀಂದ್ರ ಶ್ರೀಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪಿಎಸ್ಐ ವಿನಯ್, ರೋಟರಿ ಬ್ಲಡ್ ಬ್ಯಾಂಕ್ ಶಿವಮೊಗ್ಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಸತೀಶ್, ತಲ್ಲೂರು ಗ್ರಾಮ ಪಂಚಾಯತ್ ಗಿರೀಶ್ ನಾಯಕ್, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದ ಡಾ ಅಜೀಜ್,, ರಕ್ತದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕತಾರ್ನಲ್ಲಿ ವರ್ಷಾಂತ್ಯ ನಡೆಯಲಿರುವ ಅಂತರಾಷ್ಟ್ರೀಯ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಬೈಂದೂರು ತಾಲೂಕು ಗೋಳಿಹೊಳೆಯ ಪೃಥ್ವಿರಾಜ್ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದಾರೆ. 32 ವರ್ಷದ ಪೃಥ್ವಿರಾಜ್ ಭಾರತದ ಕಿವುಡರ ಕ್ರಿಕೆಟ್ ತಂಡದ ಪ್ರಧಾನ ವೇಗಿ ಹಾಗೂ ಕೆಳ ಕ್ರಮಾಂಕದ ಬ್ಯಾಟರ್ ಆಗಿದ್ದಾರೆ. ಇತ್ತೀಚೆಗೆ ನಡೆದ ತ್ರಿಕೋನ ಏಕದಿನ ಸರಣಿ, ಅದಕ್ಕೂ ಮೊದಲು ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಡಿ. 1ರಿಂದ ಡಿ. 12ರ ವರೆಗೆ ಕತಾರ್ನ ದೋಹಾದಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ವೀರೇಂದ್ರ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಆಲ್ರೌಂಡರ್ ಸಾಯ್ ಆಕಾಶ್ ಉಪನಾಯಕನಾಗಿದ್ದಾರೆ. ಪೃಥ್ವಿರಾಜ್ ಶೆಟ್ಟಿ ಹುಂಚನಿ ಈ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ. ಕರ್ನಾಟಕ ಮೂಗರ ಕ್ರಿಕೆಟ್ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿರುವ ಪ್ರಥ್ವಿರಾಜ್ ಅವರು, ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರರಾಗಿದ್ದಾರೆ.

Read More