Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 24ರ ಭಾನುವಾರ ಆಸರೆ ಮತ್ತು ನವಚೇತನ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಬಂಟರ ಯಾನೆ ನಾಡವರ ಸಂಕೀರ್ಣದ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದು, ಎಂ ಆರ್ ಜಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟನೆ ಮಾಡಲಿದ್ದಾರೆ. ಹೇರಂಭ ಆಗ್ರೋ ಇಂಡಸ್ಟ್ರೀಸ್ ಮುಂಬೈನ ಆಡಳಿತ ನಿರ್ದೇಶಕ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದೀಪ ಪ್ರಜ್ವಲನ ಮಾಡಲಿದ್ದು, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಭಿನಂದನಾ ನುಡಿಗಳನಾಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಹಿರಿಯ ಗಣ್ಯರಿಗೆ ದಶಮ ಸಂಭ್ರಮ ಪ್ರಶಸ್ತಿಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರಿನ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಪ್ರಧಾನ ಮಾಡಲಿದ್ದಾರೆ. Watch Live…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಿರಿಜಾ ಸರ್ಜಿಕಲ್ಸ್ ಕುಂದಾಪುರದ ಪ್ರಾಯೋಜಕತ್ವದಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಮತ್ತು ಮಂಥನ ಸಂಸ್ಥೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಿರೂಪಕ ಅವಿನಾಶ್ ಕಾಮತ್ ಸಂಯೋಜಿತ ‘ಕೂತು ಮಾತಾಡುವ’ ಕಾರ್ಯಕ್ರಮ ಇತ್ತಿಚಿಗೆ ಗಿರಿಜಾ ಸರ್ಜಿಕಲ್ಸ್ ಆವರಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕುಂದಾಪುರದವರೇ ಆದ ಕಾರ್ಕಳದಲ್ಲಿ ಉಚಿತ ಅನಾಥಾಶ್ರಮ ನಡಿಸುತಿರುವ ಬಡವರ, ನಿರ್ಗತಿಕರ, ಅನಾಥರ ಪಾಲಿನ ತಾಯಿ ಆಯಿಷಾ ಬಾನು ಅವರನ್ನು ಎಲ್ಲಾ ಸಂಸ್ಥೆಗಳ ವತಿಯಿಂದ ಸನ್ಮಾನಿಸಿ ಗೌರವಿಸಿ ಸಣ್ಣ ಮಟ್ಟದ ಆರ್ಥಿಕ ಸಹಾಯ ವನ್ನೂ ನೀಡಲಾಯಿತು. ಕೂತು ಮಾತಾಡುವ ಸರಣಿ ಕಾರ್ಯಕ್ರಮವನ್ನು ನ್ಯಾಯವಾದಿ ಎ.ಎಸ್. ಎನ್. ಹೆಬ್ಬಾರ್ ಉದ್ಘಾಟಿಸಿದರು. ಗಿರಿಜಾ ಗ್ರೂಪ್ ಆಪ್ ಕಾನ್ಸರ್ನ್ಸ್ ನ ರವೀಂದ್ರ ಶೆಟ್ಟಿ , ಸುರೇಖಾ ರವೀಂದ್ರ ಶೆಟ್ಟಿ , ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಮತ್ತು ಮಂಥನ ಸಂಸ್ಥೆ ಕುಂದಾಪುರದ ಎಲ್ಲಾ ಪದಾಧಿಕಾರಿಗಳು ಸದಸ್ಯರು ಮತ್ತು ಕೂತು ಮಾತಾಡುವ ಕಾರ್ಯಕ್ರಮದ ರೂವಾರಿ ಅವಿನಾಶ್ ಕಾಮತ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ.ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ವತಿಯಿಂದ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಜರುಗಿದ ಅಕ್ಷರ ಬೆಳಕು ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ನಾಲ್ವುರು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಸ್ವೀಕಾರ ಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿ.ಶೈನ್ ಕೊಚಿಂಗ್ ಸೆಂಟರ್ ನಿರ್ದೇಶಿಕ ಹರೀಶ್ ಕುಮಾರ್ ಶೆಟ್ಟಿ, ದಲಿತ ಸಂಘಟನೆಯ ಮುಖಂಡರಾದ ಮಂಜುನಾಥ ಗಿಳಿಯಾರು, ವಾಸುದೇವ ಮುದೂರು, ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ, ಸಂಘಟನೆಯ ಪದಾಧಿಕಾರಿಗಳಾದ ವಿನಯ, ಗೀತಾ ಸುರೇಶ್ ಕುಮಾರ್, ಸುರೇಶ್ ಕುಮಾರ್, ದ.