ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಸಿಬಿಎಸ್ಇ ಸ್ಕೂಲ್ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಡಾ. ಸರ್ವಪಲ್ಲಿ ರಾಧಾ ಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು, ಶಿಕ್ಷಕರ ಜವಾಬ್ದಾರಿಯುತ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ ಅವರು ಮಾತನಾಡಿ, ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದು ಸತ್ಪ್ರಜೆಗಳಾಗಿ ದೇಶ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಶಿಕ್ಷಕಿಯರಾದ ನಂದಿನಿ, ರಜನಿ ಹಾಗೂ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು. ವಿದ್ಯಾರ್ಥಿಗಳಾದ ನವಮಿ ಸ್ವಾಗತಿಸಿ, ಬಿಂದುಶ್ರೀ ಕಾರ್ಯಕ್ರಮ ನಿರೂಪಿಸಿ, ಮಿರ್ಥುಲಾ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಮುಖ್ಯ. ಇಲ್ಲಿ ಅಂಕಗಳಿಗಿಂತಲೂ ಕೌಶಲ್ಯಗಳಿಗೆ ಹೆಚ್ಚು ಪ್ರಾಧ್ಯಾನತೆಯಿದ್ದು, ವಿದ್ಯಾರ್ಥಿಗಳಿಗೆ ನಾಯಕತ್ವ, ಕ್ರಿಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಹಲವಾರು ಅವಕಾಶಗಳಿದ್ದು, ಅಂತಹ ಅವಕಾಶಗಳ ಸದುಪಯೋಗ ಪಡೆದುಕೊಳ್ಳಿ ಹಾಗೂ ಜೀವನಾನುಭವ ಬದುಕಿನ ಬಹುದೊಡ್ಡ ಪಾಠ ಎಂದು ವಂಡ್ಸೆ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳ ಪದವಿ ಜೀವನಕ್ಕೆ ಶುಭ ಹಾರೈಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ರಿ ಮತ್ತು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಅಬ್ಬಕ್ಕ @500 ಪ್ರೇರಣದಾಯಿ 100 ಉಪನ್ಯಾಸಗಳ ಸರಣಿ –ಎಸಳು 42 ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಇದರ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಬ್ಬಕ್ಕನವರ ಶೌರ್ಯ, ಧೈರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವಳು ಜೀವನವೇ ಇಂದಿನ ಯುವ ಮನಸ್ಸುಗಳಿಗೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ರಾಣಿ ಅಬ್ಬಕ್ಕ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ವೃತ್ತಿ ಮಾರ್ಗದರ್ಶಕರಾದ ಸತ್ಯಶ್ರೀ ಗೌತಮ್ ಅವರು ರಾಣಿ ಅಬ್ಬಕ್ಕ ಅವರು ಜೀವನ ಮತ್ತು ಧೈರ್ಯ ಸಾಹಸಗಳು ಎಂದಿಗೂ ಆದರ್ಶ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಸುರತ್ಕಲ್ನ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸುರತ್ಕಲ್ನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪ.ಪೂ ಕಾಲೇಜು 8 ಚಿನ್ನ ಹಾಗೂ 3 ಬೆಳ್ಳಿಯೊಂದಿಗೆ ಒಟ್ಟು 11 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲೂ ಆಳ್ವಾಸ್ 6 ಚಿನ್ನ ಹಾಗೂ 3 ಕಂಚಿನೊಂದಿಗೆ ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡು ಅವಳಿ ಪ್ರಶಸ್ತಿಗೆ ಭಾಜನವಾಯಿತು. ಹುಡುಗರ ವಿಭಾಗದಲ್ಲಿ ಆಳ್ವಾಸ್ ಸಾಧನೆ:61 ಕೆಜಿ – ಅರುಣ್ (ಪ್ರಥಮ), 65 ಕೆಜಿ – ಶಶಿಕುಮಾರ್ (ಪ್ರಥಮ), ರಂಜನ್ (ದ್ವಿತೀಯ), 70 ಕೆಜಿ – ಮನೋಜ್ (ಪ್ರಥಮ), 74 ಕೆಜಿ – ಶಿವರಾಜ್ ಕುಮಾರ್ (ಪ್ರಥಮ), ರಜತ್ ಬಾಸು (ದ್ವಿತೀಯ), 79 ಕೆಜಿ – ಸಂಕೇತ್ (ಪ್ರಥಮ), 86 ಕೆಜಿ – ಕುಶಾಲ್ (ಪ್ರಥಮ), 92 ಕೆಜಿ – ಶಮಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಗಣೇಶ್ ಮೊಗವೀರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ರಿ., ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಂ.ಎ೦ ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಬಿಆರ್ ನಾಯ್ಕ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದರ್, ಕಾರ್ಯದರ್ಶಿ ಜಗದೀಶ ನೆಂಪು, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು, ಸಾಂಸ್ಕೃತಿಕ ಕಾರ್ಯದರ್ಶಿ ಜಯಂತ್ ಕುಂದರ್, ಜನಾರ್ದನ ಮೊಗವೀರ ತೊಪ್ಪು, ಗಣೇಶ್ ಕಾಂಚನ್, ರಾಘವೇ೦ದ್ರ ಚಂದನ್ ಹಾಗೂ ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲ ಜಿ. ಚಂದನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀದರಿನ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (ಎಚ್. ಕೆ. ಇ. ಸೊಸೈಟಿ ) ವಿಧ್ಯಾರ್ಥಿನಿ ಅನುಪಮ ಹೊಳ್ಳ ಅವರು ಇಂಗ್ಲೀಷ್ ವಿಜ್ಞಾನ ವಿಭಾಗ ಪ್ರಥಮ ವರ್ಷ (ಬಿ. ಎಡ್) ದಲ್ಲಿ 8.75 ಎಸ್. ಜಿ. ಪಿ. ಎ. ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನುಪಮ ಹೊಳ್ಳ ಅವರು ಬೀದರಿನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಾಹಿತಿ ಗೋಪಾಲಕೃಷ್ಣ ಹೊಳ್ಳ ವಂಡ್ಸೆ ಅವರ ಪುತ್ರಿ.ಇವರು ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಾಲಿಗ್ರಾಮದವರು. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಹಪಾಟಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನರ ಮೇಲೆ ಜಿ ಎಸ್ ಟಿ ಹೊರೆ ಹೋರಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಸಾಧನೆಯಾದರೆ ಜನಸಾಮಾನ್ಯರಿಗೆ ಹೊರೆಯಾಗಿದ್ದ ಜಿಎಸ್ಟಿ ವಿರುದ್ಧ ನಿರಂತರವಾಗಿ ಧ್ವನಿ ಏತ್ತಿ, ಹೋರಾಟ ಮಾಡಿ ಇವತ್ತು ಜಿಎಸ್ಟಿ ಹೊರೆ ಕಡಿಯಾಗಲು ಕಾರಣ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೇಂದ್ರ ಸರ್ಕಾರ ಅವೈಜ್ಞಾನಿಕ ಹಾಗೂಅಸಮರ್ಪಕ ಜಿ ಎಸ್ ಟಿ ಯನ್ನು 2016 ರಲ್ಲಿ ಜಾರಿಗೆ ತಂದಾಗ ಅಂದೇ ರಾಹುಲ್ ಗಾಂಧಿ ಇದನ್ನು ವಿರೋಧಿಸಿದ್ದರು ಹಾಗೂ ನಾಲ್ಕು ಶ್ರೇಣಿಯಲ್ಲಿರುವ ಜಿಎಸ್ಟಿಯನ್ನು ಎರಡು ಶ್ರೇಣಿಗೆ ಮಿತಿಗೊಳಿಸಲು ಆಗೃಹ ಮಾಡಿದ್ದರು ಹಾಗೂ ಜಿ ಎಸ್ ಟಿ ಗರಿಷ್ಠ ಮಿತಿಯನ್ನು 18% ಗೆ ನಿಗದಿಗೊಳಿಸುವಂತೆ ಸಲಹೆ ನೀಡಿದ್ದರು, ಆದರೆ ಕೇಂದ್ರ ಸರ್ಕಾರ ಇಷ್ಟು ವರ್ಷಗಳ ಕಾಲ ಸುಮಾರು 28% ತನಕ ನಾಲ್ಕು ಶ್ರೇಣಿಯಲ್ಲಿ ಜಿಎಸ್ಟಿ ಯನ್ನು ಜನಸಾಮಾನ್ಯರ ಮೇಲೆ ಹೇರಿ, ತೆರಿಗೆ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಹಾಗೂ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯ ಸಂಘದ ಸಹಯೋಗದೊಂದಿಗೆ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ‘ಫೈನಾನ್ಸಿಯಲ್ ಸ್ಕಿಲ್ ಡೆವಲಪ್ಮೆಂಟ್’ ಎನ್ನುವ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬೆಂಗಳೂರಿನ ಎಂ.