ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿಂತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ಉಗಮ-2024’ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಅನಿಸಿಕೆ ಹಂಚಿಕೊAಡರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಬಹುಮಾನಿತರ ಪಟ್ಟಿ ವಾಚಿಸಿ, ಪ್ರಣಮ್ ಆರ್. ನಿರೂಪಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿ, ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಮದರ್ ತೆರೇಸಾ ಕಾಲೇಜು ಶಂಕರನಾರಾಯಣ ಸಮಗ್ರ ಪ್ರಶಸ್ತಿ ಪಡೆದು ಮೊದಲ ಸ್ಥಾನವನ್ನು ಮತ್ತು ಶ್ರೀ ವೆಂಕಟರಮಣ ಕಾಲೇಜು ಕುಂದಾಪುರ ಸಮಗ್ರ ದ್ವಿತೀಯ ಸ್ಥಾನ ಪಡೆಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮವು ಅದ್ದೂರಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಗಂಗೊಳ್ಳಿಯ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಅಧ್ಯಕ್ಷರಾದ ಜಿ. ವೆಂಕಟೇಶ ಶೆಣೈ ಅವರು ಉದ್ಘಾಟಿಸಿ, ಜನತಾ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆ ಮಹತ್ತರವಾದದ್ದು, ವಿದ್ಯಾರ್ಥಿಗಳ ಪ್ರತಿಭೆಯ ವಿಕಾಸಕ್ಕೆ ಜನತಾ ಸಂಸ್ಥೆಯ ಕಾರ್ಯಚಟುವಟಿಕೆಗಳು ಪ್ರಶಂಸನೀಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಕಾಲೇಜಿನ ವಾರ್ಷಿಕ ವರದಿ ವಾಚನ ಮಾಡಿ, ಶಿಕ್ಷಣ, ಕ್ರೀಡೆ, ಕಲೆ, ಸಾಂಸ್ಕೃತಿಕ, ಸಾಹಿತ್ಯಕ ಈ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆ ಮಹತ್ತರವಾಗಿದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಅಹರ್ನಿಶಿ ಶ್ರಮಿಸುತ್ತಿದ್ದೇವೆ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲಿಸಲಿ ಎಂದು ಶುಭ ಹಾರೈಸಿದರು. ಕುಂದಾಪುರದ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್.ಗೊಂಡ ಅವರು ಕಾಲೇಜಿನ ವಾರ್ಷಿಕ ಸಂಚಿಕೆ ‘ಜನತಾ ಜ್ಞಾನ-ತರಂಗ’ ಅನಾವರಣಗೊಳಿಸಿ, ವಿದ್ಯಾರ್ಥಿಗಳ ಪ್ರತಿಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೋನಿಯಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ 14 ಉಚಿತ ಮನೆಗಳ ಗೃಹ ಪೂಜೆ ಮತ್ತು ಲೋಕಾರ್ಪಣೆ ನ. 17ರಂದು ಬೆಳಿಗ್ಗೆ 10 ಗಂಟೆಗೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಜನ್ನಾಡಿ ಕೊರಗರ ಕಾಲೋನಿಯಲ್ಲಿ ನಡೆಯಲಿದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಪ್ರೆಸ್ ಕ್ಲಬ್ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಉಡುಪಿ ಪೇಜಾವರ ಶ್ರೀ ಅಧೋಕ್ಷಜ ತೀರ್ಥ ಸಂಸ್ಥಾನದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೃಹ ಪೂಜೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಕರ್ನಾಟಕ ಸರಕಾರದ ಪ್ರತಿಷ್ಠಿತ ರಾಜ್ಯಮಟ್ಟದ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ. ನವಂಬರ್ 17 ರಂದು ಬಾಗಲಕೋಟೆಯಲ್ಲಿ ಜರುಗಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಗತಿಪರ ಕೃಷಿಕರಾಗಿ, ಮಾದರಿ ಹೈನುಗಾರರಾಗಿ ಸಾಧನೆ ಮಾಡಿರುವ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಅಗ್ರಮಾನ್ಯ ಸಾಧನೆ ಮಾಡಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಉತ್ತುಂಗಕ್ಕೇರಿಸಿದ್ದಾರೆ. ಮೆಕೋಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸ್ವಂತ ಕಟ್ಟಡ ನಿರ್ಮಾಣ, ಹಾಲು ಶೀತಲಿಕರಣ ಘಟಕ ಸ್ಥಾಪನೆಯಲ್ಲಿ ಮುಂಚೂಣಿ ವಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಏಕಮುಖ ರಸ್ತೆಯ ಮುಳ್ಳಿಕಟ್ಟೆ ಜಂಕ್ಷನ್ ಬಳಿಯಿಂದ ಅರಾಟೆಗೆ ಚಲಿಸುತ್ತಿದ್ದ ಪ್ಯಾಸೆಂಜರ್ ರಿಕ್ಷಾಕ್ಕೆ, ತ್ರಾಸಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡಿದ್ದ ರಿಕ್ಷಾ ಸುಮಾರು ಹತ್ತು ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಪ್ರಯಾಣಿಸುತ್ತಿದ್ದ ಜಯಲಕ್ಷ್ಮೀ (39) ಜಲಜಾಕ್ಷಿ (36) ರಿಕ್ಷಾ ಚಾಲಕ ರವಿ (41) ಗಾಯಗೊಂಡಿದ್ದಾರೆ. ರಿಕ್ಷಾದ ಹಿಂಭಾಗ ನಜ್ಜುಗುಜ್ಜಾಗಿದೆ. ಈ ಬಗ್ಗೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಓ ರಾಜ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ನಡೆದ ಗ್ರಾಮೀಣ ಆಟಗಳ ಕ್ರೀಡಾಕೂಟ ಆಡುಂಬೊಲವನ್ನು ಉದ್ಘಾಟಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು, ಮಗುವಿಗೆ ಎದೆಹಾಲು, ಪೌಷ್ಠಿಕ ಆಹಾರ, ಒಂದು ವರ್ಷದ ಅವಧಿಯೊಳಗೆ ನೀಡುವುದರೊಂದಿಗೆ ಉತ್ತಮವಾಗಿ ಆರೈಕೆ ಮಾಡಿದ್ದಲ್ಲಿ ಮಗುವಿನ ಭವಿಷ್ಯದ ಬೆಳವಣಿಗೆ ಸಹ ಉತ್ತಮವಾಗಿರುತ್ತದೆ. ತಾಯಂದಿರು ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನ್ಯೂಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಹಾಗೂ ಕ್ರಿಯಾ ಅಭಿಯಾನ ಮತ್ತು ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಗು ಜನಿಸಿದ ಆರಂಭ ಹಂತದಲ್ಲಿ ಹೆಚ್ಚಿನ ಕಾಳಜಿ ಅತ್ಯವಶ್ಯಕವಾಗಿದ್ದು, ಹುಟ್ಟಿನಿಂದ ಮಕ್ಕಳಿಗೆ ನೀಡಬೇಕಾದ ಲಸಿಕೆಯ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣವನ್ನು ಕಲ್ಪಿಸಿ, ಮತ್ತಷ್ಟು ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಹೆಚ್ಚಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿ ರೂ. ಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಈ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬರ್ 310 ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಬೇಕು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಂಪ್ರೆಸ್ ಕಾಲೇಜು ಆಡಿಟೋರಿಯಂ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ. ಸಿ. ಎಸ್. ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಸುಜನ್ ಶೆಟ್ಟಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ. ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ
