ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಡಿ.10ರ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು. ಡಿಸೆಂಬರ್ 11 ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ರಜೆಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಿ. 08 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024 ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‍ನಲ್ಲಿ ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕ್ರತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಪತ್ರಕರ್ತ ಜಾನ್ ಡಿ’ಸೋಜಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ಸ್ಪರ್ಧಿಗಳಷ್ಟೇ ಶ್ರೇಷ್ಟರೆಂದು ಭಾವಿಸಬಾರದು. ಅವರ ಗೆಲುವಿಗೆ ಕಾರಣರಾದ ಹಾಗೂ ಸಮಾನ ಸ್ಪರ್ಧೆಯನ್ನು ನೀಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸ ಬೇಕು. ಪ್ರತೀ ಸೋಲಿನಿಂದ ಗೆಲುವಿನ ದಾರಿಯನ್ನು ಕಂಡುಕೊಂಡು ಮುನ್ನಡೆಯಬೇಕು. ವಿದ್ಯಾರ್ಥಿಗಳಲ್ಲಿ ಧನಾತ್ಮಕ ಸ್ಪರ್ಧಾ ಮನೋ ಭಾವನೆ ಇರಬೇಕೆಂದು ಪ್ರತೀಯೊಬ್ಬ ವಿದ್ಯಾರ್ಥಿಯೂ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ಹೊಂದಿರುತ್ತಾರೆ, ಅದನ್ನು ಗುರುತಿಸಿ ಸರಿಯಾದ ಮಾರ್ಗದರ್ಶನ ದೊರೆತರೆ ಜೀವನದಲ್ಲಿ ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಅವರು ಮಾತನಾಡಿ, ಜೀವನದಲ್ಲಿ ಸಾಧನೆ ಹಾಗೂ ಯಶಸ್ಸುಗಳಿಸಿದ ವ್ಯಕ್ತಿಗಳಿಂದ ವಿದ್ಯಾರ್ಥಿಗಳು ಪ್ರೇರಿತರಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮ್ಯಾನೇಜಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ. ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 1 ರಿಂದ 19 ವರ್ಷದೊಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಕೈಗಾರಿಕಾ ಶಿಕ್ಷಣ ಮತ್ತು ಉದ್ಯೋಗ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನು ಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ 3ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊಫೆಸರ್ ಆಶಾದೇವಿ ಎಮ್ (ಶಿಕ್ಷಣತಜ್ಞೆ, ಮನಶಾಸ್ತ್ರಜ್ಞರು, ನರ್ಸರಿ ಮತ್ತು ಮೊಂಟೆಸ್ಸರಿ ತರಬೇತುದಾರರು ಹಾಗೂ ಸಲಹೆಗಾರರು, ಬೆಂಗಳೂರು) ಇವರು ಹಲವಾರು ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೇಗೆ ಸಾಮಾಜಿಕ ಜವಾಬ್ದಾರಿ ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಲು ನೈತಿಕ ಪ್ರಜ್ಞೆ ಸಹಾಯಕ, ವರ್ತನೆ, ಭಾವನಾತ್ಮಕ ಬುದ್ಧಿವಂತಿಕೆ, ಸ್ವಯಂ ನಿಯಂತ್ರಣ, ಧನಾತ್ಮಕ ಮನೋವೈಜ್ಞಾನಿಕ ಮಾರ್ಗದರ್ಶನ, ಸಾಮಾಜಿಕ ಬುದ್ಧಿವಂತಿಕೆ, ನಾಯಕತ್ವದ ಕೌಶಲ್ಯ, ಹೊಸ ಹೊಸ ಆಲೋಚನೆ, ಆತ್ಮವಿಶ್ವಾಸ, ಸಾಮಾಜಿಕ ರೂಢಿಗಳು, ವಿಷಯಜ್ಞಾನ, ಚರ್ಚೆ, ಕೀಳರಿಮೆ, ಕಲಿಕೆಯ ಆಸಕ್ತಿ, ಅಭ್ಯಾಸದಲ್ಲಿ ಅಭಿಪ್ರೇರಣೆ, ಕಲಿಕಾ ಹವ್ಯಾಸಗಳು, ಸಮಯನಿರ್ವಹಣೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮದ್ಭಗವದ್ಗೀತಾ ಅಭಿಯಾನ 2024 ಈ ಪ್ರಯುಕ್ತ ಆಚರಣಾ ಸಮಿತಿ ಅವರು ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಆಶ್ರಯ ಹೊಲಿಗೆ ತರಬೇತಿ ಕೇಂದ್ರದ ಸಹಯೋಗದಲ್ಲಿ ಕಸೂತಿ ವಿನ್ಯಾಸದ ತರಬೇತಿ ಕಾರ್ಯಕ್ರಮವು ಗಂಗೊಳ್ಳಿ ಆಶ್ರಯ ಹೊಲಿಗೆ ತರಬೇತಿ ಕೇಂದ್ರದಲ್ಲಿ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಆಶ್ರಯ ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿ ಶಾಂತಿ ಖಾರ್ವಿ, ಸಂಪನ್ಮೂಲ ವ್ಯಕ್ತಿ ರಮ್ಯ ಹಾಗೂ ತರಬೇತಿ ನೀಡಲು ಸ್ಥಳಾವಕಾಶ ನೀಡಿದ ಸುಜಾತಾ ಬಿ. ಖಾರ್ವಿ ಉಪಸ್ಥಿತರಿದ್ದರು. ಸುಮಾರು 37 ಶಿಬಿರಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಗ್ರಾಮದ ಕುಳ್ಳಂಜೆಯಲ್ಲಿ ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು. ನೂತನ ಆಸ್ಪತ್ರೆಯನ್ನು ನಾರಾಯಣ ನೇತ್ರಾಲಯ ನಿರ್ವಹಣೆ ಮಾಡಲಿದೆ. ವಿಸ್ತಾರವಾದ ಒಳಾಂಗಣವನ್ನು ಹೊಂದಿರುವ ಕಟ್ಟಡವು ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಹೊಂದಿದ್ದು ಉನ್ನತ ಗುಣಮಟ್ಟದ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಹೆಸರಾಂತ ವೈದ್ಯರು ಮತ್ತು ಆರೋಗ್ಯ ವೃತ್ತಿಪರರ ತಂಡದೊಂದಿಗೆ ಸೇವೆಯನ್ನು ಒದಗಿಸಲು ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಸಜ್ಜಾಗಿದೆ. ನೂತನ ಆಸ್ಪತ್ರೆಯನ್ನು ಉದ್ಘಾಟಿಸಿದ ಎಸ್.ಎನ್.ಸಿ. ಕಾರ್ಯಾಧ್ಯಕ್ಷ, ಡಾ.ಎನ್ ಸೀತಾರಾಮ ಶೆಟ್ಟಿ ಮಾತನಾಡಿ, “ಎಸ್‌ಎನ್‌ಸಿಯ ದಾರ್ಶನಿಕ ಸಂಸ್ಥಾಪಕ ಸಿ. ನಾರಾಯಣ ಶೆಟ್ಟಿ ಅವರ 100ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಸ್ಪತ್ರೆಯನ್ನು ಜನತೆಯ ಸೇವೆಗಾಗಿ ಸಿದ್ಧಗೊಳಿಸಲಾಗಿದೆ. ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆಯನ್ನು ನಿರ್ಮಿಸಲಾಗಿರುವುದು ಸಾಮಾಜಿಕ ಜವಾಬ್ದಾರಿಯ ನಿರಂತರ ಪರಂಪರೆಗೆ ಸಾಕ್ಷಿಯಾಗಿದೆ”. ಜನಸಾಮಾನ್ಯರು ಯಾವುದೇ ವೆಚ್ಚವಿಲ್ಲದ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮಹಾದೇವ ಎಜುಕೇಷನ್, ಆರ್ಟ್ & ಕಲ್ಚರಲ್ ಟ್ರಸ್ಟ್ ರಿ. ಬಳ್ಳಾರಿ, ಜೆ.