ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಯಂತಹ ಸಂಸ್ಥೆಯಿಂದ ಗ್ರಾಮೀಣ ಭಾಗದ ಪ್ರತಿಭೆಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹಾಗಾಗಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಡೆಸಾರ್ಟ್ ಸಿಸ್ಟಂ ಗ್ರೂಪ್ನ ಮುಖ್ಯ ಹಣಕಾಸು ಅಧಿಕಾರಿ ವಿಶ್ವನಾಥ ಶೇಟ್ ಹೇಳಿದರು. ಅವರು ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ಜೆಸಿಐ ಬೈಂದೂರು ಸಿಟಿ ಆಥಿತ್ಯದಲ್ಲಿ ಜರುಗಿದ ಜೆಸಿಐ ವಲಯ 15ರ ಮಹಿಳಾ ಜೆಸಿ ಹಾಗೂ ಜ್ಯೂನಿಯರ್ ಜೆಸಿ ಸಮ್ಮೇಳನ – ಚುಕ್ಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಇಂದು ಅವಕಾಶಗಳು ಹಲವಿದೆ ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳುವ ಮಾರ್ಗದರ್ಶನ ಯುವಜನತೆಗೆ ಬೇಕಾಗಿದೆ ಎಂದರು. ಜೆಸಿಐ ವಲಯದ ಮೊದಲ ಮಹಿಳೆ ಶಿಲ್ಪಾ ಪುರುಶೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಜೆಸಿಐ ಝೋನ್ 15ರ ಲೇಡಿ ಜೆಸಿ ಕೋ-ಆರ್ಡಿನೇಟರ್ ಸುಮನಾ ಪೊಳಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್.ಜೆ. ನಯನಾ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ವಲಯಾಧ್ಯಕ್ಷ ಪುರುಶೋತ್ತಮ ಶೆಟ್ಟಿ, ನಿಕಟಪೂರ್ವ ವಲಯಾಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಸ್ಲಿಂ ಸಾಹಿತಿಗಳು, ಲೇಖಕರು, ಚಿಂತಕರು ಮತ್ತು ಸಾಧಕರ ವೇದಿಕೆಯಾದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ನಿಯೋಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿಯಾಗಿ ಸುದೀರ್ಘ ಸುಮಾರು 1 ಗಂಟೆ 30 ನಿಮಿಷದಷ್ಟು ಕಾಲ ಮಾತುಕತೆ ನಡೆಸಿತು. ಸಂಘಟನೆಯ ಉದ್ದೇಶ, ಕಾರ್ಯ ಮತ್ತು ಸ್ವರೂಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ವಾಮೀಜಿಗಳು “ಕರ್ನಾಟಕದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯು ಎಲ್ಲ ಸಮುದಾಯಗಳ ನಡುವಿನ ಬಾಂಧವ್ಯಕ್ಕೆ ಹೊಸ ಭಾಷ್ಯ ಮುನ್ನುಡಿ ಬರೆಯಲಿದೆ. ಸಮುದಾಯಗಳ ನಡುವೆ ಕಾರಣಾಂತರಗಳಿಂದ ಉದ್ಭವವಾಗುವ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಸೂಕ್ತ ಸಂಪರ್ಕ ಸಾಧಿಸಲು ಇಂತಹ ಪ್ರಬುದ್ಧರ ವೇದಿಕೆಗಳು ಅವಶ್ಯಕ. ಪ್ರಜ್ಞಾವಂತರು ಮತ್ತು ಪ್ರತಿಭಾವಂತರಿಂದ ಕೂಡಿದ ಈ ವೇದಿಕೆಯು ರಾಜಕೀಯ ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳಲ್ಲಿ ಸಮುದಾಯವನ್ನು ಸೂಕ್ತ ರೀತಿಯಲ್ಲಿ ಖಂಡಿತ ಪ್ರತಿನಿಧಿಸುವ ವಿಶ್ವಾಸವಿದೆ. ಆದಿಚುಂಚನಗಿರಿ ಮಠ ಮತ್ತು ಮುಸ್ಲಿಂ ಸಮುದಾಯದ ಬಾಂಧವ್ಯಕ್ಕೆ ಒಂದು ದೊಡ್ಡ ಪರಂಪರೆ ಮತ್ತು ಇತಿಹಾಸವಿದೆ. ವೇದಿಕೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೋದಿಕೇರ್ ರಾಕಿಂಗ್ ಚಾಂಪಿಯನ್ಸ್,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ರೋಟರಿ ಬ್ಲಡ್ ಬ್ಯಾಂಕ್ ಶಿವಮೊಗ್ಗ ಇವರ ಸಹಕಾರದಲ್ಲಿ ಆದಿತ್ಯವಾರ ತಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ತಜ್ಣ ವೈದ್ಯರಾದ ಡಾ ನಾಗೇಶ್ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, 100ಕ್ಕೂ ಅಧಿಕ ವರ್ಷ ಇತಿಹಾಸವಿರುವ ವಿಜ್ಣಾನಕ್ಕೆ ಇಂದಿಗೂ ಕೂಡ ಕೃತಕ ರಕ್ತ ಉತ್ಪಾದನೆ ಮಾಡಲು ಆಗಿಲ್ಲ, ಇಂತಹ ರಕ್ತದಾನ ಶಿಬಿರದಲ್ಲಿ ಆರೋಗ್ಯವಂತರು ರಕ್ತದಾನ ಮಾಡಿದರೆ ಮಾತ್ರ ರೋಗಿಗಳಿಗೆ ಜೀವ ಉಳಿಯಲು ಸಾಧ್ಯ ಎಂದು ಆಭಿಪ್ರಾಯಪಟ್ಟರು. ಮೋದಿಕೇರ್ ರಾಕಿಂಗ್ ಚಾಂಪಿಯನ್ಸ್ ರವೀಂದ್ರ ಶ್ರೀಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪಿಎಸ್ಐ ವಿನಯ್, ರೋಟರಿ ಬ್ಲಡ್ ಬ್ಯಾಂಕ್ ಶಿವಮೊಗ್ಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಸತೀಶ್, ತಲ್ಲೂರು ಗ್ರಾಮ ಪಂಚಾಯತ್ ಗಿರೀಶ್ ನಾಯಕ್, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದ ಡಾ ಅಜೀಜ್,, ರಕ್ತದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕತಾರ್ನಲ್ಲಿ ವರ್ಷಾಂತ್ಯ ನಡೆಯಲಿರುವ ಅಂತರಾಷ್ಟ್ರೀಯ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಬೈಂದೂರು ತಾಲೂಕು ಗೋಳಿಹೊಳೆಯ ಪೃಥ್ವಿರಾಜ್ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದಾರೆ. 32 ವರ್ಷದ ಪೃಥ್ವಿರಾಜ್ ಭಾರತದ ಕಿವುಡರ ಕ್ರಿಕೆಟ್ ತಂಡದ ಪ್ರಧಾನ ವೇಗಿ ಹಾಗೂ ಕೆಳ ಕ್ರಮಾಂಕದ ಬ್ಯಾಟರ್ ಆಗಿದ್ದಾರೆ. ಇತ್ತೀಚೆಗೆ ನಡೆದ ತ್ರಿಕೋನ ಏಕದಿನ ಸರಣಿ, ಅದಕ್ಕೂ ಮೊದಲು ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಡಿ. 1ರಿಂದ ಡಿ. 12ರ ವರೆಗೆ ಕತಾರ್ನ ದೋಹಾದಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ವೀರೇಂದ್ರ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಆಲ್ರೌಂಡರ್ ಸಾಯ್ ಆಕಾಶ್ ಉಪನಾಯಕನಾಗಿದ್ದಾರೆ. ಪೃಥ್ವಿರಾಜ್ ಶೆಟ್ಟಿ ಹುಂಚನಿ ಈ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ. ಕರ್ನಾಟಕ ಮೂಗರ ಕ್ರಿಕೆಟ್ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿರುವ ಪ್ರಥ್ವಿರಾಜ್ ಅವರು, ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.28: ಜಿಲ್ಲೆಯ ಪ್ರಗತಿಶೀಲ ಸಹಕಾರಿ ಸಂಘಗಳ ಪೈಕಿ ಅಗ್ರಸ್ಥಾನದಲ್ಲಿದ್ದು, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ 2022-23ನೇ ಸಾಲಿನಲ್ಲಿ 52 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರದಿಂದ ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಸಂಘದ ಪ್ರಧಾನ ಕಛೇರಿಯಲ್ಲಿ ಭಾನುವಾರ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2022-23ನೇ ಸಾಲಿನಲ್ಲಿ ಒಟ್ಟು ರೂ. 36.55 ಕೋಟಿ ಠೇವಣಿ ಹೊಂದಿದ್ದು, 30.82 ಕೋಟಿ ಸಾಲ ನೀಡಿದೆ. ದುಡಿಯುವ ಬಂಡವಾಳ 40 ಕೋಟಿಯಾಗಿದ್ದರೇ, 200 ಕೋಟಿಯ ವಹಿವಾಟು ನಡೆಸಿದೆ ಎಂದರು. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಪ್ರಗತಿ ಸಾಧಿಸಿದೆ. ಜಿಲ್ಲೆಯಲ್ಲಿಯೇ ಮಾದರಿ ಸಂಸ್ಥೆಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,28: ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ನಡೆದ ಜನಾಗ್ರಹ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ವೈಯುಕ್ತಿಕ ತೇಜೋವಧೆ ಮಾಡಿರುವುದು ಖಂಡನೀಯ. ಮಹೇಶ್ ಶೆಟ್ಟಿ ತಿಮರೋಡಿಯವರು ಬಹಿರಂಗ ಸಭೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಅಸತ್ಯ ಮತ್ತು ದ್ವೇಷದ ಬೀಜ ಬಿತ್ತಿರುವುದು, ತಾವು ಹೇಳಿದ ಕಟ್ಟುಕತೆಯನ್ನೇ ಹಳ್ಳಿ ಹಳ್ಳಿಗಳಲ್ಲಿ ಅಪಪ್ರಚಾರ ಮಾಡುವಂತೆ ಜನರಿಗೆ ಸಾರ್ವಜನಿಕ ಕರೆ ಕೊಟ್ಟಿರುವುದು ಸಮಾಜದ ಶಾಂತಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ ಕೃತ್ಯವಾಗಿದೆ ಹಾಗೂ ಆಧಾರರಹಿತವಾಗಿ ವೈಯುಕ್ತಿಕ ನಿಂದನೆ, ಧಾರ್ಮಿಕ ನಿಂದನೆ ಕಾನೂನಾತ್ಮಕವಾಗಿ ಅಪರಾಧವಾಗಿದೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ. ಶ್ರೀ ಕ್ಷೇತ್ರದ ಅಭಿಮಾನಿಗಳ ಪರವಾಗಿ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರಿಗೆ ದೂರು ಸಲ್ಲಿಸಲಾಗಿದೆ. ಕುಸುಮಾವತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಪ್ರಚೋದನಕಾರಿ ಮಾತುಗಳನ್ನಾಡಲು ಅವಕಾಶ ಮಾಡಿಕೊಟ್ಟಿರುವುದು ಕಾನೂನು ಬಾಹಿರವಾಗಿದೆ. ಬಹಿರಂಗ ಸಭೆಯಲ್ಲಿ ಮಾತನಾಡಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಅಳ್ವೆಗದ್ದೆಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಶಿರೂರು ತಸ್ಫಿಯಾ ಮಂಜಿಲ್ ನ್ಯೂ ಕಾಲೋನಿ ನಿವಾಸಿ, ಗಂಗೊಳ್ಳಿ ಮುಸ್ತಾಫಾ ಎಂಬುವರ ಮಗ ಗಂಗೊಳ್ಳಿ ಮೊಹಮ್ಮದ್ ಮುಸಾಬ್ (22) ಹಾಗೂ ಕೆಸರಕೋಡಿ ನಿವಾಸಿ ಬಾವು ನೂರುಲ್ ಅಮೀನ್ ಎಂಬುವರ ಪುತ್ರ ಬಾವು ನಝಾನ್ (24) ಸಮುದ್ರದಲ್ಲಿ ನಾಪತ್ತೆಯಾದವರು. ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಕೊಂಡಿದ್ದ ನಾಲ್ವರು ಯುವಕರು ಎಂದಿನಂತೆ ಕೈರಂಪಣಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಪಾಲಾಗಿದ್ದಾರೆ. ತಕ್ಷಣ ಸ್ಥಳೀಯ ಮೀನುಗಾರರು ನಾಪತ್ತೆಯಾದವರ ಶೋಧಕ್ಕಾಗಿ ಪ್ರಯತ್ನಿಸಿದರು ಕೂಡ ಪತ್ತೆಯಾಗಿಲ್ಲ. ರಾತ್ರಿಯ ತನಕವೂ ಶೋಧ ಕಾರ್ಯ ಮುಂದುವರಿಸಿದ್ದರು. ಯುವಕರು ಬದುಕುಳಿದಿರುವ ಸಾಧ್ಯತೆ ಕಡಿಮೆಯಿದ್ದು, ಮೃತದೇಹ ಪತ್ತೆ ಕಾರ್ಯದಲ್ಲಿ ಕರಾವಳಿ ಕಾವಲು ಪಡೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮೀನುಗಾರರು ತೊಡಗಿಕೊಂಡಿದ್ದರು. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ, ಕರಾವಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ದೇವಿಯ ಪ್ರಸಾದ ಸ್ವೀಕರಿಸಿದರು. ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಈ ವೇಳೆ ಗೌರವಿಸಿದರು. ಈ ಸಂದರ್ಭ ಬೈಂದೂರು ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಾಜೇಶ್ ಎಂ. ದೇವಾಡಿಗ ಹಾಗೂ ಉಪಾಧ್ಯಕ್ಷೆಯಾಗಿ ಸಿಂಗಾರಿ ತಾರಿಬೇರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 14 ಸದಸ್ಯ ಬಲದ ಪಂಚಾಯತ್ನಲ್ಲಿ 8 ಮಂದಿ ಕಾಂಗ್ರೆಸ್ ಹಾಗೂ 6 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಆಲೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗೇಶ್ ನಾಯ್ಕ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಗ್ರಾ.ಪಂ. ಪಿಡಿಒ ರೂಪಾ ಗೋಪಿ ಸಹಕರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಾಬು ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ಉದಯ ಪೂಜಾರಿ, ಗುಂಡು ಪೂಜಾರಿ ಹರವರಿ, ಸುರೇಶ್ ದೇವಾಡಿಗ, ಸದಸ್ಯರು ಉಪಸ್ಥಿತರಿದ್ದರು.
ಸೌಜನ್ಯಳಿಗೆ ನ್ಯಾಯಕ್ಕಾಗಿ ಕುಂದಾಪುರದಲ್ಲಿ ಜನಾಗ್ರಹ ಸಭೆ
