Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಇಲ್ಲಿಯ ಶಿಕ್ಷಣ ಸಂಯೋಜಕರಾದ ರಾಜಾ ಖಾರ್ವಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ.8೦ ಮತ್ತು ಶೇ.90 ಕ್ಕಿಂತಲೂ  ಅಧಿಕ ಅಂಕ ಗಳಿಸಿದ  ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸ್ವಾಗತಿಸಿ, ಸಹಶಿಕ್ಷಕಿ ಶುಬ್ರತಾ ನಿರೂಪಿಸಿದರು, ವಿದ್ಯಾರ್ಥಿನಿ ಶ್ರಾವಣಿ ಎಮ್. ನಾಯಕ್ ವಂದಿಸಿದಳು. ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥನೆಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗದು ಕಳವು ಮಾಡಿರುವ ಘಟನೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾನದ ಗೆಂಡೋತ್ಸವ ಕಾರ್ಯಕ್ರಮಕ್ಕೆ ಹೆಂಡತಿ ಹಾಗೂ ಮಗಳೊಂದಿಗೆ ಮನೆಗೆ ಬೀಗ ಹಾಕಿ ಹೋಗಿದ್ದು ಪೂಜೆ ಮುಗಿಸಿ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಮುಖ್ಯ ದ್ವಾರದ ಬೀಗವನ್ನು ಕತ್ತಿಯಿಂದ ಮುರಿದು, ಒಳನುಗ್ಗಿದ ಕಳ್ಳರು, ಕೋಣೆಯ ಕಾಪಾಟಿಲ್ಲಿದ್ದ 2,35,000 ರೂ. ನಗದು ಮತ್ತು ಚಿನ್ನದ ಬ್ರಾಸ್ ಲೈಟ್ ಹಾಗೂ ಕಿವಿಯ ಬೆಂಡೋಲೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 5,35,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ 400 ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ, ಆರೋಪಿಗಳಾದ ಅಬ್ದುಲ್ ಮಜೀದ್ ಮತ್ತು ಆಯಿಷಾ ವಾಸಿಂ ಎಂಬುವವರು ಮೂರು ಚಕ್ರದ ಗೂಡ್ಸ್ ವಾಹನದಲ್ಲಿ ಅಕ್ಕಿಯನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಸರ್ಕಾರದ ಯೋಜನೆಯಡಿ ಉಚಿತವಾಗಿ ವಿತರಿಸಬೇಕಾದ ಈ ಅಕ್ಕಿಯನ್ನು ಅಪರಿಚಿತ ಮೂಲಗಳಿಂದ ಪಡೆದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು ಎಂದು ಆರೋಪಿಸಲಾಗಿದೆ. ಒಟ್ಟು 9,200 ರೂ. ಮೌಲ್ಯದ 15 ಚೀಲಗಳಲ್ಲಿದ್ದ 400 ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಅಕ್ಕಿಯನ್ನು ತಲ್ಲೂರು ಟಿಎಎಂಪಿಎಂಸಿ ಗೋದಾಮಿನಲ್ಲಿ ಇರಿಸಲಾಗಿದೆ. ಆಹಾರ ನಿರೀಕ್ಷಕರ ದೂರಿನ ಆಧಾರದ ಮೇಲೆ ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಬೈಲೂರು ನಿವಾಸಿ, ನಿವೃತ್ತ ಶಿಕ್ಷಕ ಹಳ್ಳಾಡು ವಿಶ್ವನಾಥ ಶೆಟ್ಟಿ (90) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪುತ್ರರಾದ ಯುವ ಮೆರಿಡಿಯನ್ ಗ್ರೂಪ್ ಆಫ್ ಕಂಪೆನಿಯ ಪಾಲುದಾರರಾದ ಬೈಲೂರು ಉದಯ್ ಕುಮಾರ್ ಶೆಟ್ಟಿ ಹಾಗೂ ಬೈಲೂರು ವಿನಯ್ ಕುಮಾರ್ ಶೆಟ್ಟಿ ಇದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಟೀಂ ಯುವಶಕ್ತಿ ಟ್ರಸ್ಟ್ʼ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು ಈ ಕಾರ್ಯ ನಿಜಕ್ಕೂ ಅಭಿನಂದನೀಯ. ಅವರುಗಳು ಈ ಕಾರ್ಯ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಮಾತನಾಡಿ, ವಿದ್ಯಾರ್ಥಿಗಳ ಈ ಕೆಲಸ ಕಾಲೇಜಿನ ಹೆಮ್ಮೆ. ಇನ್ನಷ್ಟು ವಿದ್ಯಾರ್ಥಿಗಳು