ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 3 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು, ಆನ್ಗಳ್ಳಿ ಗ್ರಾಮ ಪಂಚಾಯತ್, ಹೇರಿಕುದ್ರು ಫ್ರೆಂಡ್ಸ್, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಸಹಯೋಗದೊಂದಿಗೆ ಹೇರಿಕುದ್ರು ಮಾನಸ ಮಂದಿರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರ ನಡೆಯಿತು. ಹಲವಾರು ಮಂದಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಚ್ ಟ್ಟು, ಬಸ್ರೂರು ವೈದ್ಯಾಧಿಕಾರಿ ವಿದ್ಯಾ, ಡಾ. ಮನೋಜ್ ಭಟ್, ಶಂಕರ್ ಶೆಟ್ಟಿ, ಉದಯ್ ಶೆಟ್ಟಿ ಆಜ್ರಿ, ಊರಿನ ಗ್ರಾಮಸ್ಥರಾದ ಗಣಪಯ್ಯ ಶೆಟ್ಟಿ, ಕೊರಗಯ್ಯ ಶೆಟ್ಟಿ ಉಪಸ್ಥಿತರಿದ್ದರು. ಮಹಾಬಲ ಹೇರಿ ಕುದ್ರು ಕಾರ್ಯಕ್ರಮವನ್ನು ನಿರೂಪಿಸಿ, ಸುನಿಲ್ ಶೆಟ್ಟಿ ಹೇರಿಕುದ್ರು ಧನ್ಯವಾದ ಸಮರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮಿಯ್ಯಾಣಿ ಕಾಡಿನತಾರುವಿನಲ್ಲಿ 26ನೇ ವರ್ಷದ ಸೂರ್ಯ ಕಂಬಳೋತ್ಸವ ಅಕ್ಟೋಬರ್ 13ರ ಭಾನುವಾರ ನಡೆಯಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ , ಹಗ್ಗ ಕಿರಿಯ ವಿಭಾಗ, ಹಗ್ಗ ಹಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಘಟಕ ಸಂತೋಷ ಪೂಜಾರಿ ಕಾಡಿನತಾರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ. ಬಾಬು ಶೆಟ್ಟಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ನಾಯ್ಕ್, ಧನಾಕ್ಷಿ ವಿಶ್ವನಾಥ, ಸುಧಾ ಕೆ. ಪಡುವರಿ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಅವರು ಮೊದಲ ಸಭೆಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಕುಂದಾಪುರ ಎಸಿ ಮಹೇಶ್ಚಂದ್ರ ಆಯ್ಕೆ ಪ್ರಕ್ರಿಯೆ ನಡೆಸಿದರು. ದೇವಳದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಕೆ. ಬಾಬು ಶೆಟ್ಟಿ ಅವರು ಈ ಮೊದಲು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಕನ್ನಡ ದಿನಪತ್ರಿಕೆ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ ನೀಡಿದರು.ಮೊದಲಿಗೆ ಮಣಿಪಾಲ ಮ್ಯೂಸಿಯಂಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಪ್ರಾಣಿಗಳು ಮತ್ತು ಮಾನವರ ವಿವಿಧ ಅಂಗರಚನಾ ರಚನೆಗಳನ್ನು ಮತ್ತು ವಿಶೇಷವಾಗಿ ಮಾನವರ ವಿವಿಧ ರೋಗಶಾಸ್ತ್ರಕ್ಕೆ ಸಂಬಂಧಿಸಿದ ಮಾದರಿಗಳನ್ನು ವೀಕ್ಷಿಸಿದರು. ಭೇಟಿಯು ಉತ್ಕೃಷ್ಟ ಪ್ರೇರಕ ಅನುಭವವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸಿತು.ನಂತರ ಉದಯವಾಣಿ ದಿನಪತ್ರಿಕೆ ಕಚೇರಿಗೆ ಭೇಟಿ ನೀಡಿ ಸ್ಥಾನೀಯ ಸಂಪಾದಕ ಕೃಷ್ಣ ಭಟ್ರೊಂದಿಗೆ ಸಂವಾದ ನಡೆಸಿದರು. ಆ ಬಳಿಕ ಕಚೇರಿಯ ಸಿಬ್ಬಂದಿ ವರ್ಗದವರು ಪತ್ರಿಕೆಯ ವಿವಿಧ ಅಂಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಉದಯವಾಣಿ ಡಿಜಿಟಲ್ನ ಸಿಬ್ಬಂದಿ ಡಿಜಿಟಲ್ ವಿಭಾಗದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುದ್ರಣ ವಿಭಾಗದ ಸಿಬ್ಬಂದಿ ಮುದ್ರಣ ತಂತ್ರಜ್ಞಾನ ಹಾಗೂ ಪ್ರಕ್ರಿಯೆಯನ್ನು ವಿವರಿಸಿದರು.ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ರಕ್ಷಿತಾ ತೋಡಾರು, ಮನೋವಿಜ್ಞಾನ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂದಿನ ದಿನಗಳಲ್ಲಿ ಭಾವನಾತ್ಮಕ ಸಂಬಂಧಗಳು ದೂರ ಹೋಗುತ್ತಿವೆ. ಕೂಡು ಕುಟುಂಬಗಳು ನಾಶವಾಗುತ್ತಿದ್ದು, ಇದರಿಂದ ನಮ್ಮ ಸಂಸ್ಕೃತಿ, ಗುರುಕುಲ ಶಿಕ್ಷಣ ನಾಶವಾಗುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದೆ. ಹೀಗಾಗಿ ನಮ್ಮಲ್ಲಿ ಧನಾತ್ಮಕ ಚಿಂತನೆಗಳು ಬೆಳೆಯಬೇಕಿದೆ. ಪ್ರಕೃತಿ, ಸಂಸ್ಕೃತಿ ಉಳಿಸುವ ಕಾರ್ಯ ನಡೆಯಬೇಕು. ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸಂದರ್ಭ ಋಷಿ ಪರಂಪರೆಯನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಶ್ರೀ ಶಾರದಾ ಮಂಟಪದಲ್ಲಿ ನೂತನವಾಗಿ ನಿರ್ಮಿಸಲಾದ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ಗಂಗೊಳ್ಳಿಯಲ್ಲಿ ಕಳೆದ 49 ವರ್ಷಗಳಿಂದ ಶ್ರೀ ಶಾರದಾ ಮಹೋತ್ಸವವನ್ನು ನಡೆಸಿ ಸಮಾಜದಲ್ಲಿ ಒಗ್ಗಟ್ಟು ಮೂಡಿಸಿ, ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಹಿರಿಯರ ಮಾರ್ಗದರ್ಶನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 30 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ ಪ್ರಸಾದ, ಸಮೀಕ್ಷಾ, ಅದಿತಿ ಮತ್ತು ಅಂಶು ರಾಜ್ಯ ಮಟ್ಟದಲ್ಲಿ ನಡೆಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಣಮಟ್ಟದ ಸರ್ಜಿಕಲ್ಸ್ ಪರಿಕರಗಳಿಗೆ ಹೆಸರಾದ ‘ಗಿರಿಜಾ ಸರ್ಜಿಕಲ್ಸ್’ ಇದರ ನೂತನ ಮಳಿಗೆಯ ಉದ್ಘಾಟನಾ ಸಮಾರಂಭವು ಅ.6ರ ಭಾನುವಾರ ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಸಾನು ಪ್ಯಾಲೇಸ್ ನೆಲಮಹಡಿಯಲ್ಲಿ ನಡೆಯಲಿದೆ. ಕಡಿಮೆ ದರ, ಗುಣಮಟ್ಟದ ಪರಿಕರ, ಆಯ್ಕೆಗೆ ಅವಕಾಶ, ಮೊದಲಾದ ಗ್ರಾಹಕಸ್ನೇಹಿ ಸೇವೆಗಳನ್ನು ಒದಗಿಸುತ್ತಿರುವುದರಿಂದ ಭಟ್ಕಳದಿಂದ ಮಂಗಳೂರು ತನಕದ ಗ್ರಾಹಕರನ್ನು ಹೊಂದಿರುವ ಗಿರಿಜಾ ಸರ್ಜಿಕಲ್ಸ್ ಮಂಗಳೂರು, ಉಡುಪಿ ಹಾಗೂ ಕುಂದಾಪುರದಲ್ಲಿ ಈಗಾಗಲೇ ಮಳಿಗೆಗಳನ್ನು ಹೊಂದಿದ್ದು, ಇದೀಗ ಮಂಗಳೂರಿನಲ್ಲಿ ಎರಡನೇ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಜು ಪೂಜಾರಿ ಅವರು ಮಂಗಳೂರು ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆನಾಮಪತ್ರ ಸಲ್ಲಿಸಿದರು. ಪ್ರತ್ಯೇಕ ಎರಡು ನಾಮಪತ್ರ ಸಲ್ಲಿಸುವ ವೇಳೆ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮುಖಂಡರುಗಳಾದ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ, ಐವನ್ ಡಿಸೋಜಾ, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್ ಉಪಸ್ಥಿತರಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಗ್ರಾಪಂ, ತಾಪಂ ಸದಸ್ಯನಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಅನುಭವ ಹೊಂದಿದ್ದೇನೆ. ಸ್ಥಳೀಯ ಸಂಸ್ಥೆಗಳ ಎಲ್ಲಾ ಸಮಸ್ಯೆಗಳ ಅರಿವು ನನಗಿದೆ. ಆದ ಕಾರಣ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.3: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಕುಂದಾಪುರ ಸಹಾಯಕ ಕಮೀಷನರ್ ಮಹೇಶ್ಚಂದ್ರ , ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ಬಾಬು ಶೆಟ್ಟಿ ಹಾಗೂ ಭಕ್ತ ರ್ಗದವರು ಉಪಸ್ಥಿತರಿದ್ದರು.
