ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಳುಪ, ಹೊಯ್ಸಳ, ವಿಜಯನಗರ ಹಾಗೂ ಕೆಳದಿಯ ಅರಸರ ಆಳ್ವಿಕೆಗೆ ಒಳಪಟ್ಟ ಪ್ರದೇಶ ವಡ್ಡರ್ಸೆ. ಈ ಪ್ರದೇಶವನ್ನು ರಾಜರು ಆಳ್ವಿಕೆ ಮಾಡಿದ ಬಗ್ಗೆ ಐತಿಹಾಸಿಕ ಪುರಾವೆಗಳು ದೊರಕುತ್ತವೆ. ವಡ್ಡರ್ಸೆಯಲ್ಲಿ ದೊರಕಿದ ಪ್ರಾಚೀನ ಶಾಸನದಲ್ಲಿ ಬನ್ನಾಡಿ, ಅಚ್ಲಾಡಿ, ಕಾವಡಿ, ಕೊತ್ತಾಡಿ ಮುಂತಾದ ಪ್ರದೇಶಗಳಲ್ಲಿ ಉಲ್ಲೇಖವಿದೆ. ಶತಮಾನಗಳ ಇತಿಹಾಸ ಇರುವ ವಡ್ಡರ್ಸೆ ಐತಿಹಾಸಿಕ ಪ್ರಸಿದ್ಧ ಸ್ಥಳ ಎಂದು ಮಾಹೆಯ ಸಾಂಸ್ಕೃತಿಕ ಕೇಂದ್ರಗಳ ಆಡಳಿತ ಅಧಿಕಾರಿಗಳಾದ ಡಾ| ಬಿ. ಜಗದೀಶ್ ಶೆಟ್ಟಿ ಹೇಳಿದರು. ಅವರು ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ ವಡ್ಡರ್ಸೆ ಇತಿಹಾಸ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ನಿವೃತ್ತ ಇತಿಹಾಸ ಪ್ರಾಧ್ಯಾಪಕ ಕೆ. ಚಂದ್ರಶೇಖರ್ ಶೆಟ್ಟಿ ಕೆರೆಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಶುಭ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬಳ್ಳಾರಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಶ್ರವಣ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆದ ಶ್ರವಣ ಕಪ್ ಅಖಿಲ ಭಾರತ ಆಹ್ವಾನಿತ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡವು ಪ್ರಶಸ್ತಿಯನ್ನು ಪಡೆದುಕೊಂಡಿತು. ರಾಷ್ಟ್ರದ 10 ಆಹ್ವಾನಿತ ತಂಡಗಳು ಭಾಗವಹಿಸಿದ್ದಈ ಟೂರ್ನಿಯ ಫೈನಲ್ನಲ್ಲಿ ಆಳ್ವಾಸ್ ತಂಡವು ತಮಿಳುನಾಡಿನ ಪಿಎಸ್ಎನ್ಎ ದಿಂಡಿಗಲ್ ತಂಡವನ್ನು 35-31, 35-18 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಸೆಮಿಫೈನಲ್ಸ್ ಪಂದ್ಯಗಳಲ್ಲಿ ಆಳ್ವಾಸ್ ತಂಡ ಶ್ರವಣ ಬಳ್ಳಾರಿ ತಂಡವನ್ನ ನೇರ ಸೆಟ್ಟುಗಳಿಂದ ಸೋಲಿಸಿ ಫೈನಲ್ಸಿಗೆ ಅರ್ಹತೆಯನ್ನು ಪಡೆದಿತ್ತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮೈಲಾರೇಶ್ವರ ಯುವಕ ಮಂಡಲ ರಿ. ಕುಂದಾಪುರ ಇವರ 48ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಆರಾಧ್ಯ ಕೆ.ಬಿ. ಪ್ರಥಮ ಸ್ಥಾನ ಪಡೆದಿದ್ದಾಳೆ ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 12ನೇ ಶತಮಾನದಲ್ಲಿದ್ದ ವಚನಕಾರರು ಸಮಾಜದ ಅಂಕುಡೊಂಕುಗಳನ್ನು ತಮ್ಮ ವಚನಗಳ ಮೂಲಕ ತಿದ್ದುವಲ್ಲಿ ನಿರತರಾಗಿದ್ದರು. ವಚನಕಾರರ ವಚನಗಳನ್ನು ಹಾಗೂ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ವಚನಕಾರರು ಕನ್ನಡ ಸಾಹಿತ್ಯಕ್ಕೆ ಸಾಕಷ್ಟು ವಚನಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಚನಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಮಾನತೆ, ಭ್ರಾತತ್ವ ಮತ್ತು ಆತ್ಮವಿಮರ್ಶೆ ಮಾಡಿಕೊಳ್ಳುವುದರ ಜೊತೆಗೆ ತಾವು ಮಾಡುವ ಕಾಯಕದಲ್ಲಿ ದೇವರನ್ನೇ ಕಂಡುಕೊಂಡು ತಮ್ಮ ವಚನಗಳ ಮೂಲಕ ಜನರಲ್ಲಿ ಅರಿವು ಮತ್ತು ಜ್ಞಾನವನ್ನು ಮೂಡಿಸುವ ಪ್ರಯತ್ನ ಮಾಡುತ್ತಿದ್ದರು. ಒಳಗೊಂದು ಹೊರಗೊಂದು ಭಾವನೆಗಳನ್ನು ಹೊಂದಿರುವ ಪ್ರಸಕ್ತ ಸಮಾಜದಲ್ಲಿ, ವಚನಕಾರರು 800 ವರ್ಷಗಳ ಹಿಂದೆಯೇ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರವು ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಗಣೇಶ ಮೇಸ್ತರವರ ನೇತೃತ್ವದಲ್ಲಿ ಬೆಂಗಳೂರಿನ ಕಚೇರಿ ಕಂದಾಯ ಭವನದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆಯಿತು. ಉಪಾಧ್ಯಕ್ಷರಾದ ಸಂದೀಪ್ ಭಂಡಾರ್ಕಾರ್, ಕಾರ್ಯದರ್ಶಿ ವಿರೇಶ್ ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಬೈಂದೂರು ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶೇಖರ ಪೂಜಾರಿ ಹಾಗೂ ರಾಜ್ಯ ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ. ಉಪ್ಪುಂದ ಮತ್ತು ಪದಾಧಿಕಾರಿಗಳು ಹಾಜರಾಗಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಚಿವರ್ಸ್ ಕುಂದಾಪುರ ನೇತೃತ್ವದಲ್ಲಿ ಕರ್ಣಾಟಕ ಬ್ಕಾಂಕ್ ಉದ್ಯೋಗಿಗಳು ಹಾಗೂ ಕುಟುಂಬಿಕರಿಗೆ ಆಯೋಜಿಸಲಾದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾಕೂಟ – ಅಚಿವರ್ಸ್ ಟ್ರೋಫಿ 2025 ಕೋಟೇಶ್ವರದಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ಕರ್ಣಾಟಕ ಬ್ಯಾಂಕ್ ಪ್ರಧಾನ ಕಛೇರಿಯ ಡಿಜಿಎಂ ಗೋಪಾಲ ಕೃಷ್ಣ ಸಾಮಗ ಕ್ರೀಡಾಕೂಟ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ವಾದಿರಾಜ್ ಕೆ. ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಿನ್ಸಿಪಾಲರಾದ ರಾಮಾರಾಯ ಆಚಾರ್ಯ, ಕುಂದಾಪುರ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯ, ಉಡುಪಿ ಕ್ಲಸ್ಟರ್ ಹೆಡ್ ಪ್ರದೀಪ್ ಕುಮಾರ್, ಪ್ರಧಾನ ಕಚೇರಿಯ ಚೀಫ್ ಮ್ಯಾನೇಜರ್ ಕುಮಾರಸ್ವಾಮಿ, ಶ್ರೀನಿವಾಸ್ ಮೂರ್ತಿ, ಭಾರತೀ ಎಎಕ್ಸ್ಎ ರಿಲೇಶನ್’ಶಿಪ್ ಹೆಡ್ ಸಲೀಂ ಮೊಮೀನ್, ಬಜಾಜ್ ಅಲಾಯನ್ಸ್ ರಿಜಿನಲ್ ಮ್ಯಾನೇಜರ್ ಜಗದೀಶ್, ರಾಘವೇಂದ್ರ ನಾಯ್ಕ್, ಅಮರಾನಾಥ್ ಭಂಡಾರಿ, ಡಿಜಿಎಂ ರಾಕೇಶ್ ಕಾರಂತ್ ಉಪಸ್ಥಿತರಿದ್ದರು. ಬ್ಯಾಂಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. ಉದ್ಯಮಿ ನಾಗೇಂದ್ರ ಅಡಿಗ ವಡ್ಡರ್ಸೆ, ಮಾಲಕರು, ಹೋಟೆಲ್ ಗಣೇಶ ಗ್ರಾಂಡ್ ಆಗುಂಬೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಾಲೇಜಿನ ಸಾಂಸ್ಕೃತಿಕ ಸಾಧನೆಗಳನ್ನು, ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳನ್ನು ಸಾದರಪಡಿಸಿದರು. ಈ ಸಂದರ್ಭ ಅಮಾಸೆಬೈಲು ಡ್ಯುಯಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ ಶುಭ ಹಾರೈಸಿದರು. ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾರಂಗದ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಆಶಯ ನುಡಿಗಳನ್ನಾಡಿದರು. ಉಡುಪಿ ಪೊಲೀಸ್ ಠಾಣೆಯ ಆರಕ್ಷಕರಾದ ಮಂಜುನಾಥ ಶೆಟ್ಟಿ ಕೊತ್ತಾಡಿ ದಿಕ್ಸೂಚಿ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಗಣೇಶ್ ಜುವೆಲರ್ಸ್ ಮಾಲಕರಾದ ಪದ್ಮನಾಭ ಆಚಾರ್, ವಡ್ದರ್ಸೆ, ವಿನುತಾ ಶೆಟ್ಟಿ ಕೊತ್ತಾಡಿ, ಮಂಜುಳಾ ವೀರೇಂದ್ರ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಪೋಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಾ. ಎ.ವಿ ಬಾಳಿಗಾ ಆಸ್ಪತ್ರೆ ಉಡುಪಿ ಇಲ್ಲಿಯ ಕ್ಲಿನಿಕಲ್ ಮನಶ್ಯಾಸ್ತ್ರಜ್ಞರಾದ ನಾಗರಾಜಮೂರ್ತಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ “ಪರಿಣಾಮಕಾರಿ ಪೋಷಕತ್ವ”ದ ಬಗ್ಗೆ ತಿಳಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಮಾಧವ ವಂದನಾರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಭರತ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯುವ ನಾಯಕರಾಗಿ ಗುರುತಿಸಿಕೊಂಡಿದ್ದ ಭರತ್ ಅವರು ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೇದಮೂರ್ತಿ ರಾಮಚಂದ್ರ ಭಟ್ಟರ ಸ್ಮರಣಾರ್ಥ ಆರಾಧನೆ ಕಾರ್ಯಕ್ರಮದ ಭಾಗವಾಗಿ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಮಾತೃವಂದನಾ ಕಾರ್ಯಕ್ರಮವು ಇತ್ತೀಚಿಗೆ ನೆರವೇರಲ್ಪಟ್ಟಿತು. ಬಾರ್ಕೂರಿನ ಖ್ಯಾತ ವಾಗ್ಮಿಗಳಾದ ಎನ್. ಆರ್. ದಾಮೋದರ ಶರ್ಮ ಅವರು ಈ ಕಾರ್ಯಕ್ರಮವನ್ನು ಸಾಂಗವಾಗಿ ನೆರವೇರಿಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳ ಪಾದ ತೊಳೆದು, ಆರತಿ ಬೆಳಗಿ, ಗೌರವಿಸಿದರು. ಈ ಸಂದರ್ಭದಲ್ಲಿ ಎನ್. ಆರ್. ದಾಮೋದರ ಶರ್ಮರು ಪೋಷಕರು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಭರತಭೂಮಿ ಕರ್ಮಭೂಮಿ, ಧರ್ಮಭೂಮಿ, ಸಾಧನಭೂಮಿಯೆಂದು ವೇದೇತಿಹಾಸಗಳು ಸಾರಿ ಸಾರಿ ಹೇಳುತ್ತಿವೆ. ಏಕೆಂದರೆ ಇಲ್ಲಿ ಜಾತರಾದವರು ಭಾವ ರಾಗ ತಾಳಗಳಿಂದ ಕೂಡಿದ ಜೀವನ ನಡೆಸುತ್ತಾರೆ. ಈಗಿನ ಭಾರತ ಮುಂದೆ ಹೀಗೇ ಮುಂದುವರಿಯಬೇಕಾದರೆ ಉತ್ತಮ ಗುಣಮಟ್ಟದ ಭಾವನೆಗಳನ್ನು ವಿದ್ಯಾರ್ಥಿಗಳಲ್ಲಿ ಹುಟ್ಟುಹಾಕುವುದು ಅತ್ಯಗತ್ಯ ಎಂದರು. ಮಕ್ಕಳಿಗೆ ಭಾರತೀಯ ಪರಂಪರೆಯ ಬಗ್ಗೆ ಸರಿಯಾದ ಜ್ಞಾನವನ್ನು ನೀಡಬೇಕು. ಇತಿಹಾಸದ ಪ್ರಜ್ಞೆ ಬೇಕು. ಯಾವಾತನು ಇತಿಹಾಸವನ್ನು ಚೆನ್ನಾಗಿ ಅರಿಯುತ್ತಾನೋ ಅವನು ಭದ್ರವಾದ ಭವಿಷ್ಯಕ್ಕೆ ನಾಂದಿಯನ್ನಿಡುತ್ತಾನೆ. ಮಕ್ಕಳು ಮಾತೃದೇವೋ…
