Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪಿ.ಎಸ್‌.ಇ.ಎಂ.ಆರ್‌ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದ ಸಿಬಿಎಸ್‌. ಸಿ ಕ್ಲಸ್ಟರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಫ್‌ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್‌ ಮತ್ತು ಫೀಲ್ಡ್‌ನ ಅಥ್ಲೀಟ್‌ ಆಶಿತ್‌ ಸಂಜಯ್‌ ಕುಮಾರ್‌ ಬಾಲಕರ ಲಾಂಗ್‌ ಜಂಪ್‌ನಲ್ಲಿ ಚಿನ್ನದ ಪದಕ ಪಡೆದು ಸಿ.ಬಿ.ಎಸ್.ಸಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ -2024 ಗೆ ಅರ್ಹತೆ ಪಡೆದಿದ್ದಾರೆ. ಅವರಿಗೆ ಕುಂದಾಪುರ ಟ್ರ್ಯಾಕ್‌ ಮತ್ತು ಫೀಲ್ಡ್‌ನ ಮುಖ್ಯಸ್ಥರು ಹಾಗೂ ತರಬೇತಿದರರಾದ ಪ್ರಶಾಂತ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:  ಅಕ್ಟೋಬರ್  6 ರಂದು ಕರಾವಳಿ ಸ್ಪೋಟ್ಸ್ ಕ್ಲಬ್ ಮರವಂತೆ – ನಾವುಂದ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವುಂದದಲ್ಲಿ ನಡೆದ ಅಂತರ್ ಜಿಲ್ಲೆಗಳ 8 ಬಲಿಷ್ಠ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ಅತ್ಯುತ್ತಮವಾಗಿ ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ ವಿದ್ಯಾರ್ಥಿ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಹಳೆ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು  ಹಳೆ ವಿದ್ಯಾರ್ಥಿ ಸಂಘದ  ಕಾರ್ಯದರ್ಶಿಯಾಗಿರುವ ಭಾಸ್ಕರ್ ಎಚ್.ಜಿ  ಉದ್ಘಾಟಿಸಿದರು. ಎಸ್.ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಮ್. ಸಿ , ಸ.ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಎಸ್.ವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ,ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಉಪಸ್ಥಿತರಿದ್ದರು. ಬಹುಮಾನ ವಿತರಣೆಯನ್ನು ಜಿ.ಎಸ್‌.ವಿ.ಎಸ್‌.ಎ ಅಸೋಸಿಯೇಶನ್‌ (ಆರ್‌) ಗಂಗೊಳ್ಳಿಯ ಖಜಾಂಚಿ ಅಶ್ವಿನ್ ಮತ್ತು ಸದಸ್ಯ ರಾಮನಾಥ್ ನಾಯಕ್, ಎಸ್.ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ,ಎಸ್.ವಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ಸುಗುಣ ನೆರವೇರಿಸಿಕೊಟ್ಟರು. ಬಾಲಕರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ ಮಾತೃಭಾಷೆಯ ಮಹತ್ವದ ಕುರಿತು ಮನದಟ್ಟು ಮಾಡುವ ಮೂಲಕ ಕನ್ನಡವನ್ನು ನಮ್ಮ ಉಸಿರಾಗಿಸುವುದರ ಜೊತೆಗೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ – ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ ಕೋರಿ, ಕನ್ನಡ ತಾಯಿ ಭುನೇಶ್ವರಿಯ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ, ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ-50 ಅನ್ನು ಆಚರಿಸುತ್ತಿದ್ದು, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿದ್ದ ಬಿವಿಎಸ್ ಫೈನಾನ್ಸ್ ನಿರ್ದೇಶಕ, ಪಾಲುದಾರ, ಕುಂದಾಪುರ ಸ್ಪೋರ್ಟ್ಸ್ ಪೆವಿಲಿಯನ್ ಮಾಜಿ ಕೋಶಾಧಿಕಾರಿ, ಪಿಯುಸ್ ನಗರ ಚರ್ಚಿನ ಹಿರಿಯ ಕ್ರಿಯಾಶೀಲ , ಕುಂದಾಪುರ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಆಲ್ಫ್ರೆಡ್ ಡಿ’ ಸೋಜಾ (74) ಸೋಮವಾರದಂದು ಅಸ್ವಸ್ಥತೆಯಿಂದ ಹಳೆ ಅಳ್ವೆಯ ಸ್ವಗ್ರಹದಲ್ಲಿ ನಿಧನ ಹೊಂದಿದ್ದಾರೆ. ಅವರು ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿ ಇದ್ದರು. ಅವರಿಗೆ ಪತ್ನಿ , ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿನೋದ್‌ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವ, ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್‌ಸ್ವರೂಪ್)ಅವರ ಹೊಸ ಮಹಾ ಕಾದಂಬರಿ, “ಕೆಂದಾವರೆ” ಕಾದಂಬರಿಯನ್ನು  ಬೆಳ್ಳಿ ತೆರೆಗೆ ಬರಲು ಸಿದ್ದತೆ ನಡೆದಿದೆ. “ಕೆಂದಾವರೆ” ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್‌ನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ಲೋಕಾರ್ಪಣೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಹುಬ್ಬಳ್ಳಿ, ಬೆಂಗಳೂರು, ಮಲೆನಾಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಿತ್ರೀಕರಣವು ಆರಂಭಗೊಂಡಿದ್ದು, ಚಿತ್ರ ನಿರ್ದೇಶಕ ಪನ್ನಗ ಹಾಗೂ ಕಲಾವಿದ ಜಗನ್‌ರವರು ಕೆಲ ಆ್ಕಕ್ಷನ್ ಕಟ್ ಹಾಗೂ ಕಾಮಿಡಿ ಪಂಚ್‌ನಲ್ಲಿ ಸಹ ಬರಹಗಾರರಾಗಿ ಇವರಿಗೆ ಬಲು ವಿಶೇಷವಾಗಿ ಕೈಜೋಡಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಗೆ ತೆರಳಲು ಅ. 10 ಹಾಗೂ ಅ. 12ರಂದು ವಿಶೇಷ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ. ರೈಲಿನ ವೇಳಾಪಟ್ಟಿ ಹೀಗಿದೆ:ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್ ಬೈಪಾಸ್ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. 06585 ರೈಲುಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585)…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಯು. ಸತ್ಯನಾರಾಯಣ್ ರಾವ್ ಹಾಗೂ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ನಾಗರಾಜ್ ಪುತ್ರನ್ ಅವರು, ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಕಟ್‌ಬೇಲ್ತೂರುವಿನಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಂದ ಧ್ವಜವನ್ನು ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಹೆಮ್ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಸುಧಾಕರ್ ಎನ್ ದೇವಾಡಿಗ, ಜಲಜ ಮೊಗವೀರ, ಶಕಿಲಾ, ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್‌ ಕುಮಾರ್ ಶೆಟ್ಟಿ ಗುಡಿಬೆಟ್ಟು ಜಿಲ್ಲಾ ಕೆಡಿಪಿ ಸದಸ್ಯ ಪ್ರಸನ್ ಕುಮಾರ್ ಶೆಟ್ಟಿ ಕೆರಾಡಿ ಇದ್ದರು.

Read More