ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಂತ ಜೊಸೆಫರ ಶಾಲೆಯಲ್ಲಿ ಉತ್ತರ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಶಿಕ್ಷಣದ ಬೆಳಕನ್ನು ಹುಡುಕಿಕೊಂಡು ಬಂದ ವಿದ್ಯಾರ್ಥಿನಿಯರಿದ್ದಾರೆ. ಆ ಎಲ್ಲ ಮಕ್ಕಳು, ಸುತ್ತಮುತ್ತಲಿನ ಅನೇಕ ನಾಗರೀಕರು ಮತ್ತು ಕಾನ್ವೆಂಟಿನ ಸಿಸ್ಟರ್ ಗಳು ನಮ್ಮೊಂದಿಗೆ ಅಮವಾಸ್ಯೆ ರಾತ್ರಿಯ ಆಕಾಶವನ್ನು ಕಣ್ತುಂಬಿಕೊಳ್ಳಲು ಒಟ್ಟಿಗೆ ಸೇರಿದ್ದರು. ಭಾರತ ಜ್ಞಾನ ವಿಜ್ಞಾನ ಸಮಿತಿಯ ಕುಂದಾಪುರ ಘಟಕ ಹಮ್ಮಿಕೊಂಡ ʻನಕ್ಷತ್ರʼ ಆಕಾಶ ವೀಕ್ಷಣೆಯ ಈ ಕಾಯಕ್ರಮ ಆರಂಭವಾದದ್ದು ರವಿ ಕಟ್ಕೆರೆ ಮತ್ತು ಸಂಧ್ಯಾ ನಾಯಕರವರ ಹಾಡಿನೊಂದಿಗೆ. ಇವರಿಬ್ಬರ ದನಿಗೆ ಮಕ್ಕಳು ದನಿಗೂಡಿಸುತ್ತಾ ಸಚಿನ್ ಅಂಕೋಲಾರವರ ಬಾರೆ ಗೆಳತಿ ಬಾರೆ ಹಾಡಿನ ಸಾಲುಗಳನ್ನು ಹಾಡಿದ್ದು ಕಾರ್ಯಕ್ರಮಕ್ಕೆ ಉತ್ತಮ ಪ್ರವೇಶವನ್ನು ಒದಗಿಸಿತು. ಬಿ.ಜಿ.ವಿ.ಎಸ್. ಕುಂದಾಪುರ ಘಟಕದ ಅಧ್ಯಕ್ಷರಾದ ಆಶಾ ಕರ್ವಾಲೋ ಮತ್ತು ಶಾಲೆಯ ಸಂಚಾಲಕರ ಸಿಸ್ಟರ್ ಸುಪ್ರಿಯಾ ಅವರ ಶುಭಹಾರೈಕೆಗಳ ನಂತರ ಶಿಕ್ಷಕ ಉದಯ ಗಾಂವಕಾರ ಆಕಾಶ ವೀಕ್ಷಣೆಗೆ ಮಕ್ಕಳನ್ನು ಸಜ್ಜುಗೊಳಿಸುವ ತರಗತಿ ನಡೆಸಿದರು. ನಂತರ ಅವರು ಮಕ್ಕಳನ್ನು ಹೊರಗೆ ಕರೆದು ಆಕಾಶದ ಬೆರಗನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಸಚ್ಚಿದಾನಂದ ವೈದ್ಯ, ಮಂಜುನಾಥ್ ಕುಲಾಲ್, ವಿಜಯ್ ಮಡಿವಾಳ, ರವಿ ಕುಲಾಲ್, ಮಮತಾ ಆರ್ ಶೆಟ್ಟಿ, ಲತಾ ಡಿ ಎಸ್, ಗಿರಿಜಾ, ರಾಜೀವ ಶೆಟ್ಟಿ, ರಾಮಚಂದ್ರ ದೇವಾಡಿಗ, ಸದಾಶಿವ ಶೆಟ್ಟಿ, ಕೃಷ್ಣ ನಾಯಕ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಹಾಗೂಉಪಧ್ಯಕ್ಷ ಹುದ್ದಗಳಿಗೆ ಶನಿವಾರ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಸುಮಿತ್ರಾ ಕುಮಾರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಯೊಬ್ಬ ಮನಷ್ಯನಿಗೂ ನಮ್ಮ ಸಂಸ್ಕೃತಿ ಹೊರೆಸಿರುವ ದೈವ ಋಣ, ಪಿತೃ ಋಣ, ಆಚಾರ್ಯ ಋಣ, ಸಮಾಜದ ಋಣ ಎಂಬ ನಾಲ್ಕು ಋಣಗಳನ್ನು ತೀರಿಸುವ ಹೊಣೆ ಇದೆ. ಇವು ಕೇಳಲು ಸರಳ ಎನಿಸಿದರೂ ತೀರಿಸಲು ಒಂದು ಜನ್ಮ ಸಾಲದು. ಋಣಮುಕ್ತರಾಗುವಲ್ಲಿಯೇ ಬದುಕಿನ ಸಾರ್ಥಕ್ಯವಿದೆ ಎಂದು ವೈದ್ಯ, ಸಾಹಿತಿ ಡಾ. ನಾ. ಸೋಮೇಶ್ವರ್ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಗುರುವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಸುರಭಿ ಜೈಸಿರಿ ಹಾಗೂ ಬೆಳಿಹಬ್ಬದ ಸಂಭ್ರಮಾಚರಣೆಯಲ್ಲಿ ಸುರಭಿಯ 11ನೇ ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಕೆಲವು ಸೇವೆಯನ್ನು ಹಣದಿಂದ ಅಳೆಯಲು ಸಾಧ್ಯವಿಲ್ಲ. ಭವ್ಯ ಭಾರತದ ಭವಿಷ್ಯವನ್ನು ರೂಪಿಸುವ ಅದ್ಯುತ ಶಿಲ್ಪಿಗಳು ಅಧ್ಯಾಪಕರು. ಅವರ ಋಣವನ್ನು ನಾವು ಉತ್ತಮ ವಿಚಾರವನ್ನು ಹಂಚುವ ಮೂಲಕ ತೀರಿಸಬೇಕಾದ ಹೊಣೆ ನಮ್ಮದಾಗಿದೆ. ಚಂದನ ವಾಹಿಯ ನಿರೂಪಕನಾಗಿ ಆ ಕಾರ್ಯವನ್ನು ಆತ್ಮತೃಪ್ತಿಯೊಂದಿಗೆ ಮಾಡುತ್ತಿದ್ದೇನೆ ಎಂದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಭಾವುಕರಾಗಿದ್ದ ಅವರು ಮುಂದುವರಿದು ಮಾತನಾಡಿ, ಮಕ್ಕಳಿಗೆ ಸಂಸ್ಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ. ಪದವಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಯು ಸಲುವಾಗಿ ಡಿಜಿಟಲ್ ಮಾರ್ಕೆಟಿಂಗ್ ವಿಷಯದ ಕುರಿತಾಗಿ ವಿಶೇಷ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ನಿಧೀಶ್ ರಾವ್ ಪ್ರೊಫೆಸರ್ ನಿಟ್ಟೆ ಅವರು ಡಿಜಿಟಲ್ ಮಾರ್ಕೆಟಿಂಗ್ ಕುರಿತಾಗಿ ಮಾರ್ಗದರ್ಶನ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮಹತ್ವ, ಎಸ್ಇಒ ತಂತ್ರಗಳು, ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್, ಪೇ ಪರ್ ಕ್ಲಿಕ್ ಜಾಹೀರಾತುಗಳು ಕಂಟೆಂಟ್ ಮಾರ್ಕೆಟಿಂಗ್ ಮತ್ತು ಬ್ರಾಂಡ್ ಬಿಲ್ಡಿಂಗ್, ಪ್ರಾಯೋಗಿಕ ಉದಾಹರಣೆಗಳೂಂದಿಗೆ ವಿದ್ಯಾರ್ಥಿಗಳೂಂದಿಗೆ ಚರ್ಚಿಸಿದರು . ಕಾರ್ಯಕ್ರಮದಲ್ಲಿ ಎಂ.ಬಿ.ಎ. ವಿಭಾಗದ ಮುಖ್ಯಸ್ತೆ ಡಾ. ಸುಚಿತ್ರಾ ಪೂಜಾರಿ ಮತ್ತು ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ವಿಭಾಗದ ವಿದ್ಯಾರ್ಥಿನಿಯಾದ ರಶ್ಮಿತಾ ನಿರೂಪಿಸಿ, ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಣಿ ಗ್ರಾಮದ ಕೇಳಕೇರಿ ಎಂಬಲ್ಲಿ ವಾಸವಿದ್ದ ರೋಸ್ ಮೇರಿ ಕೋತಾ (39) ಎಂಬ ಮಹಿಳೆಯು ತನ್ನ 11 ವರ್ಷದ ಮಗನಾದ ರಿಶೋನ ಕೋತಾ ಅವರೊಂದಿಗೆ ಜನವರಿ 18 ರಿಂದ ನಾಪತ್ತೆಯಾಗಿರುತ್ತಾರೆ. ರೋಸ್ ಮೇರಿ ಕೋತಾ 5 ಅಡಿ 6 ಇಂಚು ಎತ್ತರ ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ರಿಶೋನ ಕೋತಾ 4 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಪಿ.ಐ. ಕುಂದಾಪುರ ಠಾಣೆ ಮೊ.ಸಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್ಪ್ರಿನೋರ್ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು 10 ನೇ ತರಗತಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಫೆಬ್ರವರಿ 3 ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕುಂದಾಪುರ ವತಿಯಿಂದ ನಡೆಸಲ್ಪಡುವ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 2024-2025ರ ರಕ್ಷಕ – ಶಿಕ್ಷಕ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೈಣೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಡಾ. ಎ.ವಿ.ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಸೌಜನ್ಯ ಶೆಟ್ಟಿ ಅವರು” ಪ್ರಭಾವಿ ಪೋಷಕತ್ವ” ದ ಕುರಿತು ತಿಳಿಸಿದರು. ಸಭೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶೈಲಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕಿಯರಾದ ಪುಷ್ಪಾ ಸರ್ವರನ್ನು ಸ್ವಾಗತಿಸಿ, ವಂದನಾ ಅವರು ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಇಂಟರ್ನ್ಯಾಷನಲ್ ಲೆಟರ್ ರೈಟಿಂಗ್ ಕಾಂಫಿಟೇಶನ್ ಪ್ರಯುಕ್ತ 9 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಇಮ್ಯಾಜಿನ್ ಯು ಆರ್ ದ ಓಷನ್. ರೈಟ್ ಎ ಲೆಟರ್ ಟು ಸಮ್ಒನ್ ಎಕ್ಸ್ಪ್ಲೇನಿಂಗ್ ವೈ ಅಂಡ್ ಹೌ ದೇ ಶುಡ್ ಟೇಕ್ ಗುಡ್ ಕೇರ್ ಆಫ್ ಯು ವಿಷಯದ ಕುರಿತು ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ ಫೆಬ್ರವರಿ 20 ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ-576101 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರ ಲೇಖನಗಳಿಗೆ ಬಹುಮಾನಗಳನ್ನು ದೇಶೀಯ ಮಟ್ಟದಲ್ಲಿ ಕ್ರಮವಾಗಿ 50,000 ರೂ., 25,000 ರೂ., 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 ರೂ.ಗಳನ್ನು ನೀಡಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫೈನಾಸ್ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು ಪತ್ರಿಕೆಗಳಲ್ಲಿ ಕೇಳಿ ಬರುತ್ತಿವೆ. ಇದಕ್ಕೆಲ್ಲಾ ಕಾರಣ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದರು. ಮೈಕ್ರೋ ಫೈನಾಸ್ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು. ಆದರೆ,…