ಟಿ. ಫೌಂಡೇಷನ್ ಮತ್ತು ಶ್ರೀ ಎಸ್.ಆರ್.ಎಂ. ಸೇವಾ ಸಂಸ್ಥೆ ರಿ. ಬಳ್ಳಾರಿ ಹಾಗೂ ಅಖಿಲ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಮಿತಿ ಬಳ್ಳಾರಿ – ಇವರ ಸಹಯೋಗದಲ್ಲಿ ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ನಡೆದ “ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ”ದಲ್ಲಿ ಶಯದೇವಿಸುತೆ, ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ “ಕರ್ನಾಟಕ ಸಾಧಕ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಯದೇವಿಸುತೆ, ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ “ಕರ್ನಾಟಕ ಸಾಧಕ ರತ್ನ” ಎಂಬ ಮಹೋನ್ನತ ಪ್ರಶಸ್ತಿ ಯನ್ನು ಬಸವ ಕಲ್ಯಾಣ ಸಂಸ್ಥಾನ ಗವಿಮಠದ ಸ್ವಾಮೀಜಿ ಪೂಜ್ಯ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಗುರುವರ್ಯರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಸಕಲ ಗಣ್ಯಾತಿ-ಗಣ್ಯ ಮಹನೀಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಶಯದೇವಿಸುತೆ ಮರವಂತೆಯವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ಪತ್ರಿಕೋದ್ಯಮ ಹೀಗೆಯೇ ವಿವಿಧ ಕ್ಷೇತ್ರದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿನ ತಾಮ್ರಪಟ ಶಾಸನವು, 46 ಸೆ.ಮೀ. ಉದ್ದ, 33 ಸೆ.ಮೀ. ಅಗಲ ಮತ್ತು 3 ಮಿ.ಮೀ. ದಪ್ಪವಿರುವ ಏಕೈಕ ತಾಮ್ರದ ಹಾಳೆಯಾಗಿದೆ. ಆಯತಾಕಾರದ ಈ ತಾಮ್ರಪಟದ ಎರಡೂ ಬದಿ ಕನ್ನಡ ಲಿಪಿ ಮತ್ತು ಭಾಷೆಯಲ್ಲಿ ಕಂಡರಿಸಿದ ಬರವಣಿಗೆಯಿದೆ. ಶಾಸನದ ಮುಮ್ಮುಖದಲ್ಲಿ ಹದಿನೇಳು ಸಾಲಿನ ಬರವಣಿಗೆ ಇದೆ, ಹಿಮ್ಮುಖದಲ್ಲಿ ಹದಿಮೂರು ಸಾಲುಗಳ ಬರಹವಿದೆ. ಶಾಸನವು ಶೈವಸ್ತುತಿಯೊಂದಿಗೆ ಆರಂಭವಾಗಿದ್ದು, ನಂತರ ಶಾಲಿವಾಹನ ಶಕ ವರುಷ 1,666 ನೆ ರುಧಿರೋದ್ಗಾರಿ ಸಂವತ್ಸರದ ಆಷಾಢ ಬ 5 ಯಲ್ಲು ಎಂಬ ಕಾಲಮಾನದ ಉಲ್ಲೇಖವಿದೆ. ಶಾಸನೋಕ್ತ ಕಾಲಮಾನವು ಕ್ರಿ.ಶ. 1744ರ ಜುಲೈ 4ಕ್ಕೆ ಸರಿಹೊಂದುತ್ತದೆ. ನಂತರ ಶ್ರೀಮದ್ ಎಡವ ಮುರಾರಿ, ಕೋಟೆ ಕೋಟೆ ಕೋಳಾಹಳ ವಿಶುಧ ವೈದಿಕ ಸಿದ್ಧಾಂತ ಪ್ರತಿಷ್ಠಾಪಕ ಕೆಳದಿ ಸದಾಶಿವರಾಯ ನಾಯಕರ ವಂಶೋದ್ಭವ ಸೋಮಶೇಖರ ನಾಯಕರ ಧರ್ಮಪತ್ನಿ ಚೆನ್ನಮ್ಮಾಜಿಯವರ ಪ್ರಪೌತ್ರರು ಬಸವಪ್ಪ ನಾಯಕರ ಪೌತ್ರರು ಸೋಮಶೇಖರ ನಾಯಕರ ಅನುಜ ವೀರಭದ್ರ ನಾಯಕರ ಪುತ್ರರು ಬಸವಪ್ಪ ನಾಯಕರು.…
