Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ ಮತ್ತು “ಗ್ರೀನ್‌ ಸೋಲ್”‌ ಸಂಸ್ಥೆಯ ಸಹಕಾರ ಹಾಗೂ ಸಾರ್ವಜನಿಕರಿಂದ ಬಳಸಿದ ಪಾದರಕ್ಷೆಗಳನ್ನು ಸಂಗ್ರಹಿಸಿ ಅದನ್ನು ಉನ್ನತ ತಂತ್ರಜ್ಞಾನದ ಮೂಲಕ ಮರುಬಳಕೆ ಮಾಡಿ ಶಾಲೆಯ ಬಡಮಕ್ಕಳಿಗೆ ಹಂಚುವ ವಿನೂತನ ಮತ್ತು ಮಾದರಿ ಕಾರ್ಯಕ್ರಮ ನಡೆಯಿತು. ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯಂತ ಬಡತನ ಹೊಂದಿದ ಶಾಲೆಯ ಮಕ್ಕಳಿಗೆ ಪಾದರಕ್ಷೆಯನ್ನು ಒದಗಿಸುವ ಅಭಿಯಾನ “ಗ್ರೀನ್‌ ಸೋಲ್”‌ ಎಂಬ ಸಂಸ್ಥೆಯೊಂದಿಗೆ ಸೇರಿ ನಡೆಸಲಾಗುತ್ತಿದೆ. ಅವಿನಾಶ್‌ ಕಾಮತ್‌ ರವರ ಕನಸಿನ ಯೋಜನೆಗೆ ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯೂ ಕೈ ಜೋಡಿಸಿದ್ದು ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌ ಭಾಗಿಯಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ಕನಿಷ್ಟ ಅವಶ್ಯಕತೆಗಳನ್ನೂ ಪೂರೈಸಿಕೊಳ್ಳಲಾಗದ ವಿದ್ಯಾರ್ಥಿಗಳಿಗೆ ಈ ಯೋಜನೆ ವರದಾನವಾಗಲಿದೆ. “ನಡಿಗೆ” ಯೋಜನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಕಳ ಪರಿಸರದಿಂದ ಒಂದು ಸಾವಿರಕ್ಕೂ ಅಧಿಕ ಪಾದರಕ್ಷೆಗಳ ಜೊತೆಯನ್ನು “ಗ್ರೀನ್‌ ಸೋಲ್”‌ ಸಂಸ್ಥೆಗೆ ಹಸ್ತಾಂತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಾಂಪತ್ಯ ಜೀವನದ ಬೆಳ್ಳಿಹಬ್ಬವನ್ನು ಪತ್ನಿಯ ನಿಧನಪೂರ್ವ ಬಯಕೆಯಂತೆ ನಡೆಸಿ, ಮಾದರಿ ಪತಿ ಪಟ್ಟಿಗೆ ಸೇರಿದ್ದಾರೆ. ದಾಂಪತ್ಯ ಜೀವನದ 25ರ ಸಂಭ್ರಮ ಪತ್ನಿ ಛಾಯಾಪ್ರತಿಕೃತಿ ಜೊತೆ ಆಚರಿಸಿಕೊಂಡ ಚಿತ್ರ ಸೋಸಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕುಂದಾಪುರ ಸಪ್ತಗಿರಿ ಕೋಆಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಎಂಬುವವರು ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿದ್ದರು. ವಿವಾಹ ಮಹೋತ್ಸವ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಕನಸಾಗಿತ್ತು. ಆದರೆ ಅವರು ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು. ಬಡಾಕೆರೆ ಶ್ರೀ ಲಕ್ಷ್ಮೀಜನಾರ್ದನ ಸಭಾಂಗಣ ಮಂಟಪದಲ್ಲಿ ಪತ್ನಿಯಷ್ಟೇ ಎತ್ತರದ ಛಾಯಾಪ್ರತಿಕೃತಿ ನಿರ್ಮಿಸಿ ಪತ್ನಿಯ ಬಯಕೆ ಈಡೇರಿಸಿದ್ದು, ಈ ವಿನೂತನ ಕಾರ್ಯಕ್ರಮದಲ್ಲಿ ನೂರಾರು ಜನ ಭಾಗಿಯಾಗಿದ್ದರು. ಪತಿ ಹಾಗೂ ಹೆಣ್ಣು ಮಕ್ಕಳ ನಡುವೆ ನಿಲ್ಲಿಸಿದ ಸುಮಾ ಛಾಯಾಪ್ರತಿಕೃತಿ ಎನ್ನುವುದು ಗೊತ್ತಾಗದಷ್ಟು ನೈಜವಾಗಿದ್ದರೆ, ಭಾಗವಹಿಸಿದವರ ಹಾರೈಸಿದವರ ನಗುವಿನೊಂದಿಗೆ ಕಣ್ಣೀರು ಮಿಳಿತಗೊಂಡಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮಿಲಾಗ್ರಿಸ್‌ ಚರ್ಚ್‌ನ ಧರ್ಮಗುರುಗಳಾದ ವಲೇರಿಯನ್‌ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್‌ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಉನ್ನತವಾದ ಯಶಸ್ಸು ಕೀರ್ತಿ ಲಭಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಹ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳ ವಿಶೇಷವಾದ ಬೆಳವಣಿಗೆಗಳಿಗೆ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲಿ ಎಂದು ಆಶಿಸಿದರು. ಸಹ ಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಸ್ಥಾಪಕರಾದ ವಿದ್ವಾನ್‌ ಗಣಪತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆ ರೂಪಿಸುವ ಕನಸಿನೊಂದಿಗೆ ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿರುವ ಸಂಸ್ಥಾಪಕರನ್ನು ಗೌರವಿಸುವ “ಸಪ್ತಸ್ವರ” ಕಾರ್ಯಕ್ರಮ ಕಲ್ಯಾಣಪುರದ “ಮಿಲಾಗ್ರಿಸ್‌ ತ್ರಿಶತಮಾನೋತ್ಸವ” ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಪ್ತ ಸಂಸ್ಥಾಪಕರೂ ಆಗಮಿಸಿ ಗೌರವವನ್ನು ಸ್ವೀಕರಿಸಿ, ಮಾತನಾಡಿದರು. ಸಂಸ್ಥಾಪಕರಲ್ಲಿ ಓರ್ವರಾದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಅವರು ತ್ರಿಶಾ ವಿದ್ಯಾ ಸಂಸ್ಥೆಯನ್ನು ಆರಂಭಿಸಿದಾಗ ಸಹಜವಾಗಿ ಎಲ್ಲರಲ್ಲೂ ಕುತೂಹಲ ನಿರೀಕ್ಷೆಗಳಿದ್ದವು. ಇಂದು ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ಬೆಳೆಸಲಾಗುತ್ತಿದೆ ಎಂದು ಅಭಿಪ್ರಾಯ ಪಟ್ಟರು, ಸಂಸ್ಥಾಪಕರಾದ ಅಮೃತ್‌ ರೈ ಮಾತನಾಡಿ ಯಾವ ವಿದ್ಯಾರ್ಥಿಯೂ ಶಿಕ್ಷಣದ ವ್ಯವಸ್ಥೆಯಲ್ಲಿ ಹಿಂದುಳಿಯಬಾರದೆಂಬ ಉದ್ದೇಶ ಹೊಂದಿದ್ದೇವೆ. ಸಂಸ್ಥೆ ಸದಾಕಾಲ ವಿದ್ಯಾರ್ಥಿಗಳ ಅಭ್ಯುದಯ ಬಯಸುತ್ತದೆ ಎಂದು ತಿಳಿಸಿದರು. ಸಂಸ್ಥಾಪಕರಾದ ಆದರ್ಶ ಎಂ.ಕೆ ಸಂಸ್ಥೆ ಇದುವರೆಗೆ ಎದುರಿಸಿದ ಸವಾಲುಗಳು ಹಾಗೂ ಸಮಸ್ಯೆಗಳನ್ನು ಮೆಲುಕು ಹಾಕಿದರು. ಇನ್ನೋರ್ವ ಸಂಸ್ಥಾಪಕರಾದ ಅಶ್ವತ್‌ ಎಸ್‌. ಎಲ್‌ ಮಾತನಾಡಿ ನಮ್ಮ ತಂದೆ ತಾಯಿ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೋನಿ ಟಿವಿಯ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಜೂನಿಯರ್ 15ನೇ ಸೀಸನ್‌ನಲ್ಲಿ ಭಾಗವಹಿಸಿದ ಶಿರೂರಿನ ಪ್ರತಿಷ್ಟಾ ಶೆಟ್ಟಿ 11 ಸುತ್ತುಗಳ ತನಕ ಪ್ರವೇಶ ಪಡೆದು 6.40 ಲಕ್ಷ ರೂಪಾಯಿ ಗೆದ್ದಿದ್ದಾರೆ. ಪ್ರತಿಷ್ಟಾ ಶೆಟ್ಟಿ ಅವರು, ಬೈಂದೂರು ಕಬೈಲು ಜಾಡಿಮನೆ ನಾಗರಾಜ ಶೆಟ್ಟಿ ಮತ್ತು ಶಿರೂರು ಕೆಳಹೊಸ್ಮನೆ ಪ್ರಫುಲ್ಲಾ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಪ್ರಸ್ತುತ ಪೊಷಕರೊಂದಿಗೆ ಗುಜರಾತಿನ ವಾಪಿಯಲ್ಲಿ ನೆಲೆಸಿದ್ದು, 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು 11 ಸುತ್ತುಗಳವರೆಗೆ ಪ್ರವೇಶ ಪಡೆದು 6.40 ಲಕ್ಷ ಬಹುಮಾನ ಗೆದ್ದಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರು ಪ್ರತಿಷ್ಠಾ, 2022ರ ಮಿಸ್ ಟೀನ್ ಗುಜರಾತ್ ಸ್ಪರ್ಧೆಯಲ್ಲಿ ಭಾಗವಹಿಸಿ ರನ್ನರ್ ಆಫ್ ಆಗಿದ್ದರು. ಪ್ರತಿಷ್ಠಾ ಭಾಗವಹಿಸಿದ್ದ ಕಾರ್ಯಕ್ರಮ ಸೋನಿ ಟಿವಿಯಲ್ಲಿ ಬುಧವಾರ ಹಾಗೂ ಗುರುವಾರ ಪ್ರಸಾರವಾಗಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ʼಕಾಂತಾರʼ ಸಿನಿಮಾ ಚೊಚ್ಚಲ ಆವೃತ್ತಿಯ ʼಸಿಲ್ವರ್ ಪಿಕಾಕ್ ಅವಾರ್ಡ್’ ತನ್ನದಾಗಿಸಿಕೊಂಡಿದೆ. ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ವಿಶೇಷ ಜ್ಯೂರಿ ಅವಾರ್ಡ್ ಲಭಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ರಿಷಬ್ ಶೆಟ್ಟಿ ಈ ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸಿದ್ದಾರೆ. ʼ54ನೇ ಗೋವಾ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ಸ್ಪೆಷಲ್ ಜ್ಯೂರಿ ಅವಾರ್ಡ್ ಹೊರಕಿದ್ದು ಎಂದೂ ಮರೆಯಾಗದ ಕ್ಷಣಗಳಲ್ಲಿ ಉಳಿದುಕೊಳ್ಳುತ್ತದೆ ಎಂದು ರಿಷಬ್ ಪತ್ರ ಆರಂಭಿಸಿದ್ದಾರೆ. 1979ರಲ್ಲಿ ನನ್ನ ಸ್ಫೂರ್ತಿಯಾದ ಶಂಕರ್ ನಾಗ್ ಸರ್ ಅವರಿಗೆ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿದ್ದು, ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಅವಾರ್ಡ್ ದೊರೆತಿದ್ದು ಅತ್ಯಂತ ಸಂತಸ ನೀಡಿದೆ ಎಂದು ರಿಷಬ್ ಬರೆದಿದ್ದಾರೆ. ʼಕಾಂತಾರʼವನ್ನು ನೋಡಿ ಬೆಂಬಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕನ್ನಡಿಗರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಂಕರನಾರಾಯಣದ ಗೋಳಿಕಟ್ಟೆ ಗುಡ್ಡೆಯ ಮೇಲಿನ ಬಿ.ಎಸ್.