ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹೊನ್ನಾರಿ ಯುವಕ ಮಂಡಲದ ನೇತೃತ್ವದಲ್ಲಿ ಹೊನ್ನಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಗಿಳಿಯಾರು ಮೈನಾಡಿ ಮನೆ ದಿ. ಭರತ್ ಕುಮಾರ್ ಶೆಟ್ಟಿ ಅವರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಹಾಗೂ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರದ ಶಾಸಕ ಕಿರಣ ಕುಮಾರ್ ಕೊಡ್ಗಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರು, ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮುದ್ದುಮನೆ ಇದರ ಶಂಕರ ಶೆಟ್ಟಿ, ಸಮಾಜಸೇವಕ ಕೇಶವ ಕೋಟೇಶ್ವರ, ನಿವೃತ್ತ ಮುಖ್ಯ ಶಿಕ್ಷಕ ಭೋಜ ಶೆಟ್ಟಿ,ಕೋಟ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಮತ್ತು ಹೊನ್ನಾರಿ ಯುವಕಮಂಡಲದ ಅಧ್ಯಕ್ಷ ಪ್ರವೀಣ್ ಕುಮಾರ್ ಜೋಗಿ ಉಪಸ್ಥಿತರಿದ್ದರು. ಆರೋಗ್ಯ ಶಿಬಿರದಲ್ಲಿ ರಕ್ತಪರೀಕ್ಷೆ ಸೇರಿದಂತೆ ಅನೇಕ ತಪಾಸಣೆಯಲ್ಲಿ ಸ್ಥಳೀಯರು ಭಾಗಿಯಾದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ನಡೆಯಲಿದ್ದು ರಾಜ್ಯದ ಮುಖ್ಯಮಂತ್ರಿ ಅಭಿವೃದ್ಧಿ ಬೇಕಾದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ರಾಜ್ಯದ ಬಂದರು ಮತ್ತು ಮೀನುಗಾರಿಕಾ, ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು. ಅವರು ಬುಧವಾರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕರಾವಳಿ ಭಾಗದ ಮೂಲ ವೃತ್ತಿ ಮೀನುಗಾರಿಕೆಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಅಲ್ಲದೆ ಪ್ರವಾಸೋದ್ಯಮ ಉತ್ತೇಜನ ದೇಗುಲಗಳ ಅಭಿವೃದ್ಧಿ ಕುರಿತಂತೆ ಕಾರ್ಯತಂತ್ರ ರೂಪಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವರಿಗೆ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಗೌರವಿಸಿ ಪ್ರಸಾದ ವಿತರಿಸಿದರು. ದೇಗುಲ ಟ್ರಸ್ಟಿಗಳಾದ ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ಸುಬ್ರಾಯ ಜೋಗಿ, ರತನ್ ಐತಾಳ್, ಸುಧಾ ಪೂಜಾರಿ, ಜ್ಯೋತಿ ಕಾಂಚನ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ತಿಮ್ಮಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಸಹಯೋಗದಲ್ಲಿ ಆಲೂರಿನ ಖ್ಯಾತ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯವು ಚಿತ್ರಕೂಟ ಆಯುರ್ವೇದ ಹಬ್ಬ ಮತ್ತು ಜೆನ್ ಜೀ ಆಯುರ್ವೇದ ಜಾಗೃತಿ ಅಭಿಯಾನ ಆಯೋಜಿಸುತ್ತಿದ್ದು, ಅದರ ಅಂಗವಾಗಿ ಉಡುಪಿ ಜಿಲ್ಲಾ ಶಾಲಾ ಮಟ್ಟದ ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಭಾಷಣ, ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಗಳು 2026ರ ಅಕ್ಟೋಬರ್ 4ರ ಭಾನುವಾರ ಬೆಳಿಗ್ಗೆ 9:00 ಗಂಟೆಯಿಂದ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ನಡೆಯಲಿವೆ. ಈ ಸ್ಪರ್ಧೆಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗಾಗಿ ನಡೆಯಲಿದ್ದು, ಒಂದರಿಂದ ನಾಲ್ಕನೇ ತರಗತಿಯ ಪುಟಾಣಿ ಮಕ್ಕಳಿಗಾಗಿ ಪ್ರಕೃತಿ ಮತ್ತು ಆಯುರ್ವೇದ ಎಂಬ ವಿಷಯದ ಮೇಲೆ ಒಂದು ಗಂಟೆಯ ಕಾಲಾವಕಾಶದ ಚಿತ್ರಕಲೆ ಸ್ಪರ್ಧೆ ನಡೆಯಲಿದೆ. ಐದರಿಂದ ಏಳನೇ ತರಗತಿ ಹಾಗೂ ಎಂಟರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ನಿಗದಿಪಡಿಸಲಾಗಿದೆ. ಭಾಷಣ ಸ್ಪರ್ಧೆಗೆ ಪ್ರಸ್ತುತ ಕಾಲಘಟ್ಟದಲ್ಲಿ ಆಯುರ್ವೇದದ ಮಹತ್ವ ಎಂಬ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಿಕಾಂಬ ಮಹಿಳಾ ಸಹಕಾರ ಸಂಘ ಕೊಡಪಾಡಿ – ಗುಜ್ಜಾಡಿ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಫಿಲೋಮಿನಾ ಫನಾಂಡಿಸ್, ಮಹಿಳೆಯರನ್ನು ಆರ್ಥಿಕವಾಗಿ ಸದೃಢನಾಗಿ ಮಾಡುವ ಉದ್ದೇಶದಿಂದ ಸಂಘವನ್ನು ಹುಟ್ಟು ಹಾಕಲಾಗಿದ್ದು, ಸಂಘದ ಕಾರ್ಯಚಟುವಟಿಕೆಯಲ್ಲಿ ಸದಸ್ಯರು ಸದಾ ತೊಡಗಿಸಿಕೊಳ್ಳುವುದರ ಮೂಲಕ ಸಂಘದ ಬೆಳವಣಿಗೆ ಸಹಕಾರ ನೀಡಬೇಕೆಂದು ಹೇಳಿದರು. ಸಂಘದ ಉಪಾಧ್ಯಕ್ಷ ರತ್ನ ಟಿ. ದೇವಾಡಿಗ, ನಿರ್ದೇಶಕರಾದ ಸುರೇಖಾ ಕಾನೋಜಿ, ವಿಜಯ ಬಿ., ಮಹಾಲಕ್ಷ್ಮೀ, ಶಾಂತ, ರೇಖಾ ಖಾರ್ವಿ, ಶಾಂತಿ, ಜಿ. ರೇಣುಕಾ, ಲಲಿತ ಖಾರ್ವಿ, ಶಾಂತ ಮರಾಠಿ ನಾಯ್ಕ್ ಉಪಸ್ಥಿತರಿದ್ದರು. 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಸ್ವಾಮಿಲಿಂಗೇಶ್ವರ ಆರ್. ಅವರು 2025-26ನೇ ಸಾಲಿನ ಲೆಕ್ಕಪರಿಶೋಧನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಶಿಸ್ತು ಅತ್ಯಂತ ಮುಖ್ಯ. ಬ್ಯಾಂಕಿನಿಂದ ಪಡೆಯುವ ಸಾಲವು ಕುಟುಂಬಕ್ಕೆ ಆಸರೆಯಾಗಬೇಕೇ ಹೊರತು ಹೊರೆಯಾಗಬಾರದು. ಆ ನಿಟ್ಟಿನಲ್ಲಿ ಗ್ರಾಹಕರು ಜವಾಬ್ದಾರಿಯಿಂದ ವ್ಯವಹರಿಸಬೇಕು ಹಾಗೂ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಎಸ್ಸಿಡಿಸಿ ಬ್ಯಾಂಕಿನ ಎಜಿಎಂ ಮೋಹನ್ ದಾಸ್ ಹೆಬ್ಬಾರ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಗಂಗೊಳ್ಳಿ ಶಾಖೆಯಲ್ಲಿ ನಬಾರ್ಡ್ ಸಹಯೋಗದೊಂದಿಗೆ ಗ್ರಾಹಕರಿಗಾಗಿ ಜರಗಿದ ’ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಕುಂದಾಪುರ ತಾಲೂಕು ಕಚೇರಿಯ ಆರ್ಥಿಕ ಸಾಕ್ಷರತಾ ಕಾರ್ಯಾಲಯದ ಆಶಾಲತಾ ಅವರು, ಅಪಘಾತ ವಿಮಾ ಸೌಲಭ್ಯಗಳು, ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್ನಲ್ಲಿ ಎದುರಾಗಬಹುದಾದ ಸೈಬರ್ ವಂಚನೆಗಳ ಕುರಿತು ಜಾಗೃತಿ ಮೂಡಿಸಿದರು. ಮುಖ್ಯ ಅತಿಥಿಯಾಗಿದ್ದ ಶಾಖಾ ನಿರೀಕ್ಷಕ ರಾಘವೇಂದ್ರ ಉಡುಪ ಮತ್ತು ತ್ರಾಸಿ ಶಾಖಾ ವ್ಯವಸ್ಥಾಪಕ ವೆಂಕಟೇಶ್ ಬಿಲ್ಲವ ಅವರು ಮಾಹಿತಿ ನೀಡಿ ಮಾತನಾಡಿದರು. ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗಣೇಶ ಚತುರ್ಥಿಯನ್ನು ಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಶಾಲೆಯ ಹಟ್ಟಿಯಂಗಡಿ ಶಾಂತಾರಾಮ ವೇದಿಕೆಯಲ್ಲಿ ಶ್ರೀ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ವಿದ್ಯಾರ್ಥಿಗಳು ಗಣೇಶನ ಮಹಿಮೆಯನ್ನು ಸಾರುವ ಭಕ್ತಿಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ಸಂಸ್ಕೃತ ಶಿಕ್ಷಕ ರಾಮಕೃಷ್ಣ ಉಡುಪ ಅವರು ಗಣೇಶ ಚತುರ್ಥಿಯ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಜೀವನದ ಯಶಸ್ಸಿಗಾಗಿ ಶ್ರೀ ಗಣೇಶನಲ್ಲಿ ಪ್ರಾರ್ಥಿಸುವಂತೆ ಕರೆ ನೀಡಿದರು. ನಂತರ ವಿದ್ಯಾರ್ಥಿಗಳಿಗಾಗಿ ಮೊಸರು ಕುಡಿಕೆ, ಮೆಹಂದಿ, ರಂಗೋಲಿ ಹಾಗೂ ವಿವಿಧ ಮೋಜಿನ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು. ಅಪರಾಹ್ನ ಶ್ರೀ ಗಣೇಶನ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಶಾಲಾ ಬಾವಿಯಲ್ಲಿ ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಲಾಗಿದೆ. ಶಿಕ್ಷಕರು ಮತ್ತು ಪೋಷಕರಿಗೆ ವಿಶೇಷ ತರಬೇತಿ ಕಾರ್ಯಾಗಾರ:ಕನ್ನಡ ಪಾಠಶಾಲೆಯ ಶಿಕ್ಷಕರು ಹಾಗೂ ಪೋಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ನಡೆಸಿಕೊಟ್ಟರು. ಮಕ್ಕಳ ವಯಸ್ಸು ಮತ್ತು ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಕನ್ನಡವನ್ನು ಪರಿಣಾಮಕಾರಿಯಾಗಿ ಬೋಧಿಸುವ ವಿಧಾನಗಳು, ಪಠ್ಯಕ್ರಮವನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವ ಕ್ರಮಗಳು ಹಾಗೂ ಮಕ್ಕಳಲ್ಲಿ ಕನ್ನಡ ಕಲಿಕೆಯ ಆಸಕ್ತಿ ಹೆಚ್ಚಿಸುವ ಬೋಧನಾ ತಂತ್ರಗಳ ಕುರಿತು ಅವರು ಮಾರ್ಗದರ್ಶನ ನೀಡಿದರು.