ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ. ಇಂದು 7 ನೇ ತಲಾಂತರದಲ್ಲಿ ನಡೆಯುತ್ತಿರುವ ಈ ಕಲೆಯನ್ನು ನಾವೆಲ್ಲರೂ ಸೇರಿ ಉಳಿಸಬೇಕು ಎಂದು ಡಾ. ಹರಿಕೃಷ್ಣ ಪುನರೂರು ಅವರು ಹೇಳಿದರು. ಅವರು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆದ ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2024ರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ. ಎಲ್. ಸಾಮಗರು ಅವರು ಸಮಾರಂಭವನ್ನು ಉದ್ಘಾಟಿಸಿ, ಯಕ್ಷಗಾನದ ಇತಿಹಾಸಕ್ಕಿಂತ ಗೊಂಬೆಯಾಟ ಕಲೆಯೇ ಪುರಾತನವಾದದ್ದು ಎಂದು ಅಭಿಪ್ರಾಯಪಟ್ಟರು. ಗಂಗೊಳ್ಳಿ ಹಾಲ್ಮಕ್ಕಿ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿಯಿಂದ ವಿಷ್ಣು ಸಹಸ್ರನಾಮದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗಂಗೊಳ್ಳಿಯ ಡಾ. ಕಾಶೀನಾಥ್ ಪೈ ಅವರು ಪ್ರಾರ್ಥಿಸಿದರು. ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಕುಂದಾಪುರದ ಮೊಕ್ತೇಸರರಾದ ರಾಧಾಕೃಷ್ಣ ಶೆಣೈ, ಶ್ರೀ ಮಹಾಲಿಂಗೇಶ್ವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಯಕ್ಷಿ ಟೆಕ್ ಸೊಲ್ಯೂಶನಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಜೊತೆಗಿನ ಸಹಯೋಗದಲ್ಲಿ 2025ರ ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಇಂಟರ್ನ್ಶಿಪ್ ಡ್ರೈವ್ನ್ನು ಆಯೋಜಿಸಿತು. ಕಾರ್ಯಕ್ರಮವನ್ನು ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥ ಮಹೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಸ್ವಾಗತ ನೀಡಿ, ಇಂಟರ್ನ್ಶಿಪ್ ಮೂಲಕ ತರಬೇತಿ ಪಡೆಯುವ ಮಹತ್ವವನ್ನು ವಿವರಿಸುವ ಮೂಲಕ ಪ್ರಾರಂಭಿಸಿದರು. ಯಕ್ಷಿ ಟೆಕ್ ಸೊಲ್ಯೂಶನಸ್ ಸಂಸ್ಥೆಯ ಪ್ರತಿನಿಧಿ ಪವನ್ ಅವರು ಸಂಸ್ಥೆಯ ಹಿನ್ನೆಲೆ ಮತ್ತು ಉದ್ಯೋಗಾವಕಾಶಗಳ ಬಗ್ಗೆ ವಿವರಿಸಿದರು. ಅಂತಿಮ ವರ್ಷದ ಬಿಎಸ್ಸಿ ಮತ್ತು ಬಿಸಿಎ ವಿದ್ಯಾರ್ಥಿಗಳು ಡ್ರೈವ್ನಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಮತ್ತು ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಅಂತಿಮ ಸುತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಕಾರ್ಯಕ್ರಮವು ವಿದ್ಯಾಸಂಸ್ಥೆ ಮತ್ತು ಕೈಗಾರಿಕೆ ನಡುವೆ ಸಹಕಾರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಲವ್ಲೀ ಪ್ರೊಫೆಷನಲ್ ವಿವಿ ಜಲಂಧರ್ ಪಂಜಾಬ್ ನಲ್ಲಿ ನಡೆದ ಅಖಿಲ ಭಾರತ ಅಂತರ್ ವಿವಿ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಪ್ರತಿನಿಧಿಸಿದ್ದ ಮಂಗಳೂರು ವಿವಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. 