Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಳೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್, ಬೇಳೂರು ಗ್ರಾ.ಪಂ ಪಿಡಿಒ ಪ್ರಶಾಂತ್, ಆಡಳಿತಾಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ರಸ್ತೆ, ಕುಡಿಯುವ ನೀರು, ವಸತಿ ಯೋಜನೆ, ಕಂದಾಯ, ಮೆಸ್ಕಾಂ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಿದರು. ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪುವಂತೆ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೇರಳಕಟ್ಟೆಯ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ ಲಕ್ಷಾಂತರ ರೂ ಮೌಲ್ಯದ ಚಿನ್ನ ಬೆಳ್ಳಿಯನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್‌ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಜಯ ಶೆಟ್ಟಿ (32), ಅರ್ಜುನ ಪೂಜಾರಿ (29) ಎಂಬುವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮೊಹಮ್ಮದ್‌ ಅಶ್ರಫ್‌ ಎಂಬಾತನಿಗಾಗಿ ಹುಡುಕಾಟ ಮುಂದುವರಿದಿದೆ. ಪ್ರಕರಣದ ವಿವರ:ಮೇ.23ರಂದು ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ನಿರಂಜನ್‌ ಭಟ್‌ ಎಂಬವರ ಮನೆಯ ಬಾಗಿಲಿನ ಬೀಗ ಒಡೆದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪ್ರಕರಣದ ತನಿಖೆಯನ್ನು ಹೆ.ಡಿ. ಕುಲಕರ್ಣಿ, ಪೊಲೀಸ್ ಉಪಾಧೀಕ್ಷಕರು, ಕುಂದಾಪುರ ಉಪ ವಿಭಾಗ, ಹಾಗೂ ಸಂತೋಷ ಎ ಕಾಯ್ಕಿಣಿ, ಪೊಲೀಸ್ ವೃತ್ತ ನಿರೀಕ್ಷಕರು, ಕುಂದಾಪುರ ವೃತ್ತ ಅವರ ನೇತೃತ್ವದಲ್ಲಿ ನಿರಂಜನ್‌ ಗೌಡ, ಪೊಲೀಸ್ ಉಪ ನಿರೀಕ್ಷಕರು (ಕಾ.ಸು), ಚಂದ್ರಕಲಾ ಪತ್ತಾರ ಪೊಲೀಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ಕೌಟ್ಸ್ , ಗೈಡ್ಸ್ ಮತ್ತು ಎನ್.ಸಿ.ಸಿ ಘಟಕದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಸಸಿಗಳನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಅರಣ್ಯಾಧಿಕಾರಿ ದಿಲೀಪ್ ಕುಮಾರ್ ಬಿ.ವಿ. ವಿಶ್ವ ಪರಿಸರ ದಿನಾಚರಣೆಯ ಧ್ಯೇಯೋದ್ದೇಶಗಳನ್ನು ತಿಳಿಸುತ್ತಾ ‘ನಮ್ಮ ಭವಿಷ್ಯದ ಭೂಮಿಯ ರಕ್ಷಣೆ ನಮ್ಮ ಹೊಣೆ’ ಎಂದು ಹೇಳಿ ಭವಿಷ್ಯದಲ್ಲಿ ಆಕ್ಸಿಜನ್ ಬ್ಯಾಗ್‌ಗಳನ್ನು ಧರಿಸಿ ಬದುಕುವ ಬದಲು ಈಗಲೇ ಸಸಿಗಳನ್ನು ನೆಡುವ ಅಭ್ಯಾಸ ಬೆಳೆಸಿಕೊಳ್ಳಿ, ನೀರನ್ನು ಹಿತ ಮಿತವಾಗಿ ಬಳಸಿ, ವಾಯು ಮಾಲಿನ್ಯವನ್ನು ತಡೆಗಟ್ಟಲು ಪ್ರಯತ್ನಿಸಿ ಎಂದು ತಿಳಿಸಿದರು. ಉಪವಲಯ ಅರಣ್ಯಾಧಿಕಾರಿ ಪರಮೇಶ್ವರ ಪಟಗಾರ್, ಬೀಟ್ ಅರಣ್ಯ ರಕ್ಷಕರಾದ ಶಿವಣ್ಣ ಆರ್.ವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಸ್ವಾಗತಿಸಿದರು. ಸಹ ಶಿಕ್ಷಕಿ ರೇಖಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು ಹಾಗೂ ಸಹ ಶಿಕ್ಷಕಿ ಚೈತ್ರಾ ವಂದನಾರ್ಪಣೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎನ್‌.ಐ.ಎಫ್‌.ಟಿ (National institute of fashion technology) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ದೇಶದ ಪ್ರತಿಷ್ಠಿತ NIFT ಕೇಂದ್ರಗಳಲ್ಲಿ ನಾಲ್ಕು ವರ್ಷದ ಡಿಸೈನ್ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆಯುವ ಅರ್ಹತಾ ಪರೀಕ್ಷೆ ಇದಾಗಿದ್ದು, ಫ್ಯಾಶನ್ ಡಿಸೈನ್, ಟೆಕ್ಸ್ ಟೈಲ್ ಡಿಸೈನ್, ಫ್ಯಾಷನ್ ಕಮ್ಯುನಿಕೇಷನ್ ಮುಂತಾದ ಬಹುಬೇಡಿಕೆಯುಳ್ಳ ಕೋರ್ಸ್ ಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಬ್ಯಾಚುಲರ್ ಆಫ್ ಫ್ಯಾಶನ್ ಟೆಕ್ನಾಲಜಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಸ್ವಾತಿ ಆರ್. ಹೊಸಮನಿ 166 (ಕೆಟಗರಿ ರ‍್ಯಾಂಕ್), 846 (ಜನರಲ್ ರ‍್ಯಾಂಕ್), ಅಕ್ಷಿತಾ ಜಿ ಕೆ. 246 (ಕೆಟಗರಿ ರ‍್ಯಾಂಕ್), 2715 (ಜನರಲ್ ರ‍್ಯಾಂಕ್), ಭಕ್ತಿ ಪಾಟೀಲ್ 652(ಕೆಟಗರಿ ರ‍್ಯಾಂಕ್), 933 (ಜನರಲ್ ರ‍್ಯಾಂಕ್), ಚೇತನ್ ಸಿ.355 (ಕೆಟಗರಿ ರ‍್ಯಾಂಕ್), 3250 (ಜನರಲ್ ರ‍್ಯಾಂಕ್ ) ಗಾನವಿ ಪಿ.ಸಿ.742 (ಕೆಟಗರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ ಎನ್.ಎಸ್.ಎಸ್. ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವು ಕಾಲೇಜಿನ ಎ.ವಿ. ಹಾಲ್‌ನಲ್ಲಿ ಜರುಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ಯುವ ಪೀಳಿಗೆ ಸಮಾಜದಲ್ಲಿನ ಆಗು-ಹೋಗುಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ ಇಲ್ಲಿನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಅವರು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಥಮ ಚಿಕಿತ್ಸೆ ಅರಿವು ಅತ್ಯವಶ್ಯಕ ಎಂದರು. ಇAಡಿಯನ್ ರೆಡ್‌ಕ್ರಾಸ್ ಘಟಕದ ಕಾರ್ಯದರ್ಶಿಗಳಾದ ಸತ್ಯನಾರಾಯಣ ಪುರಾಣಿಕ್, ಕಾಲೇಜಿನ ರೆಡ್‌ಕ್ರಾಸ್ ಘಟಕದ ಸಂಯೋಜನಾಧಿಕಾರಿ ಪೃಥ್ವಿಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಗಂಗನಾಡು ಬಳಿ ನಡೆದಿದೆ. ಮೃತರನ್ನು ಬೈಕ್ ಸವಾರ ಮಹಾಬಲ ಪೂಜಾರಿ ಎಂದು ಗುರುತಿಸಲಾಗಿದೆ. ಮಹಾಬಲ ಪೂಜಾರಿ ಅವರು ಗಂಗನಾಡು ಕಡೆಯಿಂದ ಬೈಕ್‌ನಲ್ಲಿ ಬೈಂದೂರಿನತ್ತ ಹೋಗುತಿದ್ದಾಗ ಅದೇ ದಿಕ್ಕಿನಲ್ಲಿ ಬಂದ ಲಾರಿಯನ್ನು ಅದರ ಚಾಲಕ ನಿರ್ಲಕ್ಷ್ಯದಿಂದ ಚಲಾಯಿಸಿ ಓವರ್‌ಟೇಕ್ ಮಾಡುವ ರಭಸದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಇದರಿಂದ ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದ ಸವಾರನ ತಲೆಯ ಮೇಲೆ ಟಿಪ್ಪರ್‌ನ ಹಿಂಬದಿ ಚಕ್ರ ಹರಿದು ತಲೆಬುರುಡೆ ಒಡೆದು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸೈಂಟ್ ಥಾಮಸ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು. “ಪರಿಸರ ಸಂರಕ್ಷಿಸಿ ಜೀವ ಉಳಿಸಿ”ಎಂಬ ಘೋಷವಾಕ್ಯದಡಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಕಾರ್ಯಕ್ರಮದ ಮುಖ್ಯ ಉದ್ದೇಶ ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದಾಗಿತ್ತು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರಾದ ಫಾದರ್ ಫಿಲಿಪ್ ನೆಲ್ಲಿವಿಲ್ಲಾ ಉದ್ಘಾಟಿಸಿ ಮಾತನಾಡಿ, “ಪ್ರತಿ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು. ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುರಕ್ಷಿತವಾಗಿರುತ್ತದೆ”ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಘೋಷಣೆಗಳು, ಭಾಷಣಗಳು ಹಾಗೂ ಜಾಗೃತಿ ಸಂದೇಶಗಳನ್ನು ನೀಡಲಾಯಿತು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ನೀರನ್ನು ಉಳಿಸುವುದು ಮತ್ತು ಹೆಚ್ಚು ಗಿಡಗಳನ್ನು ನೆಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಿಕ್ಷಕರು ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಗಾಗಿ ಪ್ರತಿಜ್ಞೆ ಸ್ವೀಕರಿಸಿದರು. ಪ್ರಾಂಶುಪಾಲರು, ಉಪಪ್ರಾಂಶುಪಲರು, ಶಿಕ್ಷಕರು , ವಿದ್ಯಾರ್ಥಿಗಳೊಂದಿಗೆ ಗಿಡವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು .ಎಸ್ . ಶೆಣೈ ಅಧ್ಯಕ್ಷೀಯ ನುಡಿಗಳನಾಡಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ಸವಿವರ ಮಾಹಿತಿಯನ್ನು ನೀಡಿದರು. ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಅಂಕ ಪಡೆದು ರ್ಯಾಂಕ್  ವಿದ್ಯಾರ್ಥಿಗಳಾದ ಸಂಕಲ್ಪ್ ಕುಮಾರ್, ಮನೋಜ್, ಭೂಮಿಕಾ, ಗೌರಿ ಹಾಗೂ ಗಂಗಾ ಅವರನ್ನು ಗುರುತಿಸಿ ಗೌರವಿಸಲಾಯಿತು. ವಾಣಿಜ್ಯ ವಿಭಾಗ ಉಪನ್ಯಾಸಕಿ  ಗೀತಾ ಪ್ರಭು, ವಿಜ್ಞಾನ ವಿಭಾಗ ಉಪನ್ಯಾಸಕಿ ಸ್ಮಿತಾ, ಎನ್ ಸಿ.ಸಿ ಘಟಕದ ಮುಖ್ಯಸ್ಥರು ಹಾಗೂ ಗ್ರಂಥಪಾಲಕರಾದ ಮನೋಹರ್, ದೈಹಿಕ ಶಿಕ್ಷಣ ನಿರ್ದೇಶಕ ಶಂಕರ್ ನಾರಾಯಣ ಹಾಗೂ 89.6 ಎಫ್.ಎಮ್ ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾಲೇಜಿನ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ಪ್ರಾಂಶುಪಾಲೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ನಿರ್ಮಿಸಲಾಗಿದೆ. ದೂ.ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077 ತಾಲೂಕು ತಹಶೀಲ್ದಾರರ ಕಚೇರಿಗಳಾದಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ ದೂ.ಸಂಖ್ಯೆ: 0820-2520306, ಮುಖ್ಯಾಧಿಕಾರಿಗಳ ಕಚೇರಿಗಳಾದ ಪುರಸಭೆ ಕುಂದಾಪುರ ದೂ.ಸಂಖ್ಯೆ: 08254-230410, ಪುರಸಭೆ ಕಾರ್ಕಳ ದೂ.ಸಂಖ್ಯೆ: 08258-230292, ಪುರಸಭೆ ಕಾಪು ದೂ.ಸಂಖ್ಯೆ: 0820-2551061, ಬೈಂದೂರು ಪಟ್ಟಣ ಪಂಚಾಯತ್ ದೂ.ಸಂಖ್ಯೆ: 08254-251058, 7019166640 ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ದೂ.ಸಂಖ್ಯೆ: 9035627273, 7353449984 ಅನ್ನು ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯ ನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಸಹಾಯ ವಾಣಿ ಸಂಖ್ಯೆ: 08254-230410 ಕರೆ ಮಾಡಬಹುದಾಗಿದೆ. ಇದಲ್ಲದೆ ಮಳೆಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಎದುರಾದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮೊ.ಸಂಖ್ಯೆ: 9880034793, ಪರಿಸರ ಅಭಿಯಂತ ಮೊ.ಸಂಖ್ಯೆ: 7353255268, ಹಿರಿಯ ಆರೋಗ್ಯ ನಿರೀಕ್ಷಕರು ಮೊ. ಸಂಖ್ಯೆ: 6360027331 ಹಾಗೂ ಕಿರಿಯ ಅಭಿಯಂತ ಮೊ.ಸಂಖ್ಯೆ: 9902377287 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ. ಸಾರ್ವಜನಿಕರಲ್ಲಿ ಮನವಿ:ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪುರಸಭೆ ಮನವಿ ಮಾಡಿಕೊಂಡಿದೆ.ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು. ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ ಪಡೆಯಬಾರದು.ವಿದ್ಯುತ್ ಕಂಬಗಳಿಂದ…

Read More