ಎಫ್.ಕೆ ಫೌಂಡೇಶನ್ ನ ಸಾಂಸ್ಥಿಕ ಪಾಲುದಾರಿಕೆಗಳ ಮುಖ್ಯಸ್ಥೆ ಅರ್ಪಣಾ ಭಟ್ ನಡೆಸಿಕೊಟ್ಟರು. ಅವರು ಶೈಕ್ಷಣಿಕ ಕಲಿಕೆ ಮತ್ತು ಉದ್ಯಮದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಪೊರೇಟ್ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವಲ್ಲಿ ಪ್ರಾಯೋಗಿಕ ತರಬೇತಿ ಕೌಶಲ್ಯ ಮತ್ತು ವೃತ್ತಿಪರ ಸಂಪನ್ಮೂಲಗಳನ್ನು ಪಡೆದುಕೊಳ್ಳಬೇಕಾದ ಮಹತ್ವವನ್ನು ತಿಳಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸುವವರನ್ನು ಕಲಿಕೆ, ನಿರ್ವಹಣಾ ವ್ಯವಸ್ಥೆಗಳು (LMS) ಮತ್ತು ನೇರ ತರಬೇತಿ ಅವಧಿಗಳು ಸೇರಿದಂತೆ ಎಂ.ಎಫ್.ಕೆ ಯ ಉಚಿತ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಪ್ರಮುಖ ಭಾಗವಾಗಿ ಬೆಂಗಳೂರಿನ ಎಂ ಎಫ್ ಕೆ ಫೌಂಡೇಶನ್ ಮತ್ತು ಮೂಡ್ಲಕಟ್ಟೆ ಪದವಿ ಕಾಲೇಜಿನ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಶುಭಾಂಶು ಶುಕ್ಲಾ ಅವರು ಇಂದು ಭಾರತದ ಹೆಮ್ಮೆಯ ಪುತ್ರನಾಗಿದ್ದು, ಎಲ್ಲರಿಗೂ ತಿಳಿದ ವಿಷಯ. ಅವರು ಆ ಸಾಧನೆಯ ಶಿಖರದಲ್ಲಿದ್ದು ಮಾತಾಡುವಾಗ ಜೀವನಪಥದಲ್ಲಿ ಬೋಧಿಸಿದ ಶಿಕ್ಷಕರನ್ನು ಸ್ಮರಿಸಿದರು. ಪ್ರತಿಯೊಬ್ಬ ಸಾಧಕನ ಹಿಂದೆ ಕಾಣದ ಬಹಳಷ್ಟು ಜನರ ಪರಿಶ್ರಮ ಇದ್ದೇ ಇರುತ್ತದೆ. ಶಿಕ್ಷಕರು ಬಯಸಿದರೆ ಸಮಾಜವನ್ನೇ ಪರಿವರ್ತಿಸಬಹುದು. ವಿದ್ಯಾರ್ಥಿ ಶಿಕ್ಷಕರಿಂದ ಸದಾ ಸನ್ಮಾರ್ಗದರ್ಶನ ಪಡೆಯಬೇಕು. ತಂದೆ ತಾಯಿಯರಿಂದ ಆರಂಭಿಸಿ ನಮಗೆ ತಿಳಿಹೇಳಿದ ಎಲ್ಲರೂ ಶಿಕ್ಷಕರಾಗಿದ್ದು, ಅವರನ್ನು ಗೌರವಿಸುವುದನ್ನು ಮರೆಯಬಾರದು. ಎನ್ನುತ್ತಾ ಶಿಕ್ಷಕರಿಗೆ ಜವಾಬ್ದಾರಿಯನ್ನು ನೆನಪಿಸುತ್ತಾ, ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಬೋಧಿಸಿದರು. ಅತಿಥಿಗಳಾಗಿ ಆಗಮಿಸಿದ ರಾಘವೇಂದ್ರ ಭಾರತೀ ಸಂಸ್ಕೃತ ಮಹಾವಿದ್ಯಾಲಯ ಸುಬ್ರಹ್ಮಣ್ಯದ ನಿವೃತ್ತ ಪ್ರಾಂಶುಪಾಲರಾದ ವಿಶ್ವೇಶ್ವರ ಗೋಪಾಲ ಹೆಗಡೆ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಹಟ್ಟಿಯಂಗಡಿಯ ಪೂರ್ಣಚಂದ್ರನಂತೆ ಶೋಭಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿ 2023-24 ನೀಡಿದ ಹಿನ್ನಲೆಯಲ್ಲಿ ಆ30.ರಂದು ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ| ಕೃಷ್ಣ ಕಾಂಚನ್ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಅವರಿಗೆ ಬ್ಯಾಂಕಿನ ಪರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ ಹಂದೆ, ನಿಕಟಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ಮಾಜಿ ನಿರ್ದೇಶಕರಾದ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.