32 ವರ್ಷಗಳ ಬಳಿಕ ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ಮಂಗಳೂರು ವಿವಿ ಪ್ರಶಂಸೆಗೆ ಪಾತ್ರವಾಗಿದೆ. ವಿವಿ ಮಂಗಳೂರು ವಿವಿಯ ಒಟ್ಟು 9 ವಿದ್ಯಾರ್ಥಿಗಳ ತಂಡದಲ್ಲಿ ಆಳ್ವಾಸ್ ಸಂಸ್ಥೆಯ 6 ವಿದ್ಯಾಥಿಗಳು ಭಾಗಿಯಾಗಿದ್ದರು . ಆಳ್ವಾಸ್ ಕಾಲೇಜಿನ ಪ್ರಶಾಂತ್ಗೆ ಬೆಳ್ಳಿ, ಪ್ರತ್ಯುಶ್ಗೆ ನಾಲ್ಕನೇ ಸ್ಥಾನ, ಜೋಸುವ ರಾಜಕುಮಾರ್ಗೆ ನಾಲ್ಕನೇ ಸ್ಥಾನ ಪಡೆದರು. ಮಂಗಳೂರು ವಿವಿ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಲು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳ ಕೊಡುಗೆ ಪ್ರಮುಖವಾಗಿದೆ. ಡಿಸೆಂಬರ್ನಲ್ಲಿ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರ್ನಲ್ಲಿ ನಡೆದ ದಕ್ಷಿಣ ಭಾರತ ಅಂತರ್ ವಿ. ವಿ ಚಾಂಪಿಯಶಿಪ್ನಲ್ಲಿ 3 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿತ್ತು. ಇತಿಹಾಸದಲ್ಲೇ ಮೊದಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ರಾಮಾಯಣ, ಮಹಾಭಾರತ ಹಾಗೂ ಪುರಾಣ ಮತ್ತು ಗ್ರಂಥಗಳಲ್ಲಿ ಅಡಕವಾಗಿ ಅನೇಕ ವಿಷಯಗಳು ಇಂದಿನ ಮಕ್ಕಳಿಗೆ ತಿಳಿದಿಲ್ಲ. ಪಠ್ಯ ಪುಸ್ತಕದಲ್ಲಿ ಇರುವ ವಿಷಯಗಳನ್ನು ಮಾತ್ರ ಮಕ್ಕಳಿಗೆ ಹೇಳಲಾಗುತ್ತಿದೆ. ಇದರಿಂದ ನಮ್ಮ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಪುರಾಣಗಳನ್ನು, ಧಾರ್ಮಿಕ ಗ್ರಂಥಗಳನ್ನು ಪಠಣ ಮಾಡಬೇಕು. ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಆಶ್ರಯದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ.ಪೈ ಸಭಾಂಗಣದಲ್ಲಿ ಶನಿವಾರ ಜರಗಿದ ಅಜಿತ್ ಕುಮಾರ ಅವರ ಪುಣ್ಯತಿಥಿ ’ಸೇವಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಯುವ ಜನರ ಶಕ್ತಿ ಅಪವ್ಯಯವಾಗುತ್ತಿದೆ ಎಂಬುದನ್ನ ಮನಗಂಡ ಅಜಿತ್ ಕುಮಾರ್ರು 1981 ಸೇವಾ ಪ್ರವೃತಿ ಘಟಕವನ್ನು ಸ್ಥಾಪಿಸಿ ಸೇವಾವೃತಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಕುಂದಾಪುರದ ಓಕ್ವುಡ್ ಇಂಡಿಯನ್ ಸ್ಕೂಲ್ನ 4ನೇ ತರಗತಿಯ ವಿದ್ಯಾರ್ಥಿ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದಿದ್ದಾನೆ. ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ ಐಡಿಯಲ್ ಪ್ಲೇ ಅಬಾಕಸ್ ಮೆಂಟಲ್ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದನು. ಈತನಿಗೆ ಕುಂದಾಪುರದ ಸೆಂಟರ್ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಮತ್ತು ಮಹಾಲಕ್ಷ್ಮಿ ಅವರು ತರಬೇತಿ ನೀಡಿರುತ್ತಾರೆ. ಈತ ಅರಾಟೆಯ ರೇಷ್ಮಾ ಮತ್ತು ರಾಜೇಶ್ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ (ಎಫ್.ಎನ್.ಎಸ್) ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಬಿ.ಎಸ್.