ಸಂ.ಸ ಬೈಂದೂರು ತಾಲೂಕಿನ ಪದಾಧಿಕಾರಿಗಳಾದ ಭಾಸ್ಕರ್, ಶಿವರಾಜ, ಗೋವಿಂದ. ಬೈಂದೂರು ಡಾ.ಬಿ.ಆರ್. ಅಂಬೇಡ್ಕರ್ ಸಂಘದ ರಂಗ. ಎಸ್, ದಯಾನಂದ.ಪಿ. ಹಾಗೂ ಮಹಿಳಾ ಸಂಘದ ಮಹಿಳಾ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಚಂದ್ರ ಕೆ ದೇವಾಡಿಗ ಸ್ವಾಗತಿಸಿದರು. ಶಿಕ್ಷಕಿ ಚೈತ್ರಾ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗುರುವಾರ ಸಹಕಾರಿಯ ಕಛೇರಿ ಆವರಣದಲ್ಲಿ ನಡೆಯಿತು. ಸಹಕಾರಿ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ್ದು, ರೂ. 10.73 ಕೋಟಿ ಠೇವಣಿ ಸಂಗ್ರಹಿಸಿ, ರೂ. 6.34 ಕೋಟಿ ಸಾಲ ನೀಡಿದೆ. ರೂ.11.03 ಕೋಟಿಗೂ ಅಧಿಕ ದುಡಿಯುವ ಬಂಡವಾಳ ಹೊಂದಿದ್ದು, ರೂ. 81 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ. ಆರ್ಥಿಕ ವರ್ಷದಲ್ಲಿ ರೂ. 19.99 ಲಕ್ಷ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಶೇ. 11% ಡಿವಿಡೆಂಡ್ ಘೋಷಿಸಲಾಗಿದೆ. ಕ್ರಮಬದ್ಧವಾಗಿ ಹಾಗೂ ವಿಶ್ವಾಸದಿಂದ ಸೇವೆಯನ್ನು ನೀಡುವ ಮೂಲಕ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸದಸ್ಯರಿಗೆ ಅಪಘಾತ ವಿಮೆ, ಶೈಕ್ಷಣಿಕ ನಿಧಿ, ಸ್ವಸಹಾಯ ಗುಂಪುಗಳ ರಚನೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿದ್ದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಅಂಗವಾಗಿ ಶೆಫಿನ್ಸ್ ಸಂಸ್ಥೆಯಿಂದ ಅತಿಥಿ ಹಾಗೂ ಗೌರವ ಶಿಕ್ಷಕರ ತರಬೇತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯೆಡಾಡಿ-ಮತ್ಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಗೆ ಕುಂದಾಪುರ ತಾಲೂಕಿನ 8 ಶಾಲೆಯ 20 ಶಿಕ್ಷಕರು ಭಾಗವಹಿಸಿದ್ದು, ಅವರ ನಡುವೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಗಾಗಿ ಸ್ಪರ್ಧೆ ಯನ್ನು ಏರ್ಪಡಿಸಲಾಗಿತ್ತು. ಎಲ್ಲಾ ಅತಿಥಿ/ ಗೌರವ ಶಿಕ್ಷಕರೂ ತಾವು ಪಾಠ ಮಾಡುವ ವಿಷಯದಲ್ಲಿ ಬಹಳ ಅದ್ಭುತವಾಗಿ ಬಹಳಷ್ಟು ಟೀಚಿಂಗ್ ಎಯ್ಡ್ ಜೊತೆಗೆ ಭಾಗವಹಿಸಿ, ತಮ್ಮ ಅಧ್ಯಾಪನದಲ್ಲಿನ ಕ್ರಿಯಾಶೀಲತೆಯನ್ನು ಪ್ರದರ್ಶಿಸಿದರು. ಮೂರು ಸುತ್ತಿನ ಈ ಸ್ಪರ್ದೆಯ ಅಂತಿಮ ಸುತ್ತಿನಲ್ಲಿ ಬಿದ್ಕಲ್ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಗರತ್ನ ಹಾಗೂ ಜಪ್ತಿ ರಾಮಚಂದ್ರ ಅನುದಾನಿತ ಶಾಲೆಯ ಉದಯ್ ಕೊಠಾರಿ ಮತ್ತು ವಿಜಯ್ ಕಣದಲ್ಲಿದ್ದರು. ಕೊನೆಯ ಸುತ್ತಿನಲ್ಲಿ ರಾಮಚಂದ್ರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಜಪ್ತಿಯ ಗೌರವ ಶಿಕ್ಷಕರಾದ ಉದಯ ಕೊಠಾರಿ ಉಳಿದೆಲ್ಲ ಶಿಕ್ಷಕರ ಮೆಚ್ಚುಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಕ್ರೀಡೆಯಿಂದ ದೂರ ಸರಿಯಬಾರದು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರಬೇಕು. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚುತ್ತದೆ ಮತ್ತು ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್, ಕುಂದಾಪುರ ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 20.09.2023 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆ, ನೌಕಾ ಪಡೆ, ವಾಯುಪಡೆ ಹಾಗೂ ಸಿವಿಲ್ ಸರ್ವಿಸ್ ಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಭಾರತೀಯ ಸೇನಾ ಶಾರ್ಟ್ ಸರ್ವಿಸ್ ಕಮಿಷನ್ – 54ನೇ ಕೋರ್ಸಿಗೆ ಆಯ್ಕೆಗೊಂಡಿರುವ ಭರತ್ ಬಾಬು ದೇವಾಡಿಗ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಷ್ಮಿಶ್ ಕುಂದರ್ ಹಾಗೂ ರಾಷ್ಟ್ರೀಯ ಕರಾಟೆ ಪಟು ಅಜಯ್ A ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರದ್ಧಾ ವಂದಿಸಿ, ಸಾನಿಕ ಶೆಟ್ಟಿ ಸ್ವಾಗತಿಸಿ, ಸಿಂಚನ ಅತಿಥಿಗಳನ್ನು ಪರಿಚಯಿಸಿದರು. ರಝಿನಾ ಬಾನು ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಅಗತ್ಯತೆಯ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಶ್ರೀ ಚಂದ್ರಶೇಖರ್ ರವರು ನಾಟಾ(NATA) ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಉಪನ್ಯಾಸಕ ಅಭಿಜಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸದಸ್ಯರ ಸಭೆ ಇತ್ತೀಚೆಗೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು. ಆಶಾ ಕಿಶೋರ್ ಪ್ರಾರ್ಥಿಸಿದರು.ಸಂಸ್ಥೆಯ ಸಿಬ್ಬಂದಿ ಆಶಾ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರೆಹನಾ ಸುಲ್ತಾನಾ ಅವರು ಸಂಘದ ವಾರ್ಷಿಕ ವರದಿ, ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಸಂಸ್ಥೆಯ ಉಪಾಧ್ಯಕ್ಷೆ ಕು. ಆಶಾ, ನಿರ್ದೇಶಕರಾದ ಗೀತಾ. ಎಸ್, ಲಕ್ಷ್ಮೀ ಬೈಂದೂರು, ಗಿರಿಜಾ, ಸಾವಿತ್ರಿ, ಮಾಲತಿ, ಪ್ರೇಮಾ, ಅಂಬಿಕಾ, ಶ್ಯಾಮಲಾ, ಅಲಿಯಾ ನಾಜ್, ನೇತ್ರಾವತಿ, ಸರಳಾ ಮುಂತಾದವರು ಉಪಸ್ಥಿತರಿದ್ದರು. ಪತ್ರಕರ್ತ ಅಂದಕಾ ಎ.ಎಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ಗಣೇಶ ಚಥುರ್ತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಕಾರ್ಕಳದ ಎಣ್ಣೆಹೊಳೆಯಿಂದ ತೆರೆದ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಕಾಲೇಜಿಗೆ ಮೆರವಣಿಗೆ ಮುಖಾಂತರ ಕರೆತರಲಾಯಿತು. ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ವಿಶೇಷವಾಗಿ ಗಣಹೋಮ, ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮಗಳು ನಡೆದವು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಗಣೇಶ ಚತುರ್ಥಿಯ ಮಹತ್ವದ ಕುರಿತು ಮಾತನಾಡಿದರು. ತದನಂತರ ಶ್ರೀ ದೇವಿ ಬಯಲಾಟ ಸಮಿತಿ ರಂಗನಪಲ್ಕೆ ತಂಡದಿಂದ ಅಸಹಾಯಕ ಬಡರೋಗಿಗಳ ಸಹಾಯಾರ್ಥ ಹುಲಿಕುಣಿತ ಪ್ರದರ್ಶನ ನಡೆಯಿತು. ಮಧ್ಯಾಹ್ನ ಮಹಾಪೂಜೆ ಮತ್ತು ಸಾಯಂಕಾಲ ರುದ್ರಶಿವ ಮೂಡಬಿದ್ರೆ ತಂಡದಿಂದ ನಾಸಿಕ್ ಬ್ಯಾಂಡ್ ಹಾಗೂ ಸಾಯಂಕಾಲ 4.30 ಗಂಟೆಗೆ ದುರ್ಗಾಪರಮೇಶ್ವರಿ ಜೋಡುರಸ್ತೆ ಇವರಿಂದ ಹುಲಿಕುಣಿತ ನಡೆಯಿತು. ಸಂಜೆ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕುಕ್ಕುದಕಟ್ಟೆಯವರೆಗೆ ಕರೆದೊಯ್ದು ಹತ್ತಿರದ ನದಿಯಲ್ಲಿ ಜಲಸ್ಥಂಬನಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಅಶ್ವತ್ ಎಸ್.ಎಲ್, ಆದರ್ಶ ಎಂ.ಕೆ. ಅಮೃತ್ ರೈ ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಶೆಟ್ಟಿ ಮತ್ತು ಸುನೀಲ್…

Read More