Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಇಂದು ಉಪ್ಪುಂದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಕ ಚಾಲನೆ ನೀಡಲಾಯಿತು. ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರಾದ ಅಮ್ಮನವರ ತೊಪ್ಲುವಿನ ದಿ. ಗೋವಿಂದ ಖಾರ್ವಿ ಸಂಕದ ಬಾಗಿಲು ಮನೆ ಅವರು ನಿವಾಸದ ತನಕ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ದಿವಾಕರ ಶೆಟ್ಟಿ ಅವರು ಉದ್ಘಾಟಿಸಿದರು. ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ, ಶಿಕ್ಷಕಿಯವರು ಹಾಗೂ ಎಸ್ ಡಿ ಎಮ್ ಸಿ ಸದಸ್ಯರು, ಸಾರ್ವಜನಿಕ ರು ಭಾಗವಹಿಸಿದರು. ಸ್ವಾತಂತ್ರ್ಯ ಹೋರಾಟಗಾರ ಗೋವಿಂದ ಖಾರ್ವಿ ಯವರ ಮನೆಗೆ ಮೆರವಣಿಗೆ ತೆರಳಿ ಧ್ವಜರೋಹಣ ಮಾಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಲಾಯಿತು. ನಂತರ ಅವರ ಭಾವಚಿತ್ರವನ್ನು ಶಾಲೆಗೆ ತರಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಉದಯ್ ಪಡಿಯಾರ್, ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಶೆಟ್ಟಿ, ಮುಖ್ಯೋಪಧ್ಯಾಯ ವೆಂಕಪ್ಪ ಉಪ್ಪಾರ, ಗೋವಿಂದ ಖಾರ್ವಿ ಯವರ ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಊರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ-ಕಾ ಅಮೃತಮಹೋತ್ಸವದ ಅಂಗವಾಗಿ “ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು” ಈ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳುತ್ತಾ ಸಾಧಕ ವಿದ್ಯಾರ್ಥಿಗಳಾಗಿ ದೇಶಕ್ಕೆ ಮಾದರಿ ಪ್ರಜೆಯಾಗುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ,ಕಾಲೇಜಿನ ಉಪಪ್ರಾಂಶುಪಾಲರಾಗಿರುವ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿಯಾಗಿರುವ ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಅಭಿಜಿತ್ ಬಹುಮಾನ ವಿಜೇತರ ಯಾದಿಯನ್ನು ವಾಚಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಮತ್ಸ್ಯ ಸಂಪತ್ತು ವೃದ್ಧಿ ಹಾಗೂ ಪ್ರಾಕೃತಿಕ ವಿಕೋಪಗಳಿಂದ ಯಾವುದೇ ಅವಘಡಗಳು ಜರುಗದಂತೆ ಕೋಡಿಯ ಕಿನಾರೆಯಲ್ಲಿ ಸಮುದ್ರ ಪೂಜೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಸಾಂಗವಾಗಿ ನೆರವೇರಿಸಿದರು. ಈ ವೇಳೆಯಲ್ಲಿ ದೇವಳದ ಅಧ್ಯಕ್ಷರಾದ ಜಯನಂದ ಖಾರ್ವಿ, ಉಪಾಧ್ಯಕ್ಷ ರಾದ ಪೀತಾಂಬರ ಗಣಪತಿ ಖಾರ್ವಿ, ಮೊಕ್ತೇಸರರಾದ ಪಾಂಡು ಸಾರಂಗ್, ಕಾರ್ಯಕ್ರಮದ ಉಸ್ತುವಾರಿ ಸುನೀಲ್ ಖಾರ್ವಿ ತಲ್ಲೂರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಖಾರ್ವಿ ಮದ್ದುಗುಡ್ಡೆ, ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ, ನವರಾತ್ರಿ ಸಮಿತಿಯ ಅಧ್ಯಕ್ಷೆ ಸಾವಿತ್ರಿ ಡಿ ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ವಸಂತಿ ಸಾರಂಗ, ಹಾಗೂ ಸಂಘದ ಸದಸ್ಯೆಯರ ಸಹಿತ ಸಮಾಜ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ವಲಯ ಶಿರೂರು ಕಾರ್ಯಕ್ಷೇತ್ರದ ಅಳ್ವೆಗೆದ್ದೆ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಶ್ರೀ ವಿನಾಯಕ ಹಾಗೂ ಪ್ರಿಯದರ್ಶಿನಿ ಜ್ಞಾನವಿಕಾಸ ಕೇಂದ್ರದಲ್ಲಿ ವರಲಕ್ಷ್ಮಿ ಪೂಜೆ ಮತ್ತು ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ರಘುರಾಮ್ ಕೆ. ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದರು. ಬೈಂದೂರು ತಾಲೂಕಿನ ಯೋಜನಾಧಿಕಾರಿಗಳಾದ ಕೆ ವಿನಾಯಕ್ ಪೈ, ಸಿ.ಎಸ್.ಸಿ ಸೆಂಟರಿನಲ್ಲಿ ಸಿಗುವಂತಹ ಸೌಲಭ್ಯವನ್ನು ತಿಳಿಸಿ, ಅದನ್ನು ಉಪಯೋಗಿಸಿಕೊಳ್ಳಿ ಎಂದರು. ಭೀಮಾ ಜ್ಯೋತಿ ಇನ್ಶೂರೆನ್ಸ್ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ವಲಯದ ಮೇಲ್ವಿಚಾರಕರು, ಕೇಂದ್ರದ ಸಂಯೋಕಿಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿದರು ಸೇವಾ ಪ್ರತಿನಿಧಿ ರೇವತಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೃಹ ರಕ್ಷಕ ದಳ ಬೈಂದೂರು ಘಟಕದ ವತಿಯಿಂದ ಬೈಂದೂರು ತಾಲೂಕು ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೈಂದೂರು ತಾಲ್ಲೂಕು ಜೆ ಎಮ್ ಎಫ್ ಸಿ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಜ್ಞಾನೇಶ್ ಮುಗುಳಿ ಮಾತನಾಡಿ ಗೃಹ ರಕ್ಷಕರಿಗೆ ರಾಷ್ಟ್ರ ಧ್ವಜ ನೀಡಿ ರಾಷ್ಟ್ರ ಪ್ರೇಮದೊಂದಿಗೆ ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಗೃಹ ರಕ್ಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಎಪಿಪಿ ವರ್ಷಾ ಆರ್ ಶೆಟ್ಟಿ, ಸರ್ಕಾರಿ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗಳು, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕಿ ಜಯಶ್ರೀ, ಹೆಡ್ ಕಾನ್ಸ್ ಟೇಬಲ್ ರಾಮಚಂದ್ರ ಎಸ್, ಶ್ರೀ ಮಂಜುನಾಥ ಎ ಕೊಲ್ಲೂರು, ಮೌನೇಶ್ ಗಂಗೊಳ್ಳಿ, ಬೈಂದೂರು ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿ ವಸಂತಿ ಹಾಗೂ ಬೈಂದೂರು ಗೃಹ ರಕ್ಷಕ ದಳ ಘಟಕದ ಗೃಹ ರಕ್ಷಕರು ಹಾಗೂ ಗೃಹ ರಕ್ಷಕಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕ್ ಹಿಂಬದಿ ಸೀಟಿನಲ್ಲಿ ಕುಳಿತು ಶಾಲೆಗೆ ತೆರಳುತ್ತಿದ್ದಾಗ ದನ ಅಡ್ಡಬಂದು ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯೊಂಡಿದ್ದ ಶಿಕ್ಷಕ ಗುರುವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ (32) ಮೃತ ದುರ್ದೈವಿ. ಗುರುವಾರ ಬೆಳಿಗ್ಗೆ ಎಂದಿನಂತೆ ಮುದೂರು ಸೆಳ್ಕೋಡು ನಿವಾಸಿ, ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಪತಿ ಶ್ರೀಕಾಂತ್ ಅವರೊಂದಿಗೆ ಬೈಕಿನಲ್ಲಿ ಮನೆಯಿಂದ ಹೊರಟಿದ್ದರು. ವಂಡ್ಸೆ ಸಮೀಪ ಏಕಾಏಕಿ ರಸ್ತೆಯಲ್ಲಿ ದನ ಅಡ್ಡಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ಸ್ಕಿಡ್ ಆಗಿ ಬಿದ್ದಿದ್ದಾರೆ. ಶ್ರೀಕಾಂತ್ ಅವರಿಗೆ ಸಣ್ಣಪಟ್ಟು ಗಾಯಗಳಾಗಿದ್ದರೇ, ಹಿಂಬದಿಯಲ್ಲಿ ಕುಳಿತಿದ್ದ ಅಂಬಿಕಾ ಅವರಿಗೆ ತಲೆ ಭಾಗಕ್ಕೆ ಪೆಟ್ಟು ಬಿದ್ದತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 2018ರಲ್ಲಿ ಹೆಮ್ಮಾಡಿ ಸರಕಾರಿ ಮಾದರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಗುರುವಾರ ನಡೆಯಿತು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಅವರಿಗೆ ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಅವರು ರಾಖಿ ಕಟ್ಟಿ ಶುಭಕೋರಿದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಮೊಗವೀರ ಸೇರಿದಂತೆ ಬೈಂದೂರು ಕಾಂಗ್ರೆಸ್ ಮಹಿಳಾ ಸಮಿತಿ ಪದಾಧಿಕಾರಿಗಳು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ಭಾಗವಹಿಸಿದ್ದರು. ಬಳಿಕ ಬೈಂದೂರು ಪೊಲೀಸ್ ಠಾಣೆ ಸೇರಿದಂತೆ ಇನ್ನಿತರ ಕಛೇರಿಗೆ ತೆರಳಿ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಕೋರಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತಿರಂಗ ಹಾರಿಸುವ ನಿಟ್ಟಿನಲ್ಲಿ ಇಂದು ಕುಂದಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜದ ಗಣ್ಯರಾದ ಎಸ್ ಎನ್ ಪಡಿಯಾರ್, ದಿನಕರ್ ಶೆಣೈ, ರಾಜೀವ್ ಶೆಟ್ಟಿ ಮನೆಗೆ ತೆರಳಿ ರಾಷ್ಟ್ರಧ್ವಜ ಹಸ್ತಾಂತರಿಸಿ, ಶುಭಕೋರಲಾಯಿತು. ಈ ಸಂದರ್ಭ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಜಯಲಕ್ಷ್ಮೀ ಗಾಣಿಗ, ಕಾರ್ಯದರ್ಶಿ ರೋಹಿಣಿ ಪೈ, ಪುರಸಭಾ ಸದಸ್ಯೆ ಪುಷ್ಪಾ ಶೇಟ್ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ವಿನಾಯಕ ನಗರದ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿನಾಯಕ ನಗರದಲ್ಲಿಯೇ ವಾಸವಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಜುಲೈ 29ರಂದು ವಿನಾಯಕ ನಗರದ ನಿವಾಸಿ ಮಂಜುನಾಥ ಜೋಗಿ ಅವರ ಕುಟುಂಬ ಸಮೇತ ಪಂಡರಾಪುರ ಮತ್ತು ಶಿರಡಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಗೆ ತೆರಳಿದ್ದರು. ಈ ವೇಳೆ ಸುಭಾಶ್ಚಂದ್ರ ಆಚಾರ್ಯ ಮನೆಯ ಬಾಗಿಲನ್ನು ಒಡೆದು ಕಪಾಟಿನಲ್ಲಿರಿಸಿದ 27 ಗ್ರಾಂ ಚಿನ್ನಾಭರಣ ಮತ್ತು 13,500 ರೂ. ನಗದು ಹಣವನ್ನು ಕಳವು ಮಾಡಿದ್ದರು. ಇದೀಗ ಆರೋಪಿಯನ್ನು ಬಂಧಿಸಿರುವ ಪೋಲೀಸರು ಆತನಿಂದ 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೆಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ ತೂಕದ ಚಿನ್ನದ ಉಂಗುರ ಹಾಗೂ 1,610 ರೂ. ನಗದು ಸ್ವಾಧೀನವಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಸುಭಾಶ್ಚಂದ್ರ ಆಚಾರ್ ಮನೆ ಕಟ್ಟುತ್ತಿದ್ದು ಹಣಕ್ಕಾಗಿ ತನ್ನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಮಹಾರಾಜ ಶ್ರೀ ವರಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಕಳವು ಮಾಡಲು ಯತ್ನಿಸಿ ಬರಿಗೈಯಲ್ಲಿ ಮರಳಿದ್ದು, ದಂಪತಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದು, ಪತಿ ಜೈಲು ಪಾಲಾದರೆ, ಪತ್ನಿ ರಿಮ್ಯಾಂಡ್ ಹೋಮ್ ಸೇರಿದ್ದಾಳೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ ಪತ್ನಿ ಆರೋಪಿತರು. ಮಂಗಳವಾರ ಮಧ್ಯಾಹ ಪೂಜಾ ಕೆಲಸ ಮುಗಿಸಿ ಅರ್ಚರು ಗರ್ಭಗುಡಿಗೆ ಬಾಗಿಲು ಹಾಕಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕರುಣಾಕರ ದೇವಾಡಿಗ ಹಾಗೂ ಆತನ ಪತ್ನಿ ದೇವಸ್ಥಾನಕ್ಕೆ ಭಕ್ತರಂತೆ ತೆರಳಿ ಕಳವು ಯತ್ನ ನಡೆಸಿದ್ದಾರೆ. ಮೊದಲು ಹೊರಗಡೆ ಇದ್ದ ದೇವರಿಗೆ ಕೈಮುಗಿದು ದೇವಸ್ಥಾನ ಪ್ರವೇಶಿಸಿ ಕಾಣಿಕೆ ಡಬ್ಬ ಒಡೆಯುವ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ನಂತರ ಗರ್ಭಗುಡಿಯನ್ನೂ ಪ್ರವೇಶಿಸಿ ಬರಿಗೈಯಲ್ಲಿ ಹಿಂದಕ್ಕೆ ಮರಳಿದ್ದಾರೆ. ಈ ಕೃತ್ಯ ದೇವಸ್ಥಾನ ಸಿಸಿಟಿವಿಯಲ್ಲಿ ದಾಖಲಾಗಿದೆ. ದೇವಸ್ಥಾನ ಕಳವು ಪ್ರತ್ನ ನಡೆಸಿದ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ವ್ಯವಸಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಂ.ನಾಯಕ್ ದೂರು ನೀಡಿದ್ದು,…

Read More