ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಶಾಂತಿ ಲಯನ್ಸ್ ಕ್ಲಬ್ ಹುಣಸೆಮಕ್ಕಿ – ಮೊಳಹಳ್ಳಿ ಇದರ ಪದಗ್ರಹಣ ಸಮಾರಂಭವು ಹೊಂಬಾಡಿಯ ಕುಲಾಲ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ಉಪ ಗವರ್ನರ್ ಸಪ್ನಾ ಸುರೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪದಗ್ರಹಣ ಸಮಾರಂಭವನ್ನು ನೆರವೇರಿಸಿ, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಅಂಬಾಸಡರ್ ಅರುಣ್ ಹೆಗ್ಡೆ ಯವರ ಉಪಸ್ಥಿತಿಯಲ್ಲಿ, ನಿಕಟ ಪೂರ್ವ ಅಧ್ಯಕ್ಷರಾದ ರತ್ನಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಜಿಲ್ಲೆ 317C ಇದರ ಪ್ರಾಂತ್ಯ ಅಧ್ಯಕ್ಷರಾದ ಸೋಮನಾಥ ಹೆಗ್ಡೆ ಹಾಗೂ ವಲಯ ಅಧ್ಯಕ್ಷರಾದ ವಸಂತ್ ಕುಮಾರ್ ಶೆಟ್ಟಿ, ಪ್ರಾಂತ್ಯ ಕಾರ್ಯದರ್ಶಿ ಆನಂದ ಶೆಟ್ಟಿ, ವಲಯ ಕಾರ್ಯದರ್ಶಿ ಪಟ್ಟಾಭಿರಾಮ ಭಟ್ ಮೊದಲಾದವರು ಭಾಗವಹಿಸಿದ್ದರು. ಪ್ರಸ್ತುತ ಸಾಲಿನ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶೆಟ್ಟಿ ನಿಡ್ಲಾಡಿ, ಕಾರ್ಯದರ್ಶಿಯಾಗಿ ಉದಯಕುಮಾರ್ ಶೆಟ್ಟಿ ಹಾಗೂ ಖಜಾಂಜಿಯಾಗಿ ದಯಾನಂದ್ ಪದಗ್ರಹಿತರಾದರು. ಕ್ಲಬ್ ನ ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಶಂಕರ್ ಹೆಗ್ಡೆಯವರು ಅಧಿಕಾರ ಸ್ವೀಕರಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಂಗಳವಾರ ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಓಗಳೊಂದಿಗೆ ಹಾಗೂ ಕಂದಾಯ, ಸರ್ವೇ, ಅರಣ್ಯ, ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿದರು. ಸಭೆಯಲ್ಲಿ ಗೋಳಿಹೊಳೆ, ಹೇರೂರು, ಕೊಲ್ಲೂರಿನಲ್ಲಿ ಗೋಮಾಳದ ಜಾಗ ಗುರುತಾಗಿದ್ದು, ಆದಷ್ಟು ಬೇಗ ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಆರಂಭಿಸುವಂತೆ ಹಾಗೂ ಉಳಿದಿರುವ ಗೋಮಾಳಗಳ ಸರ್ವೆ ಕಾರ್ಯವನ್ನು ಆದಷ್ಟು ಬೇಗ ಮುಗಿಸಿ, ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು. ಯಾವೆಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಮಶಾನ ಇಲ್ಲ ಮತ್ತು ಸ್ಮಶಾನ ಜಾಗ ಗ್ರಾಮ ಪಂಚಾಯತ್ ಹೆಸರಲ್ಲಿ ಇಲ್ಲ ಎಂಬುದರ ಮಾಹಿತಿ ಪಡೆದುಕೊಂಡು, ಸ್ಮಶಾನ ಭೂಮಿಗಳನ್ನು ಇದುವರೆಗೂ ಗ್ರಾಮ ಪಂಚಾಯತ್ ಹೆಸರಿಗೆ ಪಹಣಿ ಮಾಡಿಸದೇ ಇದ್ದಲ್ಲಿ ಅಂತಹ ಗ್ರಾಮ ಪಂಚಾಯತ್ ಮಾಹಿತಿಯನ್ನು ಪಡೆದು ತಹಶೀಲ್ದಾರ್ ಅವರ ಗಮನಕ್ಕೆ ತಂದು ಪಹಣಿ ಮಾಡಿಸಬೇಕು ಮತ್ತು ಈ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ. ಎಸ್ ರಾಜ್ಯಕ್ಕೆ 195ನೇ ರ್ಯಾಂಕ್ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಮೂಡುಬಿದಿರೆ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠತನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಸದಾ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒತ್ತು