Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಮಾ ಅವಾರ್ಡ್ಸ್ – ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2022ನೇ ಸಾಲಿನಲ್ಲಿ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಕಾಂತಾರ ಸಿನಿಮಾಗೆ ಹಲವು ವಿಭಾಗದಲ್ಲಿ ಪ್ರಶಸ್ತಿಗಳು ಹರಿದುಬಂದಿದೆ. ಕಾಂತಾರ ಸಿನಿಮಾಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಿರ್ದೇಶನ, ಪಾಥ್ ಬ್ರೇಕಿಂಗ್ ಸ್ಟೋರಿ ಹಾಗು ಅತ್ಯುತ್ತಮ ನಟ, ಸಪ್ತಮಿ ಗೌಡ ಅವರಿಗೆ ಅತ್ಯುತ್ತಮ ನಟಿ, ಅಚ್ಚುತ ಕುಮಾರ್ ಅವರಿಗೆ ಖಳನಟ, ಪ್ರಕಾಶ್ ತುಮಿನಾಡು ಅವರಿಗೆ ಅತ್ಯುತ್ತಮ ಹಾಸ್ಯನಟ, ಅಜನೀಶ್ ಬಿ. ಲೋಕನಾಥ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ, ವಿಜಯ ಪ್ರಕಾಶ್ ಅವರಿಗೆ ಅತ್ಯುತ್ತಮ ಗಾಯಕ ಹಾಗೂ ಪ್ರಮೋದ್ ಮರವಂತೆ ಅವರಿಗೆ ಅತ್ಯುತ್ತಮ ಸಾಹಿತಿ, ಮುಕೇಶ್ ಲಕ್ಷ್ಮಣ್ ಅವರಿಗೆ ವಿಶೇಷ ಮೆಚ್ಚುಗೆ ಪ್ರಶಸ್ತಿ ದೊರೆತಿದೆ. 2022ರ ಸೆಪ್ಟೆಂಬರ್ 30ರಂದು ಬಿಡುಗಡೆ ಆದ ಕಾಂತಾರ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ನಟನೆಗೆ ಫಿದಾ ಆಗಿದ್ದರು. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯ ಹೆಚ್ಚು ಗಮನ ಸೆಳೆದಿತ್ತು. ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಗಳ ಬಗ್ಗೆ ‘ಕಾಂತಾರ’ ಸಿನಿಮಾದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವರದಿ ಸಾಲಿನಲ್ಲಿ 219 ಕೋಟಿ ರೂ. ಗಳಿಗೂ ಮಿಕ್ಕಿ ವ್ಯವಹಾರವನ್ನು ನಡೆಸಿ, 167.96 ಲಕ್ಷ ರೂ. ನಿವ್ಹಳ ಲಾಭ ಗಳಿಸಿದೆ. ಈ ಬಾರಿ ಸೊಸೈಟಿಯ ಸದಸ್ಯರಿಗೆ ಶೇ.17 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ನಾಗರಾಜ್ ಕಾಮಧೇನು ಹೇಳಿದರು. ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ರಜತ ಮಹೋತ್ಸವ ಸಭಾಭವನದಲ್ಲಿ ಭಾನುವಾರ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವರದಿ ವರ್ಷದಲ್ಲಿ 6308.38 ಲಕ್ಷ ರೂ. ಠೇವಣಿ ಹೊಂದಿದ್ದು, 4833.99 ಲಕ್ಷ ರೂ. ಸದಸ್ಯರಿಗೆ ಸಾಲ ಸೌಲಭ್ಯ ನೀಡಲಾಗಿದೆ. 985.55 ಲಕ್ಷ ರೂಪಾಯಿಗಳನ್ನು ವಿವಿಧ ನಿಧಿಗಳಲ್ಲಿ ಸಂಚಯಿಸಲಾಗಿದೆ. ಬ್ಯಾಂಕಿನ ಗ್ರಾಹಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ತ್ವರಿತ ಸ್ಪಂದನೆ, ಪಾರದರ್ಶಕ ಆಡಳಿತ ವ್ಯವಸ್ಥೆ, ತಂತ್ರಜ್ಞಾನ ಬಳಕೆ, ತಜ್ಞರ ಸಲಹೆಗಳೊಂದಿಗೆ ಸೊಸೈಟಿಯನ್ನು ಗ್ರಾಹಕ ಸ್ನೇಹಿ ಸಂಸ್ಥೆಯನ್ನಾಗಿಸಲು ಆಡಳಿತ ಮಂಡಳಿ ಬದ್ಧತೆಯನ್ನು ಹೊಂದಿದೆ ಎಂದು ನುಡಿದರು. ಸಭೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬಿಜೆಪಿ ಎಮ್ ಎಲ್ ಎ ಟಿಕೇಟ್ ನೀಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ಇನ್ನೋರ್ವ ವ್ಯಕ್ತಿಗೆ ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೋಡಿಯ ವ್ಯಕ್ತಿಯೋರ್ವರಿಗೆ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ನಂಬಿಸಿ ಅವರಿಂದ ಸುಮಾರು ಐದು ಲಕ್ಷ ರೂಪಾಯಿಯನ್ನು ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ ಬಳಿಕ ಹಣವನ್ನೂ ಮರಳಿಸದೆ ವಂಚಿಸಿದ್ದಾರೆಂದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಡಿ ನಿವಾಸಿ ಸುದಿನ ಎಂಬವರು ಮೀನು ವ್ಯಾಪಾರವನ್ನು ನಡೆಸುತ್ತಿದ್ದರು. 2015 ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿದ್ದು, ತನಗೆ ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನವಿದ್ದು, ಹಲವು ಮಂತ್ರಿಗಳು, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ಹೇಳಿ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದಿನ ಅವರಿಂದ 2018 ರಿಂದ 2022ರ ವರೆಗೆ ಸುಮಾರು ರೂಪಾಯಿ ಐದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಕಾರ್ಪೆಂಟರ್ ವೃತ್ತಿಯಲ್ಲಿ ಹಲವು ವರ್ಷಗಳಿಂದ ತೊಡಗಿಕೊಂಡು ಜನಾನುರಾಗಿಯಾಗಿದ್ದ ತಗ್ಗರ್ಸೆ ಗ್ರಾಮದ ಆಚಾರ್ಕೇರಿ ನಿವಾಸಿ ಗೋವಿಂದ ಆಚಾರ್ಯ (65) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಮಡದಿ, ಐವರು ಪುತ್ರರು, ಓರ್ವ ಪುತ್ರಿ ಕುಟುಂಬಿಕರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಸುಂದರ ಮತ್ತು ಸ್ವಸ್ಥ ಬದುಕಿಗಾಗಿ ನಾವು ಇಂದು ವಿಪರೀತ ಮಾನಸಿಕ ಒತ್ತಡದ ನಡುವೆ ಬದುಕುತ್ತಿದ್ದೇವೆ. ಪರೀಕ್ಷೆಗಳ ಕಾರಣ ನಾವು ಮಾನಸಿಕ ಸಮತೋಲನ ಕಳೆದುಕೊಂಡು ಉದ್ವಿಗ್ನ ಸ್ಥಿತಿಗೆ ತಲುಪಿದ್ದೇವೆ. ಬದುಕನ್ನು ಬದಲಿಸುವುದು ಮತ್ತು ನಮ್ಮನ್ನು ಉನ್ನತಿಗೆ ಕರೆದೊಯ್ಯುವುದು ಸ್ಪರ್ಧಾತ್ಮಕ ಪರೀಕ್ಷೆಗಳೇ ಆದರೂ ನಾವೆಲ್ಲ ಸಮತೋಲಿತ, ಸಕಾರಾತ್ಮಕ ಚಿಂತನೆಗಳನ್ನು ನಡೆಸಬೇಕಾಗಿದೆ. ಹಲವು ಒತ್ತಡಗಳ ನಡುವೆ ಸಮಚಿತ್ತವಾಗಿ ವ್ಯವಹರಿಸುವುದನ್ನು ಕಲಿಯಬೇಕಾಗಿದೆ. ಅತಿಯಾದ ಒತ್ತಡ ಅನೇಕ ಅವಘಡಗಳನ್ನು ಉಂಟುಮಾಡಿದ ಉದಾಹರಣೆಗಳಿವೆ. ಆದ್ದರಿಂದ ಸರಿಯಾದ ದಿಕ್ಕಿನಲ್ಲಿ, ಧನಾತ್ಮಕ ಅಂಶಗಳನ್ನು ಪ್ರಚೋದಿಸಿ ಒತ್ತಡದಿಂದ ಮುಕ್ತವಾಗಿ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಅಂತರಾಷ್ಟ್ರೀಯ JC ತರಬೇತುದಾರರಾದ ತನುಜಾ ಮಾಬೆನ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್‌ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಗುರಿಯ ಕಡೆಗೆ ಸಾಗುವಾದ ಅನೇಕ ಅಡ್ಡಿ – ತಡೆಗಳು ಸಾಮಾನ್ಯ. ಅದನ್ನು ಎದುರಿಸುವ ಮನ:ಸ್ಥಿತಿ, ದೃಢ ನಿರ್ಧಾರ ನಮ್ಮದಾಗಿ, ಒತ್ತಡ ನಿವಾರಣೆಯಾದಾಗ ನಮ್ಮ ಗುರಿ ಸಾಧನೆಯಾಗುತ್ತದೆ ಎಂದು ತಿಳಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು‌ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕಬ್ಬಡಿ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಆತಿಥೇಯ ತಂಡವು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನೀಯರಾಗಿ ಹೊರಹೊಮ್ಮುವುದರೊಂದಿಗೆ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಕಳೆದ ಹತ್ತು ವರ್ಷದ ಕಬಡ್ಡಿ ಕ್ರೀಡಾ ಇತಿಹಾಸದಲ್ಲಿ ಕುಂದಾಪುರ ತಾಲೂಕಿನಿಂದ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದು ಆಯ್ಕೆಯಾದ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಪಡೆದ ಕೀರ್ತಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪಾಲಿಗೆ ಸೇರಿದೆ. ಉಡುಪಿ ಜಿಲ್ಲಾಮಟ್ಟದ ಪಂದ್ಯದಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿನಿಯರ ಪೈಕಿ 5 ವಿದ್ಯಾರ್ಥಿನಿಯರು ಮುಂದೆ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿ ಅಪ್ರತಿಮ ಸಾಧನೆ ಮೆರೆದಿದ್ದಾರೆ.ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ ► ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ಸುವರ್ಣ ಸಂಭ್ರಮದ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಉಪತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾದಿಕಾರಿಯಾದ ಭೀಮಪ್ಪ ಎಚ್ ಬಿಲ್ಲಾರ್ ಉದ್ಗಾಟಿಸಿದರು. ಈ ಸಂಧರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾದ ಸಂದೇಶ್ ಭಟ್, ಚಿತ್ರ ಕಲಾವಿದರಾದ ಮಂಜುನಾಥ ಮಯ್ಯ,ಶಿಕ್ಷಕರಾದ ಗಣೇಶ್ ಪೂಜಾರಿ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಉಪಾಧ್ಯಕ್ಷರಾದ ರಾಮದೇವಾಡಿಗ,ಉದ್ಯಮಿ ಸದಾಶಿವ ಗಾಣಿಗ ಸುವರ್ಣ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಎಚ್.ನಾಯಕ್ ಮೊದಲಾದವರು ಉಪಸ್ಥಿತರಿದ್ದರು ಪ್ರಧಾನ ಸಂಚಾಲಕರಾದ ಪುರುಷೋತ್ತಮದಾಸ್ ಕಾರ್ಯಕ್ರಮ ನಿರೂಪಿಸಿದರು. ಅನಿಲ್ ದೇವಾಡಿಗ ಸ್ವಾಗತಿಸಿ ಮಂಜುನಾಥ್ ದೇವಾಡಿಗ ಧನ್ಯವಾದಗೈದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆಯಲ್ಲಿನ ಭಾಷಾ ಪ್ರಯೋಗ, ಕನ್ನಡ ಭಾಷೆಯ ಸತ್ವವನ್ನು ಜೀವಂತವಾಗಿರಿಸಿದೆ. ಕರಾವಳಿ ಜಿಲ್ಲೆಗಳು ಯಕ್ಷಗಾನದ ನೂರಾರು ಕಲಾವಿದರಿದ್ದು, ಕಲೆಯನ್ನೇ ಉಸಿರಾಗಿಸಿಕೊಂಡವರಾಗಿದ್ದಾರೆ. ಆಧುನಿಕ ಜಗತ್ತಿನ ಮಿತಿಗಳ ನಡುವೆಯೂ ಯಕ್ಷರಂಗ ಶ್ರೀಮಂತವಾಗಿರಲು ಕಲಾರಾಧಕರ ಪ್ರೋತ್ಸಾಹವೇ ಕಾರಣವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಭಾನುವಾರ ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಹಾಗೂ ಕುಂದಾಪ್ರ ಡಾಟ್ ಕಾಂ ಆಯೋಜಿಸಿದ 2 ದಿನಗಳ ಯಕ್ಷೋತ್ಸವ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಕ್ಷಗಾನ ಮನೊರಂಜನೆಗಷ್ಟೇ ಸೀಮಿತವಾಗಿರದೇ ದೇವರ ಸೇವೆಯೂ ಆಗಿರುವುದರಿಂದ ಆಸಕ್ತರ ನೇತೃತ್ವದಲ್ಲಿ ಮುನ್ನಡೆಯುತ್ತದೆ. ಈ ಕಲೆಗೆ ಅಳಿವೆಂಬುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷರಾದ ಶೇಖರ ಖಾರ್ವಿ, ನಾವುಂದ ಗ್ರಾಪಂ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಸಭಾಭವನ ಮಾಲಿಕರಾದ ಮಂಜುನಾಥ ಉಡುಪ ಮುಖ್ಯ ಅತಿಥಿಗಳಾಗಿದ್ದರು. ಹಟ್ಟಿಯಂಗಡಿ ಮೇಳದ ಸಂಚಾಲಕರಾದ ರಂಜಿತ್ ಕುಮಾರ್ ಶೆಟ್ಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಂದಾಪ್ರ ಡಾಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹಿಂದಿ ವಿಭಾಗದಿಂದ “ಹಿಂದಿ ದಿವಸ್ – ಜ್ಯೋತ್ಸ್ನಾ” ಕಾರ್ಯಕ್ರಮ ಜರುಗಿತು. ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರನ್ನು ಹಿಂದಿ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಉಪಸ್ಥಿತರಿದ್ದರು “ಹಿಂದಿ ದಿವಸ್ – ಜ್ಯೋತ್ಸ್ನಾ” ದ ಅಂಗವಾಗಿ ಕಬೀರ್ ಭಜನ್, ಹನುಮಾನ್ ಚಾಲೀಸ್ ಕಂಠಪಾಠ, ಹಿಂದಿ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ.ಪ್ರಫುಲ್ಲಾ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಹಿಂದಿ ವಿಭಾಗದ ಉಪನ್ಯಾಸಕಿಯರಾದ ಅಶ್ವಿನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಕದಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಎಲ್ ಜಿ ಫೌಂಡೇಶನ್ ವತಿಯಿಂದ ಸಮವಸ್ತ್ರ ವಿತರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ನಾಗರಾಜ್ ಡಿ ಪಡುಕೋಣೆ ಅವರು ಸಮವಸ್ತ್ರ ವಿತರಿಸಿ ಮಾತನಾಡಿ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿರುವ ಈ ಸಂದರ್ಭದಲ್ಲಿ ದಾನಿಗಳ ನೆರವು ಪಡೆದು ಕೊಂಡು ಪರಿಸರದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಶಾಲೆ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯ ಬೇಕೆಂದರು. ಈ ಸಂದರ್ಭದಲ್ಲಿ ಟ್ರಸ್ಟಿನ ನಿರ್ದೇಶಕರಾದ ಕುಸುಮ ನಾಗರಾಜ್ ಪಡುಕೋಣೆ, ವ್ಯವಸ್ಥಾಪಕರಾದ ಸುರೇಶ್ ಪಡುಕೋಣೆ, ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವರದ ಆಚಾರ್, ಉಪಾಧ್ಯಕ್ಷರಾದ ಸುರೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬಾಬು ಪೈ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ ಉಪಸ್ಥಿತರಿದ್ದರು. ಶಿಕ್ಷಕರಾದ ರವೀಂದ್ರ ಸ್ವಾಗತಿಸಿದರು. ಸಹ ಶಿಕ್ಷಕಿ ಅಖಿಲಾ ವಂದಿಸಿದರು.

Read More