ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ ಜಿ ಎಸ್. ಅವರು ಉದ್ಘಾಟಿಸಿದ ಮಾತನಾಡಿ, ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಅರ್ಧ ಜಯಶಾಲಿಯಾದಂತೆ. ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ ಎಂದು ಶುಭ ಹಾರೈಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ ಮಾರುತಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಇಂತಹ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಮಂಜೂರಾದ 2 ಲಕ್ಷ ಸಹಾಯಧನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಕೊಡೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಯಿತು. ಸಹಾಯಧನದ ಮಂಜೂರಾತಿ ಪತ್ರದ ವಿತರಣೆಯನ್ನು ಸಹಕಾರಿ ಧುರೀಣರು, ಸಹಕಾರ ರತ್ನ ಪ್ರಶಸ್ತಿ ವಿಜೇತರು, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು,ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಇಲ್ಲದ ಕ್ಷೇತ್ರ ಇಲ್ಲ. ಹೈನುಗಾರಿಕಾ ಕ್ಷೇತ್ರವನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕೆ ಮತ್ತು ಹೈನುಗಾರಿಕೆಗೆ ಅನೇಕ ರೀತಿಯಲ್ಲಿ ಅನುದಾನಗಳನ್ನ ನೀಡುತ್ತಾ ಹೈನುಗಾರಿಕೆಯನ್ನ ಪ್ರೋತ್ಸಾಹಿಸುತ್ತ ಬಂದಿದ್ದಾರೆ. ವೀರೇಂದ್ರ ಹೆಗ್ಗಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಂದಾಪುರದ ಪಸಿದ್ಧ ವಕೀಲರಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ನೀಡಿ, ವಿವಿಧ ಸ್ಪರ್ಧೆಗಳಲ್ಲಿ ವೀಜೆತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಇನ್ನೋರ್ವ ಮುಖ್ಯ ಅಥಿತಿ ಮಂಜುನಾಥ ಆಸ್ಪತ್ರೆ, ಕುಂದಾಪುರ ಇಲ್ಲಿಯ ನೇತ್ರ ತಜ್ಞರಾದ ಡಾ. ಅನ್ವತಾ ಶೆಟ್ಟಿ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಗುರಿಯನ್ನು ರೂಪಿಸಿಕೊಂಡಿರಬೇಕು ಎಂದು ತಿಳಿಸಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿ’ಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ಹಾಗೂ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು. ಇಲ್ಲಿನ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ’ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು. ಇಂತಹ ಕಾರ್ಯಕ್ರಮ ಕಷ್ಟದ ಕಾರ್ಯ ಎಂದು ಉಲ್ಲೇಖಿಸಿದರು. ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ‘ಮಕ್ಕಳ ಸಂತೆ’ ಬಿಜಿನೆಸ್ ಡೇ ಕಾರ್ಯಕ್ರಮ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ನಡೆಯಿತು. ಗಂಗೊಳ್ಳಿಯ ಉದ್ಯಮಿ ವಿನೋದ್ ಪೈ ಮಕ್ಕಳ ಸಂತೆಯನ್ನು ಮತ್ತು ಗಂಗೊಳ್ಳಿ ಕ್ಲಸ್ಟರ್ನ ಸಿಆರ್ಪಿ ಪ್ರದೀಪ್ ಕುಮಾರ್ ಶೆಟ್ಟಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿಯ ವಿವಿಧ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಾದ ಗೋಪಾಲ ದೇವಾಡಿಗ, ರಾಘವೇಂದ್ರ ಶೇರುಗಾರ್, ಭಗಿನಿ ಕ್ರೆಸೆನ್ಸ್, ಸಭಾ ಭಾನು ಮತ್ತು ಸುಮಯ್ಯ ಮಕ್ಕಳ ಸಂತೆಯ ವಿವಿಧ ಮಳಿಗೆಗಳನ್ನು ಉದ್ಘಾಟಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದಾರೆ. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶೀನಾಥ್ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸಂಚಾಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.13: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಗೆ ಡಿ.10ರಂದು ನಡೆದ ಚುನಾವಣೆಯ ಫಲಿತಾಂಶವು ಗುರುವಾರ ರಾತ್ರಿ ಹೊರಬಿದ್ದಿದ್ದು ಕಾಂಗ್ರೆಸ್ – ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಒಟ್ಟು 33 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 12, ಎಸ್ಡಿಪಿಐ ಬೆಂಬಲಿತ 7, ಬಿಜೆಪಿ ಬೆಂಬಲಿತ 12 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ – ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳ ಚುನಾವಣಾ ಮೈತ್ರಿ ಇದ್ದುದರಿಂದ ಒಂದೂವರೆ ದಶಕದ ಬಳಿಕ ಕಾಂಗ್ರೆಸ್ ಬೆಂಬಲಿತರು ಗಂಗೊಳ್ಳಿ ಗ್ರಾಮ ಪಂಚಾಯತಿಯ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಗಂಗೊಳ್ಳಿಯ ಒಟ್ಟು 8 ವಾರ್ಡ್ಗಳಲ್ಲಿ 1ನೇ ವಾರ್ಡಿನ ಒಟ್ಟು ಐದು ಸ್ಥಾನಗಳಲ್ಲಿ ಗುರುರಾಜ, ರೇಖಾ ಖಾರ್ವಿ ಸರೋಜಕೃಷ್ಣ ಪೂಜಾರಿ, ನಾಗರಾಜ ಖಾರ್ವಿ, ನಾಗರತ್ನ ಶೇರುಗಾರ್ ಗೆಲುವು ಸಾಧಿಸಿದ್ದಾರೆ. 2ನೇ ವಾರ್ಡಿನಲ್ಲಿ ತಬ್ರರೈಸ್, ಶರೀನಾ, ಅಬೂಬಕ್ಕರ್ ನಾಕುದಾ ಹಾಗೂ ರಜಬ್ ಗೆಲುವು ಸಾಧಿಸಿದ್ದಾರೆ. 3ನೇ ವಾರ್ಡಿನಲ್ಲಿ ದೀಪಾ, ಗೋಪಾಲ್ ಖಾರ್ವಿ, ಮಮತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ, ಅಗತ್ಯ ತುರ್ತು ಸೇವೆಗಳನ್ನು ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದ ಆವರಣದಲ್ಲಿ 24*7ರಂತೆ ಒದಗಿಸಲಾಗುತ್ತಿದೆ. ತುರ್ತು ಸೇವೆಗಾಗಿ ಸರಕಾರವು ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು ಸದರಿ ವಾಹನಕ್ಕೆ ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಿರೂಪಾಧಿಕಾರಿ ಅನುರಾಧ ಹಾದಿಮನಿ, ಕಛೇರಿ ಅಧೀಕ್ಷಕರು, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಲ್ಲಿ ಮೊದಲ ಭಾರಿಗೆ ನೂತನ ಮಾದರಿಯ ಬಸ್ಸುಗಳನ್ನು ಪರಿಚಯಿಸಿದ ಏರೋ ಬಸ್ (Aero bus) ಸಂಸ್ಥೆ ಇದೀಗ ಹೊಸತಾಗಿ ನಾಲ್ಕು ಬಸ್ಸುಗಳನ್ನು ಗ್ರಾಹಕರ ಸೇವೆಗೆ ಒದಗಿಸಿಕೊಟ್ಟಿದೆ. ಬಸ್ಸಿನಲ್ಲಿ ಶೌಚಾಲಯ ಸಹಿತ ಸೇವೆ ಹೊಂದಿದ್ದು ಗ್ರಾಹಕರಿಗೆ ಅನುಕೂಲಕರವಾಗಿದೆ. ಏರೋ ಬಸ್ ಸಂಸ್ಥೆಯು ಆರಂಭಗೊಂಡು ಒಂದು ವರ್ಷದಲ್ಲೇ ಉದ್ಯಮ ವಿಸ್ತರಿಸಿಕೊಂಡಿದ್ದು, ಒಟ್ಟು ಆರು ಬಸ್ಸುಗಳು ಬೈಂದೂರು – ಬೆಂಗಳೂರು ಮಾರ್ಗದಲ್ಲಿ ಕಾರ್ಯಾಚರಿಸಲಿದೆ. ನೂತನ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಬೈಂದೂರು ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳು ಜಾರಿಯಲ್ಲಿರುವಾಗ ಯುವ ಉದ್ಯಮಿಗಳಿಬ್ಬರು ಜೊತೆಗೂಡಿ ಹೊಸ ಮಾದರಿಯ ಬಸ್ ಸೇವೆ ಆರಂಭಿಸಿದ್ದಾರೆ. ಬೆಂಗಳೂರು – ಬೈಂದೂರು ಸಂಪರ್ಕಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಟೂರ್ ಪ್ಯಾಕೇಜ್ ಆರಂಭಿಸುವ ಯೋಜನೆ ಹೊಂದಿರುವುದು ಶ್ಲಾಘನೀಯ ಎಂದರು. ಈ ವೇಳೆ ಏರೋ ಬಸ್ ಸಂಸ್ಥೆಯ ಪಾಲುದಾರರಾದ ಕಿಶನ್ ಬೈಂದೂರು, ಜಿತೇಶ್ ಪೂಜಾರಿ ಬೆಳಗಾವಿಯ ಎಂ.ಜಿ ಆಟೋಮೋಟಿವ್ ಆಪರೇಷನ್ ಹೆಡ್ ಪ್ರಕಾಶ್ ವರ್ಮಾ, ಆಪರೇಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ. ಪ್ರೀತಿ ಸೌಹಾರ್ದತೆಗಾಗಿ ನಾವು ಜೀವನದುದ್ದಕ್ಕೂ ಶ್ರಮಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ’30ನೇ ಆಳ್ವಾಸ್ ವಿರಾಸಾತ್’ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಬುಧವಾರ ಅವರು ಉಪನ್ಯಾಸ ನಿಡಿದರು. ಜಾನಪದ ಕಲೆಗಳ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳಬೇಕು. ದೇಶದ ಕಲೆಯನ್ನು ಪ್ರೀತಿಸಬೇಕು ಎಂದರು. ಶುಚಿತ್ವವನ್ನು ಬಿಟ್ಟರೆ ಬದುಕೇ ಇಲ್ಲ. ಶುಚಿತ್ವ ಕೇವಲ ಮಾತಿಗೆ, ಬರಹಕ್ಕೆ ಮೀಸಲಾಗಬಾರದು. ನಮ್ಮ ಜೀವನದಲ್ಲಿ ಅಂತರ್ಗತವಾಗಬೇಕು. ಇದರ ಜೊತೆಗೆ ಮಣ್ಣು ಗಾಳಿ ನೀರು ಆಕಾಶವನ್ನು ರಕ್ಷಿಸುವುದು ನಮ್ಮ…