ನೀಡಿದೆ. ಸಾಂಸ್ಕೃತಿಕ, ಕ್ರೀಡಾ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯು ಈ ಹಿಂದೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇತ್ತು. ಆಗ ಕೆಲವು ಸಮಸ್ಯೆಗಳು ಎದುರಾಗುತ್ತಿದ್ದವು. ಆದರೆ ಇದೀಗ ಸ್ವಾಯತ್ತ ಸ್ಥಾನಮಾನದೊಂದಿಗೆ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಬೈಂದೂರು ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸತೀಶ್ ಕುಮಾರ್ ಶೆಟ್ಟಿ ಹೇರೂರು, ಶೇಖರ್ ಪೂಜಾರಿ ಉಪ್ಪುಂದ, ನರಸಿಂಹ ಹಳಗೇರಿ, ಜಗದೀಶ್ ದೇವಾಡಿಗ ಬಿಜೂರು, ಮೌಲಾನ ದಸ್ತಗೀರಿ ಸಾಹೇಬ್ ಶಿರೂರು ಹಾಗೂ ಗ್ರೀಷ್ಮಾ ಭಿಡೆ ಕೊಲ್ಲೂರು ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸೌತ್ ಕೆನರಾ ಫೊಟೋಗ್ರಾರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಕುಂದಾಪುರ-ಬೈಂದೂರು ವಲಯ ಹಾಗೂ ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಇವರ ವತಿಯಿಂದ ಮಾಹಿತಿ ಕಾರ್ಯಗಾರ ಮತ್ತು ಇ-ಶ್ರಮ್ ನೋಂದಣಿ ಕಾರ್ಯಕ್ರಮ ಮಂಗಳವಾರ ಕುಂದಾಪುರದ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಉಡುಪಿ ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಆರ್. ಉದ್ಘಾಟಿಸಿ ಮಾತನಾಡಿ ಪೋಟೋಗ್ರಾಫರ್ ಅಸೋಸಿಯೇಷನ್ ಸದಸ್ಯರುಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ, ಅಸಂಗಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಫೋಟೋಗ್ರಾರ್ಸ್ ನೋಂದಾವಣೆ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು. ಕುಂದಾಪುರ ಪುರಸಭೆ ಮುಖ್ಯ ಅಧಿಕಾರಿ ಎಂ. ಮಂಜುನಾಥ , ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ವಿಜಯೇಂದ್ರ ಕೆ., ಸೌತ್ ಕೆನರಾ ಫೊಟೋಗ್ರಾರ್ಸ್ ಅಸೋಸಿಯೇಶನ್ ಕುಂದಾಪುರ – ಬೈಂದೂರು ವಲಯ ಅಧ್ಯಕ್ಷ ದಿವಾಕರ ಶೆಟ್ಟಿ, ಕುಂದಾಪುರ ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ಜಿ.ಕೆ., ಜಿಲ್ಲಾ ಕಟ್ಟಡ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ ಮತ್ತು ಸಂಕಲ್ಪ ನಿಧಿ ಹುಂಡಿ ವಿತರಣೆ ಕಾರ್ಯಕ್ರಮವು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಾಗಪಾತ್ರಿಗಳಾದ ರವಿರಾಜ್ ಭಟ್ ಅಂಪಾರು, ಕಲಿಯುಗದಲ್ಲಿ ನಾಗ ದೇವರ ಆರಾಧನೆ ಶ್ರೇಷ್ಠವಾದುದು. ಕಳೆದ ೨೪ ವರ್ಷಗಳಿಂದ ನಿರಂತರವಾಗಿ ನಾಗಮಂಡಲೋತ್ಸವ ಪೂಜೆಯನ್ನು ನಡೆಸಿ ದೇವರ ಅನುಗ್ರಹಕ್ಕೆ ಪಾತ್ರರಾಗಿರುವ ಚಾರೋಡಿ ಮೇಸ್ತ ಸಮಾಜ ಬಾಂಧವರು, ಬೆಣ್ಗೆರೆಯಲ್ಲಿ ಸುಂದರ ನಾಗ ದೇವಸ್ಥಾನವನ್ನು ನಿರ್ಮಿಸಿ ನಾಗನ ಆರಾಧನೆಯನ್ನು ಮಾಡಿಕೊಂಡು ಬಂದಿರುವುದು ವಿಶಿಷ್ಟವಾದುದು. ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳು ದೇವರ ಅನುಗ್ರಹದಿಂದ ಉತ್ತಮವಾಗಿ ನೆರವೇರಲಿ ಎಂದು ಹೇಳಿದರು. ಶ್ರೀ ನಾಗ ದೇವಸ್ಥಾನದ ಅಧ್ಯಕ್ಷತೆಯನ್ನು ಉಮೇಶ ಎಲ್. ಮೇಸ್ತ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಪುರೋಹಿತರಾದ ರಾಘವೇಂದ್ರ ಅಡಿಗ ನಾಯಕವಾಡಿ ಶುಭಾಶಂಸನೆಗೈದರು. ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜ ಅಧ್ಯಕ್ಷ ರಾಮಚಂದ್ರ ಬಿ. ಶಿರೂರ್ಕರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಹಾಕಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ. ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರಮ ಪ್ರಕಾರವಾಗಿ ಪೂರ್ಣಚಂದ್ರ ಪಿ. ಎಚ್ 55, ಆದಿತ್ಯ ಪಾಟೀಲ್ 74, ನೇಹ. ಎನ್ 76, ಶ್ರೀಹರಿ 109, ಸಾನ್ವಿ ಕುಮಾರ್ 120, ಕಿಶನ್ ಬಿ. ಗೌಡ 133, ಅಂಕುಶ್. ವಿ 148, ಆತ್ಮಿಕ ನಾಯಕ್ 157, ಹರಿದ್ವರ್ಣ ಸಿ. ಅಸ್ವೆಪಟ್ಟೆ 162, ಸಚೇತ್ ದಯಾನಂದ್ ಬಿ. ಎಸ್ 258, ಹವನ ಎನ್ 333, ಮನ್ವಿತ ಆರ್ 346, ಸಿಂಚನ ಎಸ್. ಆಚಾರ್ಯ 374, ಹರ್ಷಲ್ ಎಸ್. ನರೋತಿ 383, ಡಿ. ಎಂ. ಪ್ರಜ್ವಲ್ 465, ಆರ್. ಬಿಂದು ಸೂರ್ಯ 468ನೇ ಸ್ಥಾನವನ್ನು ಗಳಿಸಿದ್ದಾರೆ. ಒಟ್ಟು ಫಲಿತಾಂಶದಲ್ಲಿ 100ರ ಸ್ಥಾನದೊಳಗೆ 7,200 ಒಳಗೆ 19,300 ಒಳಗೆ 26,400ರ ಒಳಗೆ 36,500ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ಯಾಂಕ್ ಪಡೆದು,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿರುತ್ತಾಳೆ.ಹಾಗೆಯೇ ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದ 197ನೇ ಯಾಂಕ್ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾಳೆ.ಈ ಮೂಲಕ ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ಈ ವಿದ್ಯಾರ್ಥಿನಿಯರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ನೇತೃತ್ವದಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗೆಳೆಯರ ಬಳಗ ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ 2024 ಜುಲೈ 12 ಶುಕ್ರವಾರದಿಂದ ಜುಲೈ 14 ಆದಿತ್ಯವಾರದ ತನಕ ಕುಂದಾಪುರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷರಾದ ಜನನಿ ದಿನಕರ ಶೆಟ್ಟಿ ತಿಳಿಸಿದರು. ಅವರು ಕುಂದಾಪುರದ ಪ್ರೆಸ್ ಕ್ಲಬ್ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವುದರೊಂದಿಗೆ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು. ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಸ್ಥಾಪಕಧ್ಯಕ್ಷರಾದ ಕಿರಣ್ ಕುಂದಾಪುರ ಮಾತನಾಡಿ, ಹಲಸು ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆ, ಆಂಧ್ರದ ಮೊದಲಾದ ಭಾಗಗಳಿಂದ ಹಲಸು ಬೆಳೆಗಾರರು…
