ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಆತಿಥ್ಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ 24ನೇ ಅಂತರ ಕಾಲೇಜು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದರು. ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿಯನ್ನು ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯ ದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ 140ಕ್ಕೂ ಅಧಿಕ ಕಾಲೇಜುಗಳು ಭಾಗವಹಿಸಿದ್ದವು. ಶಶಿರಾಜ್ ರಾವ್ ಕಾವೂರು ರಚಿಸಿದ ಏಕಾದಶಾನನವನ್ನು ಜೀವನ್ ರಾಂ. ಸುಳ್ಯ ನಿರ್ದೇಶಿಸಿದ್ದರು. ಮಗು ಮತ್ತು ಮರ ಕಿರು ಪ್ರಹಸನವನ್ನು ರಾಜೇಂದ್ರ ಪ್ರಸಾದ್ ಮಂಡ್ಯ ಹಾಗೂ ಪ್ರಶಾಂತ್ ಕೋಟ ನಿರ್ದೇಶಿಸಿದ್ದರು. ಸಾತ್ವಿಕ್ ನೆಲ್ಲಿತೀರ್ಥ ಮತ್ತು ಮಧುಸೂದನ(ನೀನಾಸಂ) ಕೊಡಗು ರಂಗವಿನ್ಯಾಸ ಮಾಡಿದ್ದರು. ಎರಡೂ ನಾಟಕಗಳಿಗೆ ಆಳ್ವಾಸ್ ಪಿ.ಯು.ವಿದ್ಯಾರ್ಥಿ, ಸುಳ್ಯ ರಂಗಮನೆಯ ಮನುಜ ನೇಹಿಗ ಸಂಗೀತ ನೀಡಿದ್ದರು. ವಿಜೇತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಬೈಂದೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2025-26 ನೇ ಶೈಕ್ಷಣಿಕ ಸಾಲಿನಲ್ಲಿ 6 ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2024-25 ರಿಂದ 2028-29ನೇ ಸಾಲಿನ ವರೆಗೆ ಪ್ರಧಾನ ಮಂತ್ರಿ ಆವಾಸ್ (ಗ್ರಾಮೀಣ) ವಸತಿ ಯೋಜನೆಯಡಿ ವಸತಿ ರಹಿತ ಅರ್ಹ ಕುಟುಂಬಗಳಿಗೆ ಸಹಾಯಧನ ಆಧಾರಿತ ವಸತಿ ಸೌಲಭ್ಯವನ್ನು ಹಂತ ಹಂತವಾಗಿ ಕಲ್ಪಿಸುವ ಬಗ್ಗೆ ಅರ್ಹ ಫಲಾನುಭವಿಗಳನ್ನು ಗುರುತಿಸುವ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿ ಅರ್ಹರಾಗಿದ್ದು, ವಸತಿ ಸೌಲಭ್ಯಕ್ಕೆ ಬೇಡಿಕೆ ಇರುವ ಫಲಾನುಭವಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನರೇಗಾ ಉದ್ಯೋಗ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ ಮತ್ತು ನಿವೇಶನ ಹೊಂದಿರುವ ಬಗ್ಗೆ ದಾಖಲೆಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಛೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ಬೇಡಿಕೆ ಪಟ್ಟಿಯಲ್ಲಿ ಸೇರಿಸಿಕೊಳ್ಳಬಹುದಾಗಿದೆ. ಅರ್ಹ ವಸತಿ ರಹಿತರು AadhaarFaceRd ಮತ್ತು AwaasPlus 2024 ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಂಡು AwaasPluss 2024 ಆಪ್ ನಲ್ಲಿ ಲಭ್ಯವಿರುವ Self Survey…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.30: ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಬಳಿಕ 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಆದೇಶದನ್ವಯ ಬೆಳಕು ಮೀನುಗಾರಿಕೆ ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ತಿಳಿಸಿದ್ದಾರೆ. ನಿಷೇಧವಿದ್ದಾಗ್ಯೂ ಉಡುಪಿ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗುತ್ತಿದ್ದು, ಈ ಸಂಬಂಧ ಮಾನ್ಯ ಉಚ್ಚ ನ್ಯಾಯಾಲಯದಲ್ಲಿಯೂ ಸಹ ಪ್ರಕರಣಗಳು ದಾಖಲಾಗಿರುತ್ತದೆ. ನ್ಯಾಯಾಲಯದಿಂದ ಈ ಸಂಬಂಧ ನಿಯಮ ಉಲ್ಲಂಘಿಸುವವರ ವಿರುದ್ದ ಕಾನೂನು ಕ್ರಮ ಜರುಗಿಸಲು ನಿರ್ದೇಶನವಿರುತ್ತದೆ. ಆದ್ದರಿಂದ ಮಾನ್ಯ ನ್ಯಾಯಾಲಯದ ಹಾಗೂ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆಯಲ್ಲಿ / ಬುಲ್ ಟ್ರಾಲ್ ಮೀನುಗಾರಿಕೆಯಲ್ಲಿ ತೊಡಗುವ ದೋಣಿಗಳ ಮೀನುಗಾರಿಕೆ ಪರವಾನಿಗೆ ಹಾಗೂ ದೋಣಿ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಅಂತಹ ದೋಣಿಗಳಿಗೆ ಡೀಸೆಲ್ ವಿತರಣೆಯನ್ನು ನಿಲ್ಲಿಸಲಾಗುವುದು. ಇಂತಹ ಪ್ರಕರಣಗಳು ಪುನರಾವರ್ತಿಸಿದ್ದಲ್ಲಿ ಶಾಶ್ವತವಾಗಿ ಅಂತಹ ದೋಣಿಗಳ ನೋಂದಣಿಯನ್ನು ರದ್ದುಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕಾ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ30: ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಕೆ.ಎ.ಎಸ್. ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಹೇಶ್ ಚಂದ್ರ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಮುಂದಿನ ಆದೇಶದ ತನಕ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರನ್ನು ಪ್ರಭಾರ ಉಪವಿಭಾಗಾಧಿಕಾರಿಯಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ. ಇದನ್ನೂ ಓದಿ ► ನಿಷೇಧಿತ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆ ಮುಂದುವರಿಸಿದರೆ ಕಾನೂನು ಕ್ರಮ – https://kundapraa.com/?p=83765 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬ್ಯಾಂಕಿಂಗ್ ಮತ್ತು ಸೈಬರ್ ಕ್ರೈಮ್ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ಬ್ಯಾಂಕ್ನ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ನ ಕ್ಲಸ್ಟರ್ ಮುಖ್ಯಸ್ಥರಾದ ವಿಷ್ಣುಮೂರ್ತಿ ಉಪಾಧ್ಯಾಯ ಭಾಗವಹಿಸಿ, ಈ ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಅತ್ಯಂತ ಜಾಗೃತರಾಗಬೇಕು. ಇಲ್ಲದಿದ್ದಲ್ಲಿ ಗ್ರಾಹಕರು ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಒಂದಿಷ್ಟು ಜಾಗೃತೆ ವಹಿಸಿದಲ್ಲಿ ಆನ್ಲೈನ್ನಿಂದಾಗುವ ಮೋಸಗಳಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಮಾತಾನಾಡುತ್ತಾ, ಡಿಜಿಟಲ್ ಕ್ರಾಂತಿಗೊಂಡ ಈ ಯುಗದಲ್ಲಿ ಎಚ್ಚರವಿಲ್ಲದ ಒಂದು ಹೆಜ್ಜೆ ಆರ್ಥಿಕ ನಷ್ಟಕ್ಕೆ ದಾರಿಯಾಗುವುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಮಾಸೆಬೈಲು: ಹೆತ್ತವರ ಮನೆಯಲ್ಲಿಯ ಪರಿಶ್ರಮ ಹಾಗೂ ಶಿಕ್ಷಕರ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಉನ್ನತ ಸ್ಥಾನಕ್ಕೆ ಏರಿಸುತ್ತದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆತ್ತವರು ಭಾಗವಹಿಸಿ ಸಂಭ್ರಮಿಸಬೇಕು ಎಂದು ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಹೇಳಿದರು. ಅವರು ಇಲ್ಲಿನ ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲಿನಲ್ಲಿ ಕಿಂಡರ್ ಗಾರ್ಟನ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದ ಪದಪ್ರದಾನ ಅಧಿಕಾರಿಯಾಗಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ವಡ್ಡರ್ಸೆ ಪ್ರಕಾಶ್ ಆಚಾರ್ಯ ವಹಿಸಿ, ಮಕ್ಕಳ ಸಂತಸ ಪೋಷಕರಿಗೆ ಆನಂದ ಅದನ್ನು ಮಕ್ಕಳೊಂದಿಗೆ ಸಂಭ್ರಮಿಸಬೇಕು ಎಂದರು. ವೇದಿಕೆಯಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಶ್ರೀಕಾಂತ್ ಶೆಟ್ಟಿ ಜಡ್ಡಿನಗದ್ದೆ, ಜ್ಯೋತಿ ಪೂಜಾರಿ, ನಿಲ್ಸಕಲ್ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗಾಯತ್ರಿ ಅಡಿಗ ಕಾರ್ಯದರ್ಶಿ ಸುನೀತಾ ಕಾಮತ್, ಶಾಲಾ ಸಂಚಾಲಕರಾದ ಶಶಿಧರ್ ದೇವಾಡಿಗ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಧಿಕಾ ರಾವ್ ಮೇಡಂ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಅಮಿತಾ ಮೇಡಂ ಉಪಸ್ಥಿತರಿದ್ದರು. ಕಿಂಡರ್ ಗಾರ್ಟನ್ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶನಿವಾರ ನಡೆಯಿತು. ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ವಾಣಿಶ್ರೀ ಐತಾಳ್, ಬಿ.ಎ.ಎಮ್.ಎಸ್, ಎಂಡಿ. (ಆರ್ಯುವೇದ) ಅವರು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲೇ ಉತ್ತಮ ಸಂಸ್ಕಾರವನ್ನು ಕಲಿಸುವುದರೊಂದಿಗೆ, ಮಕ್ಕಳ ಆಹಾರದ ಬಗ್ಗೆ ಪೋಷಕರಿಗೆ ಉತ್ತಮ ಮಾಹಿತಿಯನ್ನು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಕೃಷ್ಣ ಕಾಮತ್ ಅವರು, ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು, ಪಿಯುಸಿ ಪ್ರಾಂಶುಪಾಲಯರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜ ಅವರು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿ’ಸೋಜರವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗ ಅವರು ಧನ್ಯವಾದ ಸಮರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಲೇಖನ.ಹಿಂದೂಗಳಿಗೆ ಯುಗಾದಿ ಎಂದರೆ ಹೊಸ ವರ್ಷದ ಆರಂಭ. ಕರ್ನಾಟಕದ ಬಹುಭಾಗದ ಜನರು ಮತ್ತು ಆಂಧ್ರ ಪ್ರದೇಶದವರು ಚಾಂದ್ರಮಾನ ಯುಗಾದಿಯನ್ನು ಆಚರಿಸುತ್ತಾರೆ. ಈ ವರ್ಷ ಯುಗಾದಿ ಹಬ್ಬ ಮಾ. 30ರಂದು ಆಚರಿಸಲಾಗುತ್ತದೆ. ಈ ಹಬ್ಬದಂದು ಏನು ಮಾಡಿದರೆ ಒಳ್ಳೆಯದು ಎಂದು ನಮ್ಮ ಹಿರಿಯರು ವಿವರಿಸುತ್ತಾರೆ ಓದಿ ಯುಗಾದಿಯಂದು ಮಾಡಬೇಕಾದ ಶುಭ ಕೆಲಸಗಳು:* ಯುಗಾದಿಯನ್ನು ಶುಭ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಹಿಂದಿನ ದಿನ ಮನೆಯನ್ನು ಸ್ವಚ್ಛಗೊಳಿಸಬೇಕು.* ಯುಗಾದಿಯಂದು ಬ್ರಾಹ್ಮಿ ಮುಹೂರ್ತದಲ್ಲಿ ಏಳಬೇಕು.* ಮನೆಯನ್ನು ಸ್ವಚ್ಛಗೊಳಿಸಿ ಮತ್ತು ದೈನಂದಿನ ಕೆಲಸಗಳನ್ನು ಪೂರ್ಣಗೊಳಿಸಿ. ನಿಮ್ಮ ಮನೆಯನ್ನು ಹೂವಿನಿಂದ ಜೊತೆಗೆ ಮಾವಿನ ಎಲೆಯ ತೋರಣದಿಂದ ಅಲಂಕರಿಸಿ.* ನೀವು ನಿಮ್ಮ ಕೂದಲಿಗೆ ಎಳ್ಳೆಣ್ಣೆಯನ್ನು ಹಚ್ಚಿ ನಂತರ ಸ್ನಾನದ ನೀರಿಗೆ ಒಂದು ಚಿಟಿಕೆ ಅರಿಶಿನವನ್ನು ಸೇರಿಸಿ ಸ್ನಾನ ಮಾಡಿ.* ಹೊಸ ಬಟ್ಟೆಗಳನ್ನು ಧರಿಸಬೇಕು. ನಿಮ್ಮ ಹಣೆಯ ಮೇಲೆ ಕುಂಕುಮ ಇರಲಿ.* ಶುದ್ಧ ಮನಸ್ಸಿನಿಂದ ದೇವರನ್ನು ಪೂಜಿಸಿ. ಯುಗಾದಿಯಂದು ಮಾಡಬಾರದ ಕೆಲಸಗಳಿವು:ಜಗಳವಾಡುವುದು, ಹಣಕಾಸಿನ ವ್ಯವಹಾರಗಳು, ಮಾಂಸಾಹಾರ ಮತ್ತು ಮದ್ಯಪಾನ,…
