ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರು/ಪ್ರಯಾಣಿಕರು ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟ್ ಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ. ಮುಂಗಡ ಟಿಕೇಟ್ ಗಳನ್ನು ಪಡೆಯದಿದ್ದಲ್ಲಿ ಈ ಸೌಲಭ್ಯವನ್ನು ರದ್ದುಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಮಹಿಳಾ ವೇದಿಕೆ ಮತ್ತು ಶ್ರೀ ಮಾತಾಮೃತಾನಂದಮಯಿ ಮಠ ಕೇರಳ ಇದರ ಆಯುರಾರೋಗ್ಯ ಸೌಖ್ಯಂ ಫೌಂಡೇಶನ್ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಪರಿಸರ ಸ್ನೇಹಿಯಾದ ಮತ್ತು ಬಾಳೆದಿಂಡನ್ನು ಉಪಯೋಗಿಸಿ ಉತ್ಪಾದಿಸಿದ ಸೌಖ್ಯಂ ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಕಾರ್ಯಕ್ರಮವು ಗುರುವಾರದಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಕ್ಸಸ್ ಮಾಲ್ ಇದರ ಕಾರ್ಯನಿರ್ವಾಹಕ ವ್ಯವಸ್ಥಾಪಕರಾದ ನಿಶಾ ಅಂಚನ್ ಅವರು ಮಾತನಾಡಿ, ಪರಿಸರ ರಕ್ಷಣೆ ಮತ್ತು ಮಹಿಳೆಯರು ಸ್ವಚ್ಛತೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಋತುಚಕ್ರದ ಸಮಯದಲ್ಲಿ ಈ ಮರುಬಳಕೆ ಮಾಡಬಹುದಾದ ಪ್ಯಾಡ್ ಗಳ ಬಳಕೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಆಯುರಾರೋಗ್ಯ ಸೌಖ್ಯ ಫೌಂಡೇಶನ್ನ ಕುಂದಾಪುರ ವಿಭಾಗದ ಪ್ರತಿನಿಧಿಯಾದ ಕಲ್ಪನಾ ಭಾಸ್ಕರ್ ಅವರು ಮಾತನಾಡಿ, ಸೌಖ್ಯಂ ಪಾಡ್ ಗಳನ್ನು ಸುಮಾರು ಆರು ವರ್ಷಗಳ ಕಾಲ ಬಳಸಬಹುದಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ 6 ರೈಲುಗಳಿಗೆ ರೈಲ್ವೆ ಸಚಿವಾಲಯವು ಕುಮಟಾ ಮತ್ತು ಕುಂದಾಪುರ ಸ್ಟೇಶನ್ಗಳಲ್ಲಿ ಪ್ರಾಯೋಗಿಕ ನಿಲುಗಡೆ ಮಾ. 15ರಿಂದ ನೀಡಲಾಗುವುದು. ತಿರುವನಂತಪುರಂ ಸೆಂಟ್ರಲ್ – ನಿಝಾಮುದ್ದೀನ್ ಎಕ್ಸ್ಪ್ರೆಸ್ (22653) ಹರ್ಝತ್ ರೈಲು ಕುಂದಾಪುರ ಸ್ಟೇಶನಿಗೆ ಮಾ. 15ರಂದು ಮಧ್ಯಾಹ್ನ 2.06ಕ್ಕೆ ಆಗಮಿಸಿ 2.08ಕ್ಕೆ ತೆರಳಲಿದೆ. ಹರ್ಝತ್ ನಿಝಾಮು ದ್ದೀನ್ – ಎರ್ನಾಕುಲಂ ಜಂಕ್ಷನ್ ಎಕ್ಸ್ಪ್ರೆಸ್ (22656) ರೈಲು ಮಾ. 15ರಂದು ಕುಂದಾಪುರಕ್ಕೆ ಮಧ್ಯಾಹ್ನ 1.28ಕ್ಕೆ ಆಗಮಿಸಿ 1.30ಕ್ಕೆ ತೆರಳಲಿದೆ. ಕೊಯಮತ್ತೂರು – ಹಿಸ್ಸಾರ್ ಎಕ್ಸ್ಪ್ರೆಸ್ (22476) ರೈಲು ಮಾ. 16ರಂದು ಕುಮಟಾ ಸ್ಟೇಶನಿಗೆ ರಾತ್ರಿ 1.46ಕ್ಕೆ ಆಗಮಿಸಿ, 1.48ಕ್ಕೆತೆರಳಲಿದೆ. ಹಿಸಾರ್ – ಕೊಯಮತ್ತೂರು ಎಕ್ಸ್ಪ್ರೆಸ್ (22475) ರೈಲು ಮಾ. 21ರಂದು ಬೆಳಗ್ಗೆ 2.10ಕ್ಕೆ ಆಗಮಿಸಿ, 2.12ಕ್ಕೆ ತೆರಳಲಿದೆ. ಹರ್ಝತ್ ನಿಝಾಮು ದ್ದೀನ್ – ತಿರುವನಂತಪುರಂ ಸೆಂಟ್ರಲ್ ಎಕ್ಸ್ಪ್ರೆಸ್ (22654) ರೈಲು ಕುಂದಾಪುರಕ್ಕೆ ಮಾ. 18ರಂದು ಮಧ್ಯಾಹ್ನ 1.28ಕ್ಕೆ ಆಗಮಿಸಿ 1.30ಕ್ಕೆ ತೆರಳಲಿದೆ. ಎರ್ನಾಕುಲಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಗ್ರಂಥಪಾಲಕ ಮಹೇಶ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಂಪ್ರದಾಯದ ಹೋಳಿಯನ್ನು ಪರಿಚಯಿಸಲಾಯಿತು. ಕಾಲೇಜಿನ ಎಸ್ಕ್ಯೂಎಸಿ ಪ್ರತಿನಿಧಿ ಶ್ರದ್ಧಾ ಆರ್. ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಕುಡಿಯುವ ನೀರಿನ ಮೂಲ, ಅದರ ಗುಣಮಟ್ಟ ಹಾಗೂ ಟ್ಯಾಂಕರ್ನ ಸ್ವಚ್ಛತೆ ಬಗ್ಗೆ ಜಿಲ್ಲಾಡಳಿತ ವಿಶೇಷ ಮುತುವರ್ಜಿವಹಿಸಬೇಕು ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಈಗಾಗಲೇ ಬೇಸಗೆಯ ಬಿಸಿ ಏರುತ್ತಿದೆ. ಈ ಭಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾದರೂ ಸಹ ಬಿಸಿಲ ಬೇಗೆ ಹೆಚ್ಚಿರುವುದರಿಂದ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆಯೂ ಹೆಚ್ಚಿದೆ. ನೀರಿನ ಪ್ರಮಾಣ ಕುಸಿಯದೆ ಇದ್ದರೂ ಸಹ ಹೆಚ್ಚಿನ ಗ್ರಾಮ ಪಂಚಾಯತ್ ಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವುದು ಒಂದು ವ್ಯವಸ್ಥಿತ ವ್ಯವಹಾರವಾಗಿ ಬಿಟ್ಟಿದೆ. ಇವತ್ತು ಕಲುಷಿತ ಆಹಾರ ಹಾಗೂ ಕಲುಷಿತ ನೀರಿನಿಂದ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಈ ಕಾಲಘಟ್ಟದಲ್ಲಿ ಸ್ಥಳೀಯ ಸಂಸ್ಥೆಗಳು ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸುವಾಗ ಕುಡಿಯಲು ಯೋಗ್ಯವಲ್ಲದ ನೀರನ್ನು ಹೆಚ್ಚಿನ ಕಡೆ ಸರಬರಾಜು ಮಾಡುತ್ತಿರುರುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಹೂಡಿಕೆ ಅರಿವು ಕಾರ್ಯಕ್ರಮವು ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ನಿವೃತ್ತ ಪೈನಾನ್ಸ್ ಮ್ಯಾನೇಜರ್ ಆದ ಚಂದ್ರಶೇಖರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಬಂಡವಾಳ ಹೂಡಿಕೆ ಮಾಡಿಕೊಳ್ಳುವ ಹಲವಾರು ಸಂಪನ್ಮೂಲ ಮಾರುಕಟ್ಟೆಯಲ್ಲಿವೆ. ಅವುಗಳಲ್ಲಿ ಯಾವ ಕಂಪನಿ ಉತ್ತಮ ಮತ್ತು ಸ್ವತಂತ್ರ ಕಂಪನಿ ಎಂಬುದನ್ನು ಹೂಡಿಕೆದಾರರು ಖಚಿತಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಾಂಕ್ಲಿನ್ ಟೆಂಪಲ್ಟನ್ ಎಸೆಟ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಇದರ ಶಾಖೆಯ ಮ್ಯಾನೇಜರ್ ಆದ ಲಿಯೋ ಅಮಲ್ ಎ. ಅವರು ಹೂಡಿಕೆಯ ಬಗ್ಗೆ ಪ್ರತಿಯೊಬ್ಬರು ತಿಳಿಸಿಕೊಳ್ಳುವ ಅಗತ್ಯವಿದ್ದು ಹೂಡಿಕೆ ಮಾಡಲು ಅನುಸರಿಸಬೇಕಾದ ನೀತಿ ನಿಯಮಗಳ ಬಗ್ಗೆ ಮಾಹಿತಿ ಒದಗಿಸಿದರು. ಕಾಲೇಜು ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ನಿರ್ವಹಿಸಿದರು. ಐಕ್ಯೂಎಸಿ ಘಟಕ ಸಂಯೋಜಕರಾದ ಸಂದೀಪ ಕೆ. ಸ್ವಾಗತಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೆಆರ್ಎಎಮ್ ಕಾಲೇಜ್ನ ಹೆಚ್ಒಡಿ ಮತ್ತು ಪ್ರೊಫೆಸರ್ ಅಥರ್ವ ಆರ್ಗ್ಯಾನಿಕ್ಸ್ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ. ಅಪೇಕ್ಷ ರಾವ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ. ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ. ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು ಪಾಲಿಸಬೇಕಾದ ನಾಲ್ಕು ಸೂತ್ರಗಳಾದ ಉತ್ತಮ ನಿದ್ರೆ, ವ್ಯಾಯಾಮ, ಆಹಾರ ಕ್ರಮ, ಹಾಗೂ ಒತ್ತಡ ನಿಯಂತ್ರಣ ಇವುಗಳ ಬಗ್ಗೆ ಮನಮುಟ್ಟುವಂತೆ ಸವಿವರವಾಗಿ ತಿಳಿಸಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಪ್ರೊಲಾಕೆ ಟೆಕ್ನಾಲಜೀಸ್ ಇದರ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಸುಮಂಗಲ ತುಂಗ ಅವರು ಮಾತನಾಡಿ, ಉದ್ಯಮಿಯಾಗಲು ಬೇಕಾದ ಗುಣಗಳು ,ಮಹಿಳೆಯರು ಉದ್ಯಮದಲ್ಲಿ ಎದುರಿಸುವ ಸವಾಲುಗಳು ಮತ್ತು ಅವುಗಳನ್ನು ಹೇಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹರಿ ಓಂ ಗಂಗೊಳ್ಳಿ ಇವರ ಆಶ್ರಯದಲ್ಲಿ ಬೆಂಗಳೂರಿನ ಪೈ ಗ್ರೂಪ್ ಆಫ್ ಹೋಟೆಲ್ಸ್ನ ಮಾಲಕ ಎಂ. ಜಿ. ಜಗನ್ನಾಥ ಪೈ ಹಾಗೂ ಜಿ. ವಿವೇಕಾನಂದ ನಾಯಕ್ ಸಹಕಾರದೊಂದಿಗೆ ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗಂಗೊಳ್ಳಿಯ ಜಿಎಸ್ಬಿ ಸಮಾಜ ಬಾಂಧವರಿಗಾಗಿ ಭಾನುವಾರ ಜರಗಿದ ಸತತ 6ಷನೇ ವರ್ಷದ 30 ಗಜಗಳ ಕ್ರಿಕೆಟ್ ಪಂದ್ಯಾಟ ’ಹರಿ ಓಂ ಟ್ರೋಫಿ-2025’ದಲ್ಲಿ ಗಂಗೊಳ್ಳಿಯ ವಿ.ಕೆ.ಪೋವಾಸ್ ತಂಡ ಜಯಶಾಲಿಯಾಗಿ ಸತತ 5ನೇ ವರ್ಷ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದ ಫೈನಲ್ ಹಣಾಹಣಿಯಲ್ಲಿ ವಿ.ಕೆ.ಪೋವಾಸ್ ತಂಡವು ಗಂಗೊಳ್ಳಿಯ ಸಾನಿಧ್ಯ ಅಕೌಟೆಂಟ್ ತಂಡವನ್ನು ಸೋಲಿಸಿತ್ತು. ಗಂಗೊಳ್ಳಿಯ ಶ್ರೀ ಪಾರ್ಥಸಾರಥಿ ಇಲೆವೆನ್ ತಂಡ ತೃತೀಯ ಸ್ಥಾನಿಯಾಯಿತು. ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ವಿ.ಕೆ.ಪೋವಾಸ್ ತಂಡದ ಎಂ.ನಾಗೇಶ ಪೈ ಪಡೆದುಕೊಂಡರೆ, ಉತ್ತಮ ದಾಂಡಿಗ ಪ್ರಶಸ್ತಿಯನ್ನು ಸಾನಿಧ್ಯ ಅಕೌಟೆಂಟ್ ತಂಡದ ಎನ್.ಅನಂತ ನಾಯಕ್ ಮತ್ತು ಎಂ.ಅನಂತ ಪೈ ಪಡೆದುಕೊಂಡರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಣೆ ಮಾಡುವುದು ಪೋಷಕರು ಅಧಿಕಾರಿಗಳು ಸೇರಿದಂತೆ ನಾಗರೀಕ ಸಮಾಜದ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ಹೇಳಿದರು. ಅವರು ನಗರದ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಹಯೋಗದಲ್ಲಿ ಮಕ್ಕಳ ರಕ್ಷಣೆ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ (ಪಿಎಸ್ಐ) ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಾಮಾಣಿಕತೆ ಎನ್ನುವುದು ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ. ನಾವು ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ಕುಟುಂಬದಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24ನೇ ಸಾಲಿನಲ್ಲಿ ಮತ್ಸ್ಯಾಶ್ರಯ ವಸತಿ ಯೋಜನೆಯಡಿಯಲ್ಲಿ ಯಾವುದೇ ಮನೆಗಳು ಮಂಜೂರಾಗಿರುವುದಿಲ್ಲ. 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲು ಸಹಾಯ ನೀಡಲಾಗುವುದೆಂದು ಘೋಷಿಸಲಾಗಿದೆ. 2025 ರ ಫೆಬ್ರವರಿವರೆಗೆ ಯಾವುದೇ ಮನೆಗಳನ್ನು ಹಂಚಿಕೆ ಮಾಡಿರುವುದಿಲ್ಲ ಎಂದು ಉತ್ತರಿಸಿದ್ದಾರೆ.
