Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕ ಡಾ. ರಘುರಾಮ್ ರಾವ್, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರ ಡಾ. ಮ್ರಿಜೆನ್ ದೆಖ, ಕೇಂದ್ರೀಯ ಕ್ಷಯ ರೋಗ ವಿಭಾಗದ ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ ಮತ್ತು ಕೆ.ಎಚ್.ಪಿ.ಟಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್.ಎಲ್. ಅವರು ಗಂಗೊಳ್ಳಿಗೆ ಶುಕ್ರವಾರ ಭೇಟಿ ನೀಡಿದರು. ಗಂಗೊಳ್ಳಿಯ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಗ್ರಾಮ ಪಂಚಾಯತ್ ಗಂಗೊಳ್ಳಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇದರ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ವೀಕ್ಷಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ನೈರ್ಮಲ್ಯ, ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ಹಾಗೂ ಗ್ರಾಮ ಪಂಚಾಯತ್‌ನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್‌ಒ ನಯನಾ ಮತ್ತು ಆಶಾ ಕಾರ್ಯಕರ್ತೆ ಕಲ್ಪನಾ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶ ಅಭಿವೃದ್ಧಿಯಾಗಬೇಕಾದರೆ ಭಾರತೀಯ ನಾರಿಶಕ್ತಿ ಎಚ್ಚೆತ್ತುಕೊಂಡು ಪುರುಷರಿಗೆ ಸರಿಸಮಾನರಾಗಿ ನಿಲ್ಲಬೇಕು. ಕಾರಣ ಸಮಾಜದಲ್ಲಿ ದೇವರಿಂದಲೂ ಸಾಧ್ಯವಾಗದ ಕೆಲವು ವಿಚಾರಗಳನ್ನು ಮಹಿಳೆಯರು ಸಾಧಿಸಿ ತೋರಿಸುತ್ತಾರೆ. ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಬಗ್ಗೆ ಇರುವ ದೃಷ್ಠಿಕೋನಗಳು ಬದಲಾಗಬೇಕಿದೆ ಎಂದು ಬೆಳಗಾವಿ ಜಿಲ್ಲೆ ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಅಶೋಕ್ ಹೇಳಿದರು. ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು. ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಬೆಳೆಸುವಲ್ಲಿ ಮಹಿಳೆ ತರ ಪಾತ್ರ ಹಿರಿದಾಗಿದೆ. ಜ್ಞಾನವಿಕಾಸ ಒಂದು ಸಂಸ್ಕಾರಯುತ ಸಂಘಟನೆಯಾಗಿದ್ದು, ಸಾಮಾನ್ಯ ಮಹಿಳೆಯರ ಜೀವನದಲ್ಲಿ ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ಸಮಾಜಮುಖಿ ಕಳಕಳಿಯನ್ನು ಬೆಳೆಸುತ್ತಿದೆ. ಎಲ್ಲಾ ಬೆರಳುಗಳು ಸಮಾನವಾಗಿಲ್ಲದಿದ್ದರೂ ಕೆಲಸ ಮಾಡುವಾಗ ಎಲ್ಲವೂ ಒಂದಾಗುವಂತೆ ಪ್ರತೀ ಒರ್ವ ಮಹಿಳೆಯಲ್ಲಿ ಅಭಿಪ್ರಾಯಗಳು ವ್ಯತಿರಿಕ್ತವಾದರೂ ಕೂಡ ಅವರಿಗೆ ಅಗತ್ಯ ವೇದಿಕೆ ನಿರ್ಮಿಸಿ ಸಮಾನರನ್ನಾಗಿಸಿದೆ. ಶಿಕ್ಷಣ, ಸಾಮಾನ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ 2024- 25ನೇ  ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢ ಶಾಲೆಯ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ  ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಪಡೆದಿರುತ್ತಾರೆ . ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿಗೆ ಅದೆ ಮಾರ್ಗದಲ್ಲಿ ಸಾಗುತ್ತಿದ್ದ ಇನ್ನೊಂದು ಲಾರಿ ಮೂವತ್ತು ಮುಡಿ ಸೇತುವೆ ಬಳಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಶುಕ್ರವಾರ ನಡೆದಿದೆ. ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕುಂದಾಪುರ ಠಾಣೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕರಾದ ಡಾ. ರಘುರಾಮ್, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರರಾದ ಡಾ. ಮ್ರಿಜೆನ್ ದೆಖ, ಕೇಂದ್ರೀಯ ಕ್ಷಯ ರೋಗ ವಿಭಾಗದ ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ ಮತ್ತು ಕೆಎಚ್ಪಿ. ಟಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್. ಎಚ್ ಇವರುಗಳು ಡಿ. 27ರಂದು ವಂಡ್ಸೆ ಗ್ರಾಮ ಪಂಚಾಯತ್ಗೆ ಭೇಟಿ ನೀಡಿದರು. ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ಹಾಗೂ ಗ್ರಾಮ ಪಂಚಾಯತ್‍ನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಎಚ್ಪಿ.ಟಿಯ ಡಾ. ಸ್ವರೂಪ್, ಅನ್ನಾ ಫರ್ನಾಂಡೀಸ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾದ ಗೋವರ್ಧನ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಉದಯ ಕುಮಾರ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಸುರೇಶ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ. ಮಾಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಪ್ರಸಿದ್ಧ ಆರ್ಥಿಕ ತಜ್ಞರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್‌ ಅವರ ನಿಧನದ ಹಿನ್ನೆಲೆಯಲ್ಲಿ  ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಡಿ. 27 ರಂದು ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಶಾಲೆಯ ಸಂಯೋಜಕರಾದ ಸವಿತಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ “ಹತ್ತು ವರ್ಷಗಳಷ್ಟು ದೀರ್ಘಕಾಲ ಭಾರತದ ಪ್ರಧಾನಿಯಾಗಿದ್ದು, ಕಾಯಕವೇ ಕೈಲಾಸವೆಂದು ಸದಾ ಕಾರ್ಯದಲ್ಲಿಯೇ ತಮ್ಮನ್ನು ತೊಡಗಿಸಿಕೊಂಡ ಮಹಾನ್ ಚೇತನ ಮನಮೋಹನ ಸಿಂಗ್. ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆಯನ್ನು ನೀಡಿದವರು. ಮಾಹಿತಿ ತಂತ್ರಜ್ಞಾನ ಕ್ಶೇತ್ರದಲ್ಲಿ ಭಾರತವು ಸಾಧಿಸಿದ ಅಭಿವೃದ್ಧಿಯಲ್ಲಿ ಇವರದ್ದು ಸಿಂಹಪಾಲು. ಮೌನವಾಗಿದ್ದು ಕಾರ್ಯ ನಿರ್ವಹಿಸುವ ಇವರ ಜೀವನ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾದುದು.” ಎಂದರು. ಮನಮೋಹನಸಿಂಗರ ಭಾವಚಿತ್ರಕ್ಕೆ ಪುಷ್ಪಾಂಜಲಿಯೊಂದಿಗೆ ಗೌರವ ನಮನ ಸಲ್ಲಿಸಲಾಯಿತು. ನಂತರ ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಮಾತನಾಡುತ್ತಾ “ಯಾವುದೇ ವ್ಯಕ್ತಿ ಉತ್ತಮವಾಗಿ ಬೆಳೆಯಬೇಕಾದರೆ ಉತ್ತಮ ವಿದ್ಯಾಭ್ಯಾಸ ಅತ್ಯಗತ್ಯ. ಮನಮೋಹನ್ ಸಿಂಗ್‌ ಅವರ ವಿದ್ಯಾರ್ಥಿಜೀವನ ಆಕ್ಸ್‌ಫರ್ಡ್‌ನಂತಹ ಜಗದ್ವಿಖ್ಯಾತ ಸಂಸ್ಥೆಯಲ್ಲಿ ನಡೆದಿದ್ದು ಅವರ ಜೀವನದ ಉತ್ಕರ್ಷಕ್ಕೆ ಕಾರಣವಾಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದ ಪೂಂಛನಲ್ಲಿ ಡಿ.24 ರಂದು ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಯೋಧ ಬೀಜಾಡಿ ಕೆಳಮನೆಯ ಅನೂಪ್ ಪೂಜಾರಿ ಅವರ ಮನೆಗೆ ಶುಕ್ರವಾರ ಸಂಜೆ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಅನೂಪ್ ಪೂಜಾರಿ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ಕುರಿತು ಮಾತನಾಡುವುದಾಗಿ ಯು.ಟಿ.ಖಾದ‌ರ್ ಹೇಳಿದರು. ದೇಶ ಕಾಯುವ ನಮ್ಮೂರ ಯುವಕನ ಆಕಾಲಿಕ ನಿಧನ ತೀವ್ರ ನೋವನ್ನುಂಟು ಮಾಡಿದೆ. ದುರಂತದಲ್ಲಿ ಮೃತಪಟ್ಟ ರಾಜ್ಯದ ಸೈನಿಕರ ಕುಟುಂಬದವರಿಗೂನ ಸರಕಾರದಿಂದ ದೊರಕುವ ರಾಜ್ಯ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದು ಇದನ್ನು ಶೀಘ್ರ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸಲಾಗುತ್ತದೆ. ಹುತಾತ್ಮ ಯೋಧನ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯಕ್ರಮ ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ. ಸರಕಾರದಿಂದ ಅಗತ್ಯ ಸಹಕಾರ ನೀಡಲು ಬದ್ದರಿದ್ದೇವೆ,’ ಎಂದರು. ಮಾಜಿ ಸಚಿವ ವಿನಯಕುಮಾರ ಸೊರಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆರಾಡಿಯ ಆದಿತ್ಯ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಈತ ಚಪ್ಪರಮಕ್ಕಿ ಕೆರಾಡಿ ಜ್ಯೋತಿ ಹಾಗೂ ರಾಜೀವ್ ಶೆಟ್ಟಿ ದಂಪತಿಗಳ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕರ್ನಾಟಕದ ಲೋಕಾಯುಕ್ತರಾದ ಜಸ್ಟೀಸ್ ಬಿ. ಎಸ್ ಪಾಟೀಲ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿ ಮೂಕಾಂಬಿಕೆ ದರ್ಶನ ಪಡೆದು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ, ಧನಾಕ್ಷಿ ಪೂಜಾರಿ, ಮಾಲಿಂಗ ನಾಯ್ಕ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ  ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಆಳ್ವಾಸ್ ಮುಂಡ್ರೆದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ ಸಮಾಜಘಾತುಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಅಂತಹ ವಿದ್ಯೆಗೆ ಏನು ಬೆಲೆ ಮಾನವೀಯ ಸಂವೇದನೆಯನ್ನುಂಟು ಮಾಡುವ ಶಿಕ್ಷಣ ನಮಗೆ ಬೇಕಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಂತಹ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ನಾವು ಅಕ್ಷರಸ್ಥರಾದರೆ ಸಾಲದು. ನಾವು ವಿದ್ಯಾಂತರಾಗಬೇಕು. ಅಕ್ಷರಸ್ಥರೆಲ್ಲರೂ ವಿದ್ಯಾವಂತರಾಗಲು ಸಾಧ್ಯವಿಲ್ಲ. ಸಂಸ್ಕಾರ ಭರಿತ ಅಕ್ಷರಸ್ಥ ಮಾತ್ರ ವಿದ್ಯಾವಂತ. ಅಕ್ಷರ ಕಲಿತ ವ್ಯಕ್ತಿ ದುಷ್ಟನೂ, ಭ್ರಷ್ಟನೂ ಆಗಬಹುದು. ಆದರೆ ಸಂಸ್ಕಾರ ಕಲಿತ ವ್ಯಕ್ತಿ ಎಂದಿಗೂ ದುಷ್ಟ, ಭ್ರಷ್ಟ…

Read More