Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ದೇವಾಡಿಗ ನವೋದಯದ ಸಂಘ ಬೆಂಗಳೂರು ರಿ. ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಭಾನುವಾರ ಹೋಟೆಲ್ ಸಿಂಧೂರ ಗಾರ್ಡೆನಿಯ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ದೇವಾಡಿಗ ನವೋದಯದ ಸಂಘದ ಅದ್ಯಕ್ಷರಾದ ಟಿ.ಎಮ್ ಹರಿ ದೇವಾಡಿಗ, ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ, ಗೌರವ ಅಧ್ಯಕ್ಷರಾದ ಬಿ. ಆರ್. ದೇವಾಡಿಗ, ಖಜಾಂಚಿ ಗೋಪಾಲ ಸೇರಿಗಾರ, ಸದಸ್ಯರಾದ ಅಶೋಕ ದೇವಾಡಿಗ, ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ, ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ, ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ, ಶ್ರೀನಿವಾಸ ದೇವಾಡಿಗ ಸೇರಿದಂತೆ ದೇವಾಡಿಗ ನವೋದಯ ಸಂಘ ರಿ. ಇದರ ನೂರಾರು ಸದಸ್ಯರು ಕಾರ್ಯಕ್ರಮದಲ್ಲಿ ಕರಾವಳಿ ಶೈಲಿಯ ಆಹಾರವನ್ನು ಸವಿದ ಸಂಭ್ರಮದಿಂದ ಪಾಲ್ಗೊಂಡರು. ಚರಣ್ ಬೈಂದೂರು ಕಾರ್ಯಕ್ರಮ ನಿರೂಪಿಸಿ, ಸುಧೀರ್ ಮುದ್ರಾಡಿ ವಂದನೆ ಸಲ್ಲಿಸಿದರು. ವರದಿ: ರಾಘವೇಂದ್ರ ಹಾರ್ಮಣ್

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಹೋಬಳಿಯ ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಪುಷ್ಭಯಾಗ ಭಾನುವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರು ಉಂಜಲೋತ್ಸವದಲ್ಲಿ ಪಾಲ್ಗೊಂಡು ಶ್ರೀನಿವಾಸನ ಕೃಪೆಗೆ ಪಾತ್ರರಾದರು. ವಿಶೇಷವಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀದೇವಿ -ಭೂದೇವಿ ಸಹಿತ ಶ್ರೀನಿವಾಸ ದೇವರ ಉಂಜಲೋತ್ಸವ ತಿರುಮಲ ತಿರುಪತಿ ದೇವಸ್ಥಾನದ ದಾಸ ಸಾಹಿತ್ಯ ಪ್ರಾಜೆಕ್ಟ್‌ನ ವಿಶೇಷ ಅಧಿಕಾರಿ ವಿ| ಆನಂದತೀರ್ಥಾಚಾರ್ಯ ಪಗಡಲ್ ಅವರ ನೇತೃತ್ವದಲ್ಲಿ ಉಚಿಜಲೋತ್ಸವದ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಸುಮಾರು ಮೂರು ಗಂಟೆಗೂ ಅಧಿಕ ಧಾರ್ಮಿಕ ವಿಧಿವಿಧಾನಗಳ ನಡುವೆ ಉಂಜಲೋತ್ಸವ ಪುಷ್ಭಯಾಗ ಗೋವಿಂದನ ಸ್ಮರಣೆಗೈಯುತ್ತಾ ಗೀತಗಾನದಲ್ಲಿ ಶ್ರೀನಿವಾಸನ ಭಕ್ತರು ಭಾಗಿಯಾದರು.ಉಂಜಲೋತ್ಸವದಲ್ಲಿ ಪ್ರಸಾದ ರೂಪದಲ್ಲಿ ನಾನಾ ರೀತಿಯ ಫಲಹಾರದ ವ್ಯವಸ್ಥೆ ಕಲ್ಪಿಸಲಾಯಿತು. ಸಾಲಿಗ್ರಾಮದಿಂದ ಹೊರಟ ಪುರಮೆರವಣಿಗೆ:ಸಾಲಿಗ್ರಾಮ ಗುರುನರಸಿಂಹ ದೇಗುಲದ ವಠಾರಲ್ಲಿ ಉಂಜಲೋತ್ಸವದ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಅಧ್ಯಕ್ಷ ಡಾ. ಕೆ.ಎಸ್ ಕಾರಂತ, ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸಮ್ಮುಖದಲ್ಲಿ ಮೆರವಣಿಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಸಾವಿರಾರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅಧಿಕೃತ ವೆಬ್‌ಸೈಟ್ ನ್ನು ಹೋಲುವ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚಿಸುತ್ತಿದ್ದ ಅನ್ಯಧರ್ಮೀಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್ ಬಂಧಿತ. ಆತನು ದೇವಸ್ಥಾನದ ವಸತಿಗೃಹಗಳಲ್ಲಿ ಮುಂಗಡವಾಗಿ ಕೊಠಡಿ ಕಾದಿರಿಸುವ ಬಗ್ಗೆ ತನ್ನ ನಕಲಿ ವೆಬ್‌ಸೈಟ್ ಮೂಲಕ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚಿಸುತ್ತಿದ್ದ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಲ್ಯಾಪ್‌ಟಾಪ್ ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗೆ ಬೈಂದೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ಸಂತೋಷ್ ಎ. ಕಾಯ್ಕಿಣಿ, ಕೊಲ್ಲೂರು ಠಾಣೆಯ ಎಸ್‌ಐ ವಿನಯ ಎಂ. ಕೊರ್ಲಹಳ್ಳಿ ಹಾಗೂ ಭೀಮಶಂಕರ, ಕೊಲ್ಲೂರು ಠಾಣೆಯ ನಾಗೇಂದ್ರ, ಗಂಗೊಳ್ಳಿ ಠಾಣೆಯ ರಾಘವೇಂದ್ರ ಶೆಟ್ಟಿ, ಕೃಷ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಜಮ್ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತನಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಹಾಸನಜಿಲ್ಲೆ ಬೇಲೂರಿನ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಗೆಲ್ಲುವ ಮೂಲಕ ವಿದ್ಯಾರ್ಥಿಯು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ತಾಲೂಕಿನ ಬಸ್ರೂರು ನಿವಾಸಿ ಅಬ್ದುಲ್‌ ಮುಬಿನ್ ತಸ್ಮಿಯಾ ದಂಪತಿಯ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ. ರಂಜನ್ ಬಿ. ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದ ಶ್ರೀ ಶನೀಶ್ವರ ದೇಗುಲದ ವಠಾರದಲ್ಲಿ ನಡೆದ ಉಂಜಲೋತ್ಸವದ ಪ್ರಯುಕ್ತ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಿಂದ ಕಾರ್ಯಕ್ರಮ ನಡೆಯುವ ಕೋಡಿ ಕನ್ಯಾಣದ ಉಂಜಲೋತ್ಸವದವರೆಗೆ ವೈಭವದ ಮೆರವಣಿಗೆ ಹಮ್ಮಿಕೊಂಡಿತು. ಈ ಸಂದರ್ಭದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಸ್ವಚ್ಛತಾ ಸೇನಾನಿಗಳು ಸುಮಾರು ಐದು ಕೀ.ಮಿ ವರೆಗಿನ ಮೆರವಣಿಗೆಯಲ್ಲಿ ನೀರು ಬಾಟಲಿಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕೈಂಕರ್ಯ ಕೈಗೊಂಡಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಡೋಜ ಡಾ. ಜಿ. ಶಂಕರ್ ಅವರು ಪಂಚವರ್ಣ ಸ್ವಚ್ಛತಾ ಕಾರ್ಯವನ್ನು ಪ್ರಶಂಸಿದರು. ಈ ಸಂದರ್ಭದಲ್ಲಿ ಪಂಚವರ್ಣ ಸಂಘಟನೆ ಪದಾಧಿಕಾರಿಗಳು ಸದಸ್ಯರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ  ಚಿಕ್ಕಮಂಗಳೂರಿನಲ್ಲಿ ಆಯೋಜಿಸಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2025 – 26ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ – 85 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅನುಪಮ ಸಾಧನೆ ಮೆರೆದಿದ್ದಾನೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಿತು. ಕೃತಿಯನ್ನು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರು ಅನಾವರಣಗೊಳಿಸಿ ಮಾತನಾಡಿ, ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು. ಡಾ. ಕೆ. ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು. ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ರೂಪಾಯಿ 90ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊರಗ ಕಾಲೋನಿಯ ಎಂಟು ಹೊಸ ಮನೆ ನಿರ್ಮಾಣಕ್ಕೆ ಮುಂಬೈನ ಓಎನ್‌ಜಿಸಿ ನಿವೃತ್ತ ಚೀಪ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಅವರು ಒಂದು ಲಕ್ಷ ರೂ ಸಹಾಯ ಧನ ಚೆಕ್ ವಿತರಣೆ ಕಾರ್ಯಕ್ರಮ ಕೊರಗರ ಕಾಲೋನಿಯಲ್ಲಿ ನಡೆಯಿತು. ಚೆಕ್ ವಿತರಿಸಿ ಅವರು ಮಾತನಾಡಿ, ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗರ ಎಂಟು ಹೊಸ ಮನೆ ನಿರ್ಮಾಣ ಕಾರ್ಯ ಶ್ಲಾಘನೀಯ. ಇಂದು ಸಹಾಯ ಧನ ಚೆಕ್ ವಿತರಿಸುತ್ತಿರುವ ಬಗ್ಗೆ ಖುಷಿ ಇದೆ. ಇಲ್ಲಿಯ ಮೂಲ ನಿವಾಸಿಗಳಿಗೆ ಹೊಸ ಎಂಟು ಮನೆ ನಿರ್ಮಿಸಿ ಕೊಡುವ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್  ಇತರ ಗ್ರಾಮ ಪಂಚಾಯತ್ ಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ, ತಳಮಟ್ಟದ ಸಮುದಾಯವನ್ನು ಮೇಲಕ್ಕೆತ್ತುವ ಕಲ್ಯಾಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸುದೀರ್ಘ 19 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿತ್ತಿದ್ದ ಪ್ರೊ. ಅಂಬಲಪಾಡಿ ನಾರಾಯಣಾಚಾರ್ಯ (88ವರ್ಷ) ಅವರಿಗೆ ಶನಿವಾರದಂದು ಕಾಲೇಜಿನ ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯವರು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಶ್ರದ್ಧಾಂಜಲಿ ಸಭೆ ನಡೆಸಿ ಪುಷ್ಪ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿದರು. ನುಡಿನಮನ ಸಲ್ಲಿಸಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಅವರು ಮಾತನಾಡಿ, ಅಂಬಲಪಾಡಿ ನಾರಾಯಣಾಚಾರ್ಯ ಸಹೃದಯಿ, ಪ್ರಾಮಾಣಿಕ, ಆದರ್ಶ ಮತ್ತು ಅನುಕರಣೀಯ ಪ್ರಾಂಶುಪಾಲರಾಗಿದ್ದರು. ಅವರು ಅವಧಿಯಲ್ಲಿ ಕಾಲೇಜು ತುಂಬಾ ಅಭಿವೃದ್ಧಿಯನ್ನು ಹೊಂದಿತ್ತು. ಅಲ್ಲದೇ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮನೋಭಾವ ಮತ್ತು ಶಿಸ್ತಿನಿಂದ ವಿದ್ಯಾರ್ಥಿಗಳು ಪ್ರೀತಿಗೆ ಪಾತ್ರರಾಗಿದ್ದರು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಕಾಲೇಜಿನ ಏಳಿಗೆಗ ಮತ್ತು ಶೈಕ್ಷಣಿಕ ವಾತಾವರಣ ನಿರ್ಮಾಸುವಲ್ಲಿ ಅವರು ಪಾತ್ರ ಹಿರಿಯದು ಎಂದು ಹೇಳಿದರು. ಹಿರಿಯ ಲೇಖಕಿ ನಿವೃತ್ತ ಪ್ರಾಧ್ಯಾಪಕಿ ಡಾಪಾರ್ವತಿ ಜಿ. ಐತಾಳ್ ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಾಯಿ ತೆರೆದರೆ ಧರ್ಮ, ದೇಶ, ಹಿಂದುತ್ವದ ಬಗ್ಗೆ ಭಾಷಣ ಮಾಡುವ ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರುಗಳು ಅವರ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರ ಮಾಲಕತ್ವದ ರೆಸಾರ್ಟ್ ಒಂದರಲ್ಲಿ ಅಕ್ರಮ ವಿದೇಶಿಗರು ನೆಲೆಸಿರುವ ಬಗ್ಗೆ ಏನು ಉತ್ತರ ನೀಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನೆ ಮಾಡಿದ್ದಾರೆ. ವಿದೇಶಿಯರನ್ನು ಉದ್ಯೋಗ, ವಸತಿ ನೀಡುವಾಗ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಕ್ತ ದಾಖಲೆಗಳನ್ನು ನೀಡದೆ ಅವರಿಗೆ ಉದ್ಯೋಗ ನೀಡುವುದು, ವಾಸ್ತವ್ಯ ನೀಡುವುದು ಕಾನೂನು ಬಾಹಿರ ಕ್ರಮ ಹಾಗೂ ಸಂವಿಧಾನ ವಿರೋಧಿ ಕ್ರಮಕೂಡ ಹೌದು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಗೋ ರಕ್ಷಣೆ, ಧರ್ಮ ರಕ್ಷಣೆ, ರಾಷ್ಟ್ರ ರಕ್ಷಣೆ ಬಗ್ಗೆ ಹೇಳಿಕೆ, ಭಾಷಣ, ಧರಣಿಗಳನ್ನು ಮಾಡುವವರು ಇವತ್ತು ತಮ್ಮ ರೆಸಾರ್ಟ್ ನಲ್ಲಿ ಅಕ್ರಮ ವಿದೇಶಿಯರನ್ನು ಇಟ್ಟುಕೊಂಡ ಬಗ್ಗೆ ಏನು ಉತ್ತರ ನೀಡುತ್ತಾರೆ. ಇದೊಂದು ರಾಷ್ಟ್ರ ವಿರೋಧಿ ಗಂಭೀರ ಪ್ರಕರಣವಾಗಿದ್ದು ಪೊಲೀಸ್…

Read More