ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ’’ಸೃಜನಾತ್ಮಕ ಸ್ಮರಣೆ’’ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು. ಮೈಸೂರಿನ ”Mind Power Learning Systems” ನ ಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಎಸ್. ಪ್ರಶಾಂತ್ ಅವರು ವಿನಯಚಂದ್ರ ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿಯನ್ನು ವೃದ್ಧಿಸುವ ಕಲೆಯನ್ನು ತಿಳಿಸಿದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು. ಶಿಕ್ಷಕಿ ಲೋನಾ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿ, ಮುಖ್ಯೋಪಾಧ್ಯಯರು ಸ್ವಾಗತಿಸಿ, ಶಿಕ್ಷಕಿ ಪ್ರತಿಭಾ ಪೈ ವಂದನಾರ್ಪಣೆಗೈದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾ ಮಿಷನ್ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರುಗಳ ಸಹಯೋಗದೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕಾರ್ಯಕ್ರಮವು ಫೆಬ್ರವರಿ 19ರಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ https://udupi.nic.in/ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಂ:201, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9449943882, 9481456741, 9964428002 ಹಾಗೂ 9481510655 ಅನ್ನು ಸಂಪರ್ಕಿಸಬಹುದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಪಡುಹೆಬ್ರಿ ಮನೆ ನಿವಾಸಿ ಸುನೀಲ್ ಕುಮಾರ್ (40) ಅವರು ಭಾನುವಾರ ರಾತ್ರಿ ಮನೆ ಸಮೀಪದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದು ಅವರು ಜೀವನದಲ್ಲಿ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ. ಈ ಹಿಂದೆ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಬಿಪಿ, ಶುಗರ್, ಕ್ಷಯ ರೋಗದಿಂದಲೂ ಬಳಲುತ್ತಿದ್ದರು. 7-8 ತಿಂಗಳಿನಿಂದ ಕೆಲಸಕ್ಕೆ ಹೋಗದೇ, ಮನೆಯಲ್ಲಿಯೇ ಇದ್ದರು. ಅಣ್ಣ ಸಂತೋಷ್ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ. ಬಿ. ಎಸ್. ಸಿ. ಸ್ಕೂಲ್, ಪ್ಲೇ ಸ್ಕೂಲ್, ಎಲ್. ಕೆ. ಜಿ. ಹಾಗೂ ಯು. ಕೆ. ಜಿ. ಮಕ್ಕಳು ಪಿಂಕ್ ಕಲರ್ ಡೇ ಯನ್ನು ಆಚರಿಸಿದರು. ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲವನ್ನು ವೃದ್ಧಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಪಿಂಕ್ ಬಣ್ಣದ ವಿವಿಧ ತಿನಿಸುಗಳು ಹಾಗೂ ವಸ್ತುಗಳನ್ನು ಪ್ರದರ್ಶಿಸಿದರು. ತರಗತಿ ಕೋಣೆಗಳಲ್ಲಿ ಪಿಂಕ್ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಿಂಕ್ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ, ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್., ಪ್ರಾಂಶುಪಾಲ ನಿತಿನ್ ಡಿ. ಅಲ್ಮೇಡಾ, ಕಿಂಡರ್ ಗಾರ್ಟನ್ ಸಂಯೋಜಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತೀಯ ವೈದ್ಯಕೀಯ ಪರಂಪರೆಯಲ್ಲಿ ಆಯುರ್ವೇದ ವೈದ್ಯ ಪದ್ದತಿಗೆ ಶ್ರೇಷ್ಠ ಸ್ಥಾನಮಾನವಿದೆ. ಆದರೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಕ್ಷಾಧಾರದ ಕೊರತೆಯಿದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ಆಯುರ್ವೇದ ವಿಜ್ಞಾನದಲ್ಲಿ ಇನ್ನಷ್ಟು ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ. ಆಳ್ವಾಸ್‌ನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಯುರ್ವೇದ ಕಾಲೇಜಿನ ಆಳ್ವಾಸ್ ’ಧನ್ವಂತರಿ ಪೂಜಾ ಮಹೊತ್ಸವ, ಶಿಶ್ಯೋಪನಯನ ಸಂಸ್ಕಾರ ಹಾಗೂ ಆಳ್ವಾಸ್ ಧನ್ವಂತರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಯುವೇದದಲ್ಲಿ ಉಜ್ವಲ ಭವಿಷ್ಯವಿದ್ದು, ಅದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹೆಚ್ಚು ಹೆಚ್ಚು ಸಂಶೋಧನೆಗೆ ಒತ್ತು ಕೊಡಬೇಕು. ಕಾಲೇಜಿನಲ್ಲಿ ಕಲಿತ ವಿದ್ಯೆ ಕೇವಲ ಮೆದುಳಿಗೆ ಜ್ಞಾನವನ್ನು ಕೊಡುತ್ತದೆ. ತರಗತಿಯ ಹೊರಗೆ ಕಲಿತ ಬಯಲು ಶಿಕ್ಷಣ ಪ್ರಾಯೋಗಿಕತೆಯಿಂದ ಕೂಡಿದ್ದು, ಅದು ಶ್ರೇಷ್ಠ ಜ್ಞಾವನ್ನಾಗಿಸುತ್ತದೆ. ಆಯುರ್ವೇದದಲ್ಲಿರುವ ವಿಫುಲ ಅವಕಾಶಗಳನ್ನು ಅರ್ಥಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನಲ್ಲಿ ನಡೆದ ಎಐಸಿಎಸ್ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 17ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಪಡೆಯಿತು. ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರತಿಕ್ರಿಯಿಸಿ “2024-25 ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ಕ್ರೀಡಾಪಟುಗಳು ಕಬಡ್ಡಿ, ಬ್ಯಾಡ್ಮಿಂಟನ್, ಅಥ್ಲೆಟಿಕ್ ಸ್ಪರ್ಧೆಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಪ್ರಶಸ್ತಿ, ಪದಕಗಳನ್ನು ಗೆದ್ದಿರುವುದು ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದೆ. ಇಂದು ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿಯೂ ತೃತೀಯ ಬಹುಮಾನಕ್ಕೆ ನಾವು ಭಾಜನರಾಗಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಪರಿಣಾಮಕಾರಿ ಶೈಕ್ಷಣಿಕ ಚಟುವಟಿಕೆಗಳ ಜೊತೆಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳತ್ತಲೂ ಹೆಚ್ಚಿನ ಗಮನ ಕೇಂದ್ರೀಕರಿಸಲಿದ್ದೇವೆ. ನಮ್ಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ನಮ್ಮ ಮೂಲ ಧ್ಯೇಯವಾಗಿದೆ” ಎನ್ನುತ್ತಾ ಅದ್ಭುತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡAತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯರಲ್ಲಿ ಪರಿಪೂರ್ಣತೆಯನ್ನು ತರುವುದೇ ಶಿಕ್ಷಣ ಎನ್ನುತ್ತಾರೆ ಸ್ವಾಮಿ ವಿವೇಕಾನಂದರು. ನೈತಿಕ ಮೌಲ್ಯಗಳಿಲ್ಲದ ಆಧುನಿಕ ಶಿಕ್ಷಣ ವಿದ್ಯಾರ್ಥಿಗಳನ್ನು ಸ್ವಾರ್ಥಿಯಾಗಿಸುತ್ತಿದೆ. ಸಂಸ್ಕಾರವಿಲ್ಲದ ಶಿಕ್ಷಣ ಮನುಷ್ಯನಲ್ಲಿ ಗುರು ಹಿರಿಯರ ಅನಾದರ, ಧಾರ್ಮಿಕ ರಿವಾಜುಗಳ ಅವಹೇಳನ, ಸದಾ ಸ್ವಹಿತ ಚಿಂತನೆಗೆ ಪ್ರಾಮುಖ್ಯತೆ ನೀಡುವಂತೆ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಸವಿನೆನಪಿನ ನೂತನ ರಂಗಮಂದಿರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಹಾಪುರುಷರ, ಸಾಧಕರ ಬಾಲ್ಯವನ್ನು ಗಮನಿಸಿದಾಗ ಬಾಲ್ಯದ ಬದುಕು ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ವಿಷಯ ಗೊತ್ತಾಗುತ್ತದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಹಾಗೂ ಮುಂದೆ ಉತ್ತಮ ಬದುಕು ಕಟ್ಟಿಕೊಳ್ಳಲು ಬೇಕಾದಂತಹ ಅವಶ್ಯಕತೆಗಳಿಗೆ ಪೂರಕವಾದ ಶಿಕ್ಷಣ ದೊರೆಯಬೇಕು. ಜಾತಿ, ಧರ್ಮ, ಬದುಕು, ಪ್ರಾಣಕ್ಕಿಂತ ನನ್ನ ದೇಶ ದೊಡ್ಡದು ಎನ್ನುವಂತಹ ರಾಷ್ಟ್ರಭಕ್ತರ ನಿಮಾಣ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷ ನಾಡೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶದ ಗಡಿಯಲ್ಲಿ ಎದುರಿನಿಂದ ಶತ್ರುಗಳು, ಆಂತರಿಕವಾಗಿ ಉಗ್ರವಾದಿಗಳ ಜತೆ ಜತೆಯಲ್ಲಿ ಹವಾಮಾನ ವೈಪರೀತ್ಯದ ಕಠಿಣ ಸವಾಲನ್ನು ಎದುರಿಸುವ ಸೈನಿಕರಿಗೆ ನಾಗರಿಕ ಸಮಾಜದ ಪ್ರೀತ್ಯಾದರಗಳಿಂದ ಸೈನಿಕರ ಮನೋಬಲ ಹೆಚ್ಚಿಸುತ್ತದೆ. ಸರ್ಕಾರದ ಬೆನ್ನೆಲುಬಾಗಿ ನಿಂತಿರುವ ಭಾರತೀಯ ಸೇನೆಯಿಂದಾಗಿ ಸಾಮಾನ್ಯ ನಾಗರಿಕರ ಬದುಕು ನೆಮ್ಮದಿಯುತವಾಗಿದೆ ಮತ್ತು ನಮ್ಮ ಗಣತಂತ್ರ ಯಶಸ್ವಿ ಎನಿಸಿದೆ ಎಂದು ಲೇಖಕ,ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡ ಅಭಿಪ್ರಾಯ ಪಟ್ಟರು. ಅವರು ಬೈಂದೂರು ತಾಲೂಕು ಶಿರೂರಿನ ಜೋಗೂರು ಗ್ರಾಮದಲ್ಲಿ ಸಮರ ಭೈರವ ವೀರ ಸೈನಿಕ ಸ್ಮರಣ ಸಮಿತಿ ವತಿಯಿಂದ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಿತಿಯ ವತಿಯಿಂದ ಮಾಜಿ ಸೈನಿಕರಾದ ಗಣಪತಿ ಗೌಡ, ಮಹಾಬಲ ಮದ್ದೋಡಿ, ಬಾಬು ಪೂಜಾರಿ ಪ್ರಭಾಕರ ನಾಯಕ್, ಜಾನ್ಸಿ ಥಾಮಸ್, ಗಣಪತಿ ಖಾರ್ವಿ, ರಾಘವೇಂದ್ರ ಖಾರ್ವಿ, ಚಂದ್ರಶೇಖರನಾವಡ, ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ರಕ್ತದಾನ ಶಿಬಿರ ಏರ್ಪಡಿಸಾಗಿತ್ತು. ಸೈನಿಕರನ್ನು ಗೌರವಿಸುವ ಈ ಅದ್ದೂರಿಯ ಕಾರ್ಯಕ್ರಮದಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ಹೋದಂತಾಗಿದೆ ಎಂದು ಸನ್ಮಾನಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು ನಡೆಸಲಾಯಿತು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಶೈಕ್ಷಣಿಕ ಮಾಹಿತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೂಲಂಕುಷವಾಗಿ ವಿವರಿಸಿದರು. ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ. ಗಣನಾಥ ಶೆಟ್ಟಿ ಅವರು ವಿದ್ಯಾರ್ಥಿ – ಪೋಷಕರ ಜವಾಬ್ದಾರಿಯ ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಸಂಸ್ಥೆಯ ಕಾಳಜಿಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಆಪಲ್ ಸರ್ವಿಸ್ ಶಿವಮೊಗ್ಗದ ವಿಜಯಕುಮಾರ್ ಅವರು ಮುಂದಿನ ಶಿಕ್ಷಣಕ್ಕೆ ದೊರಕುವ ವಿದ್ಯಾರ್ಥಿವೇತನಗಳ ಸಂಕ್ಷಿಪ್ತ ಮಾಹಿತಿಗಳನ್ನು ಒದಗಿಸಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
