ಕುಂದಾಪ್ರ ಡಾಟ್ ಕಾಂ ಲೇಖನ.ಉಡುಪಿ: ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಹಾಗೂ ಕಾಳುಮೆಣಸು ವಿಪರೀತ ಮಳೆಯಿಂದಾಗಿ ವಿವಿಧ ರೋಗ ಬಾಧೆಗೆ ತುತ್ತಾಗುವ ಸಾಧ್ಯತೆ ಇದ್ದು, ಅಸಮರ್ಪಕ ನಿರ್ವಹಣೆಯಿಂದಾಗಿ ಇಳುವರಿ ನಷ್ಟ, ರೋಗಬಾಧೆ ಉಲ್ಬಣವಾಗಿ ಮರಗಳು ಸಂಪೂರ್ಣ ನಾಶವಾಗುವ ಸಾಧ್ಯತೆ ಹೆಚ್ಚು. ಅಡಿಕೆ ಬೆಳೆಗೆ ರೋಗಬಾಧೆಗಳು ಉಲ್ಬಣಿಸುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ. ಜಿಲ್ಲೆಯು ವಾರ್ಷಿಕ 4500 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗುವ ಪ್ರದೇಶವಾಗಿದೆ. ಮಳೆಗಾಲದಲ್ಲಿ ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳ ಕೊಚ್ಚಣೆ ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದಾಗಿ ಅಡಿಕೆ ಕೊಳೆ ರೋಗ, ಕಾಳುಮೆಣಸು ಸೊರಗು ರೋಗ ಹಾಗೂ ತೆಂಗಿನಲ್ಲಿ ಸುಳಿಕೊಳೆ ರೋಗ ಉಲ್ಬಣಿಸುವ ಸಾಧ್ಯತೆ ಇರುತ್ತದೆ. ಅಡಿಕೆ ಮತ್ತು ತೆಂಗಿನಲ್ಲಿ ಮಳೆಗಾಲದಲ್ಲಿ ಕೊಳೆರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳದೆ ಇದ್ದಲ್ಲಿ, ಅಕ್ಟೋಬರ್ ತಿಂಗಳಿನಿಂದ ಫೆಬ್ರವರಿವರೆವಿಗೂ ಹೆಚ್ಚಾಗುವ ಮಂಜಿನ ಹನಿಗಳು ರೋಗಾಣುಗಳು ಅಭಿವೃದ್ದಿಗೆ ಅನುಕೂಲಕರವಾಗಿದ್ದು, ಕೊಳೆ ರೋಗಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ವಿದ್ಯಾರ್ಥಿಗಳಿಂದ ಮಾತ್ರ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರಸ್ತುತ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಮತ್ತು ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಕಟಪಾಡಿ ಪಡುಕುತ್ಯಾರು, ಆನೆಗುಂದಿ ಗುರು ಸೇವಾ ಪರಿಷತ್ ಕೋಟ ಮಂಡಲದ ಪದ ಪ್ರದಾನ ಸಮಾರಂಭ ಇತ್ತೀಚಿಗೆ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಪ್ರವೀಣ್ ಆಚಾರ್ಯ ಗುರು ಜ್ಞಾನದ ದೀಪ, ಗುರುಗಳಿಗೆ ಗೌರವ ಸಲ್ಲಿಸುವುದು, ನಮ್ಮ ಸಂಸ್ಕೃತಿ, ನಮ್ಮ ಕರ್ತವ್ಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಗುರು ಸೇವಾ ಪರಿಷತ್ ಕೋಟ ಮಂಡಲದ ಅಧ್ಯಕ್ಷ ಎಸ್. ಬಿ. ರಾಘವೇಂದ್ರ ಆಚಾರ್ಯ ದೇವಿ ಪಾತ್ರಿಗಳು ಸಾಲಿಗ್ರಾಮ ವಹಿಸಿದ್ದರು. ಪದ ಪ್ರದಾನವನ್ನು ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಸುಬ್ರಾಯ ಆಚಾರ್ಯ ನೆರವೇರಿಸಿಕೊಟ್ಟರು. ಶುಭಾಶಂಶನೆಯನ್ನು ವೇದಮೂರ್ತಿ ಲಕ್ಷ್ಮೀಕಾಂತ ಶರ್ಮ ಚೇಂಪಿ ಗೈದರು. ನಿತ್ಯ ಜೀವನದಲ್ಲಿ ವಿಜ್ಞಾನ ಎನ್ನುವ ವಿಷಯದ ಕುರಿತು ಮಾಹಿತಿಯನ್ನು ರೇಖಿ ತಜ್ಞ ಕಾರ್ಕಡ ನಾರಾಯಣ ಆಚಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 2026-27ನೇ ವರ್ಷದಲ್ಲಿ ದಾಖಲಾತಿ ಪಡೆದುಕೊಂಡು ಅಧ್ಯಯನಕ್ಕೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಸುಪ್ತವಾದ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಮನೆಯನ್ನು ತೊರೆದು ಪಾಠಶಾಲೆಗೆ ಸೇರಿದ ದಿನಗಳಲ್ಲಿ ಮನೆಯ ನೆನಪಿನಲ್ಲಿರುತ್ತಾರೆ. ತಮಗೆ ಅವಕಾಶಗಳನ್ನು ಅರಸುತ್ತಿರುತ್ತಾರೆ. ತಮ್ಮನ್ನು ಗುರುತಿಸಿಕೊಳ್ಳಲು ಹಾತೊರೆಯುತ್ತಿರುತ್ತಾರೆ. ಅವರಿಗೆ ಸೂಕ್ತ ವೇದಿಕೆಯನ್ನು ಒದಗಿಸಬೇಕಾದ ಸಹಪಾಠಿ-ಶಿಕ್ಷಕವೃಂದವೂ ಅವರ ಸುಪ್ತಪ್ರತಿಭೆಗಳ ಅನಾವರಣವನ್ನು ಬಯಸುತ್ತಿರುತ್ತಾರೆ. ಇದೆಲ್ಲವನ್ನು ಪರಿಗಣಿಸಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಕ್ಕಳನ್ನು ಲವಲವಿಕೆಯಿಂದ ಕೂಡುವಂತೆ ಮಾಡಲು ಈ ಕಾರ್ಯಕ್ರಮ ಬಹಳ ಸಹಕಾರಿಯಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಕಾರ್ಯಕ್ರಮವನ್ನು ಆಮೂಲಾಗ್ರವಾಗಿ ಗಮನಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸಿದರು. ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರೂ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಂಧಾರಿ ವಿದ್ಯೆ, ಅಬಾಕಸ್, ಸಂಗೀತ, ನೃತ್ಯ, ಶ್ಲೋಕಪಠಣ, ಯೋಗ, ಭಜನೆ, ಏಕಪಾತ್ರಾಭಿನಯ, ಸಮೂಹಗಾಯನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯ ಶಿಕ್ಷಣ ಪದ್ಧತಿಯಂತೆ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) – ಸ್ನಾತಕ ಪದವಿ ತರಗತಿಗಳ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ / ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್ಸೈಟ್ htts://uucms.karnataka.gov.in ನಲ್ಲಿ ಆನ್ಲೈನ್ ಮೂಲಕ ಜೂನ್ 12ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಚಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂನ್ 15 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂಖ್ಯೆ: 0821-2438931 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಬೈಂದೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ, ತಾಲೂಕು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08254-251657 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೈಂದೂರು ತಾಲೂಕು ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ.,ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ, ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು, ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ, ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7ಮತ್ತು 8ರಂದು ಐತಿಹಾಸಿಕ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ- ಕರ್ನಾಟಕ ಉತ್ಸವ ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಏರ್ಪಡಿಸಲಾಗಿದೆ. ಕೇರಳ ರಾಜ್ಯ ಕನ್ನಡ ಸಮ್ಮೇಳನದಲ್ಲಿ ಉದ್ಘಾಟನೆ ಹಾಗೂ ವಿವಿಧ ಕಲಾ ಪುಸ್ತಕ, ವಸ್ತು ಪ್ರದರ್ಶನಗಳ ಉದ್ಘಾಟನೆ, ಹೊಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು ರಿ., ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10ರ ತನಕ ನಡೆಯಿತು. ಇದರ ಸಮಾರೋಪ ಸಮಾರಂಭದಲ್ಲಿ ಗಡಿನಾಡು ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಯಶಸ್ವಿಯಾಗಿ ಪೂರೈಸಿರುವುದಕ್ಕಾಗಿ, ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಕರ್ನಾಟಕ ಗಡಿನಾಡು ಸಂಘಟನಾಗಾರರಾಗಿ 35 ವರ್ಷದ ಸೇವೆಗಾಗಿ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಸಾಧನೆಯ ಮೂಲಕ ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಎತ್ತಿಹಿಡಿದಿರುವ ಯಡ್ತರೆ ನಾರಾಯಣ ಬಿಲ್ಲವ ಹಾಗೂ ಶಾರದ ದಂಪತಿಗಳ ಪುತ್ರ ಸುಶಾನ್ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಗಳಿಸುವ ಮೂಲಕ ಮತ್ತೊಮ್ಮೆ ಅಪೂರ್ವ ಸಾಧನೆ ಮೆರೆದಿದ್ದಾರೆ. ಅವರ ಈ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದ್ದು, ವಿದ್ಯಾರ್ಥಿಯ ಸಾಧನೆಯನ್ನು ಗೌರವಿಸುವ ನಿಟ್ಟಿನಲ್ಲಿ ಉಪ್ಪುಂದದ ಕಲ್ಯಾಣಿ ಪರಮೇಶ್ವರ ಭಟ್ ಟ್ರಸ್ಟ್ ರಿಜಿಸ್ಟರ್ಡ್ ಬೆಂಗಳೂರು ವತಿಯಿಂದ ಅವರ ಸ್ವಗೃಹದಲ್ಲಿ ವಿಶೇಷ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ಮಂಗಳೂರಿನ ಪ್ರತಿಷ್ಠಿತ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸುಶಾನ್ ಅವರು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಅಂಕಗಳೊಂದಿಗೆ ರಾಜ್ಯದ ಶ್ರೇಷ್ಠ ವಿದ್ಯಾರ್ಥಿಗಳ ಸಾಲಿನಲ್ಲಿ ಸ್ಥಾನ ಪಡೆದಿರುವ ಅವರು, ತಮ್ಮ ಕಠಿಣ ಪರಿಶ್ರಮ, ಸಮಯಪಾಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದಲ್ಲಿ ಇತ್ತೀಚೆಗೆ ಪಚ್ಚಿಲೆ ಕ್ಷೇತ್ರೋತ್ಸವ ಕೋಡಿ ಕನ್ಯಾಣದ ಸೇತುವೆ ಸಮೀಪ ಜರುಗಿತು. ಕ್ಷೇತ್ರೋತ್ಸವವನ್ನು ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ, ಗೋವಾದ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ-ಉಡುಪಿ, ಮೀನುಗಾರಿಕೆ ಇಲಾಖೆ-ಉಡುಪಿ, ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ-ಬ್ರಹ್ಮಾವರ, ಅರಬ್ಬಿ ಸಮುದ್ರ ಮೀನುಗಾರಿಕೆ ನಿರ್ವಹಣೆ ಸಮನ್ವಯ ಸಮಿತಿ, ಕೆನರಾ ಬ್ಯಾಂಕ್, ಯುಕೋ ಬ್ಯಾಂಕ್, ಸ್ಕೋಡ್ವೆಸ್ ಸಂಸ್ಥೆ ಮತ್ತು ಆಯುಷ್ಮಾನ್ಭವ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿತು. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ. ಧನಂಜಯ ಅವರು ಪಚ್ಚಿಲೆಯ ಚಿಪ್ಪನ್ನು ಬಿಡಿಸುವ ಮೂಲಕ ಈ ಕ್ಷೇತ್ರೋತ್ಸವಕ್ಕೆ ಅಧಿಕೃತ ಚಾಲನೆ ನೀಡಿದರು. ಆದಾಯ ಹೆಚ್ಚಳಕ್ಕೆ ಹೊಸ ತಳಿಗಳ ಕೃಷಿ ಅಗತ್ಯ:ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಧನಂಜಯ ಮೀನುಗಾರರು ಸಾಂಪ್ರದಾಯಿಕ ಪದ್ಧತಿಯ ಜೊತೆಗೆ ಹೊಸ ತಳಿಗಳ ಮೀನು ಕೃಷಿಯತ್ತ…
