Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಪ್ರತಿಷ್ಠಿತ ಐ.ಎಂ.ಜೆ (IMJ) ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರದಂದು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ದಿವಂಗತ ಐ. ಎಂ. ಜಯರಾಮ ಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ 2004ರಲ್ಲಿ ‘ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (MITK) ಉದಯಿಸಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಸಿಗಬೇಕೆಂಬ ಅವರ ಕನಸು ಇಂದು ಐ.ಎಂ.ಜೆ ಸಂಸ್ಥೆಯಾಗಿ ಹೆಮ್ಮರವಾಗಿ ಬೆಳೆದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, “ಒಂದು ಸಂಸ್ಥೆಯನ್ನು ಕಟ್ಟುವುದು ಸುಲಭದ ಮಾತಲ್ಲ. ಜಯರಾಮ ಶೆಟ್ಟಿ ಅವರು ಈ ಗ್ರಾಮೀಣ ಪ್ರದೇಶದಲ್ಲಿ ಇಂತಹ ಒಂದು ಅತ್ಯುನ್ನತ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಈ ಭಾಗದ ಶೈಕ್ಷಣಿಕ ಚಿತ್ರಣವನ್ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಶೇ.98.64 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 147 ವಿದ್ಯಾರ್ಥಿಗಳಲ್ಲಿ 145 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 63 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಸಂಸ್ಕೃತ ವಿಷಯದಲ್ಲಿ 16 ವಿದ್ಯಾರ್ಥಿಗಳು 100 ಅಂಕಗಳನ್ನು ಪಡೆದಿದ್ದರೆ, ವ್ಯವಹಾರ ಅಧ್ಯಯನದಲ್ಲಿ 9, ಲೆಕ್ಕಶಾಸ್ತ್ರದಲ್ಲಿ 3, ಗಣಿತ, ಭೌತಶಾಸ್ತ್ರ ಮತ್ತು ಕಂಪ್ಯೂಟರ್ ಸಾಯನ್ಸ್ನಲ್ಲಿ ತಲಾ ಇಬ್ಬರು ವಿದ್ಯಾರ್ಥಿಗಳು, ಸಂಖ್ಯಾಶಾಸ್ತ್ರ, ಅರ್ಥಶಾಸ್ತç ಮತ್ತು ಕನ್ನಡದಲ್ಲಿ ತಲಾ ಒಬ್ಬ ವಿದ್ಯಾರ್ಥಿ 100 ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 594 ಅಂಕಗಳನ್ನು ಪಡೆದಿರುವ ಗೌತಮಿ ಜಿ. ನಾಯಕ್ ಕಾಲೇಜಿನ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ಪ್ರತೀಕ್ ಕೊಠಾರಿ 590 ಅಂಕಗಳನ್ನು ಪಡೆದು ಪ್ರಥಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ತ್ರಿಶಾ ಪ.ಪೂ ಕಾಲೇಜು ಮೂರನೇ ವರ್ಷದಲ್ಲೂ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ವೀಕ್ಷಿತ್ ಎಸ್. ಶೆಟ್ಟಿ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ, ನವನೀತ್ ಪೈ 590 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ ಹಾಗೂ ನಿನಾದ್. ಆರ್. ನಾಯ್ಕ್ 588‌, ಪೂಜಿತ ಶೆಣೈ 587, ಪಾವನಿ 580, ಮೇಘನಾ ಎಸ್. ಕೆ. 578 ಅಂಕಗಳನ್ನು ಗಳಿಸಿರುತ್ತಾರೆ. 24 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ, 77 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 108 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ. 45 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಭೌತಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು, ಗಣಿತಶಾಸ್ತ್ರದಲ್ಲಿ9, ಗಣಕ ವಿಜ್ಞಾನದಲ್ಲಿ15, ಕನ್ನಡದಲ್ಲಿ 01, ಹಿಂದಿಯಲ್ಲಿ 01, ಸಂಸ್ಕೃತದಲ್ಲಿ 19 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಪಾಧ್ಯಕ್ಷ ಕಾರ್ಮಿಕ ಸಂಘಟನೆಗಳ ಮುಖಂಡ ಕೋಣಿ ವೆಂಕಟೇಶ ನಾಯಕ್ (74) ಗುರುವಾರ ನಿಧನರಾದರು. ತಾಲ್ಲೂಕಿನ ಕೋಣಿ ಗ್ರಾಮದವರಾದ ವೆಂಕಟೇಶ ನಾಯಕ್, ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದೇಹದಾನದ ಘೋಷಣೆ ಮಾಡಿದ್ದರಿಂದ ಅವರ ಮೃತದೇಹವನ್ನು ಕೆಎಂಸಿ ಆಸ್ಪತ್ರೆಗೆ ನೀಡಲಾಗುತ್ತಿದೆ. ವೆಂಕಟೇಶ ನಾಯಕ್ ಕಮ್ಯುನಿಸ್ಟ್ ಚಳವಳಿಗಾಗಿ ತಮ್ಮ ಜೀವನವನ್ನು ಮುಡುಪಾಗಿರಿಸಿದ್ದರು. ಉಡುಪಿ ಜಿಲ್ಲಾ ಸಿಪಿಐ (ಎಂ) ಕಾರ್ಯದರ್ಶಿ ಮಂಡಳಿಯ ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದರು. ವಿದ್ಯಾರ್ಥಿ ದಿಶೆಯಲ್ಲಿ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದರು. ಭೂ ಮಾಲೀಕರ ದೌರ್ಜನ್ಯಗಳ ವಿರುದ್ಧ ನಡೆದ ಹೋರಾಟದ ಸಂದರ್ಭದಲ್ಲಿ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಲಾರಾಧನೆ ಮೂಲಕ ಸಮಾಜಸೇವೆಗೆ ಮುನ್ನುಡಿ ಇಡುವ ಕಾರ್ಯ ನಿಜಕ್ಕೂ ಶ್ಲಾಘನಾರ್ಹ ಕಾರ್ಯ ಎಂದು ಕೋಟದ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು ಅವರು ಬುಧವಾರ ಸಾಲಿಗ್ರಾಮದ ಪಾರಂಪಳ್ಳಿ ಪ್ರಗತಿಪರ ಕೃಷಿಕ ರವೀಂದ್ರ ಐತಾಳ್ ಮನೆಯಲ್ಲಿ ಹಮ್ಮಿಕೊಂಡ ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇಗುಲದ ಯಕ್ಷಗಾನ ಮಂಡಳಿಯ ಯಕ್ಷಗಾನ ಬಯಲಾಟದ ಅಂಗವಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರವೀಂದ್ರ ಐತಾಳ್‌ರವರ ವಿನೂತನ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರಲ್ಲದೆ ಯಕ್ಷಕಲಾವಿದರಿಗೆ ಸಹಾಯಮಾಡುವ ಮನಸ್ಥಿತಿ ಶ್ರೇಷ್ಠವಾದದ್ದು ಈ ನಿಟ್ಟಿನಲ್ಲಿ ಪಟ್ಲ ಫೌಂಡೇಶನ್ ಇಡೀ ಕಲಾವಿದರಿಗೆ ಶ್ರೀರಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಇದೇ ವೇಳೆ ಬಡಗಿನ ಶ್ರೇಷ್ಠ ಸ್ತ್ರೀವೇಷಧಾರಿ ಶಶಿಕಾಂತ್ ಶೆಟ್ಟಿ ಕಾರ್ಕಳ ದಂಪತಿಗಳನ್ನು ಸನ್ಮಾನಿಸಲಾಯಿತು. ಪತ್ರಕರ್ತ ರವೀಂದ್ರ ಕೋಟ, ಪವರ್ ಲಿಫ್ಟರ್ ಆದಿತ್ಯ ಸದಾನಂದ್, ಸ್ಥಳೀಯ ಕೃಷಿ ಕಾಯಕಜೀವಿಗಳನ್ನು ಅಭಿನಂದಿಸಲಾಯಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ 10 ಸ್ಥಾನದಲ್ಲಿ ಒಟ್ಟು 35 ರ‍್ಯಾಂಕ್‌ಗಳನ್ನು ಪಡೆಯುವುದರ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ, ಇಂಚರಾ ಸಿ. ಪೂಜಾರಿ (596) 4ನೇ ರ‍್ಯಾಂಕ್‌, ಅಕ್ಷಯ್ ಅಶ್ವಿನ್ ಪೈ (595) 5ನೇ ರ‍್ಯಾಂಕ್‌, ಪ್ರವೀಣಾ ಪೈ, ದೀಕ್ಷಾ ವಿ. ಕಾಮತ್, ಶ್ರೀನಿಧಿ (593) 7ನೇ ರ‍್ಯಾಂಕ್‌, ಕೌಸ್ತುಬಾ, ವಸಂತ್ ಭಟ್, ವರ್ಷ ಕೆ., ಪ್ರತಿಕ್ಷಿತಾ, ರೇಖಾ ಎಲ್., ಕ್ಷಿಪಾಲಿ (592) 8ನೇ ರ‍್ಯಾಂಕ್‌, ವಿಭವ್ ಮೇಲಾಡಿ, ವಿಜೇತಾ ಆರ್. ಭಟ್(591) 9 ನೇ ರ‍್ಯಾಂಕ್‌, ಧನ್ಯಾ ಜೆ. ಪಟಗಾರ್, ಮೋನಿಶಾ ಪಿ.ವಿ., ರಚನಾ (590) 10ನೇ ರ‍್ಯಾಂಕ್‌ ಪಡೆದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಬಿ. ಶ್ರೀಲಕ್ಷ್ಮಿ ವಿ. ಅಡಿಗ, ಸಾನಿಕಾ (596) 5ನೇ ರ‍್ಯಾಂಕ್, ರಾಜೇಂದ್ರ ಭಟ್, ಶ್ರಾವ್ಯ (595) 6ನೇ ರ‍್ಯಾಂಕ್‌, ಧನ್ಯಾ ಭಟ್, ಹರ್ಷಿತಾ ಪೂಜಾರಿ, ಕೆ.ಪಿ ಶಾನ್ವಿ, ಸಮೀಕ್ಷಾ ( 594) 7ನೇ ರ‍್ಯಾಂಕ್‌, ತನುಶ್ರೀ ರವಿ ಪೂಜಾರಿ, ಮೇನಕಾ, ಮೊಹಮ್ಮದ್ ಹುಝೈಫಾ (593)…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ಅನನ್ಯ ಕೆ., 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್‌ ಪಡೆದು, ದ್ವಿತೀಯ ಪಿಯು ಫಲಿತಾಂಶದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಾಧನೆ ಮೆರೆದಿದ್ದಳು. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಮಂಜುನಾಥ್ ಎಸ್. 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಶ್ರೇಷ್ಠ ಸಾಧನೆ ಮೆರೆದಿದ್ದಾಳೆ. ಈ ವರ್ಷದ ಫಲಿತಾಂಶದಲ್ಲಿ 95 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಸ್ಥಾನ ಪಡೆದಿದ್ದಾರೆ. 687 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದರೆ, 1557 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, 1892 ವಿದ್ಯಾರ್ಥಿಗಳು 85% ಕ್ಕಿಂತ ಹೆಚ್ಚು (ಡಿಸ್ಟಿಂಕ್ಷನ್) ಅಂಕಗಳನ್ನು ಗಳಿಸಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025-2026ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕುಂದಾಪುರದ ‘ಸುಜ್ಞಾನʼಪಿಯು ಕಾಲೇಜು ತನ್ನ ಮೊದಲ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೇ ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಎಸ್‌ ಎಸ್‌ ಎಲ್‌ ಸಿಯಲ್ಲಿ ಶೇಕಡಾ 95ಕ್ಕಿಂತ ಅಧಿಕ ಫಲಿತಾಂಶ ಪಡೆದ ಕೇವಲ 9 ವಿದ್ಯಾರ್ಥಿಗಳನ್ನೊಳಗೊಂಡ ಒಟ್ಟು 125 ವಿದ್ಯಾರ್ಥಿಗಳಿರುವ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್‌ ನ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಅಧಿಕ ಅಂಕ ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ 84 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5 ಹಾಗೇ ಪ್ರಥಮ ಶ್ರೇಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ 33, ವಾಣಿಜ್ಯ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಿರುವ ವಿಜ್ಞಾನ ವಿಭಾಗದ ಸಾಧಕರು: ಸಮ್ಮೆದ ಪಾರೀಸ ಭೋಜ: 587 ಅಂಕಗಳು ಸಿಂಚನಾ: 586 ಅಂಕಗಳು ಪ್ರತೀಕ್ಷಾ ಎಚ್‌. ಶೆಟ್ಟಿ: 586 ಅಂಕಗಳು ಎನ್‌. ರಕ್ಷಾ: 584…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025- 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ ಐದನೇ ವರ್ಷವೂ ಶೇಕಡ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 589ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿ:ಪಿಸಿಎಂಬಿ ವಿಭಾಗ:ಶ್ರಾವ್ಯ ಬಾಲಕೃಷ್ಣ 595, ತೇಜಸ್ ಆರ್ ಬಿ 594, ಮೋಕ್ಷ ಬಿ.ಎಂ. 593, ವರ್ಷಿತಾ ಎನ್ 593, ದಿಶಾ ಎ. 592, ಲೇಖನ್ ಕರಿಯಪ್ಪ ಎಂ.ಡಿ. 592, ಪೂರ್ಣಿಮಾ ಕೆ ಎ 592, ಪ್ರಜ್ಞಾ ಎಸ್ 591, ಅನನ್ಯ ರಾಜಶೇಖರ್ ಬಿ 590, ಧೃವ ವಿ ಬಿ 589, ಬಿಂದು ಪಿ ಗೌಡ 589, ನಾಗಶ್ರೀ ರಾಮಚಂದ್ರ ಗೌಡ 589, ತೇಜಸ್ ಹೆಗ್ಡೆ ಹೆಚ್ ಡಿ 589, ಭೂಮಿಕಾ ಎಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ. 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ:ರಶ್ಮಿ ಪೈ 598, ಶ್ರಾವ್ಯ ದೇವಾಡಿಗ 597, ಅಕ್ಷತಾ ವೀರಣ್ಣ 596, ಪ್ರಜ್ಞಾ ಎಸ್. ಪೂಜಾರಿ 594, ಇಂಚರಾ ಅಶೋಕ್ 594, ಮಾನ್ಯ 592, ಪ್ರಸಾದ್ ಪೂಜಾರಿ 591, ಸ್ಮೃತಿಕಾ 590 ಅಂಕಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ:ಶಮ್ಯ ಶೆಟ್ಟಿ 597, ಪ್ರಥಮ ಕಾಂಚನ್ 596, ಸುಚಿತ್ರ 595, ಅನ್ವಿತಾ 594, ಸಾನಿಕಾ 593, ರನ್ಮಯ್ 592, ಕಲ್ಪಿತಾ 592, ಪ್ರೀತನ್ 591 ಅಂಕ ಗಳಿಸಿ ರಾಜ್ಯ ಮಟ್ಟದಲ್ಲೇ ವಿಶೇಷ ಸಾಧನೆ ಮಾಡಿದ್ದಾರೆ.…

Read More