ಇಂತಹ ಒಳ್ಳೆಯ ಕೆಲಸದಲ್ಲಿ ತೊಡಗಿಕೊಳ್ಳಿ. ವಿದ್ಯಾರ್ಥಿಗಳು ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾಗಮಂಗಲೋತ್ಸವದ ಯಶಸ್ಸು ಶ್ರೀ ದೇವರ ಇಚ್ಛೆಯಂತೆ ನೆರವೇರಿದೆ ಎಂದು ಕೋಟದ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಕೋಟ ಅಮೃತೇಶ್ವರೀ ಸಭಾಂಗಣದಲ್ಲಿ ಹಮ್ಮಿಕೊಂಡ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ನಾಗಮಂಡಲದಲ್ಲಿ ಸ್ವಯಂಸೇವಕರ ಹಾಗೂ ಹದಿನಾಲ್ಕು ಗ್ರಾಮದ ಗ್ರಾಮಸ್ಥರ ಪಾತ್ರದ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ ಅವರು ದೇಗುಲದ ಆಡಳಿತ ಮಂಡಳಿ ಅವಿರತವಾಗಿ ಶ್ರಮಿಸಿದನ್ನು ಸ್ಮರಿಸಿದರು. ಈ ಹಿನ್ನಲ್ಲೆಯಲ್ಲಿ ಮಿತ್ರ ಭೋಜನಕೂಟವನ್ನು ಹಮ್ಮಿಕೊಂಡಿದ್ದು ಯಶಸ್ಸಿಗೆ ಶ್ರಮಿಸಿದ ಸಂಘಸಂಸ್ಥೆ, ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ ಈ ಹಿನ್ನಲ್ಲೆಯಲ್ಲಿ ಆಗಮಿಸಿದ ಪ್ರತಿಯೊರ್ವರಿಗೂ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಹಸಿರು ಗಿಡಗಳಾದ ಮಾವು, ಹಲಸು, ಹೂವಿನ 3000 ಅಧಿಕ ಗಿಡಗಳನ್ನು ನೀಡಿದರು. ಸಭೆಯಲ್ಲಿ ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಸುಭಾಷ್ ಶೆಟ್ಟಿ ಗಿಳಿಯಾರು, ಸುಬ್ರಾಯ ಜೋಗಿ, ಜ್ಯೋತಿ ಡಿ. ಕಾಂಚನ್ ಉಪಸ್ಥಿತರಿದ್ದರು. ಟ್ರಸ್ಟಿ ಚಂದ್ರ ಆಚಾರ್ ಸ್ವಾಗತಿಸಿ, ಪ್ರಾಸ್ತಾವನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್‌ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ 2026 ಜನವರಿ 18ರಂದು ನಡೆದ ಯು.ಸಿ.ಇ.ಇ.ಡಿ (UCEED)ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ ಜನರಲ್ ವಿಭಾಗದಲ್ಲಿ 518 ರ‍್ಯಾಂಕ್ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಭೂಮಿಕಾ ವೈ OBC- NCL ವಿಭಾಗದಲ್ಲಿ 1378 ನೇ ರ‍್ಯಾಂಕ್, ಸಂಕೀರ್ತ್ ರಾಜ್ ಕೆ. ಜಿ. 1381ನೇ ರ‍್ಯಾಂಕ್ , ಚಿರಂತ್ ಕೆ.ಎನ್.OBC-NCL ವಿಭಾಗದಲ್ಲಿ 1507ನೇ ರ‍್ಯಾಂಕ್ ಪಡೆದುಕೊಂಡು ಮುಂದಿನ ಹಂತದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ ಮಧ್ಯಾಹ್ನ ಶಿಕ್ಷಕ ಹಾಗೂ ಶಿಕ್ಷಕೇತರ ಮಹಿಳಾ ಸಿಬ್ಬಂದಿಗಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಅದರ ಸಮಾರೋಪವಾಗಿ ಈ ಖೇಲ್ಕೂದ್ ಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕಬಡ್ಡಿ ವಿಶ್ವಕಪ್‌ನ ಚಿನ್ನದ ಪದಕ ವಿಜೇತೆ ಹಾಗೂ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಧನಲಕ್ಷ್ಮಿ ಉದ್ಘಾಟಿಸಿದರು. ಸಕ್ಷಮಾ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ನೋವೊ ಟ್ರೀ ಮೈಂಡ್ಸ್ ಸಂಸ್ಥೆಯ ಸಹನಾ ನಾಗರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಮಹಿಳೆಯರು ಪರಸ್ಪರ  ಒಬ್ಬರನ್ನೊಬ್ಬರು ಬೆಂಬಲಿಸಿ ಕಾರ್ಯನಿರ್ವಹಿಸಿದರೆ  ನಿಜವಾದ ಸಬಲೀಕರಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಕ್ಷಮಾ ಸಂಚಾಲಕಿ ಡಾ. ಗ್ರೀಷ್ಮಾ ಆಳ್ವ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ತಂಡದ ಪರಿಶ್ರಮವನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರಿಗಾಗಿ ಇನ್ನಷ್ಟು ಅರ್ಥಪೂರ್ಣ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಮಾತೃವಂದನ  ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿ ದಾಮೋದರ ಶರ್ಮ ಅವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, “ಸಮುದ್ರಕ್ಕೆ ಹೋದ ನಾವಿಕ, ಯುದ್ಧಕ್ಕೆ ಹೋದ ಸೈನಿಕ, ಹೆರಿಗೆಗೆ ಹೋದ ತಾಯಿ ಮರಳಿ ಬರುವರೆನ್ನುವ ಖಾತ್ರಿ ಇರುವುದಿಲ್ಲ. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಟವನ್ನು ಮಾಡಿರುತ್ತಾರೆ. ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿದಾಗ ಅವರನ್ನು ಅಭಿನಂದಿಸಬೇಕೆಂದರು. ಹಾಗೆಯೇ ತಂದೆ-ತಾಯಿಯ ತ್ಯಾಗಕ್ಕೆ ಗೌರವವನ್ನು ನೀಡುವ ಸಲುವಾಗಿ ಮಾತೃವಂದನೆಯನ್ನು ವಿಧಿವತ್ತಾಗಿ ಮಾಡಿಸಿದರು. ಜನತಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಣ ಮಾರ್ಗದರ್ಶಕರಾಗಿರುವ ಅಭಿಲಾಷ್ ಕ್ಷತ್ರಿಯ ಅವರು ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ “ತಂದೆ ತಾಯಿ ಮಕ್ಕಳಿಗೆ ಮೊದಲು ಗುರುವಾಗಿದ್ದು,ಮಕ್ಕಳ ಯಶಸ್ಸಿನಲ್ಲಿ ಹೆತ್ತವರ ತ್ಯಾಗ, ಪ್ರೀತಿ ಇದ್ದಿರುತ್ತದೆ. ಅಂತಹ ದೈವೀಸ್ವರೂಪರಾದ ತಂದೆ ತಾಯಿಯನ್ನು ಗೌರವಿಸುವುದು ಪ್ರತಿ ಮಗುವಿನ ಆದ್ಯ ಕರ್ತವ್ಯ ಎಂದರು. ಸಮರ್ಪಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲ್ಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಸ್ರೂರು ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನೂತನ ಸಂಚಾಲಕರನ್ನಾಗಿ ಅನುಪಮಾ ಎಸ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಫೆ.11 ರಂದು ನಡೆದ ಶ್ರೀಶಾರದಾ ಕಾಲೇಜು ಟ್ರಸ್ಟ್ ರಿ. ಇದರ ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಸಂಚಾಲಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನೂತನ ಸಂಚಾಲಕರ ಆಯ್ಕೆ ನಡೆಸಲಾಗಿದೆ. ಆಡಳಿತ ಮಂಡಳಿಯ ನೂತನ ಸಂಚಾಲಕರಾಗಿ ಆಯ್ಕೆಯಾಗಿರುವ ಅನುಪಮಾ ಎಸ್ ಶೆಟ್ಟಿ ಅವರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃಧ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರು ಪ್ರತಿಷ್ಠಿತ ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಅಧೀನದಲ್ಲಿ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅನುಪಮ ಅವರು ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ದತ್ತು ಸ್ವೀಕಾರ ಮಾಡಿರುವ ಕೊಡ್ಲಾಡಿ-ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿಯೂ ¸ÁPÀµÀÄÖÖ ಅವರು ಕೊಡುಗೆ ನೀಡಿದ್ದಾರೆ.

Read More