ಎನ್.ಎಲ್ ಮೈಕ್ರೋ ಟವರ್ ಕಟ್ಟಡದ ಒಳಗೆ ಅಳವಡಿಸಿದ ಎಕ್ಸಿಡ್ 1000 ಎ.ಎಚ್ ಬ್ಯಾಟರಿಗಳಲ್ಲಿ 6 ಬ್ಯಾಟರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಉದ್ಯಾವರ ಪಿತ್ರೋಡಿ ಸಮೀಪದ ನಿವಾಸಿ ಕೃಷ್ಣ (45), ಬಂಟ್ವಾಳ ಫರಂಗಿಪೇಟೆಯ ಬದ್ರುರುದ್ದೀನ್ (38) ಹಾಗೂ ಲಕ್ಷ್ಮೀನಗರ ನಿವಾಸಿ ಉಸ್ಮಾನ್ (38) ಎಂಬಾತನನ್ನು ಬಂಧಿಸಲಾಗಿದೆ. ನವೆಂಬರ್ 27ರಂದು ಕಳ್ಳರು ಬಿ.ಎಸ್.ಎನ್.ಎಲ್ ಟವರ್ ಕಟ್ಟಡದೊಳಕ್ಕೆ ಪ್ರವೇಶಿಸಿ ಒಳಗೆ ಇರಿಸಿದ್ದ ಬ್ಯಾಟರಿಗಳನ್ನು ಕಳವುಗೈದಿದ್ದರು. ಕೃತ್ಯಕ್ಕೆ ಕೂಲಿಯಾಳುಗಳನ್ನು ಬಳಸಿಕೊಂಡಿದ್ದರು. ಕಳವಿನ ಮಾಹಿತಿ ತಿಳಿದ ಬಿ.ಎಸ್.ಎನ್.ಎಲ್ ತಾತ್ಕಾಲಿಕ ಸಿಬ್ಬಂದಿ, ಆಜ್ರಿಯ ಪ್ರದೀಪ್ ಪೂಜಾರಿ ಎಂಬುವವರು ಆರೋಪಿಗಳನ್ನು ಹಿಡಿಯಲ್ಲಿ ಯತ್ನಿಸಿದ್ದು, ಅಷ್ಟರಲ್ಲಿ ಮೂವರು ಪರಾರಿಯಾಗಿದ್ದರು. ಬಳಿಕ ಅವರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು ನ.28 ರಂದು ಶಂಕರನಾರಾಯಣ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಬ್ಯಾಟರಿ ಹಾಗೂ ಕಳ್ಳತನಕ್ಕೆ ಬಳಸಿದ ಪಿಕಪ್ ವಾಹನವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಜ್ಜನ ಸಾವಿನ ಸುದ್ದಿ ಕೇಳಿ ಅವರ ಅಂತ್ಯಕ್ರಿಯೆಗೆ ಹೊರಟ ಮೊಮ್ಮಗನೂ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿ ನಾರಾಯಣ ಪೂಜಾರಿ (70) ಅವರು ಮೃತಪಟ್ಟ ಸುದ್ದಿ ಕೇಳಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಚಾಮರಾಜನಗರದಿಂದ ಬೈಕಿನಲ್ಲಿ ಹೊರಟ ನಿತೀಶ್ ಪೂಜಾರಿ (20) ಅಪಘಾತದಲ್ಲಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ತಾಯಿಯ ತಂದೆ ಮೃತಪಟ್ಟ ಸುದ್ದಿಯನ್ನು ಆತನಿಗೆ ತಿಳಿಸಲಾಗಿತ್ತು. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ, ಅಂತಿಮ ದರ್ಶನ ಪಡೆಯುವ ಸಲುವಾಗಿ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದರು. ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆ ಮಧ್ಯದ ಹಂಪ್ ಅನ್ನು ಗಮನಿಸದೇ ಅಕಸ್ಮಾತ್ತಾಗಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರು. ಬಳಿಕ ಯುವಕನ ಮೃತದೇಹವನ್ನು ತಾಯಿಯ ತಂದೆ ಮನೆಗೆ, ಅಜ್ಜ ಮೊಮ್ಮಗನ ಶವಸಂಸ್ಕಾರವನ್ನು ಜತೆಯಾಗಿ ನಡೆಸಲಾಯಿತು. ನಿತೀಶ್ ಪೂಜಾರಿ, ಮಾನಂಜೆ ವ್ಯವಸಾಯ ಸೇವಾ…

Read More