ಸಿ (ಕೃಷಿ) ಪದವೀಧರರಾಗಿರುವ, ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕೃಷಿ ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2 ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಹಾಗೂ ಮಾಹೆ ವಿ.ವಿ ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಕ್ರೀಡಾ ಪ್ರದರ್ಶನವನ್ನು ನೀಡಲಿದ್ದಾರೆ. ಸಾರ್ವಜನಿಕರು ಈ ಕ್ರೀಡಾಸ್ಪರ್ಧೆಗಳನ್ನು ವೀಕ್ಷಿಸುವುದರೊಂದಿಗೆ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಪ್ರದರ್ಶನ ನೀಡಿ, ಉನ್ನತ ಸ್ಥಾನ ಪಡೆದ 8 ಕ್ರೀಡಾ ಸ್ಪರ್ಧಿಗಳು ಅಥವಾ ತಂಡಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾ ಸ್ಪರ್ಧೆಗಳನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಕ್ರೀಡಾಭಿಮಾನಿಗಳು, ಕ್ರೀಡಾ ಪಟುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೆಡಿಎಫ್ ರಾಜ್ಯ ಮಟ್ಟದ ಇಂಟರ್ ಡೊಜೋ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಅನ್ಸನ್ ಫರ್ನಾಂಡಿಸ್ ದ್ವಿತೀಯ ಸ್ಥಾನ ಪಡದಿದ್ದಾನೆ. ಈತ ಗಂಗೊಳ್ಳಿಯ ಪ್ರವೀಣ್ ಫೆರ್ನಾಂಡಿಸ್ ಮತ್ತು ಮೊಂತಿನ್ ಫೆರ್ನಾಂಡಿಸ್ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸ್ಥಳಕ್ಕೆ ಭೇಟಿ ಮಾಡಿ, ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಅದರ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಕಬ್ಬಿಣದ ಗಡರ್ಸ್ ನಿರ್ಮಾಣದ ಕಾಮಗಾರಿಯು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅದನ್ನು ರೈಲ್ವೇ ಹಳಿಗಳ ಮೇಲ್ಭಾಗದಲ್ಲಿ ಸೇತುವೆಯಾಗಿ ನಿರ್ಮಿಸಲು ಅಗತ್ಯವಿರುವ ಸಿವಿಲ್ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಗುತ್ತಿಗೆದಾರರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವ ಸಂಘಜೀವಿಯಾಗಿದ್ದು, ಸಂಘಟನೆಗಳು ಪ್ರಾಮಾಣಿಕ, ಸತ್ಯ, ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಕುದ್ರುಕೋಡು ಜಗದೀಶ್ ಶೆಟ್ಟಿ ಹೇಳಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ಗೆ ಅಧೀಕೃತ ಭೇಟಿಯ ಬಳಿಕ ಉಪ್ಪುಂದ ನಂದನವನದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ 6ರ ವ್ಯಾಪ್ತಿಯಲ್ಲಿ ಬರುವ ಹತ್ತು ಕ್ಲಬ್ಗಳು ಈ ವರ್ಷ ವಿವಿಧ ಭಾಗಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಂತಸ ತಂದಿದೆ. ಪ್ರಸಕ್ತ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುವುದರ ಮೂಲಕ ಸಾಮಾಜಿಕ ಕೈಂಕರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಮಾಜದ ದುರ್ಬಲರ ಸೇವೆಯಲ್ಲಿ ಕೈಜೋಡಿಸಿರುವುದು ಅರ್ಥಪೂರ್ಣವಾಗಿದೆ ಎಂದು ಎಲ್ಲಾ ಕ್ಲಬ್ಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಗಾಗಿ ಕ್ಲಬ್ನ ಪೂರ್ವಾಧ್ಯಕ್ಷರಾದ ಜಯಶೀಲ ಶೆಟ್ಟಿ,…
