ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳೀಸಲಾಗಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 21 ರಿಂದ 35 ವರ್ಷದ ಒಳಗಿನ, ಕನ್ನಡ ಸ್ಪಷ್ಟವಾಗಿ ಮಾತನಾಡುವ ಹಾಗೂ ಸಂವಹನ ಕಲೆ ಕೌಶಲ್ಯ ಹೊಂದಿರುವ ಆಸಕ್ತ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಬಿಳಿಹಾಳೆಯಲ್ಲಿ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ತಮ್ಮ ಮೂಲ ದಾಖಲಾತಿಗಳನ್ನು ಫೆಬ್ರವರಿ 28 ರ ಸಂಜೆ 5 ಗಂಟೆಯ ಒಳಗಾಗಿ ಖುದ್ದಾಗಿ ಉಪ ನಿರ್ದೇಶಕರ ಕಛೇರಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೂಲಕ ಆಧುನಿಕ ಕಾಲಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆ, ನೂತನ ಪ್ರಯೋಗಗಳನ್ನು ಹಳ್ಳಿಗಳಿಗೂ ತಲುಪಿಸುವ ಕಾರ್ಯವಾಗುತ್ತಿದೆ. ಅಲ್ಲದೇ ಮೂಡುಬಿದಿರೆಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಲು ಮೋಹನ್ ಆಳ್ವರು ಸೌಹಾರ್ದಯುತವಾಗಿ ಶ್ರಮಿಸುತ್ತಿದ್ದಾರೆ. ಇವರು ನಾಡಿನ ಅಸ್ಮಿತೆಯನ್ನು ಮೈಗೂಡಿಸಿಕೊಂಡು ವಿಶ್ವವ್ಯಾಪಕವಾಗಿ ಅಂಗೀಕೃತ ಹೊಂದಿರುವ ಓರ್ವ ಮಹಾನ್ ಸಾಧಕ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ, ಮನಸ್ಸು ಹಾಗೂ ಜೀವನ ಪದ್ಧತಿಯನ್ನು ಉತ್ತಮಗೊಳಿಸುವ ಮೂಲಕ ಸೌಹಾರ್ದ ಜೀವನ ನಡೆಸಲು ಸಾಧ್ಯ. ಬದುಕಿನ ಪ್ರತಿ ಹಂತದಲ್ಲೂ ಮೌಲ್ಯಯುತವಾಗಿರುವುದು ಬಹಳ ಅಗತ್ಯ. ತನ್ನ 73 ವರ್ಷಗಳ ಬದುಕಿನ ರೀತಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ ಅವರು ಭೇಟಿ ನೀಡಿ, ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯೋದ್ದೇಶದ ಕುರಿತು ವಿಸ್ತೃತವಾದ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳೊಂದಿಗೆ ತಮ್ಮ ಸುಧೀರ್ಘ ಅನುಭವವನ್ನು ಹಂಚಿಕೊಂಡರು. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಆಡಳಿತ ಮಂಡಳಿಯು ಮದರ್ ತೆರೇಸಾರವರ ಆದರ್ಶ ಮೌಲ್ಯಗಳಿಂದ ಪ್ರೇರಿತರಾಗಿ ಮಂಗಳೂರಿನಿಂದ ಬಂದು ಕುಗ್ರಾಮವಾದ ಶಂಕರನಾರಾಯಣದಲ್ಲಿ ಕಳೆದ 26 ವರ್ಷಗಳ ಹಿಂದೆ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಇಂದು ಹೆಮ್ಮರವಾಗಿ ಬೆಳೆದು ಜಿಲ್ಲೆಯಲ್ಲೇ ಗುಣಮಟ್ಟದ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಲ್ಲಲು ಕಾರಣಿಕರ್ತರಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಅವರ ಸಾಂಘಿಕ ಪರಿಶ್ರಮ ನಿಜಕ್ಕೂ ಪ್ರಶಂಸನೀಯ ಎಂದರು. ಸ್ಕೌಟ್ ಮತ್ತು ಗೈಡ್ಸ್ ನ ಸಮಾಜಮುಖಿ ಕಾರ್ಯಗಳು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವನೆ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವನ್ನು ಸ್ಕೌಟ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಈ ಕೆಳಕಂಡ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದಾಗಿದೆ. ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ ಸಂಖ್ಯೆ: 0820-2574924, ತಹಶೀಲ್ದಾರರ ಕಛೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201. ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ದೂ.ಸಂಖ್ಯೆ :08258-230201 ಅನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗುರುಕುಲ ಸಂಸ್ಥೆಯಲ್ಲಿ ಅಜ್ಜ ಅಜ್ಜಿಯಂದಿರ ದಿನಾಚರಣೆಯು ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ನಿವೃತ್ತ ಉಪನ್ಯಾಸಕಿ, ಲೇಖಕಿ ಡಾ. ರೇಖಾ ವಿ. ಬನ್ನಾಡಿ ಅವರು ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ಅಲ್ಲಿ ಮುಖ್ಯವಾಗಿ ಕಂಡು ಬರುವುದು ಕುಟುಂಬ ವ್ಯವಸ್ಥೆ, ಆದರೆ ಇಂದು ಕುಟುಂಬ ತನ್ನ ಹೃದಯವಂತಿಕೆಯನ್ನು ಕಳೆದುಕೊಂಡು ಮಕ್ಕಳಿಗೆ ಸಿಗಬೇಕಾದ ಮೌಲ್ಯಗಳು, ನೀತಿ ಕಥೆಗಳು, ಜೀವನ ಪಾಠಗಳು ಸಿಗುತ್ತಿಲ್ಲ. ಎಲ್ಲರೂ ಸ್ವತಂತ್ರ ಬದುಕಿನ ಮೋಹದಿಂದ ಹಿರಿಯರಿಂದ ದೂರವಾದರೆ, ಮಕ್ಕಳನ್ನು ಕೂಡ ಅವರ ಪ್ರೀತಿಯಿಂದ ದೂರವಾಗುವಂತೆ ಮಾಡುತ್ತಿದ್ದಾರೆ. ಶಾಲಾ ಪರೀಕ್ಷೆಯಲ್ಲಿ ಹೇಗೆ ಹೊಂದಿಸಿ ಬರೆ, ಸರಿ/ತಪ್ಪು ಗುರುತಿಸಿ, ಬಿಟ್ಟ ಪದ ತುಂಬಿಸಿ ಎಂಬ ಹಂತಗಳು ಇರುತ್ತದೆಯೋ, ಬದುಕಿನ ಪರೀಕ್ಷೆಯನ್ನು ಬರೆಯುವಾಗ ಕೂಡ ಇದೆಲ್ಲಾ ಸಾಮಾನ್ಯ, ಆಗ ಅಲ್ಲಿ ಹೊಂದಾಣಿಕೆ ತುಂಬಾ ಮುಖ್ಯ ಎನ್ನುವುದನ್ನು ವಿವಿಧ ನಿದರ್ಶನಗಳ ಮೂಲಕ ಅರ್ಥಪೂರ್ಣವಾಗಿ ತಿಳಿಸುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು, ಅದರಲ್ಲೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂದಬಾರಂದಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಮತ್ತು ಮಕ್ಕಳ ಸಂತೆ (ಮೆಟ್ರಿಕ್ ಮೇಳ) ಕಾರ್ಯಕ್ರಮ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ವಿಶ್ವನಾಥ ಗಾಣಿಗ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯ ಶಿಕ್ಷಕರಾದ ಶಿವರಾಜ ಭಂಡಾರಿ ಎನ್. ಸ್ವಾಗತಿಸಿದರು. ಹೊಸಾಡು ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವೇದಿಕೆಯಲ್ಲಿ ಹಿರಿಯ ನಿವೃತ್ತ ಶಿಕ್ಷಕ ರಾಜೀವ್ ಶೆಟ್ಟಿ ನೂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾಸ್ಕರ್ ಪೂಜಾರಿ, ರತ್ನ ಜಿ. ಶ್ರೀಯಾನ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿವೃತ್ತ ಶಿಕ್ಷಕ ಸಂಜೀವ್ ಬಿಲ್ಲವ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರು ರವಿ ಎಸ್. ಪೂಜಾರಿ, ಹೆಮ್ಮಾಡಿ ವೃತ್ತದ ಶಿಕ್ಷಣ ಸಂಯೋಜಕಾರದ ಯೋಗೀಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ನಾಗರಾಜ್ ಶೆಟ್ಟಿ, ರವಿಚಂದ್ರ, ಶೈಲಜಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಗುಲಾಬಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪರವಾಗಿ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಿದರು. ಯುವ ಬಂಟರ ಸಂಘ ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಇಂತಹ ಗ್ರಾಮೀಣ ಪ್ರದೇಶದ ಮಹಿಳೆಯನ್ನು ಗುರುತಿಸಿ ಗೌರವಿಸುವುದು, ಶ್ಲಾಘನೀಯ. ಇಂತಹ ಕೆಲಸಗಳನ್ನು ಎಲ್ಲಾ ಸಂಘ ಸಂಸ್ಥೆಗಳು ಮಾಡಿದಾಗ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಪ್ರಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆಯಾಗಿದ್ದಾರೆ. ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕರಾದ ವೆಂಕ್ಟ ಪೂಜಾರಿ, ಅರುಣ ಕುಮಾರ್, ಎಮ್. ಎಚ್. ಗುರುದತ್ತ, ಡಿ. ಸದಾಶಿವ ಶೇರುಗಾರ, ಹೆರಿಯ ದೇವಾಡಿಗ, ವಸಂತ ಕುಮಾರ್ ಶೆಟ್ಟಿ, ಚಿಕ್ಕು ಪೂಜಾರಿ, ನಾಗರಾಜ ಶೆಟ್ಟಿ, ಸತೀಶ, ಶಂಕರ ನಾಯ್ಕ, ಜ್ಯೋತಿ ಪೂಜಾರಿ, ಎಚ್.ವಿಜಯ ಶೇರುಗಾರ್ ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಸ್ವಾಮಿ ಚುನಾವಣಾಧಿಕಾರಿಯಾಗಿ ಭಾಗವಹಿಸಿ, ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಕಾಶೀ ಮಠಕ್ಕೆ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಪಾಂಡುರಂಗರಾವ್ ಸಾವಂತ್ ಅವರು ಗುರುವಾರ ಸಂಜೆ ಭೇಟಿ ನೀಡಿದರು. ದೇವರ ಹಾಗೂ ದೇವಳದ ಪ್ರಾಂಗಣದಲ್ಲಿರುವ ಉಭಯ ಗುರುಗಳ ವೃಂದಾವನಗಳ ದರ್ಶನ ಪಡೆದ ಸಿಎಂ ಪ್ರಮೋದ ಸಾವಂತ್, ಬಾಲಕಾಶ್ರಮದ ಮಕ್ಕಳೊಂದಿಗೆ ಕೆಲಕಾಲ ಕುಶಲೋಪರಿ ನಡೆಸಿದರು. ಮಠಕ್ಕೆ ಭೇಟಿ ನೀಡಿದ ಅವರನ್ನು ಮಠದ ಆಡಳಿತ ಮಂಡಳಿ ಸದಸ್ಯರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಗೌರವಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ರಂಗನಾಥ ಪಡಿಯಾರ್, ಬಿ.ಗಣೇಶ ಕಾಮತ್, ರಾಮಚಂದ್ರ ಪಡಿಯಾರ್, ದಿನಕರ ಶೆಣೈ, ಪದ್ಮನಾಭ ಶೆಣೈ ಕುಂದಾಪುರ, ದೇವಳದ ಅರ್ಚಕ ಸುರೇಂದ್ರ ಭಟ್, ಸಮಾಜ ಭಾಂದವರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ಗ್ರೇಡ್ ಪರೀಕ್ಷೆಯಲ್ಲಿ ಮೇಘನಾ ಪ್ರಭು ಕೊಕ್ಕರ್ಣೆ ಅವರು 93.75% ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಈಕೆ ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನದ ಗುರು ಹಾಗೂ ನೃತ್ಯ ವಿದುಷಿ ವೀಣಾಮುರಳೀಧರ ಸಾಮುಗ ಇವರ ಶಿಷ್ಯೆ. ಅವರು ಕೊಕ್ಕರ್ಣೆ ದೀಪಕ್ ಪ್ರಭು ಮತ್ತು ಗಾಯತ್ರಿ ಡಿ .ಪ್ರಭು ದಂಪತಿಗಳ ಮಗಳಾಗಿದ್ದು ಬ್ರಹ್ಮಾವರ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ನಲ್ಲಿ ಎಂಟನೆಯ ತರಗತಿಯಲ್ಲಿ ಶಿಕ್ಷಣಪಡೆಯುತ್ತಿದ್ದು, ಯಕ್ಷಗಾನ, ಭಜನೆಗಳಲ್ಲಿ ಹಾರ್ಮೋನಿಯಂ, ತಬಲಗಳನ್ನು ನುಡಿಸುತ್ತಾರೆ.
