ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆರೋಗ್ಯ, ಮನುಷ್ಯ ಆರೋಗ್ಯವಂತನಾಗಿದ್ದಾನೆ ಎಂದರೆ ಅವನಷ್ಟು ಶ್ರೀಮಂತ ಯಾರೂ ಇಲ್ಲ. ದೈಹಿಕವಾಗಿ, ಮಾನಸಿಕವಾಗಿ ಆಧ್ಯಾತ್ಮಿಕವಾಗಿ ಸದೃಢರಾಗಿರಲು ಯೋಗ ಸಹಕಾರಿಯಾಗುತ್ತದೆ. ನಮ್ಮ ದೈನಂದಿನ ಜೀವನದಲ್ಲಿ ದಿನಚರಿಯ ಅಂಗವಾಗಿ ಯೋಗಾಭ್ಯಾಸವನ್ನು ಮಾಡಬೇಕು. ದೇಹ ಮತ್ತು ಮನಸ್ಸನ್ನು ಆರೋಗ್ಯದಿಂದಿಡಲು ಯೋಗ ಉಪಯುಕ್ತವಾಗಿದ್ದು, ಆತ್ಮವನ್ನು ಪರಮಾತ್ಮನೊಂದಿಗೆ ಲೀನ ಮಾಡುವಲ್ಲಿ ಯೋಗ ಉತ್ತಮ ಔಷಧ ಎಂದು ಯೋಗ ತರಬೇತುದಾರರಾದ ಆಟಕೆರೆ ಬಾಬು ಪೈ ಕೋಟೇಶ್ವರ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಆಶ್ರಯದಲ್ಲಿ ಶ್ರೀ ಶಾರದೋತ್ಸವದ ಸುವರ್ಣ ಸಂಭ್ರಮ-2024ರ ಪ್ರಯುಕ್ತ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿರುವ ಹತ್ತು ದಿನಗಳ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿಯ ವೈದ್ಯ ಡಾ. ಮಹೇಶ ಜಿ. ಮಾತನಾಡಿ, ಯೋಗಾಭ್ಯಾಸ ಮಾಡುವುದರಿಂದ ದೇಹದಲ್ಲಿ ಚೈತನ್ಯ ವೃದ್ಧಿಯಾಗಿ ಮನಸ್ಸು ಉಲ್ಲಾಸಗೊಳ್ಳುತ್ತದೆ. ದಿನದಲ್ಲಿ ಒಂದು ಗಂಟೆ ಯೋಗಾಭ್ಯಾಸ ಮಾಡಿದರೆ ಎಲ್ಲಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ದಿ ಪಡಿಸಲಾಗಿದೆ. ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆ್ಯಪ್ನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿಯನ್ನು ದಾಖಲಿಸಬೇಕು. ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್ಲೋಡ್ ಆಗುತ್ತದೆ. ಎಫ್.ಐ.ಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್ಗಳು ಜೋಡಣೆಯಾಗದಿದ್ದಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಆಪ್ನಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್ಗಳ ಗಡಿ ರೇಖೆಯೊಳಗೆ ನಿಂತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಭಾನುವಾರ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಸ್ವರ್ಣೋದ್ಯಮಿ ಮೋಹನ್ ರೇವಣ್ಕರ್ ಆಯ್ಕೆಯಾಗಿದ್ದಾರೆ. ಶಿರೂರು ನಿವಾಸಿಯಾಗಿರುವ ಮೋಹನ್ ರೇವಣ್ಕರ್ ಅವರು ತಮ್ಮ ಉದ್ಯಮದ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಸಾಲಿನ ಕಾರ್ಯದರ್ಶಿಯಾಗಿ ಸುನಿಲ್ ಹೆಚ್. ಜಿ. ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆಯಿಂದ ಬಂದ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ಳಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಚಿಕ್ಕನಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು ಛಾಯ (7) ಎಂದು ಗುರುತಿಸಲಾಗಿದೆ. ವಂಡ್ಸೆ ಶಾಲೆಯ ವಿದ್ಯಾರ್ಥಿಗಳಾದ ಧನರಾಜ್ ಹಾಗೂ ಛಾಯಾ ಶಾಲಾ ವಾಹನದಲ್ಲಿ ಮನೆಗೆ ಹಿಂದಿರುಗಿದ್ದು, ಈ ವೇಳೆ ನಿತ್ಯವೂ ಇಳಿಯುತ್ತಿದ್ದ ನಿಲ್ದಾಣದಲ್ಲಿ ಇಳಿದಿದ್ದು, ಅಲ್ಲಿಂದ ಅವರ ತಾಯಿ ಛಾಯಾ ಬಂದು ಮನೆಗೆ ಕರೆದೊಯ್ದಿದ್ದರು ಎನ್ನಲಾಗಿದೆ. ಈ ನಡುವೆ ಮಾರ್ಗಮಧ್ಯೆ ಇರುವ ಕೆರೆಯ ಬಳಿಗೆ ಮಕ್ಕಳು ಏಕೆ ತೆರಳಿದರು ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಮಕ್ಕಳ ರಕ್ಷಣೆಗೆ ಮುಂದಾದ ತಾಯಿ ಶೀಲಾ ಅಸ್ವಸ್ಥಗೊಂಡು, ಆಕೆಯನ್ನು ಸ್ಥಳೀಯರು ರಕ್ಷಿಸಿದ್ದು, ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಪ್ರತಿವರ್ಷದಂತೆ ಕೊಡಮಾಡಿದ ಸಮವಸ್ತ್ರ, ನೋಟ್ ಪುಸ್ತಕ, ಕಲಿಕಾ ಪರಿಕರಗಳ ವಿತರಣೆ ಕಾರ್ಯಕ್ರಮ ಹಾಗೂ ಪೋಷಕರ ಸಭೆ ನಡೆಯಿತು. ಕೊಡುಗೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು, ಮಕ್ಕಳ ಕಲಿಕೆಯ ಬಗ್ಗೆ ಪೋಷಕರು ಗಮನ ಹರಿಸಬೇಕು, ವಿದ್ಯಾರ್ಥಿಗಳ ಕಲಿಕಾಮಟ್ಟ ಹೆಚ್ಚಿಸಲು ಶಿಕ್ಷಕರು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಅಂತೆಯೇ ಪೋಷಕರು ಕೂಡಾ ತಮ್ಮ ಮೇಲಿನ ಜವಬ್ದಾರಿಯನ್ನು ಅರಿತು ಪಾಲಿಸಬೇಕು, ಮಗು ಶಿಸ್ತು ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೆಪಿಸಬೇಕು. ಹಾಗೆ ಇದು ಮಳೆಗಾಲ ಮಕ್ಕಳ ಬಗ್ಗೆಯೂ ಕಾಳಜಿ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೆಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ನಾಡಪ್ರಭು ಕೆಂಪೆಗೌಡರ ದಿನಾಚರಣೆ ಆಚರಿಸಲಾಯಿತು. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅಂಬಿಕಾ, ರೇವತಿ, ಪಲ್ಲವಿ, ಆಶಾ ಅವರನ್ನು ಸನ್ಮಾನಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೆಫ್ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ಶನಿವಾರ ತಾಲೂಕಿನ ಹೇರಂಜಾಲುವಿನಲ್ಲಿ ಜರುಗಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಫ್ಯಾಕ್ಟರಿ ಕಟ್ಟೋದು ಅಷ್ಟು ಸುಲಭವಲ್ಲ. ಪುಟ್ಟ ಹಳ್ಳಿಯಿಂದ ದೆಹಲಿವರೆಗೂ ಉದ್ಯಮ ಹೊಂದಿರುವ ಗೋವಿಂದ ಪೂಜಾರಿ ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು. ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು. ಇಂಥ ಉದ್ಯಮಿಗಳನ್ನು ಬೆಂಬಲಿಸಬೇಕು ಎಂದು ಹೇಳಿದರು. ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಮಾತನಾಡಿ, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಶ್ಲಾಘಿಸಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಂದು ಕಾಲದಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದವು. ಇದೀಗ ಕಾಂಗ್ರೆಸ್ ಸಂಕಷ್ಟ ಸ್ಥಿತಿಯಲ್ಲಿದೆ. ನಮ್ಮ ಪಕ್ಷದಲ್ಲಿ ನ್ಯೂನತೆಗಳಿವೆ. ಮೊದಲು ಅವು ಸರಿಯಾಗಬೇಕು. ಚುನಾವಣೆ ಒಳ್ಳೆತನದಿಂದ ನಡೆಯಲ್ಲ, ಒಳ್ಳೆಯ ಹೆಸರಿದ್ದರೂ ಚುನಾವಣೆಯಲ್ಲಿ ಪ್ರಯೋಜನವಿಲ್ಲ. ಸತ್ಯ ಒಂದು ದಿನ ಗೆದ್ದೆ ಗೆಲ್ಲುತ್ತೆ ಎಂದು ಹೇಳಿದರು. ಯುಪಿಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿತ್ತು. ಈಗ ಯುಪಿಯಲ್ಲಿ ಆರು ಸಂಸದರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 4.50 ಲಕ್ಷ ಮತಗಳ ಲೀಡ್ ನಿಂದ ಗೆದ್ದಿದ್ದ ಮೋದಿ ಈ ಬಾರಿ ಕೇವಲ 1.45 ಲಕ್ಷದಿಂದ ಗೆದ್ದರು. ಇದರರ್ಥ ದೇಶದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಸ್ವಾಯತ್ತ ಎಂಬುದು ಶಿಕ್ಷಣ ಸಂಸ್ಥೆಯ ಸ್ವಯಂ ಪರಿಕಲ್ಪನೆಗಳ ಸಾಕಾರಕ್ಕೆ ದೊರೆತ ಮಹತ್ತರ ಜವಾಬ್ದಾರಿ. ಇಲ್ಲಿ ಬೋಧಕರು ನಿರಂತರ ವಿದ್ಯಾರ್ಥಿಗಳಾಗಬೇಕು’ಎಂದು ಮಂಗಳೂರಿನ ಡಾ. ಶಿವರಾಮ ಕಾರಂತ ನಿಸರ್ಗ ಧಾಮದ ವಿಜ್ಞಾನ ವಿಭಾಗದ ನಿರ್ದೇಶಕ ಡಾ. ಕೆ.ವಿ. ರಾವ್ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ಆಂತರಿಕ ಮೌಲ್ಯ ಖಾತರಿ ಕೋಶ (ಐಕ್ಯುಎಸಿ)ದ ಸಭೆಯಲ್ಲಿ ಅವರು ಮಾತನಾಡಿದರು. ʼಸಂಸ್ಥೆಗಳು ತಮ್ಮ ಸಾಮರ್ಥ್ಯ, ದೌರ್ಬಲ್ಯ, ಅವಕಾಶ ಹಾಗೂ ಅಪಾಯದ (ಸ್ವೊಟ್) ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಂಡಾಗ ಪ್ರಗತಿ ಕಾಣಲು ಸಾಧ್ಯ. ದೂರದೃಷ್ಟಿ, ಸಮಯ ನಿರ್ಬಂಧಿತ ಗುರಿ, ನಿರಂತರ ಕಲಿಕೆ ಇರಬೇಕುʼ ಎಂದ ಅವರು, ’ಕಾಲೇಜು ಎಂದರೆ ಕೇವಲ ಕಟ್ಟಡವಲ್ಲ. ಅದೊಂದು ಜೀವಂತಿಕೆಯ ಅಸ್ತಿತ್ವ’ಎಂದರು. ʼಕೈಗಾರಿಕೆಗಳ ಜೊತೆ ಸಂಬಂಧ, ಔದ್ಯೋಗಿಕ ತರಬೇತಿ, ಕೌಶಲ ವೃದ್ಧಿ, ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ಪಕ್ವತೆಯಲ್ಲಿ ಆಳ್ವಾಸ್ ಯಾವಾಗಲೂ ಮಾದರಿ’ಎಂದು ಬಣ್ಣಿಸಿದರು. ಯೆನೆಪೋಯಾ ಪರಿಗಣಿತ ವಿಶ್ವವಿದ್ಯಾಲಯ ಆಯುಷ್ ಸಂಶೋಧನಾ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಿಗೆ ನೂತನ ಬ್ಯಾಂಕಿಂಗ್ ಪದ್ಧತಿ ಮತ್ತು ಅನುಸರಿಸಿಕೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ನಿಟ್ಟಿನಲ್ಲಿ ‘ಬ್ಯಾಂಕ್ ಬ್ಯಾಟಲ್ 2.0” ಎಂಬ ಅಂತರ್-ತರಗತಿವಾರು ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೋಟಾ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರು ಮಾತನಾಡಿ, ಆಧುನಿಕ ಬ್ಯಾಂಕಿಂಗ್ ಪದ್ಧತಿಯ ಅಳವಡಿಕೆಯಿಂದ ಉದ್ಯೋಗ ಕೇಂದ್ರದ ಮೇಲೆ ಆಗುವ ಪರಿಣಾಮದ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುನೀಲ್ ಎಸ್. ಮೊಗವೀರ, ಗ್ರಾಹಕ ಸೇವಾ ಸಹವರ್ತಿ, ಕೆನರಾ ಬ್ಯಾಂಕ್ ಭಟ್ಕಳ ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಗಳಿಸುವಲ್ಲಿ, ವಾಣಿಜ್ಯ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರಬೇಕು ಎಂದರು ಕಾರ್ಯಕ್ರಮದ ಸಂಯೋಜಕರಾದ ಶರತ್ ಕುಮಾರ್ ಹಾಗೂ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು. ಕೃತಕ ಬ್ಯಾಂಕ್ ನಿರ್ಮಾಣ ಹಾಗೂ ಬ್ಯಾಂಕಿಂಗ್ ವ್ಯವಹಾರ ನಿರ್ವಹಣೆಯ ಅರಿವಿನ…
