ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮದ ದಿನೇಶ್, ಹರೀಶ್ ಅವರು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 10 ಲಕ್ಷ ರೂ. ಸಾಲ ಪಡೆದಿದ್ದು, ಅದಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ವಂಚಿಸಿರುವುದಾಗಿ ಸೊಸೈಟಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೇಬಲ್ ಡಿ’ ಅಲ್ಮೇಡಾ ದೂರು ನೀಡಿದ್ದಾರೆ. ಆರೋಪಿಗಳಾದ ದಿನೇಶ್ ಹಾಗೂ ಹರೀಶ್ ಅವರು ಸಾಲಕ್ಕೆ ಗೋಪಾಡಿ ಗ್ರಾಮದ 0.05 ಎಕ್ರೆ ಆಸ್ತಿಯನ್ನು ಅಡಮಾನ ಇರಿಸಿದ್ದು, ಇದನ್ನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲಾಗಿತ್ತು. ಗೋಪಾಡಿ ಗ್ರಾ.ಪಂ. ಪಿಡಿಒ ಗಣೇಶ ಹಾಗೂ ಕಾರ್ಯದರ್ಶಿ ಹರಿಶ್ಚಂದ್ರ ಈ ಸ್ವತ್ತು ಸಂಖ್ಯೆ ಮರೆಮಾಚಿ, ಎರಡು ನಕಲಿ ಈ ಸ್ವತ್ತು ಸಂಖ್ಯೆ ಸೃಷ್ಟಿಸಿ ಬೇನಾಮಿ ಕ್ರಯ ಪತ್ರ ಮಾಡಿ ಸೊಸೈಟಿಗೆ ಮೋಸ ಮಾಡಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ವಿದ್ಯಾರ್ಥಿಗಳಿಗೆ ಜೀವನ ನಿಮ್ಮ ಕೈಯಲ್ಲಿರುವುದರಿಂದ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳದೇ ಚಿಕ್ಕ ಚಿಕ್ಕ ಕನಸು ಕಾಣುವುದನ್ನು ಬಿಟ್ಟು ದೊಡ್ಡ ದೊಡ್ಡ ಕನಸು ಕಾಣುವ ಮೂಲಕ ವಿಭಿನ್ನ ಯೋಚನೆ, ಪ್ರಯತ್ನದ ಮೂಲಕ ಸಾಧನೆ ಮಾಡುವ ಮನಸ್ಸು ನಿಮ್ಮದಾಗಲಿ ಎಂದು ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಅವರು ಹೇಳಿದರು. ಅವರು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಟ್ರಸ್ಟಿ ರತ್ನಾಕರ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ 6 ಪುಸ್ತಕಗಳ ಅನಾವರಣ ಹಾಗೂ ’ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024ರ’ ಪ್ರದಾನ ಸಮಾರಂಭದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ನ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿಗಳಾದ ಜೋಗಿ, ಬಿ. ಆರ್. ಲಕ್ಷ್ಮಣ್ ರಾವ್, ಡಾ. ನಾ.ಸೋಮೇಶ್ವರ ಅವರು 6 ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಕ್ರಿಯೇಟಿವ್ ಕಾಲೇಜು ಹಾಗೂ ಪುಸ್ತಕ ಮನೆ ಸಂಸ್ಥಾಪಕರಲ್ಲಿ ಒಬ್ಬರಾದ ಅಶ್ವಥ್ ಎಸ್ ಎಲ್ ಪ್ರಾಸ್ತವಿಕ ಮಾತನಾಡಿ, ಕರಾವಳಿಯಿಂದ ರಾಜಧಾನಿಗೆ ನಮ್ಮ ಪುಸ್ತಕ ಪಯಣಕ್ಕೆ ಇದು ಸಂಭ್ರಮದ ಕ್ಷಣ. ಪುಸ್ತಕ ಮನೆಯನ್ನು ರಾಜ್ಯ ಮಟ್ಟಕ್ಕೆ ತರುವ ಜತೆಗೆ ಪುಸ್ತಕ ಓದುವ ಬೆಳೆಸುವ, ಯುವ ಜನತೆಗೆ ಪುಸ್ತಕವನ್ನು ಓದುವ ಬೆಳೆಸುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಕ್ರಿಯೇಟಿವ್ ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಕೂಡ ಹೆಚ್ಚು ತೊಡಗಿಸಿಕೊಳ್ಳಬೇಕು. ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗಿ ವಿದ್ಯಾರ್ಥಿ ಜೀವನ ಉಜ್ವಲವಾಗಲು ಸಹಾಯಕವಾಗುತ್ತದೆ. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಅತ್ಯುತ್ತಮ ವಿದ್ಯಾಭ್ಯಾಸ ದೊರೆಯುತ್ತಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದು ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಹೇಳಿದರು. ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶನಿವಾರ ಜರಗಿದ ಗಂಗೊಳ್ಳಿಯ ಸ. ವಿ. ಆಂಗ್ಲ ಮಾಧ್ಯಮ ಶಾಲೆಯ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿವೇಕಾನಂದ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ ಕಿರಣ್ ಎನ್. ಸ್ವಸ್ತಿ ವಾಚನಗೈದರು. ಮುಖ್ಯ ಅತಿಥಿಯಾಗಿದ್ದ ಸೌಭಾಗ್ಯಲಕ್ಷ್ಮೀ ವಿ. ಕಾಮತ್ ಬಹುಮಾನ ವಿತರಿಸಿದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಶುಭ ಹಾರೈಸಿದರು. ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 36ನೇ ವಾರ್ಷಿಕೋತ್ಸವ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಛಲ ಮತ್ತು ಗುರಿಯಿಂದ ಮುನ್ನಡೆದು ಯಶಸ್ಸು ಸಾಧಿಸುವ ಬಗ್ಗೆ ತಿಳಿಸಿ, ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಧತ್ತಿ ನಿಧಿ ಬಹುಮಾನಗಳನ್ನು ವಿತರಿಸಿದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಸಂದೀಪನ್ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಸಂಜೀತ್ ಪ್ರಕಾಶ್ ರಾವ್ ಅವರು ಮಾತನಾಡಿ, ಪೋಷಕರು ತಮ್ಮ ಮಕ್ಕಳೊಂದಿಗೆ ದಿನದ ಸ್ವಲ್ಪ ಸಮಯವನ್ನಾದರೂ ಮೀಸಲಿಟ್ಟು ಅವರ ಗುರಿ ಸಾಧನೆಗೆ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು. ಇವರೂ ಕೂಡ ಅಧಿಕ ಅಂಕ ಗಳಿಸಿದವರಿಗೆ ದತ್ತಿ ನಿಧಿ ಬಹುಮಾನಗಳನ್ನು ವಿತರಿಸಿದರು. ಆಡಳಿತ ಮಂಡಳಿಯ ಖಜಾಂಚಿ ಅವರಾದ ಕೆ. ಲಕ್ಷ್ಮೀ ನಾರಾಯಣ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪೂರ್ವ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ ಜೊತೆಗೂಡಿ, ಅವರಿಗೆ ಸಹಕಾರ ನೀಡಿ, ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದ ಅವರು, ಮುಂದಿನ ದಿನಗಳಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಇದೇ ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ನೀಡುವಂತೆ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಒಂದು ಪ್ರಮುಖ ಅಂಗವಾಗಿದ್ದು, ಬೇರೆ ಇಲಾಖೆಯನ್ನು ಹೋಲಿಸಿದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66, 169 ಹಾಗೂ 169ಎ ರಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ಅಸಮರ್ಪಕ ದಾರಿದೀಪ ನಿರ್ವಹಣೆ, ಚರಂಡಿಗಳ ನಿರ್ಮಾಣ, ಪಾದಚಾರಿ ಮಾರ್ಗದಲ್ಲಿ ಇಂಗು ಗುಂಡಿಗಳು ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆ ಕಾರ್ಯವು ತುಂಬಾ ವಿಳಂಬವಾಗುತ್ತಿದೆ. ಭೂಮಿಯ ಮಾಲೀಕರುಗಳಿಗೆ ವೈಜ್ಞಾನಿಕವಾಗಿ ಪರಿಹಾರದ ಮೊತ್ತವನ್ನು ಆದ್ಯತೆಯ ಮೇಲೆ ನೀಡಿ, ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಭಾನುವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಂಡವು. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು…
ಕುಂದಾಪ್ರ ಡಾಟ ಕಾಂ ಸುದ್ದಿ.ಉಡುಪಿ: ಸಿರಿಧಾನ್ಯಗಳನ್ನು ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಸೇವನೆಯಲ್ಲಿ ಬಳಕೆಮಾಡಿಕೊಂಡಲ್ಲಿ ಉತ್ತಮ ಆರೋಗ್ಯವನ್ನು ಹೊಂದಲು ಸಹಕಾರಿಯಾಗುತ್ತದೆ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿರಿಧಾನ್ಯಗಳನ್ನು ನಮ್ಮ ಪೂರ್ವಜರು ಈ ಹಿಂದೆ ಪಾರಂಪರಿಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಸಾವಯವ ಗೊಬ್ಬರವನ್ನು ಉಪಯೋಗಿಸಿ, ಅಲ್ಪ ಪ್ರಮಾಣದ ನೀರಿನ ಬಳಕೆಯೊಂದಿಗೆ ಬೆಳೆಗಳನ್ನು ಬೆಳೆಯುತ್ತಿದ್ದರು. ಇವುಗಳಲ್ಲಿ ಪೌಷ್ಠಿಕತೆಯು ಸತ್ವಗಳು ಸಹ ಹೆಚ್ಚು ಇರುತ್ತದೆ. ಇವುಗಳನ್ನು ಜನಸಾಮಾನ್ಯರು ಪ್ರತಿನಿತ್ಯದ ಆಹಾರ ಪದಾರ್ಥಗಳಲ್ಲಿ ಬಳಕೆಮಾಡಿಕೊಳ್ಳುವುದು ಒಳಿತು ಎಂದರು. ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಳಕೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ವಿವಿಧ ರೀತಿಯ ಸಿರಿಧಾನ್ಯಗಳ ಸ್ಪರ್ಧೆ ಹಾಗೂ ಸಿರಿಧಾನ್ಯಗಳ ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುವ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಪಿ.ಯು.ಸಿ ಹಂತದಲ್ಲಿ ಮುಂದಿನ ವ್ಯಾಸಂಗದ ಆಯ್ಕೆಯ ಬಗ್ಗೆ ಗೊಂದಲ, ಅನಿಶ್ಚಿತತೆ ಸಹಜವಾಗಿರುವಂಥದ್ದು. ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಸಿಸಿದರೆ ಕಡಿಮೆ ವೆಚ್ಚದಲ್ಲಿ ಮೆಡಿಕಲ್/ ಇಂಜಿನಿಯರಿಂಗ್ ಶಿಕ್ಷಣ ಪಡೆಯಬಹುದು. ಜ್ಞಾನ ಪಡೆದುಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾದರೆ ಹಣ ತಾನಾಗೇ ಬರುತ್ತದೆ. ನನ್ನ ಈ ಸಾಧನೆಗೆ ಆರ್. ಎನ್. ಎಸ್ ಕಾಲೇಜು ಪ್ರೇರಣೆ. ಇಲ್ಲಿನ ಉಪನ್ಯಾಸಕರ ಸತತ ಪ್ರೋತ್ಸಾಹದಿಂದ ನನ್ನ ಹಾಗೆ ಹಲವಾರು ವಿದ್ಯಾರ್ಥಿಗಳು ಇಂದು ಉತ್ತಮ ಸಾಧನೆ ಮಾಡಿದ್ದಾರೆ” ಎಂದು ಮಂಗಳೂರಿನ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಪಕರಾಗಿರುವ ಡಾ. ಶ್ರೀಶಂಕರ್ ಬಾಯಿರಿ ಅವರು ಅಭಿಪ್ರಾಯಪಟ್ಟರು. ಅವರು ಆರ್. ಎನ್.ಎಸ್ ವೈಭವ – ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕರಾದ ಬಿ.ಎಮ್ ಸುಕುಮಾರ ಶೆಟ್ಟಿ ಅವರು ಮಾತನಾಡಿ, ಯಶಸ್ಸಿನ ಹೊಸದಿಶೆಯತ್ತ ಸಾಗುತ್ತಿರುವ ಆರ್. ಎನ್. ಎಸ್ ಪಿ.ಯು ಕಾಲೇಜಿನ ಬಗ್ಗೆ…