ಶಿಕ್ಷಕರ ದಿನಾಚರಣೆಯಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭ:ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಡಾ. ಪುರುಷೋತ್ತಮ ಬಿಳಿಮಲೆ ಅವರ ಸಮ್ಮುಖದಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭವನ್ನು ಅಧಿಕೃತವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಮುಜರಾಯಿ, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ , ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ , ರಘುರಾಮ ದೇವಾಡಿಗ , ಧನಾಕ್ಷಿ ಪೂಜಾರಿ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಫೂರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಣೇಶೋತ್ಸವ ಕಾರ್ಯಕ್ರಮಗಳು ಗ್ರಾಮದ ಒಗ್ಗಟ್ಟು ಕೇಂದ್ರಿಕರಿಸುವ ಉತ್ಸವವಾಗಿ ಸಂಸ್ಕ್ರತಿ ಸಾರುವ ಉತ್ಸವವಾಗಿದೆ ಎಂದು ಪಾಂಡೇಶ್ವರ ಕಳಿಬೈಲು ಶ್ರೀ ಸ್ವಾಮೀ ಕೊರಗಜ್ಜ ದೈವಸ್ಥಾನದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ ಹೇಳಿದರು. ಅವರು ಸೋಮವಾರ ಇಲ್ಲಿನ ಪಾಂಡೇಶ್ವರ ಮೂಡಹಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಆಗಿನ ಕಾಲದಲ್ಲಿ ತಿಲಕರು ಮೊಳಗಿಸಿ ಈ ಉತ್ಸವ ಧಾರ್ಮಿಕ ಭಾವನೆ ಮೂಡಿಸುವ ಜತೆಗೆ ಸಾಂಸ್ಕೃತಿಕವಾಗಿ ರೂಪುಗೊಳಿಸವ ಕೇಂದ್ರವಾಗಿದೆ ಎಂದರು. ಇದೇ ವೇಳೆ ಗ್ರಾಮದ ಹಿರಿಯ ಕೃಷಿಕ ಕೃಷ್ಣ ಮರಕಾಲ,ಕ್ರೀಡಾ ಸಾಧಕ ಸುಭಾಷ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಗ್ರಾಮದಲ್ಲಿನ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಗಣೇಶೋತ್ಸವ ವತಿಯಿಂದ ಹಮ್ಮಿಕೊಂಡ ಕ್ರೀಡಾಕಾರ್ಯಕ್ರಮದ ವಿಜೇತರಾದವರಿಗೆ ಬಹುಮಾನ ವಿತರಣೆ ಜರಗಿತು. ಸಭಾಧ್ಯಕ್ಷತೆಯನ್ನು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಆಡಳಿತ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉದ್ಯಮಿ ರಘು ಪೂಜಾರಿ, ಎನ್ ಭಾಸ್ಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ 22 ಗ್ರಾಂ ತೂಕದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ನಾಡ ಗ್ರಾಮದ ನಿವಾಸಿ ಮುತ್ತು (75) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ. ಅವರು ಚೌತಿ ಹಬ್ಬದ ಪ್ರಯುಕ್ತ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ಹೋಗಿದ್ದು, ದೇವಸ್ಥಾನದ ಒಳಗೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆದುಕೊಂಡು ಪ್ರದಕ್ಷಿಣೆ ಬರುತ್ತಿದ್ದ ವೇಳೆ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳವಾದ ಚಿನ್ನದ ಸರದ ಒಟ್ಟು ಮೌಲ್ಯ ಸುಮಾರು 2,50,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
