ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರು, ಎಸ್.ಡಿ.ಎಂ.ಸಿ ಹಾಗೂ ಹಳೆವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ಇಲ್ಲಿ ಕಲಿತ ವಿದ್ಯಾರ್ಥಿಗಳು ಯಾವುದೇ ಸ್ಥಾನದಲ್ಲಿದ್ದರೂ ಅಭಿಮಾನದಿಂದ ಶಾಲೆಯತ್ತ ಮತ್ತೆ ಹಿಂದಿರುಗಿ ನೋಡಿದರೆ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಬೇಕಿಲ್ಲ. ಅಂತಹ ವಾತಾವರಣವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಸ್ವಯಂಸ್ಪೂರ್ತಿ ಫೌಂಡೇಶನ್ ರಿ. ಬೆಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಟೇಬಲ್ ಕುರ್ಚಿ ಸಹಿತ ನಾಲ್ಕು ಕಂಪ್ಯೂಟರ್ ಸೆಟ್, ಬುಕ್ ರ್ಯಾಕ್ ಹಾಗೂ ಆಟದ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಲೋಪಾರ್ಪಣೆಗೊಳಿಸಿ ಮಾತನಾಡಿ, ಶಾಲೆ ಹಾಗೂ ದೇವಸ್ಥಾನದ ಆವರಣದಲ್ಲಿ ಅಭಿಮಾನ ಹಾಗೂ ಭಕ್ತಿ ಮಾತ್ರವೇ ಪ್ರಧಾನವಾಗಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆಲೋಚನಾ ಕ್ರಮವನ್ನು ರೂಪಿಸುವ ಶಕ್ತಿ ಸರಕಾರಿ ಶಾಲೆಗಳಲ್ಲಿದೆ ಎಂದರು. ಸ್ವಯಂಸ್ಪೂರ್ತಿ ಫೌಂಡೇಶನ್ ಸಂಸ್ಥಾಪಕ ಸಿ.ಎಸ್. ನಾಗರಾಜ ಶೆಟ್ಟಿ ಜಡ್ಕಲ್ ಅವರು ಮಾತನಾಡಿ, ಸಂಸ್ಥೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮಾಚರಣೆ – ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 29 ಜನವರಿಯಿಂದ ಆರಂಭಗೊಳ್ಳಲಿದ್ದು, ಫೆಬ್ರವರಿ 02ರ ತನಕ 5 ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 06:30ರಿಂದ ಅದ್ದೂರಿಯಾಗಿ ನಡೆಯಲಿದೆ. ಸುರಭಿ ಜೈಸಿರಿಗೆ ಚಾಲನೆ:ಜನವರಿ 29ರ ಬುಧವಾರ ಸುರಭಿ ಜೈಸಿರಿಗೆ ಚಾಲನೆ ದೊರೆಯಲಿದ್ದು. ಸಚಿವರಾದ ಮಂಕಾಳ ವೈದ್ಯ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಅವರು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಶುಭಶಂಸನೆಗೈಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಅಂದು ಸುರಭಿಯ ಹಿರಿಯ ಹಿನ್ನೆಲೆ ಕಲಾವಿದ ಚಂದ್ರ ಬಂಕೇಶ್ವರ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ. ಬಳಿಕ ಸುರಭಿ ನೃತ್ಯ ಕಲಾವಿದರಿಂದ ನೃತ್ಯ ವೈವಿಧ್ಯ ಪ್ರದರ್ಶನ ಹಾಗೂ ಚಿತ್ರಕಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅತ್ಯಂತ ಹಿಂದುಳಿದ ಪ್ರದೇಶವಾದ ಸೌಪರ್ಣಿಕಾ ನದಿಯ ತಟದ ಬಂಟ್ವಾಡಿಯಲ್ಲಿ ಪ್ರಾರಂಭಗೊಂಡ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಕಳೆದ 75 ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರೂ ಬಹಳಷ್ಟು ಅಭಿವೃದ್ಧಿ ಹೊಂದಿದೆ. ಸರಕಾರದಿಂದ ಬರುತ್ತಿರುವ ಅನುದಾನ ಹಾಗೂ ಶಿಕ್ಷಕರ ನೇಮಕಾತಿ ಸ್ಥಗಿತಗೊಂಡಿರುವುದರಿಂದ ಶಾಲೆಯ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಗೌರವ ಶಿಕ್ಷಕಿಯರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಪ್ರಯತ್ನ ನಡೆದಿದೆ ಎಂದು ಶಾಲೆಯ ಸಂಚಾಲಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ಅರುಣ್ ಕುಮಾರ್ ಶೆಟ್ಟಿ ಹೇಳಿದರು. ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್, ಸಿಆರ್ಪಿ ಸತೀಶ್ ಶೆಟ್ಟಿ, ಉದ್ಯಮಿಗಳಾದ ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಬೈರವ ದೇವಸ್ಥಾನದಲ್ಲಿ ದ್ವೀತಿಯ ವರ್ಷದ ವರ್ಧಂತ್ಯುತ್ಸವ, ಶಿರಸಿ ಶ್ರೀ ಮಾರಿಕಾಂಬ ದೇವಿಯ ಪುನರ್ ಪ್ರತಿಷ್ಠೆ- ಕಲಶೋತ್ಸವ, ಶ್ರೀ ಕಾಲಬೈರವ ಸೇವಾ ಸಂಘದ 11ನೇ ವಾರ್ಷಿಕೋತ್ಸವ, ಶ್ರೀ ಶಿವಗೋರಕ್ಷನಾಥ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವು ಜ.26 ರಿಂದ ಜ.27 ರ ತನಕ ನಡೆಯಲಿದೆ. ಜ. 26ರ ಬೆಳಿಗ್ಗೆ 9.30ರಿಂದ ಚಿತ್ರಕೂಟ ಸಹಿತ ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಸಂಜೆ 5.30ರಿಂದ ಶ್ರೀ ಮಾರಿಕಾಂಬ ದೇವಿಯ ಬಿಂಬ ಪುನರ್ ಪ್ರತಿಷ್ಠೆ, ಬಿಂಬಪ್ರತಿಷ್ಠಾಪನಾಧಿಹೋಮಗಳು, ಚತುಃ ವಿಂಶತಿ ಕಲಶ ಸ್ಥಾಪನಾದಿ ಹೋಮಗಳು, ಕಲಶಾಭೀಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಜ.27ರ ಬೆಳಿಗ್ಗೆ 9.30ರಿಂದ ಶ್ರೀ ಕಾಲಭೈರವ ದೇವರಿಗೆ ದ್ವೀತಿಯ ವರ್ಧಂತ್ಯುತ್ಸವ ಪ್ರಯುಕ್ತ ಅಷ್ಠೋತ್ತರ ಕಲಶ, ತತ್ವ ಹೋಮ, ಅಧಿವಾಸ ಹೋಮ, ವಿಶೇಷ ಪಂಚಾಮೃಭಿಷೇಕ, ಕಲಾಶಭಿಷೇಕ, ಮಹಾಪೂಜೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ, ಗೊಂಬೆಗಳ ಮತ್ತು ಆಟಿಕೆಗಳ ವೈವಿಧ್ಯಮಯ ಪ್ರದರ್ಶನವು ಸಂಸ್ಥೆಯ ಕಾರ್ಯಕರ್ಶಿಗಳಾದ ರಾಧಕೃಷ್ಣ ಶೈಣ್ಯೆ ಅವರ ನೇತೃತ್ವದಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಕೃಷ್ಣ ಶೈಣ್ಯೆ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು. ಚಿತ್ತಾಕರ್ಷಕವಾದ ಗೊಂಬೆಗಳು ಮತ್ತು ಆಟೆಕೆಗಳೊಂದಿಗೆ, ಪುಟಾಣಿಗಳ ಸಂಗೀತ ನರ್ತನವು ಎಲ್ಲರ ಮನಸೊರೆಗೊಂಡವು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅಶ್ವಿನಿ ಸ್ವಾಗತಿಸಿ, ಸ್ವಪ್ನಾ ವಂದರ್ಪಣೆ ಗೈದರು ಹಾಗೂ ಶ್ರೀಲತಾ ಕಾರ್ಯಕ್ರಮವನ್ನು ಸಯೋಜಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘದ ಪೋಷಕರು, ಗೋವಾ ಬಂಟರ ಸಂಘದ ರಜತ ಸಂಭ್ರಮದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ದಂಪತಿ ಅವರನ್ನು ಯುವ ಬಂಟರ ಸಂಘದ ಪರವಾಗಿ ಸಂಘದ ಮಹಾ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಸನ್ಮಾನಿಸಿ ಗೌರವಿಸಿದರು. ಮೈಸೂರಿನ ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್ ನ ಆಡಳಿತ ನಿರ್ದೇಶಕರಾದ ಸುಧಾಕರ ಶೆಟ್ಟಿ, ಡಾ. ಗಣನಾಥ ಎಕ್ಕಾರು, ಉಳ್ತೂರು ಮೋಹನದಾಸ್ ಶೆಟ್ಟಿ, ಯುವ ಬಂಟರ ಸಂಘದ ಪೋಷಕರಾದ ಗಿಳಿಯಾರು ಬಡಾಮನೆ ರತ್ನಾಕರ ಜಿ. ಶೆಟ್ಟಿ, ಚಲನಚಿತ್ರ ನಟರಾದ ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು, ಉಪಾಧ್ಯಕ್ಷರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಮಾಜಿ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಕಂದಾವರ ರತ್ನಾಕರ ಶೆಟ್ಟಿ, ಹರ್ಷ ಶೆಟ್ಟಿ ಕಾವಡಿ, ಪ್ರವೀಣ್ ಶೆಟ್ಟಿ ಕಾವಡಿ, ಪ್ರಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದ ಸಳ್ವಾಡಿಯ ನಿವಾಸಿ ಶೀನ (54) ಅವರು ತೆಂಗಿನ ಮರ ಹತ್ತುವಾಗ ಆಕಸ್ಮಿಕವಾಗಿ ಕೈ ಕಾಲು ಜಾರಿ ಬಾವಿಗೆ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶೀನ ಅವರು ಶುಕ್ರವಾರ ಬೆಳಿಗ್ಗೆ ಸಳ್ವಾಡಿಯ ಉದಯ ಅವರ ಮನೆಯ ತೋಟದ ಕೆಲಸಕ್ಕೆಂದು ಸಂಬಂಧಿ ರಾಜು, ಗೋಪಾಲ ಹಾಗೂ ಸುರೇಶ ಅವರೊಂದಿಗೆ ತೆರಳಿದ್ದರು. ತೆಂಗಿನ ಕಾಯಿ ಕೊಯ್ಯಲು ಮರ ಹತ್ತುತ್ತಿರುವಾಗ ಆಕಸ್ಮಿಕವಾಗಿ ಜಾರಿ ಅಲ್ಲಿಯೇ ಇದ್ದ ಬಾವಿಗೆ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೂಡಲೇ ಅಗ್ನಿಶಾಮಕ ದಳದವರ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಸಂಬಂಧಿ ಚಂದ್ರ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್ಪ್ರಿನೋರ್ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ. ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ. ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು 10ನೇ ತರಗತಿ ಉತ್ತೀರ್ಣರಾಗಿರುವ 25 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಫೆಬ್ರವರಿ 3ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಪುರಸ್ಕೃತ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ನಿಗಧಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಶಿವಮೊಗ್ಗ- ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಅನುಷ್ಠಾನ ಮಾಡುವ ಕಾರ್ಯವು ಅಧಿಕಾರಿಗಳದ್ದಾಗಿದ್ದು, ಯೋಜನೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಸರಕಾರ ನಿಗಧಿಪಡಿಸಿರುವ ಕಾಲಮಿತಿಯೊಳಗೆ ಪೂರ್ಣಪ್ರಮಾಣದಲ್ಲಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದರು. ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿ ಶಾಶ್ವತ ಕಾಮಗಾರಿಗಳನ್ನು ಸೃಜನಿಸಲು ಅವಕಾಶವಿದ್ದು, ಜಿಲ್ಲೆಯಲ್ಲಿ ಇದರ ಪ್ರಗತಿ ನಿಗಧಿತ ಗುರಿಗಿಂತ ಹೆಚ್ಚಬೇಕು ಎಂದ ಅವರು, ಈ ಯೋಜನೆಯಡಿ ಕಾಲಸಂಕ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ʼಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರʼ ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿಯ ವೈದ್ಯಕೀಯ ನಿರ್ದೇಶಕರಾದ ಡಾ. ಪಿ.ವಿ. ಭಂಡಾರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಪೋಷಕರಿಗೆ ʼಮಕ್ಕಳಿಗೆ ಒತ್ತಡವನ್ನು ಹೇರದೆ, ಅವರ ಬೇಕು ಬೇಡಗಳನ್ನು ಅರಿತು, ಸ್ನೇಹಿತರಂತೆ ವರ್ತಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಮಕ್ಕಳಲ್ಲಿ ಇದ್ದ ಭಯದ ವಾತಾವರಣವನ್ನು ತೊಡೆದು ಹಾಕಿ, ಸ್ವಚ್ಛಂದವಾಗಿ ಓದುವ ಪರಿಸರವನ್ನು ನಿರ್ಮಿಸಬೇಕುʼ ಎಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ…
